ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಯಡಿಯೂರಪ್ಪ ಸಂಬಂಧಿ, ಬಿಜೆಪಿಯ ಮಾಜಿ ಶಾಸಕ ಚಿಕ್ಕನಗೌಡರ್ ಕಾಂಗ್ರೆಸ್ಗೆ ಸೇರ್ಪಡೆಗೊಳ್ಳುವ ವಿಚಾರ ಸಾಕಷ್ಟು ದಟ್ಟವಾಗಿದ್ದು, ರಾಜ್ಯ ಹಾಗೂ ಜಿಲ್ಲೆಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಶೀಘ್ರದಲ್ಲಿ ಯಡಿಯೂರಪ್ಪ ಸಂಬಂಧಿ ಎಸ್ ಐ ಚಿಕ್ಕನಗೌಡರ್ ಕಾಂಗ್ರೆಸ್ ಸೇರ್ಪಡೆಗೊಳ್ಳುವುದನ್ನು ಖಾತ್ರಿ ಪಡಿಸಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದು ಪರಾಜಿತರಾಗಿದ್ದರು. ಬಿಜೆಪಿ ಟಿಕೆಟ್ ಸಿಗದೇ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಎಸ್ ಐ ಚಿಕ್ಕನಗೌಡರ ಈಗ …
Read More »Monthly Archives: ಜುಲೈ 2023
ಸ್ಮಾರ್ಟ್ ಸಿಟಿ ಕಾಮಗಾರಿಯ ನಿರ್ಲಕ್ಷ್ಯ ವಿದ್ಯುತ್ ತಗುಲಿ ಹಸು ಕರು ಸಾವು
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ವಿದ್ಯುತ್ ಫೀಡರ್ ಪಿಲ್ಲರ್ ತಗಲಿ ಹಸು-ಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಅಕ್ಕಿಹೊಂಡದ ಬಳಿ ನಡೆದಿದೆ. ಸ್ಮಾರ್ಟ್ ಸಿಟಿ ಯೋಜನೆಗಳಿಂದಾಗಿ ಒಂದಲ್ಲಾ ಒಂದು ಯಡವಟ್ಟುಗಳು ಆಗುತ್ತಿವೆ ಎಂದು ಅಲ್ಲಿನ ಸಾರ್ವಜನಿಕರು ಆರೋಪಿಸಿದ್ದಾರೆ. ಅದರಂತೆ ಅಕ್ಕಿಹೊಂಡದಲ್ಲಿ ಕೂಡಾ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸುತ್ತಿರುವವರ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳಿಂದ ಇಲ್ಲಿ ಸ್ಮಾರ್ಟ್ …
Read More »ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವಂತೆ ಒತ್ತಾಯ
ಬೆಳಗಾವಿ : ಐದು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿರುವ ಪ್ರಸ್ತುತ ಕಾಂಗ್ರೆಸ್ ಸರ್ಕಾರ ತಾವೇ ಘೋಷಿಸಿದ 6ನೇ ಗ್ಯಾರಂಟಿ ಏಕೆ ಜಾರಿಗೆ ತರುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಈ ಬಜೆಟ್ನಲ್ಲಿ ತಾವು ಕೊಟ್ಟ ಮಾತಿನಂತೆ ನಮ್ಮ ವೇತನ ಹೆಚ್ಚಿಸಲು ಆದೇಶ ಹೊರಡಿಸಬೇಕು ಎಂದು ಬೆಳಗಾವಿಯ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಹೌದು, ಕಡಿಮೆ ವೇತನದಲ್ಲಿ ನಾವೆಲ್ಲಾ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಪ್ರತಿ …
Read More »(ನರೇಗಾ) ಯೋಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ
ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಜೊತೆಗೆ ಈ ಸಾಲಿನ ಆರ್ಥಿಕ ವರ್ಷದ ಕೇವಲ ಮೂರು ತಿಂಗಳಲ್ಲಿ 61.41 ಲಕ್ಷದಷ್ಟು ಮಾನವ ದಿನ ಸೃಜನೆ ಮಾಡಿರುವುದು ದಾಖಲೆಯಾಗಿದೆ ಎಂದು ಬೆಳಗಾವಿ ಜಿಪಂ ಸಿಇಒ ಹರ್ಷಲ್ ಭೊಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಗೆ 2023-24ನೇ ಸಾಲಿಗೆ 1.40 ಕೋಟಿ ಮಾನವ ದಿನಗಳ ಸೃಜನೆಯ …
Read More »ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರ ಬೆಟ್ಟದಷ್ಟು ನಿರೀಕ್ಷೆ
ಬೆಳಗಾವಿ: ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ನಾಳೆ ಮಂಡನೆಯಾಗಲಿದೆ. ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿಯಾದರೂ ನಮ್ಮ ಬೇಡಿಕೆ ಈಡೇರುತ್ತವೋ ಎಂದು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಬೆಳಗಾವಿ ರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ. ರಾಜ್ಯದ ಎರಡನೇ ರಾಜಧಾನಿ ಅಂತಾನೂ ಕರೆಸಿಕೊಳ್ಳುತ್ತದೆ. ಇಲ್ಲಿನ ಜನರ ಬಹುತೇಕ ಕಸಬು ಕೃಷಿ. ಜಿಲ್ಲೆಯಲ್ಲಿ …
Read More »ಕನ್ನಡ ಭಾಷಾ ಪದ ಪ್ರಯೋಗದ ಬಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಯತ್ನಾಳ್ ಹಾಸ್ಯ
ಬೆಂಗಳೂರು: ವಿಧಾನಸಭೆಯ ಅಧ್ಯಕ್ಷ ಯು ಟಿ ಖಾದರ್ ಅವರ ಕನ್ನಡ ಭಾಷಾ ಪದ ಪ್ರಯೋಗದ ಬಗ್ಗೆ ಬಿಜೆಪಿ ಹಿರಿಯ ಶಾಸಕ ಬಸನಗೌಡ ಯತ್ನಾಳ್ ಹಾಸ್ಯ ಮಾಡಿದ್ದು, ಅದನ್ನು ಸಭಾಧ್ಯಕ್ಷರು ಸ್ಪರ್ಧಾತ್ಮಕವಾಗಿ ಪರಿಗಣಿಸಿದ ಪ್ರಸಂಗ ಇಂದು ನಡೆಯಿತು. ವಿಧಾನಸಭೆಯ ಉಪಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆಯಾದ ಮೇಲೆ ಅವರನ್ನು ಅಭಿನಂದಿಸುವ ಸಂದರ್ಭದಲ್ಲಿ ಸಭಾಧ್ಯಕ್ಷರು ಹಳ್ಳಿ ಎಂಬ ಪದವನ್ನು ಹಲ್ಲಿ ಎಂದು ಉಚ್ಛಾರಣೆ ಮಾಡಿದರು. ಅದನ್ನು ಬಸನಗೌಡ ಯತ್ನಾಳ್ ಉಲ್ಲೇಖಿಸಿ ಹಳ್ಳಿ, ಹಳ್ಳಿ ಎಂದು …
Read More »ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ.:ರೇಣುಕಾಚಾರ್ಯ
ದಾವಣಗೆರೆ : ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ನೋಟಿಸ್ಗೆ ನಾನು ಉತ್ತರ ಕೊಡಲ್ಲ ಎಂದು ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಹಮ್ಮಿಕೊಂಡಿದ್ದ ಸಂಸದ ಜಿಎಂ ಸಿದ್ದೇಶ್ವರ್ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಬಿಜೆಪಿ ಶಿಸ್ತು ಸಮಿತಿಯಿಂದ ನೀಡಿರುವ ನೋಟಿಸ್ಗೆ ಯಾವುದೇ ಉತ್ತರ ಕೊಡಲ್ಲ. ನೋಟಿಸ್ಗೆ ನಾನೇಕೆ ಉತ್ತರ ಕೊಡಬೇಕು ಎಂದು ಪ್ರಶ್ನಿಸಿದರು. ನಾನು ಏನು ಹೇಳಬೇಕೋ ಅದನ್ನೇ ಹೇಳಿದ್ದೇನೆ. …
Read More »ಅಕ್ರಮಕ್ಕೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ: ಕೃಷ್ಣ ಬೈರೇಗೌಡ
ಬೆಂಗಳೂರು : ರಾಜ್ಯದಲ್ಲಿ ಅಕ್ರಮವಾಗಿ ಒತ್ತುವರಿಯಾಗಿರುವ ಮತ್ತು ಕಬಳಿಕೆಯಾಗಿರುವ ಕಂದಾಯ ಭೂಮಿಯನ್ನು ವಾಪಸ್ ಪಡೆದುಕೊಳ್ಳಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಅಕ್ರಮಕ್ಕೆ ಸಹಕರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಲಿದ್ದು, ವ್ಯವಸ್ಥೆ ಬಿಗಿ ಮಾಡಲಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಟಿಎ ಶರವಣ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ಕಂದಾಯ ಭೂಮಿ ಕಬಳಿಕೆದಾರರು, ಒತ್ತುವರಿದಾರರು ಯಾವ ಸರ್ಕಾರ ಬಂದರೂ ಹೋದರೂ …
Read More »ಎಕ್ಸ್‌ಪ್ರೆಸ್ ವೇನಲ್ಲಿ ಅಪಘಾತ ಹೆಚ್ಚಳಕ್ಕೆ ಅತಿವೇಗವೇ ಕಾರಣ: ಜಾರಕಿಹೊಳಿ
ಬೆಂಗಳೂರು: ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ವೇ ದಲ್ಲಿ ಅಪಘಾತ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಗಮನಕ್ಕೆ ತಂದಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿದ ಸಚಿವರು, ಎಕ್ಸ್‌ಪ್ರೆಸ್ ವೇ …
Read More »ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ವರ್ಷಧಾರೆ ಚುರುಕು: ತುಂಬಿದ ತುಂಗಾ ಡ್ಯಾಂ
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಪ್ರಾರಂಭವಾಗಿದೆ. ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತದೆ. ವರುಣನ ಆಗಮನದಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 199.90 ಮಿಮೀ ಮಳೆ ಸುರಿದಿದೆ. ಸರಾಸರಿ 28.56 ಮಿಮೀ ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮೀ ಇದ್ದು, ಈವರೆಗೆ ಸರಾಸರಿ 73.13 ಮಿಮೀ ಮಳೆ ಮಾತ್ರ ದಾಖಲಾಗಿದೆ. …
Read More »