ಹಾವೇರಿ: ಗೋ ಹತ್ಯೆ ನಿಷೇಧ ಕಾಯ್ದೆ ತರಬೇಕಾ ಬೇಡವಾ ಎಂಬ ವಿಷಯವನ್ನ ರೈತರಿಗೆ ಬಿಟ್ಟುಬಿಡಿ ಎಂದು ರೈತಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರೈತರನ್ನ ಮನೆಹಾಳರನ್ನಾಗಿ ಮಾಡುವ ಕಾನೂನು ಇದ್ದರೇನು? ಬಿಟ್ಟರೇನು? ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ರೀತಿಯ ಗೋ ಹತ್ಯೆ ನಿಷೇಧ ಕಾನೂನು ಮಾಡುವ ಸರ್ಕಾರಗಳಿಗೆ, ವ್ಯಕ್ತಿಗಳಿಗೆ ಸಾಮಾನ್ಯ ಜ್ಞಾನ ಇರಬೇಕು. ಯಾವ ಹಸು ಗೋಶಾಲೆಗೆ ಹೋಗಬೇಕು, ಯಾವ ಹಸು ಕಸಾಯಿಖಾನೆಗೆ ಹೋಗಬೇಕು ಎನ್ನುವ …
Read More »Monthly Archives: ಜುಲೈ 2023
ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ:ಸಚಿವ ವೆಂಕಟೇಶ್
ಬೆಂಗಳೂರು: ಯಾವುದೇ ಕಾರಣಕ್ಕೂ ಅಮೂಲ್ ಜೊತೆ ನಂದಿನಿ ವಿಲೀನ ಪ್ರಶ್ನೆಯೇ ಇಲ್ಲ. ಆದರೆ, ಹಾಲು ಒಕ್ಕೂಟ ಮತ್ತು ಹಾಲು ಉತ್ಪಾದಕರ ಉಳಿಸುವ ಕಾರಣಕ್ಕೆ ಅನಿವಾರ್ಯವಾಗಿ ಹಾಲಿನ ದರ ಪರಿಷ್ಕರಣೆ ಮಾಡಲೇಬೇಕಿದೆ, ಸಿಎಂ ಜೊತೆ ಚರ್ಚಿಸಿ ಎಷ್ಟು ಹೆಚ್ಚಳ ಮಾಡಬೇಕು ಎಂದು ನಿರ್ಧರಿಸಲಾಗುತ್ತದೆ ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ನಿಯಮ 330ರ ಅಡಿ ಅಮೂಲ್ ನಂದಿನಿ ವಿಲೀನ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿದ …
Read More »ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಣಯಗಳು ಸರಿಯಿಲ್ಲ
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ರೈತ ವಿರೋಧಿ ಧೋರಣೆ ಹೊಂದಿದೆ. ಅಲ್ಲದೇ, ಕೈಗಾರಿಕೆಗಳಿಗೆ ಹಾಗು ಜನಸಾಮಾನ್ಯರಿಗೆ ಹೊಡೆತ ನೀಡುವ ನಿರ್ಧಾರಗಳನ್ನು ಕೈಗೊಂಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ. ಎಪಿಎಂಸಿ ಕಾನೂನು ರದ್ದು ಮಾಡುವ ಮೂಲಕ ರೈತರು ತಾವು ಬೆಳೆದಂತಹ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯದಿಂದ ವಂಚಿತರಾಗಿದ್ದಾರೆ. ಹಿಂದೆ ಸಾಗಾಣಿಕೆ ವೆಚ್ಚ, ದಲ್ಲಾಳಿಗಳ ಕಮಿಷನ್ ಇತರ ಖರ್ಚುಗಳ …
Read More »ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆ, ಗೂಂಡಾಗಿರಿ, ದರೋಡೆ :ನಳಿನ್ ಕುಮಾರ್ ಕಟೀಲ್
ಬೆಳಗಾವಿ: ಸಿದ್ದರಾಮಯ್ಯ ಸರ್ಕಾರ ಇದ್ದಾಗ ನಿರಂತರ ಹತ್ಯೆಗಳು, ಗೂಂಡಾಗಿರಿ ರಾಜಕಾರಣ, ದರೋಡೆ ನಡೆಯುತ್ತಿತ್ತು. ಹಿಂದಿನ ಅವರ ಸರ್ಕಾರದ ಅವಧಿಯಲ್ಲಿ 24 ಹಿಂದೂ ಕಾರ್ಯಕರ್ತರ ಹತ್ಯೆ ಆಗಿತ್ತು. ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೊ ಆಗ ಇಂತಹ ಪ್ರಕರಣ ವೈಭವಿಕರೀಸುತ್ತವೆ ಮತ್ತು ರಾರಾಜಿಸುತ್ತವೆ. ಇಂತಹ ಕೊಲೆಗಡುಕರು, ದಂಗೆಕೋರರನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
Read More »ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಾಯಿ
ಮಹಿಳೆಯೊಬ್ಬರು ಮಗಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ದಿಂಡಲಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಇಂಚಲ (34) ಮತ್ತು ಚಾಂದಿನಿ ಇಂಚಲ (7) ಆತ್ಮಹತ್ಯೆ ಮಾಡಿಕೊಂಡವರು. ಸಹೋದರ ಹಾಗೂ ನಾದಿನಿಯ ಕಿರುಕುಳದಿಂದ ಬೇಸತ್ತ ಗೃಹಿಣಿ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಗೋಕಾಕ ತಾಲೂಕಿನ ಖನಗಾಂವ ಗ್ರಾಮದ ಸೈನಿಕನೊಂದಿಗೆ ಮಹಾದೇವಿ ವಿವಾಹವಾಗಿದ್ದರು. ಏಳು ವರ್ಷಗಳ ಹಿಂದೆ ಅವರ ಪತಿ ಅಕಾಲಿಕ ಮರಣ ಹೊಂದಿದ್ದರು. ಹೀಗಾಗಿ ಈ …
Read More »ಭೀಮಾತಿರದಲ್ಲಿ ರೌಡಿಶೀಟರ ಭೀಕರ ಹತ್ಯೆ
ಭೀಮಾತಿರದಲ್ಲಿ ರೌಡಿಶೀಟರ್‌ನ್ನು ದುಷ್ಕರ್ಮಿಗಳು ಭೀಕರ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವರನಾವದಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಮಾಳಪ್ಪ ಮೇತ್ರಿನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆಲಮೇಲ ಪಟ್ಟಣದ ನಿವಾಸಿ ಹಾಗೂ ರೌಡಿಶೀಟರ್ ಮಾಳಪ್ಪ ಮೇತ್ರಿನ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಆಲಮೇಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Read More »ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ನೀಡಿದ್ದ ಮೊಬೈಲ್ ಫೋನ್ಗಳನ್ನು ಶಿಕ್ಷಕಿಯರು ವಾಪಸ್ ನೀಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ.
ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ನೀಡಿದ್ದ ಮೊಬೈಲ್ ಫೋನ್ಗಳನ್ನು ಶಿಕ್ಷಕಿಯರು ವಾಪಸ್ ನೀಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಕೇಂದ್ರ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ಕಳಪೆ ಗುಣಮಟ್ಟದ ಮೊಬೈಲ್ಗಳನ್ನು ನೀಡಿದೆ. ಮೊಬೈಲ್ಗಳು ಪದೇ ಪದೇ ರಿಪೇರಿ ಬರುತ್ತಿದ್ದು, ಸ್ವಂತ ಖರ್ಚಿನಲ್ಲಿ ಮೊಬೈಲ್ ರಿಪೇರಿ ಮಾಡಿಸಿಕೊಳ್ಳಲಾಗುತ್ತಿದೆ. ಕೇವಲ ನಮ್ಮ ಇಲಾಖೆಗೆ ನೀಡಿದ ಕೆಲಸವನ್ನು ಮೊಬೈಲ್ನಲ್ಲಿ ಮಾಡಲು ಕೊಟ್ಟಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ಆದರೆ, ಬೇರೆ ಬೇರೆ ಇಲಾಖೆಗಳ ಕೆಲಸವನ್ನೂ ಇದೇ ಮೊಬೈಲ್ನಲ್ಲಿ ಮಾಡಲು …
Read More »ಸಾಲ ಮಾಡಿ ಅದನ್ನು ತೀರಿಸಲಾಗದೇ ನೇಣು ಹಾಕಿಕೊಂಡು ರೈತನ ಆತ್ಮಹತ್ಯೆ
ಕೃಷಿ ಚಟುವಟಿಕೆಗಾಗಿ ಸಾಲ ಮಾಡಿ ಅದನ್ನು ತೀರಿಸಲಾಗದೇ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ಇರುವ ಸೈಬನಕೊಪ್ಪ ಗ್ರಾಮದಲ್ಲಿ ನಡೆದಿದೆ. ಉಪ್ಪಿನ ಬೆಟಗೇರಿ ಗ್ರಾಮದ ಕಲ್ಲಪ್ಪ ಕುರಗುಂದ (55) ಎಂಬ ರೈತನೇ ಆತ್ಮಹತ್ಯೆ ಮಾಡಿಕೊಂಡವನು.ಕೃಷಿ ಚಟುವಟಿಕೆಗಾಗಿ ವಿವಿಧ ಸಂಘಗಳಲ್ಲಿ ಸಾಲ ಮಾಡಿಕೊಂಡಿದ್ದ. ಅಲ್ಲದೇ ತನಗಿದ್ದ ಜಮೀನನ್ನು 7 ಲಕ್ಷ ರೂಪಾಯಿಗೆ ಲೀಸ್‌ನಲ್ಲಿ ಹಾಕಿಕೊಂಡಿದ್ದ. ಮಳೆಯಾಗದ ಕಾರಣ ಕೃಷಿ ಸಾಲ ತೀರಿಸಲಾಗದೇ …
Read More »14 ದಿನ ಜೈನಮುನಿ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ
ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳನ್ನು ಚಿಕ್ಕೋಡಿ ಡಿವೈಎಸ್ಪಿ ಬಸವರಾಜ ಯಲಿಗಾರ ಸಿಪಿಐ ಆರ್.ಆರ್.ಪಾಟೀಲ್ ಅವರ ತಂಡ ಹಿಂಡಲಗಾ ಜೈಲಿನಿಂದ ವಶಕ್ಕೆ ಪಡೆದಿದೆ. ಆರೋಪಿಗಳ ಆರೋಗ್ಯವನ್ನು ಚಿಕ್ಕೋಡಿ ತಾಲೂಕಾ ಆಸ್ಪತ್ರೆಯಲ್ಲಿ ಪರೀಕ್ಷಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು 14 ದಿನಗಳ ಕಸ್ಟಡಿಗೆ ಕೋರಲಾಗಿದೆ. ಜುಲೈ 5 ರಂದು ಇಡೀ ರಾಜ್ಯವಷ್ಟೇ ಅಲ್ಲ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಚಿಕ್ಕೋಡಿ ತಾಲೂಕಿನ ಜೈನ ಮುನಿ …
Read More »ಮುದ್ದೆ-ಸಾಂಬಾರ್ ಗೆ ರೂ.92 ಊಟದ ಬಿಲ್ ನೋಡಿ ಶಾಕ್
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿನ ಜನರಲ್ ಆಸ್ಪತ್ರೆಯ ಒಳರೋಗಿಗಳಿಗೆ ಕೊಡುವ ಒಂದು ಮುದ್ದೆ ಸಾಂಬಾರ್ ಊಟಕ್ಕೆ 92 ರೂಪಾಯಿ ದುಬಾರಿ ವೆಚ್ಚ ತಿಳಿದು ಜಿಲ್ಲಾಧಿಕಾರಿ ಡಾ ಕುಮಾರ್ ಅವರು ಶಾಕ್ ಆಗಿದ್ದಾರೆ. ಅಲ್ಲದೇ ದುಬಾರಿ ಬೆಲೆಯ ಬಿಲ್ ಕಂಡು ಅಚ್ಚರಿಯಾದ ಅವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಬಿಸಿ ಮುಟ್ಟಿಸಿದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ, ನಾಗಮಂಗಲ ಪಟ್ಟಣದ ಜನರಲ್ ಆಸ್ಪತ್ರೆಗೆ ದಿಢೀರ್ ಜಿಲ್ಲಾಧಿಕಾರಿ ಡಾ ಕುಮಾರ್ ನೀಡಿದ್ದರು. ಆಸ್ಪತ್ರೆಯನ್ನು ಪರಿಶೀಲಿಸಿದ ಅವರು, ಆಸ್ಪತ್ರೆಯ …
Read More »