ಚಿಕ್ಕೋಡಿ(ಬೆಳಗಾವಿ): ಹಿರೆಕೋಡಿ ಗ್ರಾಮದ ಜೈನ ಮುನಿ ಹತ್ಯೆ ಹಿಂದೆ ಆಯಂಟಿ ನ್ಯಾಷನಲ್ ಟೆರರಿಸ್ಟ್ ಸಂಘಟನೆ ಕೆಲಸ ಮಾಡುತ್ತಿದೆ. ಈ ಪ್ರಕರಣದ ಸತ್ಯಾಸತ್ಯತೆ ಹೊರ ಬರಬೇಕು ಎಂದರೆ ಸಿಬಿಐ ತನಿಖೆ ಆಗಲೇಬೇಕು ಎಂದು ಅಖಿಲ ಭಾರತ ಸಂತ ಸಮಿತಿ ಅಧ್ಯಕ್ಷ ಹಾಗೂ ಮಂಗಳೂರಿನ ಓಂ ಶ್ರೀ ಮಠದ ಸ್ವಾಮೀಜಿಯಾದ ವಿದ್ಯಾನಂದ ಸರಸ್ವತಿ ಸ್ವಾಮೀಜಿ ಆಗ್ರಹಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಜಿನ್ಯಕ್ಯ ಕಾಮಕುಮಾರ ನಂದಿ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ …
Read More »Monthly Archives: ಜುಲೈ 2023
ದೇಶದ ಎಲ್ಲ ಪ್ರತಿಪಕ್ಷಗಳ ನಾಯಕರು ಭಾರತವನ್ನು ರಕ್ಷಣೆ ಮಾಡುವ ತೀರ್ಮಾನ ಮಾಡಿದ್ದಾರೆ ಎಂದ ಡಿ.ಸಿ.ಎಂ .ಡಿ.ಕೆ. ಶಿ.:
ಬೆಂಗಳೂರು: ದೇಶ ನಿರೀಕ್ಷೆ ಮಾಡಿದಂತೆ ಇಂದಿನ ಪ್ರತಿ ಪಕ್ಷಗಳ ಸಭೆ ಯಶಸ್ವಿಯಾಗಿ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಈ ಸಭೆ ಭಾರತದ ಧ್ವನಿಯಾಗಿತ್ತು. ದೇಶದ ಎಲ್ಲ ಪ್ರತಿಪಕ್ಷಗಳ ನಾಯಕರು ಭಾರತವನ್ನು ರಕ್ಷಣೆ ಮಾಡುವ ತೀರ್ಮಾನ ಮಾಡಿದ್ದಾರೆ ಎಂದಿದ್ದಾರೆ. ಮೈತ್ರಿಕೂಟದ ನಾಯಕರ ಜೊತೆ ಡಿಕೆ ಶಿವಕುಮಾರ್ಇದಕ್ಕೂ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, “ಇಂದಿನ ಸಭೆಯು ಭಾರತದ ಧ್ವನಿಯಾಗಿದೆ.. ಅದರಲ್ಲಿ ಸಾಕಷ್ಟು …
Read More »ಶಿಷ್ಟಾಚಾರದ ಪ್ರಕಾರವೇ ಗಣ್ಯರ ಸ್ವಾಗತಕ್ಕೆ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗಿತ್ತೇ ಹೊರತು ರಾಜಕೀಯ ಕಾರ್ಯಕ್ರಮಕ್ಕೆ ಅಧಿಕಾರಿಗಳನ್ನು ಬಳಸಿಕೊಂಡಿರಲಿಲ್ಲ ಎಂದ ಸಿಎಂ
ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎನ್ನುವ ಪ್ರತಿ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿದ್ದಾರೆ. ರಾಜ್ಯಕ್ಕೆ ಆಗಮಿಸಿದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳು ರಾಜ್ಯದ ಅತಿಥಿಗಳಾಗಿದ್ದರು. …
Read More »ಏಕಾಂಗಿಯಾಗಿ ಉಳಿದ J.D.S.ಕಾಂಗ್ರೆಸ್ ಕರೆಯಲಿಲ್ಲ.. ಬಿಜೆಪಿಯೂ ಬನ್ನಿ ಎನ್ನಲಿಲ್ಲ:H,D.K
ಬೆಂಗಳೂರು: ಎನ್‌ಡಿಎ ಕೂಟ ಹಾಗೂ ವಿಪಕ್ಷ ಒಕ್ಕೂಟದ ಮಧ್ಯೆ ಜೆಡಿಎಸ್ ಎಲ್ಲೂ ಸಲ್ಲದಂತಾಗಿದೆ. ಎರಡು ಒಕ್ಕೂಟಗಳಿಂದ ಆಹ್ವಾನ ಬಾರದೇ ಜೆಡಿಎಸ್ ಅತಂತ್ರವಾಗಿ ಉಳಿದಿದೆ. ಎರಡೂ ಮೈತ್ರಿ ಒಕ್ಕೂಟದಿಂದ ನಿರ್ಲಕ್ಷ್ಯಕ್ಕೊಳಗಾದ ಜೆಡಿಎಸ್ ಯಾರಿಗೂ ಬೇಡವಾಯಿತಾ ಎಂಬ ಅನುಮಾನ ಮೂಡುತ್ತಿದೆ. ಒಂದೆಡೆ ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಎನ್‌ಡಿಎ ಮೈತ್ರಿಕೂಟವನ್ನು ಬಲ ಪಡಿಸುತ್ತಿದ್ದರೆ. ಇನ್ನೊಂದೆಡೆ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷ ಕೂಟದ ಶಕ್ತಿ ವರ್ಧನೆ ಮಾಡಲಾಗುತ್ತದೆ. ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎನ್‌ಡಿಎ ಮೈತ್ರಿ …
Read More »ರಾಜ್ಯದಲ್ಲಿ ಕಳೆದ ವರ್ಷ ಸುಮಾರು 440 ಕೋಟಿ ರೂಪಾಯಿ ಬೆಳೆವಿಮೆ EX CM BOMMAI ಹಾವೇರಿ ಜಿಲ್ಲೆ ಪಡೆದಿದೆ.
ಹಾವೇರಿ: ರಾಜ್ಯದಲ್ಲಿ ಅತಿಹೆಚ್ಚು ಬೆಳೆವಿಮೆ ಪಡೆಯುವ ಜಿಲ್ಲೆ ಹಾವೇರಿ. ಜಿಲ್ಲೆ ಕಳೆದ ವರ್ಷ ಸುಮಾರು 440 ಕೋಟಿ ರೂಪಾಯಿ ಬೆಳೆವಿಮೆ ಪಡೆದಿದೆ. ಜಿಲ್ಲೆ ಕಳೆದ ವರ್ಷ ಸುಮಾರು 440 ಕೋಟಿ ರೂಪಾಯಿ ಬೆಳೆವಿಮೆ ಪಡೆದಿದೆ. ಪ್ರತಿವರ್ಷ ಇಲ್ಲಿಯ ರೈತರು ಬೆಳೆಗಳಿಗೆ ಬೆಳೆವಿಮೆ ಮಾಡಿಸುತ್ತಾರೆ. ಉತ್ತಮವಾಗಿ ಮಳೆ ಬಂದು ಬೆಳೆ ಬಂದರೆ ಬೆಳೆವಿಮೆ ಬರುವುದಿಲ್ಲ. ಆದರೆ, ಸರಿಯಾಗಿ ಮಳೆಬಾರದೆ ಬೆಳೆಬಾರದ ವರ್ಷಗಳಲ್ಲಿ ಬೆಳೆವಿಮೆ ಸ್ವಲ್ಪಮಟ್ಟಿನ ಸಹಾಯವಾಗುತ್ತೆ. ಮುಂಗಾರು ಆರಂಭವಾಗುತ್ತಿದ್ದಂತೆ ಬೆಳೆವಿಮಾ ಕಂಪನಿಗಳು ಟೆಂಡರ್ …
Read More »ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ
ಭೋಪಾಲ್ (ಮಧ್ಯಪ್ರದೇಶ): ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿದ್ದ ವಿಮಾನವು ಮಂಗಳವಾರ ಸಂಜೆ ಮಧ್ಯಪ್ರದೇಶದ ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಆದರೆ, ವಿಮಾನದ ತುರ್ತು ಭೂಸ್ಪರ್ಶಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನವನ್ನು ಭೋಪಾಲ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಭೋಪಾಲ್ ಪೊಲೀಸ್ ಕಮಿಷನರ್ ಹರಿನಾರಾಯಣ ಚಾರಿ ಮಿಶ್ರಾ …
Read More »ಜಿಂಕೆಗಳ ಕಾಟದಿಂದ ಹಗಲು ರಾತ್ರಿ ಎನ್ನದೆ ರೈತರು ಜಮೀನು ಕಾಯುತ್ತಿದ್ದಾರೆ.
ಹುಬ್ಬಳ್ಳಿ : ಕಳೆದ ವರ್ಷ ಅತಿವೃಷ್ಟಿಯಾಗಿ ರೈತರಿಗೆ ಬರೆ ಎಳೆದರೆ. ಈ ವರ್ಷ ಮುಂಗಾರು ಸರಿಯಾಗಿ ಆಗದೆ ರೈತರು ಸಂಕಷ್ಟದಲ್ಲಿ ಇರುವ ಬೆನ್ನಲ್ಲೇ ಅಷ್ಟೋ ಇಷ್ಟೋ ಬೆಳೆದ ಬೆಳೆಗೆ ಕಾಡು ಪ್ರಾಣಿಗಳ ಕಂಟಕ ಎದುರಾಗಿದೆ. ಇದೀಗ ಮುಂಗಾರು ಬೆಳೆ ಉಳಿಸಿಕೊಳ್ಳಲು ಧಾರವಾಡ ಜಿಲ್ಲೆಯ ಅನ್ನದಾತರು ಬಿಯರ್ ಬಾಟಲಿ ಮೊರೆ ಹೋಗಿದ್ದಾರೆ. ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ, ಮುಳ್ಳೊಳ್ಳಿ, ಯರಗುಪ್ಪಿ, ಚಿಕ್ಕನೇರ್ತಿ, ಯರಿನಾರಾಯಣಪುರ ಸೇರಿದಂತೆ ಬಹುತೇಕ ಹಳ್ಳಿಗಳ ರೈತರ ಜಮೀನುಗಳಲ್ಲಿ ಜಿಂಕೆಗಳ ಹಾವಳಿ …
Read More »ಮೂರು ಪ್ರಮುಖ ವಿಧೇಯಕಗಳಿಗೆ ವಿಧಾನ ಪರಿಷತ್ ಅಂಗೀಕಾರ ನೀಡಿದೆ.
ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ)ವಿಧೇಯಕ 2023, ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ 2023 ಮತ್ತು ಕರ್ನಾಟಕ ವಿಧಾನಮಂಡಲ (ಅನರ್ಹತಾ ನಿವಾರಣಾ)(ತಿದ್ದುಪಡಿ) ವಿಧೇಯಕ 2023 ಕ್ಕೆ ವಿಧಾನ ಪರಿಷತ್ ಅಂಗೀಕಾರ ನೀಡಿತು. ವಿಧಾನ ಪರಿಷತ್ ವಿತ್ತೀಯ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್, ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಕರ್ನಾಟಕ …
Read More »ದೆಹಲಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಸಭೆ ದೀರ್ಘಾವಧಿ ಮೈತ್ರಿ ಎಂದ ಪ್ರಧಾನಿ ಮೋದಿ
ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಸರಿ ಸುಮಾರು 10 ತಿಂಗಳು ಬಾಕಿಯಾಗಿದೆ. ಆದರೆ, ಈಗಲೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಮೈತ್ರಿಕೂಟವು ಎರಡು ದಿನಗಳ ಮಹತ್ವದ ಸಭೆ ನಡೆಸಿದೆ. ಮತ್ತೊಂದೆಡೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸಭೆ ಆರಂಭವಾಗಿದೆ. ಕಾಂಗ್ರೆಸ್ 26 ಸಮಾನ ಮನಸ್ಕ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ತನ್ನ ಬಲ ಪ್ರರ್ದಶನ ಮಾಡಿದೆ. ಬಿಜೆಪಿಯು …
Read More »ಮಗನಿಂದಲೇ ಹತ್ಯೆಯಾದ ವೃದ್ಧ ದಂಪತಿ.
ಬೆಂಗಳೂರು: ಅವರಿಬ್ಬರು ವೃದ್ಧ ದಂಪತಿ. ಪತ್ನಿ ಕೇಂದ್ರ ಸರ್ಕಾರದ ನೌಕರಿ ಮಾಡಿ ನಿವೃತ್ತರಾಗಿದ್ದರು. ಸಂಸಾದರ ಬಂಡಿ ಸಾಗಿಸಲು ವಯಸ್ಸು 61 ಆದರೂ ಪತಿ ಇನ್ನೂ ಕೆಲಸ ಮಾಡುತ್ತಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳು. ಅದರಲ್ಲಿ ಓರ್ವ ಉದ್ಯೋಗಸ್ಥನಾಗಿದ್ದರೆ ಇನ್ನೋರ್ವ ಮಗ ಮನೆಯಲ್ಲೇ ಇರುತ್ತಿದ್ದ. ಮಕ್ಕಳ ಭವಿಷ್ಯದ ಬಗ್ಗೆ ನೂರಾರು ಕನಸುಗಳನ್ನು ಕಟ್ಟಿಕೊಂಡಿದ್ದರು ಈ ದಂಪತಿ. ಆದ್ರೆ ಪ್ರೀತಿಯಿಂದ ಬೆಳೆಸಿದ್ದ ಕಿರಿಯ ಮಗ ಅಪ್ಪ- ಅಮ್ಮನ ಪ್ರಾಣವನ್ನೇ ತೆಗೆದಿದ್ದಾನೆ. ಹೌದು, ಸಿಲಿಕಾನ್ ಸಿಟಿಯಲ್ಲಿ …
Read More »