ಧಾರವಾಡ : ನಿರಂತರ ಮಳೆಯಾಗುತ್ತಿರುವ ಪರಿಣಾಮ ಜಮ್ಮು ಕಾಶ್ಮೀರದ ಅಮರನಾಥ ಮಾರ್ಗ ಮಧ್ಯೆ ಗುಡ್ಡಕುಸಿತ ಉಂಟಾಗಿ ಅಮರನಾಥದಲ್ಲಿ ಧಾರವಾಡದ ಐವರು ತಮ್ಮದೇ ಸ್ವಂತ ಹಣದಲ್ಲಿ ಶ್ರೀನಗರ ತಲುಪಿದ್ದಾರೆ. ಪಂಚತಾರಣಿ ಬಳಿ ಸಿಲುಕಿದ್ದ ಐವರು ಧಾರವಾಡ ಯಾತ್ರಿಗಳು ಸುರಕ್ಷಿತವಾಗಿ ಶ್ರೀನಗರ ತಲುಪಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಟೆಂಟ್‌ನಲ್ಲಿ ವಾಸವಾಗಿದ್ದ ಯಾತ್ರಿಗಳು ಸರ್ಕಾರದಿಂದ ಯಾವುದೇ ಸಹಾಯ ಸಿಗದ ಹಿನ್ನೆಲೆ ಹೆಲಿಕ್ಯಾಪ್ಟರ್ ಮೂಲಕ ಶ್ರೀನಗರಕ್ಕೆ ಪ್ರಯಾಣಿಸಿದ್ದಾರೆ. ಪ್ರತಿಯೊಬ್ಬರಿಗೆ 4200ರೂ. ನೀಡಿ ಹೆಲಿಕ್ಯಾಪ್ಟರ್ನಲ್ಲಿ ಪ್ರಯಾಣಿಸಿ ಸದ್ಯ ಐವರು …
Read More »Monthly Archives: ಜುಲೈ 2023
ಜೈನ ಮುನಿಗಳ ಹತ್ಯೆ ಸಿಬಿಐ ತನಿಖೆಗೆ ವಹಿಸುವಂತೆ ಬಿಜೆಪಿ ಪಟ್ಟು
ಬೆಂಗಳೂರು: ಜೈನ ಮುನಿಗಳ ಹತ್ಯೆ ಕೃತ್ಯವನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಉತ್ತಮ ಅಧಿಕಾರಿಗಳ ತಂಡವನ್ನು ತನಿಖೆಗೆ ಒದಗಿಸಲಿದ್ದೇವೆ. ಘಟನೆಯಲ್ಲಿ ಭಾಗಿಯಾದ ಯಾರೂ ನಮ್ಮ ಸರ್ಕಾರದಿಂದ ರಕ್ಷಣೆ ಪಡೆಯಲು ಸಾಧ್ಯವಿಲ್ಲ. ನಮ್ಮ ಮೇಲೆ ವಿಶ್ವಾಸ ಇಟ್ಟು ಸಹಕಾರ ನೀಡಿ, ನಿಮ್ಮ ಅವಧಿಯ ಪೊಲೀಸರೇ ಈಗಲೂ ಇದ್ದಾರೆ. ನಂಬಿಕೆ ಇಡಿ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಜೈನ ಮುನಿಗಳ ಹತ್ಯೆ ವಿಷಯದ ಚರ್ಚೆಗೆ …
Read More »ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ
ಪಣಜಿ(ಗೋವಾ): ಕಲ್ಯಾಣ ಮತ್ತು ಸಾಮರಸ್ಯಕ್ಕಾಗಿ ಪ್ರಗತಿಶೀಲ ನದಿ ಪ್ರಾಧಿಕಾರ (ಪ್ರವಾಹ್) ರಚನೆಯಾದ ನಂತರ ಕಳಸಾ-ಬಂಡೂರಿ ಅಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ. “ಮಹದಾಯಿ ವಿಷಯವಾಗಿ ಗೋವಾದ ಕಾನೂನು ತಂಡವು ದೆಹಲಿಯಲ್ಲಿದೆ. ನಾವು ನಮ್ಮ ವಾದವನ್ನು ಸಮರ್ಥವಾಗಿ ಮಂಡಿಸುತ್ತೇವೆ ಎಂಬುದು ನನಗೆ ಖಾತ್ರಿಯಿದೆ. ಸರ್ವೋಚ್ಛ ನ್ಯಾಯಾಲಯದ ಮೇಲೆ ಸಂಪೂರ್ಣ ನಂಬಿಕೆ ನನಗೆ ಇದೆ. ಕರ್ನಾಟಕ ಏನೇ …
Read More »ಕೃಷಿ ಭೂಮಿಯಲ್ಲಿ ಅನಧಿಕೃತ ಹೋಂ ಸ್ಟೇ ನಡೆಸಲು ಅವಕಾಶವಿಲ್ಲ: ರೆಡ್ಡಿ ಪ್ರಶ್ನೆಗೆ ಸಚಿವ ಭೈರತಿ ಸುರೇಶ್ ಸ್ಪಷ್ಟನೆ
ಬೆಂಗಳೂರು : ಹಂಪಿ ಯೋಜನಾ ಪ್ರಾಧಿಕಾರ ವ್ಯಾಪ್ತಿಯ ಆನೆಗೊಂದಿ ಪ್ರದೇಶದಲ್ಲಿ ಕೃಷಿ ಭೂಮಿಯಲ್ಲಿ ಅನಧಿಕೃತ ಹೋಂ ಸ್ಟೇ ನಡೆಸಲು ಅವಕಾಶವಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಧಾನಸಭೆಗೆ ಸ್ಪಷ್ಟಪಡಿಸಿದ್ದಾರೆ. ಇಂದು ಶೂನ್ಯವೇಳೆಯಲ್ಲಿ ಸದಸ್ಯ ಜಿ ಜನಾರ್ದನರೆಡ್ಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಹಂಪಿ ಯೋಜನಾ ಪ್ರಾಧಿಕಾರ ವ್ಯಾಪ್ತಿಯಲ್ಲಿ 15 ಗ್ರಾಮಗಳು ಬರುತ್ತವೆ. 2008ರಲ್ಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದರು. ಹಂಪಿ ಪ್ರಾಧಿಕಾರದ ವ್ಯಾಪ್ತಿಯ ಕೃಷಿ ಭೂಮಿಯಲ್ಲಿ 58 ಅನಧಿಕೃತ ಹೋಂ ಸ್ಟೇಗಳಿವೆ. …
Read More »ಜೈನ ಮುನಿ ಹತ್ಯೆ ಕೇಸ್: ಪೊಲೀಸ್ ಇಲಾಖೆ ಸಮರ್ಥ, ಸಿಬಿಐ ತನಿಖೆ ಅಗತ್ಯವಿಲ್ಲ
ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯೆ ತನಿಖೆಯ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಪೊಲೀಸರು ಏನು ಕಾನೂನು ಕ್ರಮ ಕೈಗೊಳ್ಳಬೇಕೋ ಅದನ್ನು ಅವರು ಮಾಡುತ್ತಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ನಡೆದಾಗ ಯಾರೂ ಕೂಡ ತಾರತಮ್ಯ ಮಾಡಲು ಹೋಗುವುದಿಲ್ಲ. ಪೊಲೀಸರು ಆರೋಪಿಗಳನ್ನು ಬಂಧಿಸುವ ಕೆಲಸವನ್ನು …
Read More »ಹಂತಕರಿಗೆ ಕಠಿಣ ಶಿಕ್ಷೆ ಬೇಡ, ಅವರ ಮನ ಪರಿವರ್ತನೆಯಾಗಲಿ
ಹುಬ್ಬಳ್ಳಿ: “ಜೈನ ಮುನಿ ಹತ್ಯೆಯನ್ನು ಎಲ್ಲ ರಾಜಕೀಯ ಪಕ್ಷದವರು ಖಂಡಿಸಿದ್ದಾರೆ. ಇದಕ್ಕೆ ಧನ್ಯವಾದ. ಇಂತಹ ಕೃತ್ಯ ಆಗಲೇಬಾರದು. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಭೇಟಿ ಬಳಿಕ ನಾನು ಉಪವಾಸ ಸತ್ಯಾಗ್ರಹ ಹಿಂಪಡೆಯುತ್ತೇನೆ” ಎಂದು ಗುಣಧರನಂದಿ ಮುನಿ ಮಹಾರಾಜರು ಹೇಳಿದರು. ಇದೇ ವೇಳೆ ಹಂತಕರಿಗೆ ಕಠಿಣ ಶಿಕ್ಷೆ ಬೇಡ, ಅವರ ಮನ ಪರಿವರ್ತನೆಯಾಗಲಿ ಎಂದರು. ವರೂರಿಗೆ ಇಂದು ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈನ …
Read More »ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಐಸಿಸ್ ಚಿತಾವಣೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಗಂಭೀರ ಆರೋಪ
ಬೆಂಗಳೂರು : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಐಸಿಸ್ ಚಿತಾವಣೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಿತ್ರಹಿಂಸೆ ಮಾಡಿ ಕರೆಂಟ್ ಶಾಕ್ ಕೊಟ್ಟು ಸ್ವಾಮೀಜಿ ಅವರನ್ನು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ. ಇನ್ನು, ಭಯಾನಕ ಘಟನೆ ಭವಿಷ್ಯದಲ್ಲಿ ಕಾಣುವ ಆತಂಕ ಇದೆ. ಘಟನೆ ಹಿಂದೆ …
Read More »ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿ ಚಾಕು ಪತ್ತೆ
ಬೆಂಗಳೂರು: ಇತ್ತೀಚೆಗೆ ವ್ಯಕ್ತಿಯೊಬ್ಬರು ಅಕ್ರಮವಾಗಿ ಸದನ ಪ್ರವೇಶಿಸಿದ ಘಟನೆ ನಡೆದಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ಘಟನೆ ವಿಧಾನಸೌಧದ ಆವರಣದಲ್ಲಿ ನಡೆದಿದೆ. ವಿಧಾನಸೌಧದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿ ಚಾಕು ಪತ್ತೆಯಾಗಿದೆ. ತಿಪ್ಪೇರುದ್ರಪ್ಪ ಎಂಬುವರು ಸದನದೊಳಗೆ ಅಕ್ರಮವಾಗಿ ಪ್ರವೇಶಿಸಿ ಭದ್ರತಾ ಲೋಪವಾದ ಹಿನ್ನೆಲೆಯಲ್ಲಿ ಇದೀಗ ವಿಧಾನಸೌಧದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ವಿಧಾನಸೌಧಕ್ಕೆ ಬರುವ ಎಲ್ಲರನ್ನೂ ತೀವ್ರವಾಗಿ ತಪಾಸಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿ ಚಾಕು ಪತ್ತೆಯಾಗಿದೆ. …
Read More »ಪತಿಯೇ ಪತ್ನಿಯ ತಲೆಗೆ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ
ಪತಿಯೇ ಪತ್ನಿಯ ತಲೆಗೆ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಆನಂದನಗರದ ಬ್ಯಾಹಟ್ಟಿ ಪ್ಲಾಟ್ ನಲ್ಲಿಂದು ಬೆಳಿಗ್ಗೆ ನಡೆದಿದ್ದು, ಜನತೆ ಬೆಚ್ಚಿ ಬಿದ್ದಿದೆ. ಮೊನ್ನೆಯಷ್ಟೇ ಪತಿರಾಯ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಇಂದು ಬೆಳ್ಳಂಬೆಳಿಗ್ಗೆ ಮತ್ತೊಮ್ಮೆ ನೆತ್ತರು ಹರಿದಿದ್ದು, ಭೀಕರ ಘಟನೆಗೆ ವಾಣಿಜ್ಯ ನಗರೀ ಹುಬ್ಬಳ್ಳಿ ಸಾಕ್ಷಿಯಾಗಿದೆ. ಭೀಮಪ್ಪ ಮುತ್ತಲಗಿ ಎಂಬಾತನೇ ತನ್ನ ಪತ್ನಿ ಮಂಜುಳಾಗೆ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬರ್ಬರವಾಗಿ …
Read More »ನಾವು ಜೈನ ಮಂದಿರಕ್ಕೆ ರಕ್ಷಣೆ ಕೊಡುತ್ತೇವೆ ಎಂದ ಗೃಹ ಸಚಿವ ಜಿ.ಪರಮೇಶ್ವರ
ಚಿಕ್ಕೋಡಿಯ ಹಿರೇಕೋಡಿಯ ನಂದಿ ಪರ್ವತ ಆಶ್ರಮದ ಆಚಾರ್ಯ ಶ್ರೀ 108 ಕಾಮಕುಮಾರ ರಾಜ ಮಹಾರಾಜರ ಬರ್ಬರ ಹತ್ಯೆ ಹಿನ್ನೆಲೆಯಲ್ಲಿ ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರದ ಆಚಾರ್ಯ ಗುಣಧರನಂದಿ ಮಹಾರಾಜರು ಜೈನ್ ಮುನಿಗಳಿಗೆ, ಜೈನ್ ಬಸದಿಗಳಿಗೆ ಸರ್ಕಾರ ರಕ್ಷಣೆ ನೀಡುವಂತೆ ಆಗ್ರಹಿಸಿ ಸಲ್ಲೇಖನ ವ್ರತ ಕೈಗೊಂಡಿದ್ದರು ಈ ಹಿನ್ನೆಲೆಯಲ್ಲಿ ಇಂದು ಗೃಹ ಸಚಿವ ಜಿ.ಪರಮೇಶ್ವರ ಅವರು ನವಗ್ರಹ ಕ್ಷೇತ್ರಕ್ಕೆ ಭೇಟಿ ಕೊಟ್ಟು ಜೈನ್ ಮುನಿಗಳಿಗೆ ರಕ್ಷಣೆ ನೀಡುವ ಭರವಸೆ ನೀಡಿದರು. …
Read More »