Breaking News

Monthly Archives: ಜುಲೈ 2023

ಆಶಾ ಕಾರ್ಯಕರ್ತೆಯರಿಗೆ ಪಿಂಚಣಿ ಸೌಲಭ್ಯ ಇಲ್ಲ, ಸ್ಮಾರ್ಟ್ ಫೋನ್ ನೀಡುವ ಬಗ್ಗೆ ಪರಿಶೀಲನೆ :ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಆಶಾ ಕಾರ್ಯಕರ್ತೆಯರು ಖಾಯಂ ನೌಕರರಲ್ಲ ಹಾಗಾಗಿ ಅವರಿಗೆ ಪಿಂಚಣಿ ವ್ಯವಸ್ಥೆ ಕಲ್ಪಿಸಲು ಸಾಧ್ಯವಿಲ್ಲ, ಆದರೆ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳೆಲ್ಲವೂ ಅವರಿಗೆ ಅನ್ವಯವಾಗಲಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆಶಾ ಕಾರ್ಯಕರ್ತೆಯರ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ, ಅವರು ಸ್ವಯಂ ಪ್ರೇರಿತರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಅದಕ್ಕಾಗಿ ರಾಜ್ಯ ಸರ್ಕಾರ ಅವರಿಗೆ ಐದು ಸಾವಿರ …

Read More »

ಮೈಸೂರು ಯುವ ಬ್ರಿಗೇಡ್ ಸದಸ್ಯನ ಕೊಲೆ ಪ್ರಕರಣ-ಘಟನೆಗೆ ಯಾವುದೇ ಕೋಮು ಸಂಬಂಧ ಇಲ್ಲ- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್

ಮೈಸೂರು: ಟಿ ನರಸೀಪುರ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣದ ಬಗ್ಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಪ್ರತಿಕ್ರಿಯಿಸಿದ್ದಾರೆ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಶ್ರೀರಾಂಪುರ ಕಾಲೋನಿಯ ವೇಣುಗೋಪಾಲ್ (32) ಎಂಬಾತ ನಿನ್ನೆ(ಭಾನುವಾರ) ಹತ್ಯೆಯಾಗಿದ್ದರು. ಇವರು ಯುವ ಬ್ರಿಗೇಡ್​​ನ ಸದಸ್ಯ. ಘಟನೆಗೆ ಕೋಮು ಸಂಬಂಧ ಇಲ್ಲ: ಪುನೀತ್ ರಾಜ್‍ ಕುಮಾರ್ ಫೋಟೋ ಅಳವಡಿಕೆ ವಿಚಾರಕ್ಕೆ ಹಾಗೂ ಬೈಕ್ ನಿಲ್ಲಿಸುವ ವಿಚಾರದಲ್ಲಿ …

Read More »

ರೌಡಿಶೀಟರ್ ಮಾಸ್ತಿಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳು ಶರಣಾಗಿದ್ದಾರೆ.

ಹಾಸನ: ಮೂರು ದಿನಗಳ ಹಿಂದೆ ಚನ್ನರಾಯಪಟ್ಟಣದಲ್ಲಿ ರೌಡಿಶೀಟರ್ ಮಾಸ್ತಿಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳು ಶರಣಾಗಿದ್ದಾರೆ. ಚನ್ನರಾಯಪಟ್ಟಣದ ರೌಡಿಶೀಟರ್ ಹುಲಿವಾಲ ಚೇತು, ಹಾಸನದ ಸಾಲಗಾಮೆ ರಾಕೇಶ್ ಅಲಿಯಾಸ್​ ರಾಕಿ ಮತ್ತು ಮಂಡ್ಯ ಮೂಲದ ಶಿವು, ಶರಣಾದ ಆರೋಪಿಗಳು. ಜೂ.4ರ ಮಂಗಳವಾರ ಐದು ಮಂದಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಮಾಸ್ತಿಗೌಡನನ್ನು ಬರ್ಬರವಾಗಿ ಕೊಲೆ ಮಾಡಿ, ಪರಾರಿಯಾಗಿದ್ದರು. ಆರೋಪಿಗಳಲ್ಲಿ ಮೂವರು ತಾವಾಗಿಯೇ ಶರಣಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ. …

Read More »

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ C.M. ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಅನ್ನಭಾಗ್ಯ ಯೋಜನೆ ಘೋಷಣೆ ಆದ ತಕ್ಷಣ ರಾಜ್ಯಕ್ಕೆ ಅಕ್ಕಿ ಕೊಡುವುದನ್ನು ಬಂದ್ ಮಾಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ವಿರೋಧಿಯಾದ ಡರ್ಟಿ ಪಾಲಿಟಿಕ್ಸ್ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಅವರೇನು …

Read More »

ಸಾಂಸ್ಕೃತಿಕ ಪರಂಪರೆ ಭೂತಕಾಲದ ಆಧಾರ ಸ್ತಂಭ:ಪ್ರಹ್ಲಾದ್​ ಜೋಶಿ

ವಿಜಯನಗರ: ಸಂಸ್ಕೃತಿ ಎಂಬುದು ಕೇವಲ ಗುರುತಾಗದೇ ಜಾಗತಿಕ ಸಾಂಗತ್ಯವಾಗಿ ಮಾರ್ಪಡಿಸಿಕೊಳ್ಳಲು ಜಿ-20 ಸಭೆ ಮಾರ್ಗವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು. ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಆರಂಭಗೊಂಡ 3ನೇ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ತಂಡದ(ಸಿಡಬ್ಲ್ಯೂಜಿ) ಸಭೆಯನ್ನು ಇಂದು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಸಭೆಯನ್ನು ಉದ್ಘಾಟಿಸಿದ ಪ್ರಹ್ಲಾದ್​ ಜೋಶಿನಾಲ್ಕು ಪ್ರಮುಖ ಆದ್ಯತೆಗಳಾದ ಆಯಾ ದೇಶಗಳ ಕಲಾಕೃತಿಗಳನ್ನು ಮೂಲ ಸ್ಥಾನಕ್ಕೆ …

Read More »

ಆಯುಷ್ ಇಲಾಖೆ ಆಯುಕ್ತ ಮಂಜುನಾಥ್ ಸೇರಿದಂತೆ 9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ಆಯುಷ್ ಇಲಾಖೆ ಆಯುಕ್ತ ಮಂಜುನಾಥ್ ಸೇರಿದಂತೆ ಒಟ್ಟು 9 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಇಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆಯುಷ್ಯ ಇಲಾಖೆಯ ಆಯುಕ್ತರಾಗಿದ್ದ ಮಂಜುನಾಥ್ ಅವರನ್ನು ಸರ್ವೇ ಇತ್ಯರ್ಥ ಮತ್ತು ಭೂಮಿ ದಾಖಲೆಗಳ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.   ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ನಿರ್ದೇಶಕರಾಗಿದ್ದ ಶ್ರೀಮತಿ ಸತ್ಯಭಾಮ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಕ …

Read More »

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ.

ವಿಶಾಖಪಟ್ಟಣಂ( ಆಂಧ್ರಪ್ರದೇಶ) : ಆತ ಬಾಲಕಿ ಓದುತ್ತಿದ್ದ ಶಾಲೆಯಲ್ಲಿ ಅಟೆಂಡರ್​. ಒಂದೇ ಅಪಾರ್ಟ್​ಮೆಂಟ್​ನ ನಿವಾಸಿ. ವಿದ್ಯಾರ್ಥಿನಿ ನೀಡಿದ ಸಲುಗೆಯನ್ನು ದುರುಪಯೋಗಪಡಿಸಿಕೊಂಡು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ವಿಡಿಯೋ ಮಾಡಿ ತನ್ನೊಂದಿಗೆ ಸಹಕರಿಸದಿದ್ದರೆ, ಹರಿಬಿಡುವ ಬೆದರಿಕೆ ಹಾಕಿ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾನೆ. ಕೃತ್ಯ ಇದೀಗ ಬೆಳಕಿಗೆ ಬಂದಿದ್ದು, ಕೀಚಕ ಸತ್ಯರಾವ್​ ಮತ್ತು ಆತನ ನಾಲ್ವರು ಸ್ನೇಹಿತರನ್ನ ಬಂಧಿಸಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಆರೋಪಿ …

Read More »

ಜೈನ ಮುನಿ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ

ಚಿಕ್ಕೋಡಿ(ಬೆಳಗಾವಿ): ಹಿರೇಕೋಡಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಚಿಕ್ಕೋಡಿ ಪಟ್ಟಣದಲ್ಲಿ ಜೈನ್ ಧರ್ಮದ ಶ್ರಾವಕ ಶ್ರಾವಕಿಯರು ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದ ಆರ್​ಡಿ ಮೈದಾನದಿಂದ 15 ಸಾವಿರಕ್ಕೂ ಹೆಚ್ಚು ಜನರು ಕೊಲ್ಲಾಪುರ ನಾಂದಣಿ ಮಠದ ಜೀನಸೇನ ಭಟ್ಟಾರಕ ಹಾಗೂ ವರೂರು ಮಠದ ಧರ್ಮಸೇನಾ ಭಟ್ಟಾರಕ, ಮತ್ತು ಕೊಲ್ಲಾಪುರದ ಕೀರ್ತಿಸೇನ ಭಟ್ಟಾರಕರ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು. ಆರ್‌ಡಿ ಹೈಸ್ಕೂಲ್ ಮೈದಾನದಿಂದ ಮಹಾವೀರ ಸರ್ಕಲ್, ಬಸವೇಶ್ವರ ಸರ್ಕಲ್ ಮೂಲಕ …

Read More »

ಮಳೆ ಕೊರತೆ.. ಅಕ್ಕಿ ಬೆಲೆಯೂ ಆಗಲಿದೆ ದುಬಾರಿ

ನವದೆಹಲಿ: ದೇಶದಲ್ಲಿ ಈಗಾಗಲೇ ಟೊಮೆಟೊ ಬೆಲೆ ಗಗನಕ್ಕೆ ಏರಿದೆ. ಇದಕ್ಕೆ ಕಾರಣ ಹೆಚ್ಚಿದ ಮಾರುಕಟ್ಟೆ ಮತ್ತು ಕಡಿಮೆ ಪೂರೈಕೆ ಆಗಿದೆ. ಸದ್ಯ ಇದರ ಬೆನ್ನಲ್ಲೇ ಜನರು ಮತ್ತೊಂದು ಅಗತ್ಯ ಆಹಾರ ಸಾಮಗ್ರಿಯ ಬರ ಎದುರಿಸುವಂತೆ ಆಗಲಿದೆ. ಅಚ್ಚರಿ ಆದರೂ ಹೌದು, ಮಳೆ ಕೊರತೆ ಮತ್ತು ಕಡಿಮೆ ಬಿತ್ತನೆಯಿಂದಾಗಿ ಅಕ್ಕಿ ಇಳುವರಿ ಕಡಿಮೆಯಾಗಿದೆ. ಇದರ ಕೊರತೆ ಎದುರಾಗುವ ದಿನ ಸನ್ನಿಹಿತವಾಗಿದೆ ಎಂದು ಮೋತಿಲಾಲ್​ ಒಸ್ವಾಲ್​ ಫೈನಾನ್ಸ್​ ಸರ್ವೀಸ್​ ವರದಿಯಲ್ಲಿ ತಿಳಿಸಿದೆ. ಜಾಗತಿಕವಾಗಿ ಅಕ್ಕಿ …

Read More »

ಟೊಮೆಟೊ ತುಂಬಿದ್ದ ಬೊಲೆರೊ ವಾಹನ ಹೈಜಾಕ್

ಬೆಂಗಳೂರು: ಕೆಲ ದಿನಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದೆ. ಇದೇ ಸಮಯವನ್ನು ಕಾದು ಕುಳಿತಿರುವ ಕೆಲ ಖದೀಮರು ಟೊಮೆಟೊ ಕದಿಯುತ್ತಿದ್ದಾರೆ. ಗಾಡಿ ಟಚ್ ಆಗಿದೆ ಎಂದು ಸುಳ್ಳು ಹೇಳಿದ ಮೂವರು ಆರೋಪಿಗಳು ಟೊಮೆಟೊ ತುಂಬಿದ್ದ ಬೊಲೆರೊ ವಾಹನವನ್ನು ಹೈಜಾಕ್ ಮಾಡಿದ್ದಾರೆ. ಕಳೆದ‌ ಎರಡು‌ ದಿನಗಳ ಹಿಂದೆ ಘಟನೆ ನಡೆದಿದ್ದು, ಈ ಸಂಬಂಧ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Read More »