Breaking News

Monthly Archives: ಜುಲೈ 2023

ಸಿದ್ದರಾಮಯ್ಯ ರಾಜ್ಯದ ಮಟ್ಟಿಗೆ ಇಂದು ತಮ್ಮ ದಾಖಲೆಯ 14ನೇ ಬಜೆಟ್​ ಮಂಡಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14ನೇ ಬಜೆಟ್​ ಮಂಡಿಸಿದ್ದು ಮುಖ್ಯಾಂಶಗಳು ಹೀಗಿವೆ… 20% ಅಬಕಾರಿ ಸುಂಕ ಹೆಚ್ಚಳ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ಸುಂಕವನ್ನು 175% ರಿಂದ 185%ಗೆ ಹೆಚ್ಚಳ ಮಾಡಲಾಗಿದೆ. ರಾಜ್ಯದ ಎಲ್ಲ ಆಸ್ತಿ ಮಾರ್ಗಸೂಚಿ ದರ ಪರಿಷ್ಕರಿಸಲು ತೀರ್ಮಾನಿಸಲಾಗಿದೆ. ಆಯ್ದ ವಾಹನಗಳ ವರ್ಗಗಳಿಗೆ ವಿಧಿಸುವ ತೆರಿಗೆ ಪರಿಷ್ಕರಣೆ ಬಗ್ಗೆ ಸಿಎಂ ಪ್ರಸ್ತಾಪ ಮಾಡಿದ್ದಾರೆ. 2023-24ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,27,747 ಲಕ್ಷ ಕೋಟಿ ರೂಪಾಯಿ. ಈ …

Read More »

ಉಚಿತ ಬಸ್​ ಪ್ರಯಾಣಕ್ಕಾಗಿ ವ್ಯಕ್ತಿಯೋರ್ವ ಬುರ್ಖಾ ಧರಿಸಿ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಹುಬ್ಬಳ್ಳಿ: ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಆದರೆ, ಇಲ್ಲೊಬ್ಬ ವ್ಯಕ್ತಿ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ತನ್ನ ವೇಷ ಬದಲಿಸಿಕೊಂಡಿದ್ದಾನೆ. ಮುಸ್ಲಿಂ ಮಹಿಳೆಯರಂತೆ ಬುರ್ಖಾ ಧರಿಸಿಕೊಂಡ ಪುರುಷ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಘಟನೆ ನಡೆಯಿತು. ಗ್ರಾಮದ ಸಾರ್ವಜನಿಕ ಬಸ್ …

Read More »

ಅಶೋಕ್ ಮಣ್ಣಿಕೇರಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್

ಬೆಳಗಾವಿ: ನಗರದಲ್ಲಿ ತಹಶೀಲ್ದಾರ್ (Tahsildar) ಅಶೋಕ್ ಮಣ್ಣಿಕೇರಿ ಅನುಮಾನಸ್ಪದ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ತಮ್ಮ ಸಾವಿಗೂ ಮುನ್ನ ಬರೆದಿಟ್ಟ ಡೆತ್ ನೋಟ್ (Death Note) ಪತ್ತೆಯಾಗಿದೆ. ಬೆಳಗಾವಿ (Belagavi) ನಗರದ ಎಸಿ ಕಚೇರಿಯ ಲಾಕರ್ ಪರಿಶೀಲನೆ ವೇಳೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಜೂನ್ 20ರಂದು ಬರೆದಿಟ್ಟಿದ್ದ ಪತ್ರ ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದ್ದು, ಸಾವಿಗೆ ಪತ್ನಿಯ ಕಿರುಕುಳವೇ (Harassment) ಕಾರಣ ಎಂದು ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ತಹಶೀಲ್ದಾರ್ ಹುದ್ದೆಗೆ …

Read More »

ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಹೈಕೋರ್ಟ್​ನಲ್ಲಿ ಇಂದು ವಿಚಾರಣೆ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ರದ್ದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ಇಂದೂ ಕೂಡ ನಡೆಯಲಿದೆ. ಪ್ರಕರಣ ಸಂಬಂಧ ಡಿ.ಕೆ. ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಗುರುವಾರ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಪೀಠ, ಡಿಕೆಶಿ ಪರ ಸುದೀರ್ಘ ವಾದ ಆಲಿಸಿದ್ದು, ಸಿಬಿಐ ವಾದ ಆಲಿಸಲು ಶುಕ್ರವಾರಕ್ಕೆ ಮುಂದೂಡಿತ್ತು. ವಿಚಾರಣೆ ವೇಳೆ ಅರ್ಜಿದಾರರ …

Read More »

BUDJET :ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ.: ಬೊಮ್ಮಾಯಿ

ಬೆಂಗಳೂರು : ಜನರ ಮೇಲೆ ತೆರಿಗೆ ಹೊರೆ ಹಾಕದೇ, ಹೆಚ್ಚು ಸಾಲ ಮಾಡದೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು,‌ ಜನರಿಗೆ ತೆರಿಗೆ ಹೊರೆ ಹಾಕಿದರೆ ಜನ ವಿರೋಧಿ ಗ್ಯಾರಂಟಿಗಳಾಗುತ್ತವೆ. ಹೆಚ್ಚು ಸಾಲ ತೆಗೆದು ಕೊಳ್ಳದೇ, ಜನರ ಮೇಲೆ ತೆರಿಗೆ ಹಾಕದೇ ಗ್ಯಾರಂಟಿಗಳನ್ನು ಕೊಡಬೇಕು. ಮಾಡಿಲ್ಲ ಅಂದರೆ ಜನರ …

Read More »

ನನಗೆ 82 ಅಥವಾ 92 ವರ್ಷಗಳೇ ಆಗಿರಲಿ ಏನೀಗ. ನಾನೇ ಎನ್​​ಸಿಪಿ ಅಧ್ಯಕ್ಷ: ಶರದ್ ಪವಾರ್

ನವದೆಹಲಿ: ನಾನೂ ಈಗಲೂ ಎನ್​​ಸಿಪಿಯ ಅಧ್ಯಕ್ಷ. ನನಗೆ 82 ಅಥವಾ 92 ವರ್ಷಗಳೇ ಆಗಿರಲಿ ಏನೀಗ. ನಾನು ಈಗಲೂ ಸಮರ್ಥನಾಗಿದ್ದೇನೆ ಎಂದು ಹೇಳುವ ಮೂಲಕ ಶರದ್​ ಪವಾರ್​, ತಮ್ಮ ಸಹೋದರನ ಮಗ ಅಜಿತ್​ ಪವಾರ್​ಗೆ ತಿರುಗೇಟು ನೀಡಿದ್ದಾರೆ. ಪಕ್ಷ ಇಬ್ಭಾಗವಾಗಿದ್ದು, ತಮ್ಮದೇ ನಿಜವಾದ ಪಕ್ಷ ಎಂದು ಅಜಿತ್​ ಪವಾರ್​ ಹೇಳಿಕೊಳ್ಳುತ್ತಿರುವ ಬೆನ್ನಲೇ, ಶರದ್​ ಪವಾರ್ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಿದರು. ಈ ಸಭೆಯ ಬಳಿಕ ಮಾತನಾಡಿದ ಪವಾರ್, ನಾನೇ …

Read More »

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ ಶಾಲ ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಜೂನ್‌ನಲ್ಲಿ ತೀವ್ರ ಮಳೆ ಅಭಾವ ಎದುರಿಸಿದ್ದ ರಾಜ್ಯವು ಜುಲೈನಲ್ಲಿ ತುಸು ಚೇತರಿಕೆ ಹಾದಿಯತ್ತ ಸಾಗಿದೆ. ಜುಲೈ 1ರಿಂದ ಜುಲೈ 6ರವರೆಗೆ ವಾಡಿಕೆಗಿಂತ ತುಸು ಅಧಿಕವಾಗಿ ವರ್ಷಧಾರೆಯಾಗಿದೆ. ಇದರಿಂದಾಗಿ ಮಳೆ ಕೊರತೆಯಿಂದ ದಯನೀಯ ಸ್ಥಿತಿಗೆ ಒಳಗಾಗಿದ್ದ ರೈತಾಪಿ ವರ್ಗ ನಿಟ್ಟಿಸಿರುವ ಬಿಡುವಂತಾಗಿದೆ. ಆದರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಪ್ರಸಕ್ತ ತಿಂಗಳ ಮೊದಲ ವಾರದಲ್ಲಿಯೂ ಮಳೆ ಕೊರತೆ ಮುಂದುವರಿದಿದೆ. ಇದರಿಂದಾಗಿ ಮೈಸೂರು ಭಾಗದಲ್ಲಿ ಕೃಷಿ …

Read More »

ಬೇರೆ ರಾಜ್ಯಗಳಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಎಂಟು ಆರೋಪಿಗಳನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಆಂಧ್ರಪ್ರದೇಶ ಹಾಗೂ ಒಡಿಶಾ ಸೇರಿ ವಿವಿಧ ರಾಜ್ಯಗಳಿಂದ ನಗರಕ್ಕೆ ತಂದು ಗಾಂಜಾ ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ಮಹಿಳೆ ಸೇರಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಬಂಧಿಸಿ 79 ಕೆ.ಜಿ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.   ರೈಲು ಹಾಗೂ ಬಸ್ ಮಾರ್ಗವಾಗಿ ನಗರದಲ್ಲಿ ಅವ್ಯವಾಹತವಾಗಿ ನಗರಕ್ಕೆ ತಂದು ಸಣ್ಣ ಪೊಟ್ಟಣಗಳಲ್ಲಿ ಇಟ್ಟು ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಮಧುಸ್ಮಿತಾ, ನರೇಶ್, ದಿಲ್ಮಾಜ್, ಸುಬ್ರತ್ …

Read More »

ತಮ್ಮ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸುವ ಹೊಣೆಗಾರಿಕೆಯೊಂದಿಗೆ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 12 ಗಂಟೆಗೆ ತಮ್ಮ 14ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಸುಮಾರು 3.30 ಲಕ್ಷ ಕೋಟಿ ಆಸುಪಾಸಿನ ಬಜೆಟ್ ಮಂಡನೆ ಮಾಡಲಿದ್ದು, ಬಹುತೇಕ ಗ್ಯಾರಂಟಿ ಕೇಂದ್ರೀಕೃತ ಬಜೆಟ್ ಆಗಿರಲಿದೆ.  ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಾಂಗ್ರೆಸ್ ಸರ್ಕಾರದ 2023-24 ಸಾಲಿನ ನೂತನ ಬಜೆಟ್ ಮಂಡನೆ ಮಾಡಲಿದ್ದಾರೆ. 9 ತಿಂಗಳ ಬಜೆಟ್ ಮಂಡನೆ ಮಾಡುವ ಮೂಲಕ ತಮ್ಮ 14ನೇ ಆಯವ್ಯಯ ಮಂಡಿಸಲಿದ್ದಾರೆ. …

Read More »

ವಿಧಾನಸಭೆಯಲ್ಲಿ ಕೋಲಾಹಲ ಸೃಷ್ಟಿಸಿದ ಚಾಲಕನ ಆತ್ಮಹತ್ಯೆ ಯತ್ನ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿನ ಕೆಎಸ್​​ಆರ್​ಟಿಸಿ ಚಾಲಕ ಕಂ ನಿರ್ವಾಹಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿತು. ಆಡಳಿತ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಸದಸ್ಯರ ನಡುವೆ ಏರು ಧ್ವನಿಯಲ್ಲಿ ಮಾತಿನ ಚಕಮಕಿ ನಡೆದು ಇಡೀ ಸದನ ರಣರಂಗದಂತೆ ನಿರ್ಮಾಣವಾದ ಪ್ರಸಂಗ ನಡೆಯಿತು. ಅಲ್ಲದೇ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಅಲ್ಲಿಯವರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯ ಸ್ವಾಮಿ ರಾಜೀನಾಮೆ ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು …

Read More »