Breaking News

Monthly Archives: ಜುಲೈ 2023

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್​ಗೆ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಾಗೂ ವಿನೋದ್ ತೋಮರ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.   ಇಂದು ಬ್ರಿಜ್ ಭೂಷಣ್ ಶರಣ್ ಸಿಂಗ್ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಮಂಜೂರಿಗೆ ಮನವಿ ಮಾಡಿದರು. ಈ ಸಾಮಾನ್ಯ ಜಾಮೀನು ವಿಚಾರಣೆಯನ್ನು ಜುಲೈ 20ರಂದು ನಡೆಯಲಿದೆ. ಮುಂದಿನ …

Read More »

ಬೆಂಗಳೂರಿನ ಸಭೆ ಇದು ಭ್ರಷ್ಟರ ಸಭೆ: ಮೋದಿ

ನವದೆಹಲಿ : ಬೆಂಗಳೂರಿನಲ್ಲಿ ಸಭೆ ನಡೆಸುತ್ತಿರುವ ವಿರೋಧ ಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಇದು ಭ್ರಷ್ಟರ ಸಭೆ ಎಂಬುದು ಜನರಿಗೆ ಗೊತ್ತಾಗುತ್ತಿದೆ ಮತ್ತು ತಮ್ಮ ಭ್ರಷ್ಟಾಚಾರ ಬಯಲಿಗೆ ಬಂದಾಗ ಈ ಪಕ್ಷಗಳು ಪರಸ್ಪರ ರಕ್ಷಣೆಗೆ ಮುಂದಾಗುತ್ತವೆ ಎಂದಿದ್ದಾರೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್‌ನಲ್ಲಿರುವ ವೀರ್ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದ ನಂತರ ಪ್ರಧಾನಮಂತ್ರಿಯವರು ಸಭೆಯನ್ನುದ್ದೇಶಿಸಿ ಮಾತನಾಡಿದರು. …

Read More »

ವಿಪಕ್ಷಗಳ ಸಭೆಯಲ್ಲಿ ಮಹಾಮೈತ್ರಿ ನಾಮಕರಣಕ್ಕೆ ನಾಲ್ಕು ಹೆಸರುಗಳ ಪ್ರಸ್ತಾವನೆ

ಬೆಂಗಳೂರು : ಕಾಂಗ್ರೆಸ್ ಸಮ್ಮುಖದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ರಾಷ್ಟ್ರೀಯ ವಿಪಕ್ಷಗಳ ಎರಡನೇ ‌ಮಹಾಘಟಬಂಧನ ಸಭೆ ನಡೆಯುತ್ತಿದೆ. 25 ಪಕ್ಷಗಳ 46ಕ್ಕೂ ಅಧಿಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಮಹಾಮೈತ್ರಿ ಸಭೆ ಆರಂಭವಾಗಿದೆ. ಆರು ಪ್ರಮುಖ ಅಂಶಗಳ ಮೇಲೆ ಸಭೆಯಲ್ಲಿ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆ ಸಂಬಂಧ ಕಾರ್ಯತಂತ್ರ ರೂಪಿಸಲು ಸಭೆ ಮಹತ್ವದ್ದಾಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, …

Read More »

ಮಹಾಘಟಬಂಧನ್ ಸಭೆ: ಹೋಟೆಲ್ ಸುತ್ತ ರಾರಾಜಿಸುತ್ತಿವೆ ರಾಷ್ಟ್ರೀಯ ನಾಯಕರ ಪೋಸ್ಟರ್ಸ್​

ಬೆಂಗಳೂರು : ಮಹಾಘಟಬಂಧನ್ ನಾಯಕರ ಸಭೆ ನಡೆಯುತ್ತಿರುವ ರೇಸ್ ಕೋರ್ಸ್ ರಸ್ತೆಯ ಖಾಸಗಿ ಹೋಟೆಲ್ ಸುತ್ತಮುತ್ತ ರಾಷ್ಟ್ರೀಯ ನಾಯಕರ ಪೋಸ್ಟರ್​ಗಳು ರಾರಾಜಿಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮೇರೆಗೆ ಎರಡನೇ ಸಭೆ ನಗರದ ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ನಡೆಯುತ್ತಿದೆ. ಸಭೆಯಲ್ಲಿ ಪಾಲ್ಗೊಂಡಿರುವ ಎಐಸಿಸಿ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ, ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, …

Read More »

ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ

ದೇವನಹಳ್ಳಿ(ಬೆಂಗಳೂರು): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್​ನಿಂದ ಇಂಡಿಗೋ 6E6744 ವಿಮಾನದಲ್ಲಿ ಬಂದಿದ್ದ ಚೆನ್ನೈ ಮೂಲದ ವ್ಯಕ್ತಿ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಬರೋಬ್ಬರಿ 4 ಕೋಟಿ ರೂ. ಮೌಲ್ಯದ 6.5 ಕೆಜಿ ತೂಕದ 7 ಚಿನ್ನದ ಬಿಸ್ಕೆಟ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇನ್ನು, ಸ್ಮಗ್ಲರ್ಸ್ ಮೊದಲೇ …

Read More »

ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದೆ.

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ವಿವಾದಿತ ಎಪಿಎಂಸಿ ಕಾಯ್ದೆ ಹಿಂಪಡೆಯುವ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆ ಮಧ್ಯೆ ವಿಧಾನಸಭೆಯಲ್ಲಿ 2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿತು.   ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ವಿಧೇಯಕವನ್ನು ಮಂಡಿಸಿದರು. ಈ ಬಿಲ್‌ಅನ್ನು ತರಾತುರಿಯಲ್ಲಿ ತಂದಿಲ್ಲ. ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಈ …

Read More »

”ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭ: C.M.

ಬೆಂಗಳೂರು: ”ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಸ್ಪಷ್ಟವಾದ ಬಹುಮತ ದೊರೆಯಲು ಸಾಧ್ಯವಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ವಿಧಾನಸೌಧದಲ್ಲಿ ಇಂದು ಸೋಮವಾರ ಸಂಜೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ”ಕರ್ನಾಟಕದಲ್ಲಿ ಮೋದಿಯವರನ್ನು ಸಮರ್ಥವಾಗಿ ಎದುರಿಸಲಾಗಿದೆ. ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮೋದಿಯವರು 28 ಕಡೆ ಪ್ರವಾಸ ಕೈಗೊಂಡಿದ್ದು, ಅವರು ಬಂದ ಕಡೆಗಳೆಲ್ಲಾ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕರ್ನಾಟಕದಲ್ಲಿ ಸಮರ್ಥವಾಗಿ ಎದುರಿಸಲೇ ಇಲ್ಲ. …

Read More »

ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇದಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ.   ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ …

Read More »

ಜಿಲ್ಲೆಯಲ್ಲಿ ಡ್ರಗ್ಸ್​ ಮಾರಾಟಗಾರರು ಹೆಚ್ಚಾಗಿದ್ದು, ಮಾರಾಟಕ್ಕೆ ಬ್ರೇಕ್ ಹಾಕಲು ಪೋಲಿಸ್ ಇಲಾಖೆ ಸಜ್ಜಾ

ಕೊಡಗು: ಜಿಲ್ಲೆಯಲ್ಲಿ ಡ್ರಗ್ಸ್​ ಮಾರಾಟಗಾರರು ಹೆಚ್ಚಾಗಿದ್ದು, ಮಾರಾಟಕ್ಕೆ ಬ್ರೇಕ್ ಹಾಕಲು ಪೋಲಿಸ್ ಇಲಾಖೆ ಸಜ್ಜಾಗಿದೆ. ಈ ಒಂದು ಕ್ರಮದಲ್ಲಿ ಪೊಲೀಸರು, ಮಾರಾಟಗಾರರು ಮತ್ತು ಸೇವನೆ ಮಾಡುತ್ತಿದ್ದ ವ್ಯಕ್ತಿಗಳನ್ನು ಸೇರಿ ಜಿಲ್ಲೆಯಲ್ಲಿ 25 ಮಂದಿಯನ್ನು ಬಂಧಿಸಿದ್ದಾರೆ. ದಾಳಿ ವೇಳೆ ಆರೋಪಿಗಳ ಬಳಿ ಇದ್ದ ಗಾಂಜಾ , ಎಲ್​ಎಸ್​ಡಿ ಡ್ರಗ್ಸ್​ ಜಪ್ತಿ ಮಾಡಿದ್ದಾರೆ. ಬಂಧಿತರಲ್ಲಿ 14 ಜನ ಪ್ರವಾಸಿಗರಿದ್ದು, ಇವರು ಹೋಂ ಸ್ಟೇಯೊಂದರಲ್ಲಿ ಮಾದಕವಸ್ತು ಸೇವಿಸುತ್ತಿದ್ದರು. ಅಲೀಂ ಅಹ್ಮದ್, ಮೋಸಿನ್, ಸಾಗರ್, ರೆಹಮಾನ್, ಚೇತನ್, …

Read More »

ಜೈಲಿನಲ್ಲಿರುವ ಕೈದಿಗಳಿಗೆ ತಮ್ಮ ಮಕ್ಕಳನ್ನು ನೋಡಲು ಮತ್ತು ಭೇಟಿಯಾಗುವ ಅವಕಾಶ ಮುತ್ತಿಕ್ಕಿ ಬಾವುಕರಾದ ಕೈದಿಗಳು!

ಛಿಂದ್ವಾರಾ, ಮಧ್ಯಪ್ರದೇಶ: ಕೆಲವರು ತಮ್ಮ ಮಕ್ಕಳನ್ನು ಮೊದಲ ಬಾರಿಗೆ ತಬ್ಬಿಕೊಂಡರೆ, ಕೆಲವರು ಅನೇಕ ವರ್ಷಗಳ ನಂತರ ತಮ್ಮ ಕುಡಿಗಳನ್ನು ನೋಡಿ ಸಂತಸದಿಂದ ಕಣ್ಣೀರು ಸುರಿಸುತ್ತಿರುವ ಪ್ರಸಂಗವೊಂದು ಜೈಲಿನಲ್ಲಿ ಕಂಡು ಬಂದಿತು. ಇನ್ನು ಚಿಕ್ಕ ಮಕ್ಕಳು ತಮ್ಮ ತಂದೆಯ ಮಡಿಲಲ್ಲಿ ಕುಳಿತು ನಿರಾಳವಾಗಿದ್ದರು. ಈ ಮನಕಲುಕುವ ಕ್ಷಣಗಳು ಛಿಂದ್ವಾರಾ ಜಿಲ್ಲಾ ಕಾರಾಗೃಹದೊಳಗೆ ಕಂಡುಬಂದಿತು. ಛಿಂದ್ವಾರಾ ಜಿಲ್ಲಾ ಕಾರಾಗೃಹದ ಆಡಳಿತವು ಕೈದಿಗಳಿಗೆ ತಮ್ಮ ಮಕ್ಕಳನ್ನು ಭೇಟಿ ಮಾಡಲು ಕಾರ್ಯಕ್ರಮ ಆಯೋಜಿಸಿತ್ತು, ಅದಕ್ಕೆ ಸ್ಪರ್ಶ್ ಮೀಟ್ …

Read More »