Breaking News

Monthly Archives: ಜುಲೈ 2023

ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಬಿಜೆಪಿ ನಾಯಕರಿಗೆ ಟಾಂಗ್

ಬೆಳಗಾವಿ: ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಮುಳುಗಡೆ ಸಂತ್ರಸ್ತರಿಗೆ 5 ಸಾವಿರ ಕೋಟಿ ರೂ ಅಲ್ಲ, 5 ಪೈಸೆಯೂ ಪರಿಹಾರ ಕೊಟ್ಟಿಲ್ಲ ಎಂದು ಬಿಜೆಪಿ ನಾಯಕರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಟಾಂಗ್ ಕೊಟ್ಟಿದ್ದಾರೆ. ಕೃಷ್ಣಾ ತೀರದ ಜನರಿಗೆ ಬಜೆಟ್ ನಲ್ಲಿ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂಬ ಮಾಜಿ ಸಚಿವ ಮುರುಗೇಶ ನಿರಾಣಿ ಆರೋಪಕ್ಕೆ ಇಂದು ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಐದು ಸಾವಿರ …

Read More »

ಇತಿಹಾಸದಲ್ಲೇ ಕ್ರೂರ ಘಟನೆಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಲ ಒತ್ತಾಯ. :ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿನ್ನೆಲೆಯಲ್ಲಿ‌ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವರೂರ ಕ್ಷೇತ್ರದ ಗುಣಧರ ನಂದಿ ಶ್ರೀಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇತಿಹಾಸದಲ್ಲೇ ಕ್ರೂರ ಘಟನೆ: ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀ ಕಾಮಕುಮಾರ ನಂದಿ ಮಹಾರಾಜ ಹತ್ಯೆ ಖಂಡನೀಯ. ಅವರಿಗೆ ವಿದ್ಯುತ್ ಶಾಕ್ ಕೊಟ್ಟು, ಕೈಕಾಲು ಕತ್ತರಿಸಿ ಬೋರ್​ವೆಲ್​ನಲ್ಲಿ ಹಾಕಿದ್ದಾರೆ. ಇದು ಇತಿಹಾಸದಲ್ಲೇ ಕ್ರೂರ ಘಟನೆ. ಜೈನ ಸನ್ಯಾಸಿಗಳು ಕಾಲ್ನಡಿಗೆ ಯಾತ್ರೆ, ಸರ್ವಸಂಗ ಪರಿತ್ಯಾಗ …

Read More »

ನಮಗೆ ಭದ್ರತೆ ಒದಗಿಸುವವರೆಗೂ ನಿರಂತರವಾಗಿ‌ ಅಮರಣಾಂತ ಉಪವಾಸ ಶತಸಿದ್ಧ ಎಂದ ಸ್ವಾಮೀಜಿ

ಹುಬ್ಬಳ್ಳಿ : ನಮ್ಮ‌ ಭಾರತ ದೇಶದಲ್ಲಿ ಆತಂಕವಾದಿಗೆ ಯಾವ ಶಿಕ್ಷೆಯಾಗುವುದಿಲ್ಲವೋ ಅಂತಹ ಶಿಕ್ಷೆ ಜೈನ ಮುನಿಗೆ ನೀಡಲಾಗಿದೆ. ಕಾಮಕುಮಾರ ನಂದಿ ಮಹಾರಾಜ ಅವರನ್ನು ಈ ರೀತಿ‌ ಚಿತ್ರಹಿಂಸೆ ನೀಡಿ ಕೊಲೆ ಮಾಡಿರುವುದು ನಿಜಕ್ಕೂ ನೋವಿನ‌ ಸಂಗತಿ ಎಂದು ಹುಬ್ಬಳ್ಳಿಯ ವರೂರಿನಲ್ಲಿ ಜೈನ ಮುನಿ ಗುಣಧರನಂದಿ‌ ಮಹಾರಾಜ್ ಸ್ವಾಮೀಜಿ ಹೇಳಿದ್ದಾರೆ. ವರೂರಿನಲ್ಲಿ ಮಾತನಾಡಿದ ಅವರು, ಇಂತಹ ಕ್ರೂರವಾದ ಘಟನೆಯಾದರೂ ಸಹ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸ್ಪಂದನೆ ಮಾಡಿರಲಿಲ್ಲ. ಮಾಧ್ಯಮಗಳ ಸಹಾಯದಿಂದ ಈ …

Read More »

ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ:

ಬೆಳಗಾವಿ: ದಂಪತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಕ್ಕೇರಿ ತಾಲೂಕಿನ ಮಾವನೂರು ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಾವನೂರು ಗ್ರಾಮದ ಗಜೇಂದ್ರ ಈರಪ್ಪ ಹುನ್ನೂರಿ(60) ಹಾಗೂ ದ್ರಾಕ್ಷಾಯಿಣಿ ಗಜೇಂದ್ರ ಹುನ್ನೂರಿ(45) ಕೊಲೆಯಾದವರು ಎಂದು ಗುರುತಿಸಲಾಗಿದೆ. ಈ ಕೊಲೆ ಶುಕ್ರವಾರ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ದಂಪತಿಗೆ ಓರ್ವ ಮಗಳಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಅಕ್ಕಪಕ್ಕದವರು ಭಾನುವಾರ ಬೆಳಗ್ಗೆ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ …

Read More »

ಎಂಪಿ ಎಲೆಕ್ಷನ್​​​​ವರೆಗೂ ಕಾದು ನೋಡೋಣ.. ವಿಪಕ್ಷದವರ ಟೀಕೆಗೆ ಮಹತ್ವ ಕೊಡಬೇಕಿಲ್ಲ: ಸತೀಶ್​ ಜಾರಕಿಹೊಳಿ

ಬೆಳಗಾವಿ: ಈ ಬಜೆಟ್ ಪ್ರಣಾಳಿಕೆ ಬಜೆಟ್ ಎಂದು ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ, ಅವರದ್ದು ಹಿಂದಿನ ಬಜೆಟ್ ಹಾಗೇ ಆಗಿದ್ದರೆ,‌ ನಮ್ಮದು ಹಾಗೇ ಅಂದುಕೊಳ್ಳಲಿ ಎಂದಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬಜೆಟ್ ಬಗ್ಗೆ ವಿಕ್ಷಪದವರಿಂದ ಟೀಕೆ ಸ್ವಾಭಾವಿಕ. ಆದರೆ, ಬಜೆಟ್ ಬಗ್ಗೆ ಜನ ಸಾಮಾನ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದರು. ರಾಜಕೀಯ ಮಾಡುವುದಕ್ಕಾಗಿ ವಿಪಕ್ಷದವರು …

Read More »

ಜುಲೈ ಅಂತ್ಯದೊಳಗೆ ಮಳೆಯಾಗುವ ಮುನ್ಸೂಚನೆ: ಕೃಷ್ಣ ಬೈರೇಗೌಡ

ಕಾರವಾರ: ರಾಜ್ಯದಲ್ಲಿ ಮುಂಗಾರು ಪ್ರವೇಶವಾಗಿದೆ. ಜುಲೈ ಅಂತ್ಯದೊಳಗೆ ಬಹುತೇಕ ಕಡೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಸದ್ಯಕ್ಕೆ ಮೋಡ ಬಿತ್ತನೆ ಮಾಡುವ ಚಿಂತನೆ ಸರ್ಕಾರದ ಮುಂದೆ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಉತ್ತರಕನ್ನಡದ ಕುಮಟಾದಲ್ಲಿ ನೆರೆಪೀಡಿತ ಪ್ರದೇಶಗಳ ಪರಿಶೀಲನೆ ಹಾಗೂ ಬೆಟ್ಕುಳಿ ಗ್ರಾಮದಲ್ಲಿ ನೆರೆಗೆ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿ ಮಾತನಾಡಿದ ಅವರು, ಕಾರವಾರ, ಬೆಳಗಾವಿ ಭಾಗದಲ್ಲಿ ಮಳೆಯಾಗಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಇನ್ನೂ ಮಳೆಯಾಗಿಲ್ಲ. …

Read More »

ಆನ್​​​ಲೈನ್ ಬೆಟ್ಟಿಂಗ್ ಗೀಳು: ಅಣ್ಣನ ಮನೆಗೆ ಕನ್ನ ಹಾಕಿದ ತಮ್ಮನ ಬಂಧನ

ಬೆಂಗಳೂರು: ಆನ್ ಲೈನ್ ಬೆಟ್ಟಿಂಗ್ ವ್ಯಾಮೋಹಕ್ಕೆ ಬಿದ್ದು ಅಣ್ಣನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ತಮ್ಮನನ್ನ ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಚಿನ್ನಾಭರಣ ಕಳ್ಳತನವಾಗಿರುವ ಬಗ್ಗೆ ಮೀಜಾನ್ ಎಂಬುವರು ಜುಲೈ 4ರಂದು ನೀಡಿದ ದೂರು ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ತಮ್ಮನೇ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಮೊಹಮ್ಮದ್ ಪರ್ವೀನ್ (22) ಎಂಬುವನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಸೋಮೇಶ್ವರ ನಗರದಲ್ಲಿ ದೂರುದಾರ ಮಿಜಾನ್ ವಾಸವಾಗಿದ್ದ. ಈತನೊಂದಿಗೆ ತಾಯಿ – ತಮ್ಮ …

Read More »

ಇಂದಿರಾ ಕ್ಯಾಂಟೀನ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿ.ಕೆ.ಶಿ.

ಬೆಂಗಳೂರು : ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ಇಂದು (ಭಾನುವಾರ) ಬೆಳಗ್ಗೆ ನಗರ ಪ್ರದಕ್ಷಣೆ ಹಮ್ಮಿಕೊಂಡು ಮೊದಲಿಗೆ ಇಂದಿರಾ ಗಾಂಧಿ ಕ್ಯಾಂಟೀನ್ ಪರಿಸ್ಥಿತಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಯಾವುದೇ ಅಧಿಕಾರಿಗಳು ಹಾಗು ಸಿಬ್ಬಂದಿಗೆ ಮುನ್ಸೂಚನೆ ನೀಡಿರಲಿಲ್ಲ. ಮೊದಲು ದಾಸರಹಳ್ಳಿ ವಲಯದ ವಾರ್ಡ್ ಸಂಖ್ಯೆ 39ರ ಚೊಕ್ಕಸಂದ್ರದ ಇಂದಿರಾ ಗಾಂಧಿ ಕ್ಯಾಂಟೀನ್​ಗೆ ಬೆಳಗ್ಗೆ 9:10ಕ್ಕೆ ಭೇಟಿ ನೀಡಿ, ತಿಂಡಿ ಕೇಳಿದರು. ಆದರೆ ಅದಾಗಲೇ ಅಲ್ಲಿ ತಿಂಡಿ …

Read More »

ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸುತ್ತಿದ್ದೇವೆ- ಬೆಳಗಾವಿ ಎಸ್ಪಿ

ಚಿಕ್ಕೋಡಿ (ಬೆಳಗಾವಿ): ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಭೀಕರ ಕೊಲೆ ಪ್ರಕರಣವನ್ನು ಹೆಚ್ಚಿನ ಮುತುವರ್ಜಿ ವಹಿಸಿ ತನಿಖೆ ನಡೆಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಸಂಜೀವ್​ ಪಾಟೀಲ್ ಹೇಳಿದ್ದಾರೆ. ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದಲ್ಲಿ ಶ್ರೀಗಳ ಮೃತದೇಹಗಳ ಅಂತಿಮ ಕಾರ್ಯಗಳ ಸಕಲ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈನ ಮುನಿಗಳ ಪಾರ್ಥಿವ ಶರೀರವನ್ನು ಬೆಳಗಾವಿಯಲ್ಲಿ ಪರೀಕ್ಷೆ ನಡೆಸಿ …

Read More »

ಕಾಮಕುಮಾರ​ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಬಿಜೆಪಿ‌ ಶಾಸಕ ಅಭಯ ಪಾಟೀಲ್​ ಸರ್ಕಾರವನ್ನು ಒತ್ತಾಯ

ಬೆಳಗಾವಿ : ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈ‌ನ‌ ಮುನಿಗಳಾದ ಕಾಮಕುಮಾರ​ ನಂದಿ ಮಹಾರಾಜರ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ್ ಆಗ್ರಹಿಸಿದರು. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುನಿಗಳು ಹಣಕಾಸಿನ ವ್ಯವಹಾರ ಮಾಡಿದ್ದಾರೆ ಎಂದು ಪೊಲೀಸರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ಈ ಮೂಲಕ ಜೈನ ಸಮುದಾಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದಾರೆ. ಪ್ರಕರಣದ ತನಿಖೆ ಅನುಮಾನ ಮೂಡಿಸುವಂತಿದೆ. ಹಾಗಾಗಿ ಸಿಬಿಐಗೆ …

Read More »