ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೇಶವನ್ನು ಲೂಟಿ ಮಾಡಿದ ದರೋಡೆಕೋರರು ಒಟ್ಟಾಗಿದ್ದಾರೆ. ಇದು ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ದರೋಡೆಕೋರರ ಒಕ್ಕೂಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ತಿಂಗಳಾಗಿದೆ. ಬರಗಾಲದ ಛಾಯೆ ಎದುರಾಗಿದೆ. ರೈತರ ಆತ್ಮಹತ್ಯೆ ಹೆಚ್ಚಿದೆ. ಆತಂಕದ ಛಾಯೆ ಹೆಚ್ಚಾಗಿದೆ ಎಂದು ಕಿಡಿ ಕಾರಿದರು. ಹಿಂದೂ ಕಾರ್ಯಕರ್ತರ ಹಾಗೂ ಜೋಡಿ …
Read More »Monthly Archives: ಜುಲೈ 2023
ಖಾಸಗಿ ಶಾಲೆಯಲ್ಲಿ ಕಲುಷಿತ ನೀರು ತುಂಬಿದ್ದ ಡ್ರಮ್ನಲ್ಲಿ ಬಿದ್ದು ಬಾಲಕನ ಆರೋಗ್ಯದಲ್ಲಿ ಏರುಪೇರ: ಈಗ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮನ ಕಲುಕುವ ಘಟನೆ ನಡೆದಿದೆ. ಸಾಗರದ ಖಾಸಗಿ ಶಾಲೆಯಲ್ಲಿ ಒಂದನೇ ತರಗತಿಯ ವಿದ್ಯಾರ್ಥಿ ಕಲು ಷಿತ ನೀರು ಇರುವ ಪ್ಲಾಸ್ಟಿಕ್ ಡ್ರಮ್ನಲ್ಲಿ ಬಿದ್ದು ಈಗ ಆಸ್ಪತ್ರೆಯಲ್ಲಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ಸಾಗರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಶಾಲೆಯ ಶಿಕ್ಷಕರ ನಿರ್ಲಕ್ಷ್ಯ ಈ ಘಟನೆ ನಡೆದಿದೆ ಎಂದು ಬಾಲಕನ ಪೋಷಕರು ಆರೋಪಿಸುತ್ತಿದ್ದಾರೆ. ಈಗ ಬಾಲಕನನ್ನು ಮಣಿಪಾಲದ ಕಸ್ತೂರ್ ಬಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಹಿನ್ನಲೆ: ಜೂ.26 …
Read More »ಜೈನ ಮುನಿ ಆರೋಪಿಗಳನ್ನು ಮತ್ತೆ ಚಿಕ್ಕೋಡಿ ನ್ಯಾಯಾಲಯ ಐದು ದಿನಗಳವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯ ಪ್ರಮುಖ ಆರೋಪಿಗಳನ್ನು ಮತ್ತೆ ಚಿಕ್ಕೋಡಿ ನ್ಯಾಯಾಲಯ ಐದು ದಿನಗಳವರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಕಳೆದ ವಾರದ ಹಿಂದೆ ಚಿಕ್ಕೋಡಿ ಪೊಲೀಸರು ಹೆಚ್ಚಿನ ತನಿಖೆಗಾಗಿ ಏಳು ದಿನಗಳವರಿಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದರು. ಆ ಕಾಲಾವಕಾಶ ಮುಗಿಯುತ್ತಿದ್ದಂತೆ ಇಂದು ಚಿಕ್ಕೋಡಿ ಪ್ರಧಾನ ದಿವಾಣಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಧೀಶ ಚಿದಾನಂದ ಬಡಿಗೇರ ಅವರು ವಿಚಾರಣೆ ನಡೆಸಿ ಮತ್ತೆ 5 ದಿನಗಳವರೆಗೆ …
Read More »ಜಾತ್ಯತೀತ ಶಕ್ತಿಗಳಿಂದ ಸಂವಿಧಾನ ಉಳಿಸಲು ಸಭೆ :ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಜಾತ್ಯತೀತ ಶಕ್ತಿಗಳಿಂದ ಸಂವಿಧಾನ ಉಳಿಸಲು ಸಭೆ ನಡೆಯುತ್ತಿದೆ. ದೇಶದ ಸಂವಿಧಾನವನ್ನ ಉಳಿಸಲು ಎಲ್ಲರೂ ಒಟ್ಟಾಗಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಮಹಾ ಘಟಬಂಧನ್ ಸಭೆಯಲ್ಲಿ ಭಾಗಿಯಾಗಲು ಆಗಮಿಸಿದ ವಿವಿಧ ರಾಜ್ಯಗಳ ಮುಖಂಡರನ್ನು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹಿರಿಯ ಸಚಿವ ಎಂ.ಬಿ ಪಾಟೀಲ್ ಜೊತೆ ಬರಮಾಡಿಕೊಂಡ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆಯುವ ಈ ದೇಶದ ಹಿತಾಸಕ್ತಿ ದೃಷ್ಟಿಯಿಂದ …
Read More »ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್
ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕೆ.ಗೋವಿಂದರಾಜ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ. ವಕೀಲ ಎಸ್.ಉಮಾಪತಿ ಸಲ್ಲಿಸಿರುವ ಅರ್ಜಿಯಲ್ಲಿ ನಜೀರ್ ಅಹ್ಮದ್, ಕೆ.ಗೋವಿಂದರಾಜ್, ಸುನೀಲ್ ಕನಗೋಲು ಹಾಗೂ ಕೆ.ವಿ.ಪ್ರಭಾಕರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. …
Read More »ದೂದ್ ಸಾಗರ್ನಲ್ಲಿ ಅಡ್ಡಾದಿಡ್ಡಿ ಓಡಾಡಿದ್ರೆ ಎಚ್ಚರಿಕೆ : ರೈಲ್ವೆ ಇಲಾಖೆ
ಕಾರವಾರ: ಕರ್ನಾಟಕ-ಗೋವಾ ಗಡಿಭಾಗದಲ್ಲಿರುವ ಪ್ರಸಿದ್ಧ ದೂದ್ ಸಾಗರ್ ಜಲಪಾತ ವೀಕ್ಷಣೆಗೆ ಭಾರಿ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ. ಅದರಲ್ಲಿಯೂ ಈಗ ಮಳೆ ಬರುತ್ತಿರುವುದರಿಂದ ಅದರ ಸೊಬಗು ಮತ್ತಷ್ಟು ಹೆಚ್ಚಾಗಿದೆ. ಆದರೆ ಪ್ರವಾಸಕ್ಕೆಂದು ಬರುವ ಜನರು ಅಲ್ಲಿ ಮೋಜು ಮಸ್ತಿ ಮಾಡಿ ಪ್ರಕೃತಿಯನ್ನು ಹಾಳು ಮಾಡುವುದರಲ್ಲಿ ಹಿಂಜರಿಯುವುದಿಲ್ಲ. ಹೀಗಾಗಿ ಈ ಸಂಭ್ರಮಕ್ಕೆ ಕಡಿವಾಣ ಬೀಳಲಿದೆ. ಇನ್ಮುಂದೆ ಪ್ರವಾಸಿಗರು ದೂದ್ ಸಾಗರ್ನಲ್ಲಿ ಅಡ್ಡಾದಿಡ್ಡಿ ಓಡಾಡುವಂತಿಲ್ಲ. ಈ ಬಗ್ಗೆ ರೈಲ್ವೆ ಇಲಾಖೆ ಎಚ್ಚರಿಕೆ ನೀಡಿದೆ. ನೈಋತ್ಯ ರೈಲ್ವೆಯು, …
Read More »ಹಾಸನದಲ್ಲಿ ಹಫ್ತಾ ವಸೂಲಿ ದಂಧೆ ಅಂಗಡಿ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ
ಹಾಸನ: ಹೆಚ್ಚಿನ ಹಫ್ತಾ ಹಣ ಕೊಡಲಿಲ್ಲ ಅಂತ ಪುಡಿರೌಡಿಯೊಬ್ಬ ಅಂಗಡಿ ಮಾಲೀಕನಿಗೆ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ಹಾಸನದ ಸಿದ್ದಯ್ಯ ನಗರದಲ್ಲಿ ನಡೆದಿದೆ. ಸೂರ್ಯಪ್ರಭ (54) ಹಲ್ಲೆಗೊಳಗಾದ ಪ್ರಭಾ ಆಟೋಮೋಟಿವ್ ಶಾಪ್ ಮಾಲೀಕ. ಸಿದ್ದಯ್ಯ ನಗರದ ವಿಕ್ಕಿ ಎಂಬಾತನಿಂದ ಕೃತ್ಯ ನಡೆದಿದೆ ಎಂದು ಹಲ್ಲೆಗೊಳಗಾದ ಸೂರ್ಯಪ್ರಭ ಆರೋಪಿಸಿದ್ದಾರೆ. ಭಾನುವಾರ ಸಂಜೆ ಅಂಗಡಿಗೆ ಬಂದ ಆರೋಪಿ ವಿಕ್ಕಿ ಹಫ್ತಾ ಕೊಡುವಂತೆ ಬೆದರಿಕೆ ಹಾಕಿದ್ದಾನೆ. ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿದ್ದರಿಂದ ಮಾಲೀಕ ಸ್ವಲ್ಪ …
Read More »13 ಸಾವಿರ ಕ್ರೇಟ್ ಟೊಮೆಟೊ ಬೆಳೆದು ಕೋಟಿ ರೂಪಾಯಿ ಗಳಿಸಿದ ರೈತ
ಪುಣೆ(ಮಹಾರಾಷ್ಟ್ರ): ಲಾಟರಿ ತಾಕಿ ಲಕ್ಷಾಧಿಪತಿಯಾದ್ರು ಅನ್ನೋ ಮಾತುಗಳನ್ನು ನಾವು ಕೇಳಿರ್ತೀವಿ. ಬೆಳೆ ಬೆಳೆದು ರೈತ ಕೋಟಿ ರೂಪಾಯಿ ಗಳಿಸಿದ ಅಂತ ಕೇಳಿರೋಕೆ ಸಾಧ್ಯವೇ ಇಲ್ಲವೇನೋ. ಆದರೆ, ಗಗನಕ್ಕೇರಿರುವ ಟೊಮೆಟೊ ದರ ಇಂಥದ್ದೊಂದು ಚಮತ್ಕಾರ ಮಾಡಿದೆ. ಮಹಾರಾಷ್ಟ್ರದ ರೈತರೊಬ್ಬರು 12 ಎಕರೆ ಜಮೀನಿನಲ್ಲಿ ಟೊಮೆಟೊ ಬಂಪರ್ ಬೆಳೆ ತೆಗೆದು ಒಂದೇ ತಿಂಗಳಿನಲ್ಲಿ ಮಿಲಿಯೇನರ್ ಆಗಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ತುಕಾರಾಂ ಭಾಗೋಜಿ ಗಾಯಕರ್ ಬೇಸಾಯದಲ್ಲಿ ಕೋಟಿ ಗಳಿಸಿದ ರೈತ. ಅವರಿಗೆ 18 ಎಕರೆ …
Read More »ಟಿಪ್ಪರ್ ನ ಡಂಪರ್ ಗೆ ಸಿಲುಕಿದ ಸ್ಯಾಂಟ್ರೋ ಕಾರ್
ಟಿಪ್ಪರ್ ನ ಡಂಪರ್ ಗೆ ಸಿಲುಕಿದ ಸ್ಯಾಂಟ್ರೋ ಕಾರ್ , ಕಿಲೋಮೀಟರ್ ದೂರ ಸ್ಯಾಂಟ್ರೋ ಕಾರನ್ನು ಎಳೆದೊಯ್ದ ಟಿಪ್ಪರ್ ಕಾರನ್ನು ಎಳೆದೊಯ್ಯವ ಭಯಾನಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್, ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರ್ ಬೆಳ್ಮಣ್ಣಿನಿಂದ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್, ಟಿಪ್ಪರನ್ನು ಹಿಂಬಾಲಿಸಿಕೊಂಡು ಬಂದು ಬೈದು ನಿಲ್ಲಿಸಿದ ಸಾರ್ವಜನಿಕರು ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯ, ಟಿಪ್ಪರನ್ನು ವಶಕ್ಕೆ ಪಡೆದ ಪಡುಬಿದ್ರಿ …
Read More »ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ 42 ರೈತರ ಆತ್ಮಹತ್ಯೆ
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ತಿಂಗಳಲ್ಲಿ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರವಾಗಿ ಗಮನಹರಿಸುವುದು ಬಿಟ್ಟು ಕಾಂಗ್ರೆಸ್ ಮಹಾಘಟಬಂಧನ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಜೆ.ಪಿ.ನಗರದ ತಮ್ಮ ನಿವಾಸದ ಬಳಿ ಇಂದು ಬೆಳಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಅವರು ನಮ್ಮ ಪಕ್ಷವನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇವತ್ತಿನ ಮಹಾಘಟಬಂಧನ್ನ ವ್ಯವಸ್ಥಾಪಕರು ಜೆಡಿಎಸ್ ಸಂತತಿ ಮುಗಿದಿದೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ವಿಚಾರಕ್ಕೆ …
Read More »