ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಭಾರಿ ಸ್ಪಂದನೆ ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ನಾಲ್ಕು ನಿಗಮದ ಬಸ್ಗಳಲ್ಲಿ ಸಂಚರಿಸುವವರ ಸಂಖ್ಯೆ ಹೆಚ್ಚುತ್ತಿದೆ. ಮಹಿಳೆಯರ ಉಚಿತ ಪ್ರಯಾಣದ ವೇಳೆ ಪ್ರತಿ ಬಾರಿಯ ಕಿರಿಕಿರಿ ತಪ್ಪಿಸುವ ಸಲುವಾಗಿ ಟ್ಯಾಪ್ ಆಯಂಡ್ ಟ್ರಾವೆಲ್ ತಂತ್ರಜ್ಞಾನದ ಸ್ಮಾರ್ಟ್ ಕಾರ್ಡ್ ನೀಡಲು ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಂತಿಸಿದೆ. ಸದ್ಯ ಬಸ್ಗಳಲ್ಲಿ ಮಹಿಳೆಯರು ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ತೋರಿಸಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದ್ರೆ …
Read More »Monthly Archives: ಜುಲೈ 2023
ಸಂತೋಷ್ ಲಾಡ್ ಅವರನ್ನು ಸನ್ಮಾನಿಸಿ ಗೌರವಿಸಿದ ಧಾರವಾಡ ಯುವ ಕಾಂಗ್ರೆಸ್ ಕಾರ್ಯಕರ್ತರು
ಧಾರವಾಡ : ಯುವ ಕಾಂಗ್ರೆಸ್ ಕಾರ್ಯಕರ್ತರು ಧಾರವಾಡ ನಗರದಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಶಹರ ಅಧ್ಯಕ್ಷ ವಿನಯ ಬಾಬರ, ಕಾಂಗ್ರೆಸ್ ಕಾರ್ಯಕರ್ತರಾದ ಈಶ್ವರ ಹಂಚಿನಾಳ, ಕೃಷ್ಣಾ, ಶಿವು, ಮೈಲಾರ ಸೇರಿದಂತೆ ಹಲವರು ಇದ್ದರು.
Read More »ಅಂತರಾಷ್ಟ್ರೀಯ ಐರನ್-ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಅಭಿನಂದಿಸಿದರು.
ಗೋಕಾಕ: ಖಜಕಿಸ್ತಾನದಲ್ಲಿ ನಡೆದ ಅಂತರಾಷ್ಟ್ರೀಯ ಐರನ್-ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಸಿಪಿಐ ಶ್ರೀಶೈಲ ಬ್ಯಾಕೋಡ್ ಅವರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಅಭಿನಂದಿಸಿದರು. ಅಂತರಾಷ್ಟ್ರೀಯ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ಭಾಗವಹಿಸಿ 3.8 ಕಿ.ಮೀ ಈಜು, 180 ಕಿ. ಮೀ ಸೈಕ್ಲಿಂಗ್ ಹಾಗೂ 42 ಕೀ.ಮೀ. ಓಟವನ್ನು 14 ಗಂಟೆ 30 ನಿಮಿಷದಲ್ಲಿ ಪೂರ್ತಿಗೊಳಿಸಿ ಅಂತರರಾಷ್ಟ್ರೀಯ ಐರನ್ ಮ್ಯಾನ್ ಆಗಿ ಹೊರಹೊಮ್ಮಿದ್ದ ಸಿಪಿಐ ಶ್ರೀಶೈಲ ಬ್ಯಾಕೋಡ ಅವರನ್ನು ಲೋಕೋಪಯೋಗಿ …
Read More »ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ:
ಬೆಳಗಾವಿಯ ಸೇಂಟ್ ಕ್ಸೇವಿಯರ್ ಶಾಲೆ ಬಳಿಯ ಸೈನಿಕ ಆಸ್ಪತ್ರೆ ಕ್ಯಾಂಪ್ ಕಡೆಗೆ ಹೋಗುವ ರಸ್ತೆ ಕೆಸರಿನಿಂದ ಕೂಡಿದೆ, ಪಾದಚಾರಿಗಳು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ವಹಿಸುವಂತೆ ಸಾಮಾಜಿಕ ಕಾರ್ಯಕರ್ತ ಸಂತೋಷ ದಾರೆಕರ್ ಮನವಿ ಮಾಡಿದ್ದಾರೆ. ಸೇಂಟ್ ಕ್ಸೇವಿಯರ್ ಶಾಲೆ ಬಳಿಯ ಮಿಲಿಟರಿ ಆಸ್ಪತ್ರೆ ಕ್ಯಾಂಪ್ ಕಡೆಗೆ ಹೋಗುವ ರಸ್ತೆಯನ್ನು ಪ್ರಸ್ತುತ ಪೈಪ್ಲೈನ್ ಹಾಕಲು ರಸ್ತೆಯ ಉದ್ದಕ್ಕೂ ಅಗೆಯಲಾಗುತ್ತಿದೆ. ಹಾಗಾಗಿ ಈ ಸ್ಥಳದಲ್ಲಿ ಭಾರೀ ಯಂತ್ರೋಪಕರಣಗಳಿವೆ. ರಸ್ತೆ …
Read More »ದೂಧ್ ಸಾಗರ ನೋಡಲು ಹೋದ ಪ್ರವಾಸಿಗರಿಗೆ ಬಸ್ಕಿ ಹೊಡೆಸಿದ ಗೋವಾ ಪೊಲೀಸ
ಬೆಳಗಾವಿ: ದೂಧ್ ಸಾಗರ ನೋಡಲು ಹೋದ ಪ್ರವಾಸಿಗರಿಗೆ ಬಸ್ಕಿ ಹೊಡೆಸಿದ ಘಟನೆ ನಡೆದಿದ್ದು ಗೋವಾ ಪೊಲೀಸರ ವರ್ತನೆ ಖಂಡಿಸಿ ರೈಲ್ವೆ ಹಳಿಯ ಮೇಲೆ ಕುಳಿತು ಪ್ರವಾಸಿಗರ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ- ಗೋವಾ ಗಡಿಭಾಗದಲ್ಲಿರುವ ದೂಧ್ ಸಾಗರ ಜಲಪಾತ ಘಟನೆ ನಡೆದಿದ್ದು ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನಲೆಯಲ್ಲಿ ದೂದ್ ಸಾಗರ ನೋಡಲು ಜನಸಾಗರವೇ ಆಗಮಿಸಿದೆ. ಪ್ರವಾಸಿಗರು ಬರುತ್ತಿದ್ದಂತೆ ದೂಧ್ ಸಾಗರ ಪ್ರವೇಶಕ್ಕೆ ನಿಷೇಧವನ್ನು ಗೋವಾದ ಪೊಲೀಸರು ಹೇರಿದ್ದಾರೆ.ದೂದಸಾಗರದಲ್ಲಿ ಆಳವಾದ …
Read More »ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಜಿಲ್ಲೆ ಜತ್ ಪಟ್ಟಣದಲ್ಲಿ ಬೃಹತ್ ಹೋರಾಟ
ಮುಂಗಾರು ಮಳೆ ವಿಫಲ ಹಿನ್ನಲೆ, ಕುಡಿಯೋ ನೀರು ಜಾನುವಾರುಗಳ ಮೇವಿಗಾಗಿ ಪ್ರತಿಭಟನೆ ನಡೆಸಿರುವ ಘಟನೆ ಮಹಾರಾಷ್ಟ್ರ ರಾಜ್ಯ ಸಾಂಗ್ಲಿ ಜಿಲ್ಲೆ ಜತ್ ಪಟ್ಟಣದಲ್ಲಿ ಬೃಹತ್ ಹೋರಾಟ ನಡೆಸಲಾಯಿತು. ಜತ್ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಕ್ರಮ್ ದಾದಾ ಸಾವಂತ್ ನೇತೃತ್ವದಲ್ಲಿ ಹೋರಾಟ ನಡೆಯಿತು. ಮಹಾರಾಷ್ಟ್ರ ಸರ್ಕಾರ ಕುಡಿಯೋ ನೀರು ಹಾಗೂ ಜಾನುವಾರುಗಳಿಗೆ ಮೇವು ಪೂರೈಕೆ ಮಾಡಬೇಕೆಂದು ಒತ್ತಾಯಿಸಿದರು. ಕರ್ನಾಟಕದ ಗಡಿ ಭಾಗದ ಗ್ರಾಮಗಳಿಗೆ ಮಹಾರಾಷ್ಟ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಎಂದು ಆರೋಪಿಸಿದರು. …
Read More »ಪ್ರತಿಪಕ್ಷ ನಾಯಕನ ಆಯ್ಕೆ ವಿಚಾರ ಅದು ನಮ್ಮ ಪಕ್ಷಕ್ಕೆ ಬಿಟ್ಟಿದ್ದು: ಬೊಮ್ಮಾಯಿ
ಹಾವೇರಿ: ಬಿಸಿಯೂಟ ಕಾರ್ಯಕರ್ತೆಯರು ಕೈ ಬಳೆ ಹಾಕುವಂತಿಲ್ಲಾ ಎಂಬ ಮಾರ್ಗಸೂಚಿಯನ್ನು ಸರ್ಕಾರ ಹೊರಡಿಸಿದೆ ಎಂಬ ವದಂತಿ ಹಬ್ಬುತ್ತಿದೆ. ಈ ವಿಚಾರ ಕುರಿತಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಾಡಲು ಬೇರೆ ಕೆಲಸ ಇಲ್ವಾ? ಎಂದು ಪ್ರಶ್ನಿಸಿದ್ದಾರೆ. ನಾನು ಸರ್ಕಾರಕ್ಕೆ ಪ್ರಶ್ನೆ ಕೇಳ್ತಿನಿ, ಈ ಹಿಂದೆ ಎಲ್ಲರೂ ಬಳೆ ಹಾಕಿಕೊಂಡು ಕೆಲಸ ಮಾಡಿದಾರೆ. ಅಂದು ಯಾವ ತೊಂದರೆ ಆಗಿಲ್ಲಾ. ಸರ್ಕಾರಕ್ಕೆ ಮಾಡಲು ಬೇರೆ …
Read More »ಹಿಂಡಲಗಾ ಜೈಲಿನಲ್ಲಿದ್ದ ಶಂಕಿತ ಉಗ್ರನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು
ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಿಂದ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೈದಿ ಜಯೇಶ್ ಪೂಜಾರಿ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಬೆದರಿಕೆಗೆ ಪ್ರಚೋದನೆ ನೀಡಿದ ಆರೋಪದಡಿ ಲಷ್ಕರ್ ಇ ತೋಯ್ಬಾ ಸಂಘಟನೆ ಜೊತೆ ನಂಟು ಹೊಂದಿದ್ದ ಶಂಕಿತ ಉಗ್ರ ಅಫ್ಸರ್ ಪಾಷಾನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ಹಿಂಡಲಗಾ ಜೈಲಿಗೆ ಆಗಮಿಸಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಅಫ್ಸರ್ ಪಾಷಾನನ್ನು …
Read More »ಜೈನ ಮುನಿ ಮಹಾರಾಜರ ಕನಸುಗಳನ್ನು ಪೂರ್ಣ ಮಾಡುತ್ತೇವೆ: ಸಂಸದ ಅಣ್ಣಾಸಾಹೇಬ್ ಜೊಲ್ಲೆ
ಚಿಕ್ಕೋಡಿ (ಬೆಳಗಾವಿ) : ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆಘಾತ ಉಂಟು ಮಾಡಿದೆ. ಹಿರೇಕೋಡಿ ಎಂಬ ಸಣ್ಣ ಹಳ್ಳಿಯಲ್ಲಿ ಉತ್ತಮ ಆಶ್ರಮ ಕಟ್ಟಿ, ಶಿಕ್ಷಣ ಸಂಸ್ಥೆ ಮಾಡಿದರು. ಮುಂದೆ ಅವರು ಬಿಟ್ಟು ಹೋದ ಕನಸುಗಳನ್ನು ಪೂರ್ಣ ಮಾಡುತ್ತೇವೆ ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು. ಇಂದು ಜೈನಮುನಿ ಆಶ್ರಮಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಮಕುಮಾರ ನಂದಿ ಮಹಾರಾಜರು ಬಿಇ ಪದವೀಧರ ಆಗಿದ್ದು, 14 ಭಾಷೆಗಳಲ್ಲಿ ಪರಿಣಿತರಾಗಿದ್ದರು. …
Read More »75 ಗಂಟೆಗಳಲ್ಲಿ ಐದು ಮರಿಗಳಿಗೆ ಜನ್ಮ ನೀಡಿದ ಸಿಂಹಿಣಿ
ಉತ್ತರ ಪ್ರದೇಶದ ಇಟಾವಾ ಲಯನ್ ಸಫಾರಿ ಪಾರ್ಕ್ನಲ್ಲಿ ಸಿಂಹಿಣಿಯೊಂದು ಐದು ಮರಿಗಳು ಜನ್ಮ ನೀಡಿದೆ. ಈ ಪೈಕಿ ನಾಲ್ಕು ಮರಿಗಳು ಮೃತಪಟ್ಟಿವೆ. ಆದರೆ, ಇದೇ ಮೊದಲ ಬಾರಿ ಈ ಸಿಂಹಿಣಿ ಸುಮಾರು ಗಂಟೆಗಳ ಅಂತರದಲ್ಲಿ ಐದು ಮರಿಗಳಿಗೆ ಜನ್ಮ ನೀಡಿರುವುದು ವನ್ಯಜೀವಿ ಮತ್ತು ಅರಣ್ಯ ಅಧಿಕಾರಿಗಳ ಅಚ್ಚರಿಗೆ ಕಾರಣವಾಗಿದೆ. ಆದ್ದರಿಂದ ಈ ಸಿಂಹಿಣಿ ಬಗ್ಗೆ ಅಧ್ಯಯನ ಮಾಡಲು ಉತ್ತರ ಪ್ರದೇಶದ ಅರಣ್ಯ ಇಲಾಖೆ ಸಮಿತಿಯನ್ನು ರಚಿಸಿದೆ. ಇಟಾವಾ ಲಯನ್ ಸಫಾರಿ …
Read More »