Breaking News

Monthly Archives: ಜುಲೈ 2023

ಬಿಎಸ್​ವೈ ಪುತ್ರ ವಿಜಯೇಂದ್ರ: ಅಮಿತ್ ಶಾ, ನಡ್ಡಾ ಜೊತೆ ಮಹತ್ವದ ಮಾತುಕತೆ

ಬೆಂಗಳೂರು : ವಿಧಾನಸಭೆ ಅಧಿವೇಶನ ನಡೆಯುತ್ತಿರುವ ನಡುವೆಯೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ರಾಜ್ಯ ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ದೆಹಲಿ ಪ್ರವಾಸದಲ್ಲಿದ್ದು, ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಪ್ರತಿಪಕ್ಷ ನಾಯಕ ಸ್ಥಾನದ ಆಯ್ಕೆ ಬಾಕಿ ಇರುವ ವೇಳೆ ವಿಜಯೇಂದ್ರ ಹೈಕಮಾಂಡ್ ಭೇಟಿ ರಾಜ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದ ಬಿ ವೈ ವಿಜಯೇಂದ್ರರಾಜ್ಯ ಬಜೆಟ್ ಅಧಿವೇಶನದಲ್ಲಿ ಬಿಜೆಪಿಯನ್ನು …

Read More »

ಕೆಆರ್​ಪಿಪಿ ಸದಸ್ಯನ ಕೊಲೆ… ಮಗನ ಜನ್ಮದಿನದಂದೇ ಪ್ರಾಣ ಬಿಟ್ಟ ತಂದೆ

ಬಳ್ಳಾರಿ: ಕಳೆದ ರಾತ್ರಿ ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯ ಕೃಷ್ಣಾ ಕಾಲೋನಿಯಲ್ಲಿ ನಡೆದಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ಸಿಕ್ಕಿದೆ. ಕೆಆರ್​ಪಿಪಿ ಕಾರ್ಯಕರ್ತನಾಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೆಹಬೂಬ್ ಬಾಷಾರನ್ನ ಕಾಂಗ್ರೆಸ್ ಕಾರ್ಯಕರ್ತರು ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಘಟನೆ ಸದನದಲ್ಲೂ ಚರ್ಚೆಗೆ ಕಾರಣವಾಗಿದೆ. ಬಳ್ಳಾರಿ ನಿವಾಸಿ ಮೆಹಬೂಬ್ ಬಾಷಾ ಅವರು ಗಾಲಿ ಜನಾರ್ದನ ರೆಡ್ಡಿಯವರ ನೂತನ ಕೆಆರ್​ಪಿಪಿ ಪಕ್ಷದ ಕಾರ್ಯಕರ್ತರಾಗಿದ್ದರು. ಮೆಹಬೂಬ್​ ಬಾಷಾ …

Read More »

ಒಂದು ದಿನ ಕೂಲಿ ಕೆಲಸ.. ಇನ್ನೊಂದು ದಿನ ಕಾಲೇಜು.. ಕೆಮಿಸ್ಟ್ರಿಯಲ್ಲಿ ಪಿಎಚ್​ಡಿ.. ಬಡತನದಲ್ಲಿ ಅರಳಿದ ಭಾರತಿ ಈಗ ​ಡಾಕ್ಟರ್!

ಅನಂತಪುರ (ಆಂಧ್ರಪ್ರದೇಶ): ವಿವಾಹಿತ ಮಹಿಳೆಯೊಬ್ಬರು ದಿನಗೂಲಿ ಕೆಲಸ ಮಾಡುತ್ತಲೇ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಬಡತನ, ಮದುವೆ, ಮಕ್ಕಳು, ಕೌಟುಂಬಿಕ ಜವಾಬ್ದಾರಿಗಳು ಓದಲು ಅಡ್ಡಿಯಾಗುವುದಿಲ್ಲ ಎಂಬುದನ್ನು ಈ ಸಾಧಕಿ ನಿರೂಪಿಸಿದ್ದಾರೆ. ಪಿಎಚ್​ಡಿ ಪದವಿ ಮುಗಿಸಿರುವ ಈಕೆ ಪ್ರೊಫೆಸರ್ ಆಗಬೇಕೆಂಬ ಮಹಾದಾಸೆಯನ್ನೂ ಹೊಂದಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಸಾಕೆ ಭಾರತಿ ಎಂಬುವವರೇ ಈ ವಿಶಿಷ್ಟ ಸಾಧಕಿ. ಇವರದ್ದು ತೀರಾ ಬಡ ಕುಟುಂಬ. ದಿನವೂ ದುಡಿಯಲು ಹೋಗದಿದ್ದರೆ ಜೀವನ ನಿರ್ವಹಣೆಯೇ ಕಷ್ಟ ಸಾಧ್ಯ. ದಿನಗೂಲಿ …

Read More »

ಪ್ರಾಂಶುಪಾಲರ ವಿರುದ್ಧ ಕಿರುಕುಳ ದೂರು: ಮತ್ತೊಂದು ಪ್ರಕರಣದಲ್ಲಿ ಯುವಕನ ಲವ್ವಿಡವ್ವಿ, ಬಾಲಕಿ ಗರ್ಭಿಣಿ

ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ ಎರಡು ಪೊಕ್ಸೊ ಪ್ರಕರಣಗಳು ದಾಖಲಾಗಿವೆ. ಇದು ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಪ್ರಕರಣಗಳಾಗಿವೆ.   ಶಿವಮೊಗ್ಗದ ಪ್ರತಿಷ್ಟಿತ ಪಿಯು ಕಾಲೇಜಿನ ಪ್ರಾಂಶುಪಾಲರು ತಮ್ಮದೆ ಕಾಲೇಜಿನ ವಿದ್ಯಾರ್ಥಿನಿಯ ಜೊತೆ ಸಂಪರ್ಕ ಬೆಳೆಸಿದ್ದಾರೆ. ಪ್ರಾಂಶುಪಾಲರಿಗೆ 48 ವರ್ಷವಾಗಿದ್ದು, ವಿದ್ಯಾರ್ಥಿನಿಗೆ 17 ವರ್ಷ ವಯಸ್ಸಾಗಿದೆ. ಪಾಠ ಮಾಡುವ ವಿದ್ಯಾರ್ಥಿನಿಗೆ ನಂಬಿಸಿ, ಆಕೆಯ ಜೊತೆ ಸಂಪರ್ಕ ಬೆಳೆಸಿದ್ದರು ಎನ್ನಲಾಗಿದೆ. ಪ್ರಾಂಶುಪಾಲರು ಕಾಲೇಜಿನಲ್ಲಿ ಚೆನ್ನಾಗಿಯೇ ಪಾಠ ಮಾಡುತ್ತಿದ್ದರು. ಎಲ್ಲಾ …

Read More »

ಉಗ್ರ ಕೃತ್ಯವೆಸಗಲು ಸಂಗ್ರಹಿಸಿ ಬಚ್ಚಿಟ್ಟಿದ್ದ ನಾಲ್ಕು ಜೀವಂತ ಹ್ಯಾಂಡ್ ಗ್ರೆನೇಡ್ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪತ್ತೆ

ಬೆಂಗಳೂರು : ನಗರದ ಜನನಿಬಿಡ ಪ್ರದೇಶಗಳಲ್ಲಿ ಶಂಕಿತ ಭಯೋತ್ಪಾದಕರು ಉಗ್ರ ಕೃತ್ಯವೆಸಗಲು ಸಂಗ್ರಹಿಸಿ ಬಚ್ಚಿಟ್ಟಿದ್ದ ನಾಲ್ಕು ಜೀವಂತ ಹ್ಯಾಂಡ್ ಗ್ರೆನೇಡ್ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾಗಿದೆ. ಹೀಗಾಗಿ, ಇಲ್ಲಿನ ಸ್ಥಳೀಯರಲ್ಲಿ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ. ಪ್ರಕರಣದ ಐದನೇ ಆರೋಪಿ ಜಾಯೇದ್ ತಬ್ರೆಸ್​ನ ಕೊಡಿಗೆಹಳ್ಳಿಯ ಮನೆಯ ಅಲ್ಮೇರಾದಲ್ಲಿ ಬಚ್ಚಿಟ್ಟಿದ್ದ ನಾಲ್ಕು ಹ್ಯಾಂಡ್ ಗ್ರೆನೇಡ್​ಗಳನ್ನ ಸಿಸಿಬಿ ವಶಪಡಿಸಿಕೊಂಡಿದೆ. ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರುವುದು ತಿಳಿದುಬಂದಿದೆ. 2021 ರಲ್ಲಿ ಉಪ್ಪಿನಂಗಡಿ …

Read More »

ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿ

ಮಧ್ಯರಾತ್ರಿ 2 ಗಂಟೆಗೆ ನಿದ್ರೆ ಮಂಪರಿನಲ್ಲಿ ಎದ್ದು ರಸ್ತೆ ಬದಿಯಲ್ಲಿ ನಿಂತಿದ್ದ 6 ವರ್ಷದ ಹೆಣ್ಣು ಮಗುವನ್ನು ರಕ್ಷಿಸಿದ ಕುಂದಾಪುರ ಅರ್ಚನಾ ಬಾರ್ ನ ಸಿಬ್ಬಂದಿಗಳು ನಿನ್ನೆ ದಿನ ಚಾರ್ ಕೊಟ್ಟಿಗೆ ಬಾರಿನ ವಿಶ್ವನಾಥ ಪೂಜಾರಿ ರಾತ್ರಿ ಸರಿ ಸುಮಾರು 2 ಗಂಟೆ ಹೊತ್ತಿಗೆ ಬಾರಿನ ತನ್ನೆಲ್ಲ ಲೆಕ್ಕಾಚಾರವನ್ನು ಪೂರೈಸಿಕೊಂಡು ಸಿಬ್ಬಂದಿಗಳೊಂದಿಗೆ ಮನೆಗೆ ತೆರಳುತ್ತಿರುವಾಗ ದಬ್ಬೆಕಟ್ಟೆ ತೆಕ್ಕಟ್ಟೆ ರೋಡಿನಲ್ಲಿ ಆರು ವರ್ಷದ ಹೆಣ್ಣು ಮಗು ಒಂದು ಬಟ್ಟೆ ಇಲ್ಲದೆ ಸ್ವಾಮಿ …

Read More »

ಭಾರತದಲ್ಲಿ ಆದ ಮದುವೆ, ಆಸ್ಟ್ರೇಲಿಯಾದಲ್ಲಿ ವಿಚ್ಛೇದನ

ಚೆನ್ನೈ, ತಮಿಳುನಾಡು: ಆಸ್ಟ್ರೇಲಿಯಾದಲ್ಲಿ ಓದುತ್ತಿದ್ದಾಗ ಕರ್ನಾಟಕದ ಹುಡುಗ ಮತ್ತು ತಮಿಳುನಾಡಿನ ಹುಡುಗಿ ಭೇಟಿಯಾಗಿದ್ದರು. ಬಳಿಕ ಇವರ ಮಧ್ಯೆ ಪರಿಚಯ ಬೆಳೆಯಿತು. ಇವರ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರೂ ಅಕ್ಟೋಬರ್ 2006 ರಲ್ಲಿ ಚೆನ್ನೈನ ಕ್ರಿಶ್ಚಿಯನ್ ಚರ್ಚ್‌ನಲ್ಲಿ ವಿವಾಹವಾದರು. ಈ ಅಂತರ್ಧರ್ಮೀಯ ದಂಪತಿಗೆ ಮುದ್ದಾದ ಗಂಡು ಮಗುವೂ ಸಹ ಜನಿಸಿದೆ. ಇನ್ನು ಈ ದಂಪತಿ ತಮ್ಮ ಕುಟುಂಬದೊಂದಿಗೆ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದರು. ಕುಟುಂಬ ಸಮೇತ ಆಸ್ಟ್ರೇಲಿಯದಲ್ಲಿ ವಾಸವಿದ್ದ ಸಂದರ್ಭದಲ್ಲಿ ಗಂಡನ ಕುಟುಂಬಕ್ಕೆ ಪತ್ನಿಯ ಧರ್ಮ, …

Read More »

B.J.P.&J.D.S. ಸದಸ್ಯರ ಗೈರಿನ ನಡುವೆಯೇ ವಿಧಾನ ಪರಿಷತ್​ನಲ್ಲಿ 5 ವಿಧೇಯಕಗಳಿಗೆ ಅಂಗೀಕಾರ

ಬೆಂಗಳೂರು : ಕಾಂಗ್ರೆಸ್​ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಹೊರ ರಾಜ್ಯದ ರಾಜಕಾರಣಿಗಳ ಸ್ವಾಗತಕ್ಕೆ ರಾಜ್ಯದ ಐಎಎಸ್ ಅಧಿಕಾರಿಗಳ ನಿಯುಕ್ತಿ ಮಾಡಿದ್ದು ಹಾಗು ಬಿಜೆಪಿಯ 10 ಶಾಸಕರನ್ನು ಪ್ರಸಕ್ತ ಅಧಿವೇಶನದಿಂದ ಅಮಾನತು ಮಾಡಿದ ಸ್ಪೀಕರ್ ಕ್ರಮ ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್​ ಸದಸ್ಯರ ಗೈರಿನ ನಡುವೆ ವಿಧಾನ ಪರಿಷತ್ ಕಲಾಪವನ್ನು ನಡೆಸಲಾಯಿತು. ಈ ವೇಳೆ 5 ಪ್ರಮುಖ ವಿಧೇಯಕಗಳನ್ನು ಪ್ರತಿಪಕ್ಷ ಸದಸ್ಯರ ಗೈರಿನಲ್ಲಿ ಅಂಗೀಕರಿಸಲಾಯಿತು. ಕಲಾಪ ಆರಂಭವಾಗುತ್ತಿದ್ದಂತೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, …

Read More »

ಬೆಳಗಾವಿ ತಾಲೂಕಿನಲ್ಲಿ ಮಳೆಯ ಅಬ್ಬರ ಹೆಚ್ಚಳ

ಚಿಕ್ಕೋಡಿ : ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿದ ಧಾರಾಕಾರ ಮಳೆಗೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ಕೆಳ ಹಂತದ ಸೇತುವೆಗಳು ಜಲಾವೃತವಾಗಿವೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್​ನಿಂದ ಕೃಷ್ಣಾನದಿಗೆ 49,500 ಕ್ಯೂಸೆಕ್ ನೀರು ಹರಿದು ಬರುತ್ತಿರುವ ಹಿನ್ನೆಲೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ, ಮೈದುಂಬಿ ಹರಿಯುತ್ತಿದೆ. ಮತ್ತೊಂದು ಕಡೆ ವೇದಗಂಗಾ ನದಿಯಲ್ಲಿ ಒಳಹರಿವು ನೀರಿನ ಮಟ್ಟ ಹೆಚ್ಚಳವಾದ ಪರಿಣಾಮವಾಗಿ ನಿಪ್ಪಾಣಿ ತಾಲೂಕಿನ ಜತ್ರಾಟ- ಭೀವಶಿ ಸೇತುವೆ ಮುಳುಗಡೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ನಿಪ್ಪಾಣಿ ಪೊಲೀಸರು …

Read More »

10 ಶಾಸಕರ ಅಮಾನತು ಖಂಡಿಸಿ ಬಿಜೆಪಿ ಸದಸ್ಯರ ಪ್ರತಿಭಟನೆ

ಬೆಂಗಳೂರು: 10 ಜಿಜೆಪಿ ಶಾಸಕರನ್ನು ಸದನ ಮುಗಿಯುವವರೆಗೆ ಸ್ಪೀಕರ್​ ಅಮನಾತು ಮಾಡಿರುವುದನ್ನು ಖಂಡಿಸಿ ಬಿಜೆಪಿ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅಮಾನತಾದ ಬಿಜೆಪಿ ಶಾಸಕರು ಸೇರಿ ಇತರೆ ಬಿಜೆಪಿ ಶಾಸಕರು ಹಾಗೂ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರಗ ಜ್ಞಾನೇಂದ್ರ, ಮುನಿರತ್ನ, ಸುರೇಶ್ ಕುಮಾರ್, ಬೈರತಿ ಬಸವರಾಜ್, ಸುನೀಲ್ ಕುಮಾರ್, ಗೋಪಾಲಯ್ಯ ಸೇರಿ ಹಲವು ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾದ್ದಾರೆ. ಬಿಜೆಪಿ ಶಾಸಕರು …

Read More »