ನವದೆಹಲಿ: ಕೇಂದ್ರದ ಸೆಕ್ರೆಟರಿ ಮತ್ತು ಅದಕ್ಕಿಂತಲೂ ಮೇಲ್ತ್ಸರದ ಅಧಿಕಾರಿಗಳಿಗೆ ಸರ್ಕಾರ ಬಂಪರ್ ಆಫರ್ ನೀಡಿದೆ. 1.3 ಲಕ್ಷ ರೂ. ವರೆಗಿನ ಮೊಬೈಲ್, ಲ್ಯಾಪ್‌ಟಾಪ್ ಅಥವಾ ಅದಕ್ಕೆ ಸಮನಾದ ಯಾವುದೇ ಸಾಧನಗಳನ್ನು ಬಳಸಲು 4 ವರ್ಷಗಳ ಅವಧಿಗೆ ನೀಡಲಿದೆ. ಇದಾದ ಬಳಿಕ ಅವರು ಬಯಸಿದಲ್ಲಿ ಅದನ್ನು ವೈಯಕ್ತಿಕ ಬಳಕೆಗಾಗಿ ತಮ್ಮಲ್ಲಿಯೇ ಇಟ್ಟುಕೊಳ್ಳುವ ಅವಕಾಶವನ್ನೂ ನೀಡಿದೆ. ಹಣಕಾಸು ಸಚಿವಾಲಯದ ವೆಚ್ಚ ವಿಭಾಗ ಇಂತಹ ಆದೇಶ ಹೊರಡಿಸಿದೆ. ಸರ್ಕಾರದ ಅಧಿಕೃತ ಕೆಲಸಕ್ಕಾಗಿ ಅರ್ಹ ಅಧಿಕಾರಿಗಳಿಗೆ …
Read More »Monthly Archives: ಜುಲೈ 2023
ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ 22 ಎಂಎಂ ಮಳೆಯಾಗಿದೆ.
ಶಿವಮೊಗ್ಗ: ಕಳೆದ ಮೂರು ದಿನಗಳಿಂದ ಶಿವಮೊಗ್ಗ ಜಿಲ್ಲೆ ಸೇರಿದಂತೆ, ಅಕ್ಕಪಕ್ಕದ ಜಿಲ್ಲೆಗಳಲ್ಲಿ ನಿರಂತರ ವರ್ಷಧಾರೆಯಾಗುತ್ತಿದೆ. ಮಳೆ ಎಡಬಿಡದೇ ಸುರಿದ ಪರಿಣಾಮ, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿವೆ. ಅದರಂತೆ, ತುಂಗಾ ಜಲಾನಯದ ಪ್ರದೇಶಗಳಾದ ಶೃಂಗೇರಿ, ಕೊಪ್ಪ, ಆಗುಂಬೆ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ತುಂಗಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ತುಂಗಾ ಡ್ಯಾಂ ಸಂಪೂರ್ಣವಾಗಿ ತುಂಬಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಕೋರ್ಪಳಯ್ಯನ ಛತ್ರದ ಬಳಿಯ ಮಂಟಪ ಮುಳುಗುವ ಹಂತ …
Read More »ಮದ್ಯಕ್ಕೆ ಹಣ ಹೊಂದಿಸಲು ಆರು ತಿಂಗಳ ಮಗು ಮಾರಾಟ..
ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಮದ್ಯ ಸೇವಿಸಲು ಹಣ ಹೊಂದಿಸುವ ಉದ್ದೇಶದಿಂದ ಆರು ತಿಂಗಳ ಮಗುವನ್ನು ಮಾರಾಟ ಮಾಡಿದ ಆರೋಪದ ಮೇಲೆ ಮೂವರನ್ನು ಭಾನುವಾರ ಬಂಧಿಸಲಾಗಿದೆ. ಈ ಬಂಧಿತ ಆರೋಪಿಗಳು ಮಗುವಿನ ಅಪ್ಪ, ಅಮ್ಮ ಹಾಗೂ ಅಜ್ಜನೇ ಆಗಿದ್ದಾರೆ. ಬಂಧಿತರನ್ನು ಜೈದೇಬ್ ಚೌಧರಿ (ತಂದೆ), ಸತಿ ಚೌಧರಿ (ತಾಯಿ) ಮತ್ತು ಕನೈ ಚೌಧರಿ (ಅಜ್ಜ) ಎಂದು ಗುರುತಿಸಲಾಗಿದೆ. ಈ …
Read More »BJP ಕಚೇರಿಗೆ ಕುಮಾರಸ್ವಾಮಿ ಹೋಗಿದ್ದಾರೆ. ಅಂದ್ರೆ ದೇವೇಗೌಡರ ಮಾತಿಗೆ ಕಿಮ್ಮತ್ತಿಲ್ಲ ಎಂದು ಅರ್ಥ:ಚಲುವರಾಯಸ್ವಾಮಿ
ಮಂಡ್ಯ: ಬಿಜೆಪಿಯವರ ಕಚೇರಿಗೆ ಕುಮಾರಸ್ವಾಮಿ ಹೋಗಿದ್ದಾರೆ. ಅಂದ್ರೆ ದೇವೇಗೌಡರ ಮಾತಿಗೆ ಕಿಮ್ಮತ್ತಿಲ್ಲ ಎಂದು ಅರ್ಥ. ಹೊಂದಾಣಿಕೆ ಸಂಬಂಧ ದೇವೇಗೌಡರು ಹಾಗೂ ಕುಮಾರಸ್ವಾಮಿ ದ್ವಂದ್ವ ನಿಲುವಿನ ವಿಚಾರದ ಬಗ್ಗೆ ಮಂಡ್ಯದಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ವ್ಯಂಗ್ಯವಾಡಿದ್ದಾರೆ. ”ಜೆಡಿಎಸ್ ಪಕ್ಷದಲ್ಲಿ ದೇವೇಗೌಡರ ಮಾತಿಗೆ ಕಿಮ್ಮತ್ತಿಲ್ಲ. ದೇವೇಗೌಡರು ಈವರೆಗೂ ಪಕ್ಷವನ್ನ ಇನ್ನೊಂದು ಪಕ್ಷದೊಂದಿಗೆ ವಿಲೀನ ಮಾಡುವ ನಿರ್ಧಾರ ತಗೆದುಕೊಂಡಿಲ್ಲ. ಎಷ್ಟೇ ಸ್ಥಾನಗಳನ್ನ ಗೆಲ್ಲಲಿ ಹೋರಾಟ ಮಾಡ್ಕೊಂಡು ಬಂದಿದ್ದಾರೆ. ಇವತ್ತು ದೇವೇಗೌಡರು ಕಟ್ಟಿಬೆಳೆಸಿದ ಪಕ್ಷವನ್ನು ಬೇರೆ ಪಕ್ಷದೊಂದಿಗೆ …
Read More »ರಾಜಕಾರಣದಲ್ಲಿ ಎಲ್ಲರೂ ಸಮಾನರು, ಸಮುದಾಯವನ್ನು ತುಳಿಯುವ ಕೆಲಸ ಕಾಂಗ್ರೆಸ್ ಮಾಡುವುದಿಲ್ಲ: ಡಿ.ಕೆ.ಶಿ
ಬೆಂಗಳೂರು : “ರಾಜಕಾರಣದಲ್ಲಿ ಎಲ್ಲರೂ ಸಮಾನರು, ಯಾವ ಅಸಮಾಧಾನವೂ ಇಲ್ಲ. ಯಾವ ಸಮುದಾಯವನ್ನೂ ತುಳಿಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಮಾಡುವುದಿಲ್ಲ. ಬಿ.ಕೆ.ಹರಿಪ್ರಸಾದ್ ಅವರು ಏನು ಹೇಳಿದ್ದಾರೆ ಎಂಬುದು ನನಗೆ ಸರಿಯಾಗಿ ಗೊತ್ತಿಲ್ಲ. ಹೀಗಾಗಿ, ಆ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಆ ಬಗ್ಗೆ ವಿಚಾರಿಸಿ ಮಾತನಾಡುತ್ತೇನೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಸಚಿವರು ಮಾತನಾಡಿದರು. ಇದೇ ವೇಳೆ ಹಾಲಿನ ಬೆಲೆ ಏರಿಕೆ ಕುರಿತಾದ ಪ್ರಶ್ನೆಗೆ …
Read More »ಧಾರಾಕಾರ ಮಳೆ: ಚಿಕ್ಕೋಡಿಯಲ್ಲಿ 7 ಸೇತುವೆಗಳು ಜಲಾವೃತ
ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ಪ್ರತಿ ಗಂಟೆಗೂ ಹೆಚ್ಚಳವಾಗುತ್ತಿದ್ದು, ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಕೆಳಹಂತದ ಏಳು ಸೇತುವೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತಗೊಂಡಿದೆ. ಕೃಷ್ಣಾ ನದಿ ಹಾಗೂ ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಏಳು ಕೆಳಹಂತದ ಸೇತುವೆಗಳು ಈಗಾಗಲೇ ಜಲಾವೃತಗೊಂಡು ನದಿಯ ದಂಡೆಯ ಗ್ರಾಮದ ಸಂಪರ್ಕ ಕಡಿತಗೊಂಡಿದೆ. ಚಿಕ್ಕೋಡಿ ತಾಲೂಕಿನ ಮಲಿಕವಾಡ – ದತ್ತವಾಡ ಸಂಪರ್ಕ ಕಲ್ಪಿಸುವ ಸೇತುವೆ …
Read More »ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಮನೆ ಕುಸಿದು ಬಿದ್ದು 13 ಮಂದಿ ಗಾಯ
ಬೆಳಗಾವಿ : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 13 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಶುಕ್ರವಾರ ಮನೆಯ ಸದಸ್ಯರೆಲ್ಲ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದರು. ಈ ವೇಳೆ ಏಕಾಏಕಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಸದ್ದು ಕೇಳಿ …
Read More »ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ
ಬೆಳಗಾವಿ : ಇಡೀ ಜಗತ್ತು ಮೆಚ್ಚಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅಹಂಕಾರದಿಂದ ಹಗುರವಾಗಿ ಮಾತನಾಡಬಾರದು. ಇದು ನಿಮಗೆ ಶೋಭೆ ತರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನವಿರೋಧಿ ಆಡಳಿತ ವಿರುದ್ಧ ಶನಿವಾರ ಬೆಳಗಾವಿ ರಾಣಿ ಚೆನ್ನಮ್ಮ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬೇರೆ ದೇಶಕ್ಕೆ ಹೋದಾಗ …
Read More »ಬೆಳಗಾವಿ ಜಿಲ್ಲೆಯ ನದಿಗಳಲ್ಲಿ ನೀರು ಹರಿಯುವ ಪ್ರಮಾಣ ಹೆಚ್ಚಳ 16 ಸೇತುವೆಗಳು ಜಲಾವೃತ
ಚಿಕ್ಕೋಡಿ: ಮಹಾರಾಷ್ಟ್ರ ಪಶ್ಚಿಮ ಘಟ್ಟದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಹರಿಯುತ್ತಿರುವ ನದಿಗಳಲ್ಲಿ ನೀರಿನ ಒಳಹರಿವು ಪ್ರಮಾಣ ಹೆಚ್ಚಾಗಿದ್ದು, ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕು ಕಾರದಗಾ ಗ್ರಾಮದ ಆರಾಧ್ಯ ದೈವ ಬಂಗಾಲಿ ಬಾಬಾ ದರ್ಗಾ ಜಲದಿಗ್ಭಂಧನಕ್ಕೆ ಒಳಗಾಗಿದ್ದು, ಸದ್ಯ ಬಾಬಾನ ದರ್ಶನಕ್ಕೆ ದೂದಗಂಗಾ ನದಿ ನೀರು ತಡೆಯನ್ನು ಒಡ್ಡಿದೆ. ದೂಧಗಂಗಾ ನದಿಯ ಒಳಹರಿವು ಹೆಚ್ಚಳಗೊಂಡ ಹಿನ್ನೆಲೆ ದರ್ಗಾದ ಮುಂದೆ ಎರಡು ಅಡಿಯಷ್ಟು …
Read More »ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಮನೆ ಕುಸಿದು ಬಿದ್ದು 13 ಮಂದಿ ಗಾಯ
ಬೆಳಗಾವಿ : ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಭಾರಿ ಮಳೆಗೆ ಮನೆ ಕುಸಿದು ಬಿದ್ದು ಒಂದೇ ಕುಟುಂಬದ 13 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಶುಕ್ರವಾರ ಮನೆಯ ಸದಸ್ಯರೆಲ್ಲ ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದರು. ಈ ವೇಳೆ ಏಕಾಏಕಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಸದ್ದು ಕೇಳಿ …
Read More »