Breaking News

Monthly Archives: ಜುಲೈ 2023

ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ :C.M.

ಬೆಂಗಳೂರು : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ನುಡಿದಂತೆ ನಡೆಯುತ್ತೇವೆ, ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.   ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, …

Read More »

ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ನವದೆಹಲಿ : ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಕೋಚ್ ಟೆಕೆಟ್ ದರವನ್ನು 25 % ಕ್ಕೆ ಇಳಿಕೆ ಮಾಡಿದೆ. ವಂದೇ ಭಾರತ್ ಮತ್ತು ಅನುಭೂತಿ ಮತ್ತು ವಿಸ್ಟಾಡೋಮ್ ಬೋಗಿಗಳು ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ಬೆಲೆಯನ್ನು ಶೇಕಡಾ 25 ರವರೆಗೆ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ. ದರಗಳು ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೂ ಅವಲಂಬಿತವಾಗಿರುತ್ತದೆ ಎಂದು …

Read More »

ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ: ಹೆಚ್.ವಿಶ್ವನಾಥ್,

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಹೆಚ್.ಡಿ.ಕುಮಾರಸ್ವಾಮಿ ಪೆನ್ ಡ್ರೈವ್ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ ಎಂದು ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ, ಮಾಜಿ ಸಿಎಂ, ಮಾಜಿ ಪ್ರಧಾನಿಗಳ ಮಗ. ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದರು.

Read More »

ಸಿಎಂ ಸಿದ್ದರಾಮಯ್ಯ ಬಜೆಟ್​ ಕೊಂಡಾಡಿದ ಲಕ್ಷ್ಮಿ ಹೆಬ್ಬಾಳಕರ್, ಈಶ್ವರ ಖಂಡ್ರೆ !

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿರುವ ಬಜೆಟ್ ಬಗ್ಗೆ ಅವರ ಸಂಪುಟ ಸಚಿವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರಾದ ಎಂ ಬಿ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಸಚಿವರು ತಮ್ಮ ಮೆಚ್ಚುಗೆಯನ್ನು ಮಾಧ್ಯಮ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಜನಪರ ಬಜೆಟ್‌ – ಎಂ ಬಿ ಪಾಟೀಲ್: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಾರಿಗೆ ಮಂಡಿಸಿರುವ ಬಜೆಟ್‌ ಮಹಿಳೆಯರು, ದಲಿತರು, ರೈತರು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಮತ್ತು …

Read More »

ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ಕಾಂಗ್ರೆಸ್ ಸಭೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳ ಜೊತೆ ಶುಕ್ರವಾರ ಕಾಂಗ್ರೆಸ್ ಮಹತ್ವದ ಸಭೆ ನಡೆಸಿತು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಂಪುಟ ಸದಸ್ಯರು ಹಾಗೂ ಶಾಸಕರು ಭಾಗಿಯಾಗಿದ್ದರು.   ಸಭೆಯ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪರಾಜಿತ ಅಭ್ಯರ್ಥಿಗಳನ್ನು ಕರೆಸಿ ಅವರಿಗೆ ಆದ ಸಮಸ್ಯೆಯನ್ನ ಕೇಳಿದ್ದೇವೆ. ಮುಂಬರುವ ದಿನಗಳಲ್ಲಿ ಇವರಿಗೆ ಶಕ್ತಿ ತುಂಬುವ …

Read More »

ನಾಪತ್ತೆಯಾಗಿದ್ದ ಚಿಕ್ಕೋಡಿಯ ಜೈನಮುನಿ ಹತ್ಯೆ.. ವೈಯಕ್ತಿಕ ಕಾರಣಕ್ಕೆ ಕೊಲೆ : S.P.

ಚಿಕ್ಕೋಡಿ (ಬೆಳಗಾವಿ): ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿರೇಕೋಡಿ ಆಶ್ರಮದ ಜೈನ ಮುನಿ ಕೊಲೆಗೀಡಾಗಿದ್ದಾರೆ. ಕಳೆದ ಬುಧವಾರ ಹಿರೇಕೋಡಿ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿದ್ದರು. ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದಲ್ಲಿ ಮಹಾರಾಜರು ಹತ್ಯೆಗೀಡಾಗಿರುವುದು ಪೊಲೀಸರಿಗೆ ತಿಳಿದಿದೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಸಂಜೀವ್ ಪಾಟೀಲ್, ಬುಧವಾರ ರಾತ್ರಿಯಿಂದ ಸ್ವಾಮೀಜಿ ಕಾಣೆಯಾಗಿರುವ ಬಗ್ಗೆ ಶುಕ್ರವಾರ ಭಕ್ತರು …

Read More »

ವಿಶೇಷ ವ್ಯಕ್ತಿ ವಿಪಕ್ಷ ನಾಯಕ ಆಗ್ತಾರೆ: ನಿರಾಣಿ

ಬೆಳಗಾವಿ : ವಿರೋಧ ಪಕ್ಷದ ನಾಯಕನನ್ನಾಗಿ ವಿಶೇಷ ವ್ಯಕ್ತಿಯನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಹೀಗಾಗಿ ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷ ನಾಯಕನ ಆಯ್ಕೆ ಕುರಿತು ಮಾತನಾಡಿ, ವಿರೋಧ ಪಕ್ಷ ನಾಯಕನ ಸ್ಥಾನ ಯಾರಿಗೆ ಕೊಟ್ಟರೂ ಅವರು ನಮ್ಮ ಪಕ್ಷದವರೇ. ನಮ್ಮ ಪಕ್ಷದ ಹಿರಿಯರು, ರಾಜ್ಯ, ರಾಷ್ಟ್ರ ನಾಯಕರು ಸೇರಿ ಯಾರನ್ನು ವಿಪಕ್ಷ ನಾಯಕನಾಗಿ …

Read More »

ಶೀತ, ಕೆಮ್ಮು, ಗಂಟಲು ನೋವು.. ವಿಶ್ರಾಂತಿಗೆ ಜಾರಿದ ಸಿಎಂ

ಬೆಂಗಳೂರು: ಶೀತ, ಕೆಮ್ಮು, ಗಂಟಲು ನೋವಿನಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ರಾಂತಿಗೆ ಜಾರಿದ್ದಾರೆ. ನಿನ್ನೆಯಿಂದಲೇ ಸಿದ್ದರಾಮಯ್ಯ ಅವರಿಗೆ ಶೀತ ಕಾಣಿಸಿಕೊಂಡು ಕೆಮ್ಮು ಇತ್ತು. ಇಂದು ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮುಖ್ಯಮಂತ್ರಿಗಳು ಯಾರನ್ನೂ ಭೇಟಿ ಮಾಡುತ್ತಿಲ್ಲ. ಅವರ ಭೇಟಿಗೆ ಬಂದ ಅಧಿಕಾರಿಗಳು ಮತ್ತು ರಾಜಕಾರಣಿಗಳು ವಾಪಸ್ ಆಗಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರ ಇಂದಿನ ಕಾರ್ಯಕ್ರಮಗಳು ರದ್ದಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ನಿನ್ನೆ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದ ವೇಳೆ …

Read More »

ಹುಬ್ಬಳ್ಳಿ: ಕಳೆ ನಾಶಕ ಸಿಂಪಡಿಸಲು ಹೋಗಿ ಪ್ರಾಣ ಕಳೆದುಕೊಂಡ ಅರಣ್ಯಾಧಿಕಾರಿ

ಹುಬ್ಬಳ್ಳಿ : ಕಳೆ ನಾಶಕ ಸಿಂಪಡಿಸಲು ಹೋಗಿ ಅರಣ್ಯಾಧಿಕಾರಿಯೊಬ್ಬರು ಚಿಕಿತ್ಸೆ ಫಲಿಸದೆ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕುಮಟಾ ತಾಲೂಕಿನ ಬಾಡ ಗ್ರಾಮದ ಯೋಗೇಶ್​ ನಾಯಕ್ ಮೃತ ಅರಣ್ಯಾಧಿಕಾರಿ. ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಯಕ್, ಕಳೆದ ಒಂದು ವಾರದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. ಯೋಗೇಶ್​ ನಾಯಕ್ ಅವರು ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ …

Read More »

**ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕುಟರಣಟ್ಟಿ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »