Breaking News

Monthly Archives: ಜುಲೈ 2023

ಮಗು ನಾಪತ್ತೆ ಪ್ರಕರಣ: ಕಟ್ಟಿದ ಗೋಣಿಚೀಲದಲ್ಲಿ ಶವ ಪತ್ತೆ

ಎರ್ನಾಕುಲಂ: ಆಲುವಾದಲ್ಲಿ ನಾಪತ್ತೆಯಾಗಿದ್ದ ಆರು ವರ್ಷದ ಬಾಲಕಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಆಲುವಾ ಮಾರುಕಟ್ಟೆ ಬಳಿ ದೊರೆತ ಕಟ್ಟಿದ ಗೋಣಿಚೀಲ ವೊಂದರಲ್ಲಿ ಬಾಲಕಿಯ ಮೃತ ದೇಹ ಪತ್ತೆಯಾಗಿದೆ. ಬಾಲಕಿಯನ್ನು ಅಪಹರಿಸಿದ್ದ ಬಿಹಾರ ಮೂಲದ ಅಸ್ಫಾಕ್ ಆಲಂ ಎಂಬಾತ ಸಿಕ್ಕಿಬಿದ್ದಿದ್ದು, ಬಾಲಕಿಗಾಗಿ ವ್ಯಾಪಕ ಶೋಧ ನಡೆಸಿದಾಗ ಶವ ಪತ್ತೆಯಾಗಿದೆ. 21 ಗಂಟೆ ಶೋಧ ಕಾರ್ಯಾಚರಣೆ: ಮಗುವನ್ನು ಜಾಕೀರ್​ಗೆ ಒಪ್ಪಿಸಿರುವುದಾಗಿ ಆರೋಪಿ ಅಸ್ಫಾಕ್ ಆಲಂ ಬೆಳಗ್ಗೆ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ. ಆಲುವಾ ಮೇಲ್ಸೇತುವೆಯ ಕೆಳಗೆ ನಿನ್ನೆ …

Read More »

ಭಾರತದಲ್ಲಿವೆ 3 ಸಾವಿರಕ್ಕೂ ಹೆಚ್ಚು ಹುಲಿಗಳು.. ಮೊದಲ ಸ್ಥಾನದಲ್ಲಿ ಮಧ್ಯಪ್ರದೇಶ , ಕರ್ನಾಟಕಕ್ಕೆ ಎರಡನೇ ಸ್ಥಾನದ ಪಟ್ಟ!

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಹುಲಿ ಗಣತಿ ಅಂಕಿ – ಅಂಶ ಬಿಡುಗಡೆ ಮಾಡಿದೆ. ಮಧ್ಯಪ್ರದೇಶವು ಹುಲಿ ಸಂಖ್ಯೆಯ ವಿಷಯದಲ್ಲಿ ಸರ್ವೋಚ್ಚ ಆಳ್ವಿಕೆಯನ್ನು ಮುಂದುವರೆಸಿದೆ. 785 ಹುಲಿಗಳೊಂದಿಗೆ ದೇಶದ ಅಗ್ರ ರಾಜ್ಯವಾಗಿ ಮುಂದುವರೆದಿದೆ. ಭಾರತದಲ್ಲಿವೆ 3 ಸಾವಿರಕ್ಕೂ ಹೆಚ್ಚು ಹುಲಿಗಳುಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಹುಲಿ ಗಣತಿ 2022 ರ ರಾಜ್ಯವಾರು ಅಂಕಿ- ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ. ಅಂಕಿ – ಅಂಶಗಳ ಪ್ರಕಾರ, ಭಾರತದಲ್ಲಿ 3167 ಹುಲಿಗಳಿವೆ. 563 ಹುಲಿಗಳನ್ನು …

Read More »

ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಚಿವ ಸತೀಶ್ ಜಾರಕಿಹೊಳಿ: ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ

ದೆಹಲಿ: ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಬುಧವಾರ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಶಿರಾಡಿಘಾಟ್​ನಲ್ಲಿ ಸುರಂಗ ನಿರ್ಮಾಣ ಸೇರಿದಂತೆ 20 ವಿಷಯಗಳ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ನಿತಿನ್ ಗಡ್ಕರಿ ಜೊತೆಗಿನ ಸಭೆ ಬಳಿಕ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಈ ಕುರಿತಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಒಪ್ಪಂದಕ್ಕೆ ಬಂದಿದ್ದೇವೆ ಎಂದು ತಿಳಿಸಿದರು. …

Read More »

ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಟಿಬಿ ಜಯಚಂದ್ರಗೆ ಪ್ರಾಣ ಬೆದರಿಕೆ ಕರೆ

ಬೆಂಗಳೂರು : ಸಿರಾ ಕ್ಷೇತ್ರದಶಾಸಕ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿರುವ ಟಿಬಿ ಜಯಚಂದ್ರಗೆ ಪ್ರಾಣ ಬೆದರಿಕೆ ಕರೆ ಬಂದಿದೆ ಎಂದು ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಹಿಂದೆ ಸಚಿವರಾಗಿದ್ದ ಅವಧಿಯಲ್ಲಿ ಟಿಬಿ ಜಯಚಂದ್ರ ನೈಸ್‌ ಸಂಸ್ಥೆಯ ಹಗರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದರು. ಅಲ್ಲದೇ ಆ ವರದಿಯನ್ವಯ ನೈಸ್‌ ಸಂಸ್ಥೆಯ ಮೇಲೆ ಕ್ರಮ ಜಾರಿಗೊಳಿಸುವಂತೆ ಇತ್ತೀಚೆಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ಆಗ್ರಹಿಸಿದ್ದರು. ಅಂದಿನಿಂದಲೂ ಜಯಚಂದ್ರರಿಗೆ ಸತತವಾಗಿ ಬೇರೆ …

Read More »

ಮೊಹರಂ ನಿಮಿತ್ಯ ಹಾಕಿದ ಕೆಂಡದಲ್ಲಿ‌ ವ್ಯಕ್ತಿಯೊರ್ವಕಂಬಳಿ‌ ಹಾಸಿ‌ ಕುಳಿತ

ವಿಜಯಪುರ…  ವಿಜಯಪುರ ಜಿಲ್ಲೆಯಲ್ಲಿ ಮೊಹರಂ ಸಂಭ್ರಮ ಕಳೆಗಟ್ಟಿದೆ. ಮೊಹರಂ ನಿಮಿತ್ಯ ಹಾಕಿದ ಕೆಂಡದಲ್ಲಿ‌ ವ್ಯಕ್ತಿಯೊರ್ವ ಕಂಬಳಿ‌ ಹಾಸಿ‌ ಕುಳಿತ ಘಟನೆ ವಿಜಯಪುರ ‌ಜಿಲ್ಲೆ‌‌ ಮುದ್ದೇಬಿಹಾಳ ತಾಲೂಕಿನ ಅಮರಗೋಳ‌‌ ಗ್ರಾಮದಲ್ಲಿ ನಡೆದಿದೆ. ಇಂದು‌ ನಸುಕಿನ ಜನ ಜಾವ ಗ್ರಾಮದ ಅಲಾಯಿ‌‌ ದೇವರ ಎದುರುಗೆ ಹಾಕಿದ‌‌‌ ನಿಗಿ‌ನಿಗಿ‌ ಕೆಂಡದ ಮೇಲೆ ಯಲ್ಲಾಲಿಂಗ ಹಿರೇಹಾಳ ಎನ್ನುವವರು ನೀಗಿ ನೀಗಿ ಕೆಂಡದ ಮೇಲೆ ಕೆಲ ಕ್ಷಣ ಕಂಬಳಿ ಹಾಸಿ ಭಕ್ತಿ ಸಮರ್ಪನೆ ಮಾಡಿದರು. ಬಳಿಕ ಬರಿಗೈಯ್ಯಲ್ಲಿ …

Read More »

ಅವರಖೋಡ ಗ್ರಾಮದ ಗ್ರಾಮ‌ ಒನ್ ಕೇಂದ್ರವನ್ನು ಅಧಿಕಾರಿಗಳು ಸೀಜ್ ಮಾಡಿದ್ದು, ಸಂಬಂಧಿಸಿದ ವ್ಯಕ್ತಿಯ ವಿರುದ್ಧ ದೂರು ಕೂಡ ದಾಖಲಿಸಲಾಗಿದೆ

ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ನೋಂದಣಿಗೆ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ ಅಥಣಿ ತಾಲ್ಲೂಕಿನ ಅವರಖೋಡ ಗ್ರಾಮದ ಗ್ರಾಮ‌ ಒನ್ ಕೇಂದ್ರವನ್ನು ಅಧಿಕಾರಿಗಳು ಸೀಜ್ ಮಾಡಿದ್ದು, ಸಂಬಂಧಿಸಿದ ವ್ಯಕ್ತಿಯ ವಿರುದ್ಧ ದೂರು ಕೂಡ ದಾಖಲಿಸಲಾಗಿದೆ

Read More »

ಅಂತರ್ಜಲ ಮರುಪೂರಣ ಆಗಬೇಕಾದ್ರೆ ಅದಕ್ಕೆ ಕೆರೆಗಳು ಬೇಕೇ ಬೇಕು

ಧಾರವಾಡ: ಅಂತರ್ಜಲ ಮರುಪೂರಣ ಆಗಬೇಕಾದ್ರೆ ಅದಕ್ಕೆ ಕೆರೆಗಳು ಬೇಕೇ ಬೇಕು. ಪ್ರತಿ ಮಳೆಗಾಲ ಬಂದಾಗ ಕೆರೆಗಳು ತನ್ನೆಲ್ಲ ಜಾಗ ಆಕ್ರಮಿಸಿ ಮೈತುಂಬ ತುಂಬಿಕೊಳ್ಳಬೇಕು. ಅಷ್ಟೇ ತುಂಬಿ ತುಳುಕಿ ಕೋಡಿ ಹರಿಯಬೇಕು. ಹೀಗೆ ಮೈದುಂಬಿ ಕೋಡಿ ಹರಿಯುತ್ತಿರೋ ಈ ಕೆರೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಅಂಚಿನಲ್ಲಿದೆ. ಸುತ್ತಲೂ ಹಸಿರ ಸಿರಿಯ ಗುಡ್ಡದ ನಡುವೆ ವಿಶಾಲವಾದ ಕೆರೆ. ಈ ಕೆರೆಯ ಎರಡು ಕಡೆಯಲ್ಲಿ ಕೋಡಿ ಹರಿಯುತ್ತೆ. ಪ್ರತಿ ಸಲ ಮಳೆಗಾಲ ಬಂದಾಗ …

Read More »

ತಮಿಳುನಾಡು ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

ರಾಮನಾಥಪುರಂ (ತಮಿಳುನಾಡು): ತಮಿಳುನಾಡು ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬೆಳಗ್ಗೆ ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಅವರನ್ನು ಗೌರವಿಸಿದರು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಯಾತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಶಾ ದೇವಾಲಯಕ್ಕೆ ಭೇಟಿ ನೀಡಿದರು. ಈ ವೇಳೆ ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ ಮಾಹಿತಿ …

Read More »

ಎನ್​ಸಿಪಿ ನಾಯಕ ಶರದ್ ಪವಾರ್ ಅವರು ಪುಣೆಯಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಇಂಡಿಯಾ ಒಕ್ಕೂಟದ ಅಸಮಾಧಾನಕ್ಕೆ ಕಾರಣ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆ ಬಿಜೆಪಿ, ಕಾಂಗ್ರೆಸ್​ ಈಗಾಗಲೇ ಭರದ ಸಿದ್ಧತೆಯನ್ನು ನಡೆಸುತ್ತಿದೆ. ಕಾಂಗ್ರೆಸ್​ ನೇತೃತ್ವದ ಇಂಡಿಯಾ ಒಕ್ಕೂಟ ( ಇಂಡಿಯನ್​ ನ್ಯಾಷನಲ್​ ಡೆವಲಪ್​ಮೆಂಟ್​ ಇನ್​​ಕ್ಲೂಸಿವ್​ ಅಲಯನ್ಸ್​) ಬಿಜೆಪಿಯನ್ನು ಸೋಲಿಸಲು ರಣ ತಂತ್ರ ರೂಪಿಸುತ್ತಿದೆ. ಈಗಾಗಲೇ 26 ವಿರೋಧ ಪಕ್ಷಗಳು ಒಟ್ಟಾಗಿ ಬಿಜೆಪಿ ವಿರುದ್ಧ ತೊಡೆ ತಟ್ಟಿದೆ. ಈಗಾಗಲೇ ಈ ಸಂಬಂಧ ಎರಡು ಸಭೆಗಳನ್ನು ನಡೆಸಿರುವ ಕಾಂಗ್ರೆಸ್​ ತನ್ನ ಮುಂದಿನ ಇಂಡಿಯಾ ಒಕ್ಕೂಟದ ಸಭೆಯನ್ನು ಮುಂಬೈನಲ್ಲಿ ಇರಿಸಿಕೊಂಡಿದೆ. ಆಗಸ್ಟ್​ …

Read More »

ಉತ್ತರ ಕನ್ನಡದಲ್ಲಿ ಆರ್ಭಟಿಸುತ್ತಿದ್ದ ಮಳೆ

ಕಾರವಾರ : ಉತ್ತರ ಕನ್ನಡದಲ್ಲಿ ಆರ್ಭಟಿಸುತ್ತಿದ್ದ ಮಳೆ ಕಡಿಮೆಯಾಗಿದ್ದು, ನದಿ ತೀರಗಳಲ್ಲಿ ಪ್ರವಾಹ ಇಳಿಕೆಯಾಗುತ್ತಿರುವ ಕಾರಣ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಆದರೆ, ಈ ನಡುವೆ ಜಿಲ್ಲೆಯಲ್ಲಿ ನಡೆದ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆಯಲ್ಲಿ ಜಿಲ್ಲೆಯ 439 ಪ್ರದೇಶಗಳಲ್ಲಿ ಭೂ ಕುಸಿತವಾಗುವ ಬಗ್ಗೆ ಮುನ್ನೆಚ್ಚರಿಕಾ ವರದಿಯೊಂದು ಸರ್ಕಾರಕ್ಕೆ ಸಲ್ಲಿಕೆಯಾಗಿರುವುದು ಇದೀಗ ಆತಂಕಕ್ಕೆ ಕಾರಣವಾಗಿದೆ. ಬಹುಪಾಲು ಅರಣ್ಯ ಪ್ರದೇಶವನ್ನೇ ಹೊಂದಿರುವ ಉತ್ತರಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಆಗುತ್ತದೆ. ಅದರಲ್ಲಿಯೂ ಕಳೆದ ನಾಲ್ಕು …

Read More »