Breaking News

Monthly Archives: ಜುಲೈ 2023

ಮಾಜಿ ಸಿಎಂ ಉದ್ಧವ್​ ಠಾಕ್ರೆ ಬಣದ ಶಿವಸೇನೆಗೆ ಮತ್ತೊಂದು ಆಘಾತ

ಮುಂಬೈ: ಮಾಜಿ ಸಿಎಂ ಉದ್ಧವ್​ ಠಾಕ್ರೆ ಬಣದ ಶಿವಸೇನೆಗೆ ಮತ್ತೊಂದು ಆಘಾತ ಉಂಟಾಗಿದೆ. ಉದ್ಧವ್​ ಆಪ್ತ ಬಣದಲ್ಲಿದ್ದ ವಿಧಾನಪರಿಷತ್​ ಉಪಸಭಾಪತಿ, ಎಂಎಲ್​ಸಿ ನೀಲಂ ಗೊರ್ಹೆ ಅವರು ಸಿಎಂ ಏಕನಾಥ್​ ಶಿಂಧೆ ಅವರ ಬಣಕ್ಕೆ ಜಿಗಿಯಲಿದ್ದಾರೆ ಎಂದು ಹೇಳಲಾಗಿದೆ. ಕಳೆದ ತಿಂಗಳಷ್ಟೇ ಶಾಸಕಿ ಮನೀಶಾ ಕಾಯಂದೆ ಅವರು ಬಣ ತೊರೆದ ಬಳಿಕ ಇದು ಮತ್ತೊಬ್ಬ ನಾಯಕಿಯ ನಿರ್ಗಮನವಾಗುತ್ತಿರುವುದು ಠಾಕ್ರೆ ಬಣಕ್ಕೆ ತೀವ್ರ ಹಿನ್ನಡೆ ಉಂಟು ಮಾಡಿದೆ. ಶಿವಸೇನೆಯ ಸಿಎಂ ಏಕನಾಥ್​ ಶಿಂಧೆ ನೇತೃತ್ವದಲ್ಲಿ …

Read More »

ರಾಜ್ಯದ ಸಮಗ್ರ ಅಭಿವೃದ್ಧಿ ಕಲ್ಪನೆ ಇಲ್ಲದೇ, ತೆರಿಗೆ ಹೊರೆ ಇರುವ ಬಜೆಟ್:B.S.Y.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಪ್ರಸ್ತುತ ಸಾಲಿನ ಬಜೆಟ್, ರಾಜ್ಯದ ಸಮಗ್ರ ಅಭಿವೃದ್ಧಿ ಕಲ್ಪನೆ ಇಲ್ಲದೇ, ತೆರಿಗೆ ಹೊರೆ ಇರುವ ಬಜೆಟ್ ಆಗಿದೆ. 85000 ಕೋಟಿ ಸಾಲ ಮಾಡುತ್ತೇನೆ ಎಂದು ಹೇಳಿದ್ದು, ಈ ಸಾಲದ ಹೊರೆ ರಾಜ್ಯದ ಜನತೆಯ ಮೇಲೆ ಬೀಳುತ್ತದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಟೀಕಿಸಿದ್ದಾರೆ.     ಬಜೆಟ್ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಬಜೆಟ್ ಮಂಡಿಸಿದ ಮುಖ್ಯಮಂತ್ರಿಗಳು ತಮ್ಮ ಮೂರು …

Read More »

ಡೆಲಿವರಿ ಬಾಯ್ಸ್‌ಗೆ ಬಿಗ್‌ ರಿಲೀಫ್! 4 ಲಕ್ಷಗಳ ಜೀವ ಮತ್ತು ಅಪಘಾತ ವಿಮೆಯನ್ನು ಕೊಡುವುದಾಗೊ ಘೋಷಿಸಿದೆ.

ಸಿಎಂ ಸಿದ್ದರಾಮಯ್ಯ (CM Siddaramaiah) ಅವರು 14ನೇ ಬಾರಿಗೆ ಬಜೆಟ್‌ ಮಂಡಿಸುತ್ತಿದ್ದಾರೆ. ಕಾಂಗ್ರೆಸ್‌ (Congress) ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ಈ ಬಾರಿಯ ಬಜೆಟ್‌ ಕೂತುಹಲ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ, ಹಣಕಾಸು ಸಚಿವರಾಗಿ 1995-96 ರಲ್ಲಿ ಮಂಡಿಸಿದ ಮೊದಲ ಬಾರಿಗೆ ಬಜೆಟ್‌ ಮಂಡಿಸಿದ್ದರು. ಬಜೆಟ್‌ ಮಂಡನೆಗೂ ಮುನ್ನ ‘ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು’ ಎಂದು ಸಿದ್ದರಾಮಯ್ಯ ಅವರು ಹೇಳಿದರು. ಬಜೆಟ್‌ ಆರಂಭದಲ್ಲೇ ಅಬಕಾರಿ ತೆರಿಗೆ ಹೆಚ್ಚಳ ಮಾಡಿರುವುದನ್ನು …

Read More »

ರಾಜ್ಯದ ಬಜೆಟ್ ಬಿಯರ್ ದರ ಹೆಚ್ಚಳ, ಮದ್ಯವೂ ದುಬಾರಿ

ಬೆಂಗಳೂರು, ಜುಲೈ 7: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ರಾಜ್ಯದ ಬಜೆಟ್ ಮಂಡಿಸುತ್ತಿದ್ದಾರೆ. 2023-2024ರಲ್ಲಿ 3,24,478 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಬೇಕಾದ ಸಂಪನ್ಮೂಲವನ್ನು ಕ್ರೂಢೀಕರಿಸಲು ಅಬಕಾರಿ ಸುಂಕವನ್ನು ಶೇಕಡಾ 20ರಷ್ಟು ಹೆಚ್ಚಿಸಿದ್ದು, ಮದ್ಯಪ್ರಿಯರಿಗೆ ಶಾಕ್ ಕೊಟ್ಟಿದ್ದಾರೆ.   ಭಾರತೀಯ ನಿರ್ಮಿತ ವಿದೇಶಿ ಮದ್ಯದ (ಐಎಂಎಫ್‌ಎಲ್) ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) ಶೇ 20 ರಷ್ಟು ಹೆಚ್ಚಿಸಲಾಗಿದೆ. ಬಿಯರ್‌ಗೆ, ಅಬಕಾರಿ ಸುಂಕವನ್ನು ಶೇಕಡಾ …

Read More »

ಗೃಹ ಲಕ್ಷ್ಮಿ ಯೋಜನೆ :ಮೂರು ದಿನಗಳಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾಹಿತಿ ಕೊಡುತ್ತೇನೆ ಹೆಬ್ಬಾಳ್ಕರ್

ಬೆಂಗಳೂರು: ಗೃಹ ಲಕ್ಷ್ಮಿ ಯೋಜನೆ ಬಹಳ ಮುಂದೆ ಬಂದಿದೆ. ಮೂರು ದಿನಗಳಲ್ಲಿ ಮಾಧ್ಯಮಗೊಷ್ಠಿ ನಡೆಸಿ ಮಾಹಿತಿ ಕೊಡುತ್ತೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಗೆ ಪಡಿತರ ಕಾರ್ಡ್ ಕಡ್ಡಾಯ. ಯೋಜನೆಗೆ ಅರ್ಜಿ ಹಾಕಿದ ಬಳಿಕ ಸ್ವೀಕೃತಿ ಆದಾಗ ವಾಯ್ಸ್ ಮೆಸೇಜ್ ಬರುತ್ತದೆ. ಪ್ರತಿ ತಿಂಗಳು ಹಣ ಜಮೆ ಆದಾಗಲಾ ಮೆಸೇಜ್ ಬರುತ್ತದೆ ಎಂದರು. ಉಡುಪಿ ಜಿಲ್ಲೆಯಲ್ಲಿ ಮಳೆಯಿಂದಾದ ಹಾನಿ ವಿಚಾರವಾಗಿ ಪ್ರತಿಕ್ರಿಯಿಸಿ, ಉಡುಪಿ …

Read More »

ಬಾಲಕಿಯರ ವಾಶ್ ರೂಂನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದು ಕೆಲವು ಪೋಷಕರು ಗಂಭೀರ ಆರೋಪ ಮಾಡಿದ್ದು, ಶಾಲೆಯ ಪ್ರಾಂಶುಪಾಲರ ಮೇಲೆ ಹಲ್ಲೆ

ಮಹಾರಾಷ್ಟ್ರ: ಪುಣೆ ಜಿಲ್ಲೆಯ ಖಾಸಗಿ ಶಾಲೆಯೊಂದರ ಬಾಲಕಿಯರ ವಾಶ್ ರೂಂನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ ಎಂದು ಕೆಲವು ಪೋಷಕರು ಗಂಭೀರ ಆರೋಪ ಮಾಡಿದ್ದು, ಶಾಲೆಯ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದ್ದಾರೆ. ಮಂಗಳವಾರ ಮಧ್ಯಾಹ್ನ ನಡೆದ ಈ ಘಟನೆಯ ವಿಡಿಯೋ ಗುರುವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ತಲೇಗಾಂವ್ ದಭಾಡೆ ಪ್ರದೇಶದ ಶಾಲಾ ಆವರಣದಲ್ಲಿ ಬಲಪಂಥೀಯ ಗುಂಪೊಂದು ಪ್ರಾಂಶುಪಾಲರನ್ನು ಹಿಂಬಾಲಿಸುತ್ತಿರುವ ದೃಶ್ಯವಿದೆ. ಘಟನೆ ಕುರಿತು ಶಿಕ್ಷಣ ಇಲಾಖೆ ತನಿಖೆ ನಡೆಸುತ್ತಿದೆ. …

Read More »

ಗುಂಡು ಹಾರಿಸಿಕೊಂಡು ಡಿಐಜಿ ವಿಜಯಕುಮಾರ್ ಆತ್ಮಹತ್ಯೆ

ಕೊಯಮತ್ತೂರು : ಕೊಯಮತ್ತೂರು ಕಾರ್ಗೋ ವಿಭಾಗದ ಡಿಐಜಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯಕುಮಾರ್ (45) ಅವರು ಬಂಟ ರಸ್ತೆಯ ಪಾಂಥಯ ಸಲೈನಲ್ಲಿರುವ ತಮ್ಮ ಕ್ಯಾಂಪ್ ಕಚೇರಿಯಲ್ಲಿ ಶುಕ್ರವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 2009ರ ಐಪಿಎಸ್ ಬ್ಯಾಚ್‌ನವರಾಗಿದ್ದ ಇವರು, 2022 ಜನವರಿ 6ರಂದು ಚೆನ್ನೈನ ಅಣ್ಣಾನಗರ ಡೆಪ್ಯುಟಿ ಕಮಿಷನರ್‌ನಿಂದ ಕೊಯಮತ್ತೂರು ಡಿಐಜಿಯಾಗಿ ಬಡ್ತಿ ಪಡೆದಿದ್ದರು. ಕಾಂಚೀಪುರಂ, ಕಡಲೂರು, ನಾಗಪಟ್ಟಿಣಂ ಮತ್ತು ತಿರುವರೂರ್​ನಲ್ಲಿ ಡಿಎಸ್​ಪಿಯಾಗಿ ಕೆಲಸ ಮಾಡಿದ್ದಾರೆ. ನಿನ್ನೆ ರಾತ್ರಿ ಜಿಲ್ಲಾಧಿಕಾರಿ ಸಂದೀಶ್ ಅವರ ಮಗುವಿನ …

Read More »

ಕೊಪ್ಪಳ ,ಕಲಬುರಗಿಯಲ್ಲಿ ಜಾನಪದ ಲೋಕಸ್ಥಾಪನೆ

ಬೆಂಗಳೂರು: ಚಿತ್ರರಂಗದ ಬೇಡಿಕೆಯಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಿಲ್ಮ್​ ಸಿಟಿಯನ್ನು ಮೈಸೂರಿನಲ್ಲೇ ಸ್ಥಾಪಿಸುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಈ ಹಿಂದಿನ ಸರ್ಕಾರದಲ್ಲಿ ಈ ಫಿಲ್ಮ್​ ಸಿಟಿಯನ್ನು ಬೆಂಗಳೂರಿಗೆ ವರ್ಗಾಯಿಸುವ ಉದ್ದೇಶ ಹೊಂದಿತು. ಇದೀಗ ಮತ್ತೆ ಮೈಸೂರು ಜಿಲ್ಲೆಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಚಿತ್ರನಗರಿ ಸ್ಥಾಪನೆ ಮಾಡುವ ಘೋಷಣೆ ಮಾಡಿದ್ದಾರೆ. ಇದರ ಜೊತೆಗೆ ಕನ್ನಡ ಚಿತ್ರರಂಗದ ಇತಿಹಾಸ, ಅದು ಬೆಳೆದು ಬಂದ ಇತಿಹಾಸ ತಿಳಿಸುವ ಸಂಗ್ರಹಾಯಲವನ್ನು ಬೆಂಗಳೂರಿನ ಕಂಠೀರವದಲ್ಲಿರುವ ಡಾ ರಾಜ್​ ಕುಮಾರ್​ …

Read More »

ಬಜೆಟ್​ ಮಂಡನೆ ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-24 ರ ಸಾಲಿನ ಮಧ್ಯಂತರ ಬಜೆಟ್​ ಅನ್ನು ಇಂದು ಮಂಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳ ನಡುವೆ ಹಲವು ಯೋಜನೆಗಳಿಗೆ ಒತ್ತು ನೀಡಿ ಮಂಡಿಸಿರುವ ಸಿದ್ದರಾಮಯ್ಯ ಬಜೆಟ್​ನಲ್ಲಿ ಈ ಹಿಂದಿನ ಸರ್ಕಾರವನ್ನು ಟೀಕಿಸಿದರು. ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೋವಿಡ್‌ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿದೆ ಎಂದು ದೂರಿದರು. ಕಲ್ಯಾಣ ರಾಜ್ಯದ ಕನಸಿನ ಬಜೆಟ್ ಅನ್ನು ಮಂಡಿಸಿರುತ್ತಿರುವುದಾಗಿ ಹೇಳಿದ ಅವರು, …

Read More »

ಬಜೆಟ್​ನಲ್ಲಿ ವಿವಿಧ ಜಿಲ್ಲೆಗಳನ್ನು ಕೇಂದ್ರೀಕರಿಸಿ ಘೋಷಣೆಯಾದ ಪ್ರಮುಖ ಅನುದಾನ,

ಮೈಸೂರು ಜಿಲ್ಲೆ: ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮ ಜಾರಿ. ಮೈಸೂರಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಸೈಕ್ಲಿಂಗ್ ವೆಲೋಡ್ರೋಮ್ ಸ್ಥಾಪನೆ. ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬರುವ ಲಕ್ಷಾಂತರ ಭಕ್ತಾದಿಗಳಿಗೆ ಅಗತ್ಯ ಮೂಲಭೂತ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ ಮತ್ತು ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕೈಗೊಳ್ಳುವ …

Read More »