Breaking News

Monthly Archives: ಜುಲೈ 2023

ಪಡಿತರ ಅಂಗಡಿಗಳಲ್ಲಿ ಧಾನ್ಯಗಳ ಜೊತೆಗೆ ₹60ಗೆ ಕೆಜಿ ಟೊಮೆಟೊ ಮಾರಾಟ

ಚೆನ್ನೈ: ದೇಶಾದ್ಯಂತ ಭಾರಿ ಬೆಲೆ ಕಂಡಿರುವ ಟೊಮೆಟೊ ಸದ್ಯಕ್ಕೆ ‘ತರಕಾರಿಗಳ ರಾಜ’ನಾಗಿದೆ. ಪ್ರತಿ ಕೆಜಿಗೆ ಗರಿಷ್ಠ 150 ರಿಂದ 160 ರೂಪಾಯಿವರೆಗೆ ಬಿಕರಿಯಾಗುತ್ತಿದೆ. ಬೆಲೆ ಗಗನಕ್ಕೇರಿ ಜನರ ಕೈ ಸುಡುತ್ತಿರುವ ಟೊಮೆಟೊವನ್ನು ತಮಿಳುನಾಡು ಸರ್ಕಾರ ಪಡಿತರ ಅಂಗಡಿಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದೆ. ಗ್ರಾಹಕರಿಗೆ 60 ರೂಪಾಯಿಗೆ ಕೆಜಿ ಟೊಮೆಟೊ ಸಿಗುತ್ತಿದೆ. ಸೋಮವಾರಷ್ಟೇ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದ ಸಹಕಾರಿ ಸಚಿವ ಪೆರಿಯಗರುಪ್ಪನ್, ಪಡಿತರ ಅಂಗಡಿಗಳಲ್ಲಿ ಕಡಿಮೆ ಬೆಲೆಗೆ ಟೊಮೆಟೊ ಸಿಗಲಿದೆ. …

Read More »

ಫಸಲ್ ಬಿಮಾ ಯೋಜನೆಯಲ್ಲಿ ಗೋಲ್​ಮಾಲ್

ರಾಯಚೂರು : ರೈತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಮಾತ್ರ ಲಾಭ ಪಡೆದುಕೊಳ್ಳಬೇಕು. ಆದರೆ, ರೈತರಿಗೆ ಯಾವುದೇ ಮಾಹಿತಿ ನೀಡದೆ ಅವರ ಹೆಸರನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿ ಹಣ ಕಬಳಿಸಿರುವ ಆರೋಪ ಕೇಳಿ ಬಂದಿದ್ದು, ಜಿಲ್ಲೆಯ ಅನ್ನದಾತರು ಕಂಗಾಲಾಗುವಂತೆ ಮಾಡಿದೆ. ಜಿಲ್ಲೆಯ ಸಿರವಾರ ತಾಲೂಕಿನ ಸಣ್ಣಹೊಸೂರು, ಮಾಡಗಿರಿ, ಹರವಿ ಸೇರಿದಂತೆ ಇನ್ನಿತರೆ ಗ್ರಾಮಗಳಲ್ಲಿ ಮಾಹಿತಿ ನೀಡದೆ 40ಕ್ಕೂ ಹೆಚ್ಚು …

Read More »

ವಿದೇಶಿ ಮಹಿಳೆಗೆ ಕಿರುಕುಳ; ಮೀಸೆ ಬೋಳಿಸಿಕೊಂಡು ತಲೆಮರೆಸಿಕೊಂಡಿದ್ದ ಆರೋಪಿ ಧರಿಸಿದ್ದ ಬಟ್ಟೆಯಿಂದ ಸಿಕ್ಕಿಬಿದ್ದ

ದೇಶಿ ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ರಾಜಸ್ಥಾನದ ಬಿಕಾನೆರ್​ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಯುವತಿ ತನ್ನ ಹೋಟೆಲ್​ಗೆ ಹೋಗುವ ದಾರಿಯಲ್ಲಿ ಆಕೆಯನ್ನು ಅಸಭ್ಯವಾಗಿ ಸ್ಪರ್ಶಿಸುವ ಮೂಲಕ ದೌರ್ಜನ್ಯ ಎಸಗಲು ಆರೋಪಿ ಮುಂದಾಗಿದ್ದ ದೃಶ್ಯ ವೈರಲ್​ ಆಗಿತ್ತು. ಈ ವಿಡಿಯೋ ಬೆನ್ನಲ್ಲೇ ಪೊಲೀಸರು ಆರೋಪಿ ಪತ್ತೆಗೆ ಮುಂದಾಗಿದ್ದರು. ಈ ವೇಳೆ ಆರೋಪಿ ಚಾಣಾಕ್ಷತನದಿಂದ ತನ್ನ ಗುರುತನ್ನು ಮರೆಮಾಚುವ ಉದ್ದೇಶದಿಂದ ಮೀಸೆಯನ್ನು ಬೋಳಿಸಿಕೊಂಡಿದ್ದ. ಆದರೆ, ವಿಡಿಯೋದಲ್ಲಿದ್ದ ಉಡುಪಿನಲ್ಲಿಯೇ ಆತ ಇದ್ದ …

Read More »

ಸರಿಯಾದ ಸಮಯಕ್ಕೆ ಸದನಕ್ಕೆ ಬರುವ ಸದಸ್ಯರಿಗೆ ಸೂಕ್ತ ಬಹುಮಾನ: U.T.KHADAR

ಬೆಂಗಳೂರು : ನಿಗದಿತ ಸಮಯಕ್ಕೆ ಸರಿಯಾಗಿ ಸದನಕ್ಕೆ ಬರುವ ಸದಸ್ಯರಿಗೆ ಸೂಕ್ತ ಬಹುಮಾನ ನೀಡುವುದಾಗಿ ಸಭಾಧ್ಯಕ್ಷ ಯು.ಟಿ. ಖಾದರ್ ವಿಧಾನಸಭೆಯಲ್ಲಿ ಇಂದು ಪ್ರಕಟಿಸಿದರು. ಪ್ರತಿದಿನ ಸಕಾಲಕ್ಕೆ ಬಂದವರ ಹೆಸರು ಪ್ರಕಟಿಸಿ ಬಹುಮಾನ ನೀಡಲಾಗುವುದು ಎಂದು ಅವರು ಹೇಳಿದರು. ಈ ವೇಳೆ ಶಾಸಕರೊಬ್ಬರು, ಬಹುಮಾನ ನೀಡುತ್ತೇವೆ ಎನ್ನುವುದು ಬೇಡ, ಪ್ರಮಾಣಪತ್ರ ಕೊಡುತ್ತೇವೆ ಎಂದು ಹೇಳಿ ಎಂಬ ಸಲಹೆ ನೀಡಿದರು. ಅದಕ್ಕೆ ಸಭಾಧ್ಯಕ್ಷರು, ಸೂಕ್ತವಾದ ಅಭಿಪ್ರಾಯ ಎಂದು ಸಮ್ಮತಿಸಿದರು. ನಿನ್ನೆ ಸಮಯಕ್ಕೆ ಸರಿಯಾಗಿ ಬಂದ …

Read More »

20 ಲಕ್ಷ ದಾಟಿದ ಗೃಹ ಜ್ಯೋತಿ ನೋಂದಣಿ

ಹುಬ್ಬಳ್ಳಿ: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಾರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಗೃಹ ಜ್ಯೋತಿ ಯೋಜನೆಯಲ್ಲಿಯೂ ಕೂಡ ಜನರಿಗೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಸಾಕಷ್ಟು ಸರ್ವರ್ ಸಮಸ್ಯೆಗಳ ನಡುವೆಯೂ ಹೆಸ್ಕಾಂ ಇಲಾಖೆಯಲ್ಲಿ 20 ಲಕ್ಷ ಗ್ರಾಹಕರು ನೋಂದಣಿ ಮಾಡಿಸಿದ್ದಾರೆ.   ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿಯೇ 20 ಲಕ್ಷ ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿದ್ದಾರೆ. ಈಗಾಗಲೇ ಕರ್ನಾಟಕ ಒನ್, ಹುಬ್ಬಳ್ಳಿ ಧಾರವಾಡ ಒನ್ ಮೂಲಕ ಹಾಗೂ …

Read More »

ಇಂದೇ ಪ್ರತಿಪಕ್ಷ ನಾಯಕರ ಹೆಸರು ಪ್ರಕಟ?:BSY

ಬೆಂಗಳೂರು: ಉಭಯ ಸದನಗಳ ಪ್ರತಿಪಕ್ಷ ನಾಯಕರು ಮತ್ತು ನೂತನ ರಾಜ್ಯಾಧ್ಯಕ್ಷರ ನೇಮಕ ಕುರಿತು ಕೇಂದ್ರದಿಂದ ಆಗಮಿಸಿದ್ದ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿ ವಾಪಸಾಗಿದ್ದು ಇಂದೇ ಹೈಕಮಾಂಡ್ ಹೆಸರುಗಳನ್ನು ಪ್ರಕಟಿಸುವ ಸಾಧ್ಯತೆ ಇದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸ ಧವಳಗಿರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಯಾರಾಗಬೇಕು …

Read More »

ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿ ಅಮಾನತು

ಮೈಸೂರು: ಪ್ರಾಥಮಿಕ‌ ಆರೋಗ್ಯ ಕೇಂದ್ರದಲ್ಲಿ ನರ್ಸ್​ಗಳು ಹಾಗೂ ಸಿಬ್ಬಂದಿ ಮೂಲಕ ರೋಗಿಗಳಿಂದ ಲಂಚ ಪಡೆಯುತ್ತಿದ್ದ ಆರೋಪದ ಮೇಲೆ ಮಹಿಳಾ ವೈದ್ಯಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಮೈಸೂರಿನ ಶಾಂತಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಕೋಮಲಾ ಅವರನ್ನು ಅಮಾನತು ಮಾಡಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ. ಕರ್ತವ್ಯಲೋಪ, ದುರ್ನಡತೆ ಆರೋಪದ ಬಗ್ಗೆ ವಿಚಾರಣೆ ಬಾಕಿ ಇರಿಸಿ, ಈ ತಕ್ಷಣದಿಂದ ಅಮಾನತು ಜಾರಿಗೆ ಬರುವಂತೆ ಆದೇಶ …

Read More »

ಸರ್ಕಾರ ನೀಡಿದ ಗ್ಯಾರಂಟಿಗಳನ್ನ ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ತನಕ, ಸದನದ ಹೊರಗೆ ಹಾಗೂ ಒಳಗೆ ನಿರಂತರ ಹೋರಾಟ

ದಾವಣಗೆರೆ: ಸರ್ಕಾರ ನೀಡಿದ ಗ್ಯಾರಂಟಿಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರುವ ತನಕ, ಸದನದ ಹೊರಗೆ ಹಾಗೂ ಒಳಗೆ ನಿರಂತರ ಹೋರಾಟ ಮಾಡಲಾಗುವುದು ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಎರಡು ಗ್ಯಾರಂಟಿಗಳನ್ನು ಬಿಟ್ರೇ ಯಾವುದೇ ಗ್ಯಾರಂಟಿಗಳನ್ನು ಜಾರಿ ಮಾಡಿಲ್ಲ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು‌ ಕಾಂಗ್ರೆಸ್ ಹೇಳುತ್ತಿದೆ. …

Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಪ್ರಭಾರಿ ಕುಲಪತಿ ನೇಮಕ

ಬೆಳಗಾವಿ :ಇಲ್ಲಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಭಾರಿ ಕುಲಪತಿಯನ್ನಾಗಿ ಪ್ರೊ.ವಿಜಯ ಎಫ್. ನಾಗಣ್ಣವರನ್ನು ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಅವರು ಇದುವರೆಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕುಲಪತಿಯಾಗಿದ್ದ ಎಂ.ರಾಮಚಂದ್ರಗೌಡ ಅವರ ನಿವೃತ್ತಿಯಿಂದ ಇದೀಗ ನಾಗಣ್ಣವರನ್ನು ನೇಮಕ ಮಾಡಲಾಗಿದೆ.

Read More »

ನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ.. ಕರ್ನಾಟಕದ್ದು ಯಾವಾಗ?

ನವದೆಹಲಿ: ಬಿಜೆಪಿ ಪಕ್ಷ ಸಂಘಟನೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.ಸಾಂಸ್ಥಿಕ ಪುನಶ್ಚೇತನಕ್ಕಾಗಿನಾಲ್ಕು ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ಪಕ್ಷದ ರಾಷ್ಟ್ರೀಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ನೇಮಿಸಿ ಆದೇಶ ಹೊರಡಿಸಿದ್ದಾರೆ. ಇದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟದಲ್ಲಿ ಬದಲಾವಣೆ ಊಹಾಪೋಹಗಳಿಗೆ ಮತ್ತಷ್ಟು ಪೃಷ್ಠಿ ನೀಡಿದೆ.     ಹಾಲಿ ಕೇಂದ್ರ ಸಚಿವರಾದ ಜಿ.ಕಿಶನ್ ರೆಡ್ಡಿ ಅವರನ್ನು ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿರುವ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಇದೇ ವೇಳೆ, ಹಿಂದುಳಿದ …

Read More »