ಬೆಂಗಳೂರು: ನಿನ್ನೆ 10 ಮಂದಿ ಬಿಜೆಪಿ ಶಾಸಕರ ಅಮಾನತು ಖಂಡಿಸಿ, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಕಲಾಪವನ್ನು ಬಹಿಷ್ಕರಿಸಿದ್ದಾರೆ. ವಿರೋಧ ಪಕ್ಷಗಳ ಗೈರುಹಾಜರಿ ನಡುವೆಯೇ ವಿಧಾನಮಂಡಲದ ಕಲಾಪ ಇಂದು ಆರಂಭಗೊಳ್ಳುವ ಮೂಲಕ ಮತ್ತೊಂದು ಅನಪೇಕ್ಷಣೀಯ ವಿದ್ಯಮಾನ ನಡೆದಿದೆ. ವಿಧಾನಮಂಡಲದ 30 ವರ್ಷಗಳ ಇತಿಹಾಸದಲ್ಲಿ ಪ್ರತಿಪಕ್ಷಗಳು ಸಂಪೂರ್ಣ ಬಹಿಷ್ಕಾರ ಹಾಕಿ ಅದರ ಬಳಿಕವೂ ಕಲಾಪ ನಡೆದ ಉದಾಹರಣೆ ಇಲ್ಲ. ಪ್ರಜಾಸತ್ತಾತ್ಮಕ ವಿಷಯಗಳಿಗಾಗಿ ಹಲವಾರು ಬಾರಿ ಪ್ರತಿಭಟನೆಗಳಾಗಿವೆ. ಆ ವೇಳೆ ಸಭಾತ್ಯಾಗ ಮಾಡಿರುವ ಉದಾಹರಣೆಗಳು …
Read More »Monthly Archives: ಜುಲೈ 2023
ಕನ್ಯಾ ಭಾಗ್ಯ ಯೋಜನೆ ತರುವಂತೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ರೈತರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ
ಹಾವೇರಿ : ಜಿಲ್ಲೆಯ ಯುವ ರೈತರು ಇದೀಗ ಹೊಸ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಯುವಕರಿಗೆ ಇದೀಗ ಮದುವೆಯಾಗಲು ಕನ್ಯೆ ಸಿಗುತ್ತಿಲ್ಲ. ಹೀಗಾಗಿ ಜಿಲ್ಲೆಯ ಯುವಕರು ವಿವಿಧೆಡೆ ಕನ್ಯೆ ನೋಡಿ ಬರುತ್ತಾರೆ. ಆದರೆ ಹುಡುಗಿಯ ಕಡೆಯವರು ಕೃಷಿಕರಿಗೆ ಕನ್ಯೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಈ ಸಂಬಂಧ ಹಲವು ಭಾಗ್ಯಗಳನ್ನು ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಕನ್ಯಾಭಾಗ್ಯ ಯೋಜನೆಯನ್ನು ಆರಂಭಿಸುವಂತೆ ಜಿಲ್ಲೆಯ ರೈತರು ಪತ್ರ ಬರೆಯುವ ಮೂಲಕ ಹೊಸ ಅಭಿಯಾನ ಆರಂಭಿಸಿದ್ದಾರೆ. ಜಿಲ್ಲೆಯ ಬ್ಯಾಡಗಿ …
Read More »ಕೇಂದ್ರದ ನಾಯಕ ಓಲೈಕೆಗಾಗಿ ರಾಜ್ಯದ ಬಿಜೆಪಿ ನಾಯಕರು ಈ ರೀತಿಯ ಸಾಹಸಗಳನ್ನು ಮಾಡುತ್ತಿದ್ದಾರೆ ಎಂದು ಡಿಕೆಶಿ
ಬೆಂಗಳೂರು: ದೆಹಲಿ ನಾಯಕರು ನೋಡಲಿ ಅಂತ ಬಿಜೆಪಿ ನಾಯಕರು ರೇಸ್ನಲ್ಲಿ ಇದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆಶಿ ಟಾಂಗ್ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹತಾಶೆಯಿಂದ ಗೂಂಡಾ ವರ್ತನೆ ತೋರುತ್ತಿದ್ದಾರೆ. ಯಾರು ಹೆಚ್ಚಿಗೆ ಮಾತನಾಡುತ್ತಾರೆ, ಯಾರು ಹೆಚ್ಚು ಫೋಟೋಗೆ ಬರುತ್ತಾರೆ ಎಂದು ದೆಹಲಿ ನಾಯಕರು ನೋಡುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಮಹಾಭಾರತದಲ್ಲಿ ನಡೆಯುವಂತೆ ನಾಟಕ ತೋರಿಸುತ್ತಿದ್ದಾರೆ. ಅವರಿಗೆ ಹಕ್ಕಿದೆ, ಏನು ಬೇಕಾದರು ಮಾಡಲಿ. ನಾವು ನಮ್ಮ ಕೆಲಸ ಮಾಡುತ್ತೇವೆ. ದಲಿತ ಸಭಾದ್ಯಕ್ಷರ …
Read More »ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸೆಪ್ಟೆಂಬರ್ 2ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳ ಮುಖಾಮುಖಿ
ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸೆಪ್ಟೆಂಬರ್ 2ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಬುಧವಾರ ಪ್ರಕಟಿಸಿದೆ. ಸೆಪ್ಟೆಂಬರ್ 2ರಂದು ಕ್ಯಾಂಡಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ಏಷ್ಯಾಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಸೆ.10ರಂದು ಕೊಲಂಬೊದಲ್ಲಿ ಸೂಪರ್ 4 ಪಂದ್ಯದಲ್ಲಿ ಮತ್ತೊಮ್ಮೆ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿವೆ. ಈ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆರು ತಂಡಗಳು ಪಾಲ್ಗೊಳ್ಳಲಿವೆ. …
Read More »ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ ಯೋಜನೆಯಡಿ ನಾಲ್ಕನೇ ರೈಲು ಜುಲೈ 29ರಂದು
ಬೆಂಗಳೂರು: ಕರ್ನಾಟಕ ಭಾರತ್ ಗೌರವ ಕಾಶಿ ದರ್ಶನ ಯೋಜನೆಯಡಿ ನಾಲ್ಕನೇ ರೈಲು ಜುಲೈ 29ರಂದು ಬೆಂಗಳೂರಿನಿಂದ ಹೊರಡಲಿದೆ. ಕಾಶಿ ದರ್ಶನ ಮಾಡಲಿಚ್ಛಿಸಿರುವ ಯಾತ್ರಾತ್ರಿಗಳು ಆನ್ ಲೈನ್ ಮೂಲಕ ತಮ್ಮ ಟಿಕೆಟ್ಗಳನ್ನು ಕಾಯ್ದಿರಿಸಿಕೊಳ್ಳಬಹುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. 2022-23ನೇ ಸಾಲಿನಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯದಿಂದ ಪುಣ್ಯಕ್ಷೇತ್ರಗಳಾದ ವಾರಣಾಸಿ, ಅಯೋಧ್ಯೆ ಮತ್ತು ಪ್ರಯಾಗ್‌ರಾಜ್ ಕ್ಷೇತ್ರಗಳಿಗೆ ಕಡಿಮೆ ವೆಚ್ಚದಲ್ಲಿ ತೆರಳಲು ಅನುಕೂಲವಾಗುವಂತೆ ರಿಯಾಯಿತಿ ದರದಲ್ಲಿ ಪ್ಯಾಕೇಜ್ ರೂಪಿಸಿ “ಕರ್ನಾಟಕ …
Read More »2024ರ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಾಲೀಮು ಆರಂಭ
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ತಾಲೀಮು ಆರಂಭಿಸಿವೆ. ಈಗಾಗಲೇ 65 ಪಕ್ಷಗಳು ಬಿಜೆಪಿ ಮತ್ತು ಕಾಂಗ್ರೆಸ್ ನೇತೃತ್ವದ ಒಕ್ಕೂಟವನ್ನು ಸೇರುವ ಮೂಲಕ ಚುನಾವಣಾ ಅಖಾಡಕ್ಕೆ ಸಜ್ಜುಗೊಳ್ಳುತ್ತಿವೆ. ಆದರೆ, ಸಂಸತ್ತಿನಲ್ಲಿ ಒಟ್ಟು 91 ಸದಸ್ಯರನ್ನು ಹೊಂದಿರುವ ಕನಿಷ್ಠ 11 ಪಕ್ಷಗಳು ತಟಸ್ಥ ಸ್ಥಿತಿಗೆ ಜಾರಿವೆ. ಇದರಲ್ಲಿ ಮೂರು ಪಕ್ಷಗಳು ಆಂಧ್ರ ಪ್ರದೇಶ, ತೆಲಂಗಾಣ ಮತ್ತು ಒಡಿಶಾದಂತಹ ಮೂರು ದೊಡ್ಡ ರಾಜ್ಯಗಳಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಒಟ್ಟಾಗಿ 63 ಸದಸ್ಯರನ್ನು ಲೋಕಸಭೆಗೆ …
Read More »ಇಬ್ಬರು ಮಹಿಳೆಯರ ಅಂಗಾಂಗ ದಾನ ಮಾಡಿದ್ದರಿಂದ ಹತ್ತು ಮಂದಿ ಜೀವನಕ್ಕೆ ಆಸರೆ
ಮೈಸೂರು: ಅಪಘಾತಕ್ಕೆ ಒಳಗಾಗಿದ್ದ ಇಬ್ಬರು ಮಹಿಳೆಯರ ಮೆದುಳು ನಿಷ್ಕ್ರಿಯವಾಗಿತ್ತು. ಅವರ ಕುಟುಂಬಸ್ಥರು ಒಪ್ಪಿಗೆ ಮೇರೆಗೆ ಈ ಮಹಿಳೆಯರ ಅಂಗಾಂಗಳನ್ನು ದಾನ ಮಾಡಲಾಯಿತು. ಇಬ್ಬರು ಮಹಿಳೆಯರ ಅಂಗಾಂಗ ದಾನ ಮಾಡಿದ್ದರಿಂದ ಹತ್ತು ಮಂದಿ ಜೀವನಕ್ಕೆ ಆಸರೆಯಾಗಿದೆ. ನಗರದ ಬೆಲ್ಲವತ್ತ ಬಳಿ ಸಂಭವಿಸಿದ ರಸ್ತೆ ಅಪಘಾತ ಒಂದರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಧಾ (48) ಎಂಬುವವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಮೆದುಳು ನಿಷ್ಕ್ರಿಯಗೊಂಡಿದೆ ಎಂದು ಆಸ್ಪತ್ರೆಯ ವೈದ್ಯರು ಘೋಷಿಸಿದ ಬಳಿಕ, ಅಂಗಾಂಗ ದಾನಕ್ಕೆ …
Read More »ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು : ಕೊನೆಗೂ ಬಹುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಬುಧವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ಕೊಟ್ಟರು. ಈ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದಲ್ಲಿನ ಯಜಮಾನಿ ಮಹಿಳೆಯು ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ ವರ್ಷಕ್ಕೆ 24 ಸಾವಿರ ರೂ. ಗಳನ್ನು ಪಡೆಯಲಿದ್ದಾರೆ. 1.28 ಕೋಟಿ ಮಹಿಳೆಯರ ಕುಟುಂಬಕ್ಕೆ ಇದರ ಪ್ರಯೋಜನ ದೊರೆಯಲಿದೆ. ಆ.16ರಿಂದ ಯಜಮಾನಿಯ ಖಾತೆಗೆ 2,000 ರೂ. ಜಮೆಯಾಗಲಿದೆ. ‘₹30 ಸಾವಿರ ಕೋಟಿಯ …
Read More »ರಾಜ್ಯ ಸರ್ಕಾರ ಸರ್ವಾಧಿಕಾರಿ, ಹಿಟ್ಲರ್ ರೀತಿ ವರ್ತಿಸುತ್ತಿದ್ದುಆಕ್ರೋಶ ವ್ಯಕ್ತಪಡಿಸಿದ ಬೊಮ್ಮಾಯಿ
ಬೆಂಗಳೂರು : ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಡಾ. ಅಶ್ವತ್ಥ ನಾರಾಯಣ, ಆರ್. ಅಶೋಕ್, ಹಿರಿಯ ಶಾಸಕರಾದ ಸುರೇಶ್ ಕುಮಾರ್, ವಿ. ಸುನೀಲ್ ಕುಮಾರ್, ಮುನಿರತ್ನ, ಆರ್. ಅಶೋಕ್, ಅರವಿಂದ್ ಬೆಲ್ಲದ್, ಮಹೇಶ್ ಟೆಂಕಿನಕಾಯಿ, ಧೀರಜ್ ಮುನಿರಾಜು, ಚನ್ನಬಸಪ್ಪ, ಜ್ಯೋತಿ ಗಣೇಶ್, ಸಿ. ಕೆ ರಾಮಮೂರ್ತಿ ಸೇರಿದಂತೆ ಹಲವರು ಬಿಜೆಪಿ ಶಾಸಕರನ್ನು ವಶಕ್ಕೆ ಪಡೆದ …
Read More »ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಕೆಲಸ ಮಾಡುತ್ತಿದ್ದು, ಜನ ನಮಗೆ ಅಧಿಕಾರ ನೀಡಿರುವ ಕಾರಣ ನಾವು ಇಲ್ಲಿ ಕುಳಿತ್ತಿದ್ದೇವೆ. ಬಿಜೆಪಿಯನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಅವರು ಪ್ರತಿಪಕ್ಷದ ಸ್ಥಾನದಲ್ಲಿ ಕುಳಿತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ನಡೆ ಖಂಡಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಸಂದರ್ಭ, ಕಳೆದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನಾವು ಹಾಗೂ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರ ಮಾಡಿದ್ದೆವು. ಆಗಲೂ …
Read More »