Breaking News

Daily Archives: ಆಗಷ್ಟ್ 1, 2023

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) ಭಾರಿ ಗೋಲ್‌ಮಾಲ್

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) ಭಾರಿ ಗೋಲ್‌ಮಾಲ್ ನಡೆದಿದೆ ಎಂದು ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರ ಸಹಿ ನಕಲಿಸಿ 76.57 ಲಕ್ಷ ರೂ ವಂಚನೆ ಮಾಡಲಾಗಿದೆ. ಗುತ್ತಿಗೆದಾರರೊಂದಿಗೆ ಅಧಿಕಾರಿಗಳೂ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಬಿಎಂಟಿಸಿ ಸಹಾಯಕ ಭದ್ರತಾ ಜಾಗೃತಾಧಿಕಾರಿ ಸಿ.ಕೆ.ರಮ್ಯಾ ದೂರು ದಾಖಲಿಸಿದ್ದಾರೆ. ದೂರಿನನ್ವಯ ಬಿಎಂಟಿಸಿ ವಾಣಿಜ್ಯ ವಿಭಾಗದ ಮುಖ್ಯ ಸಂಚಾರಕ ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೂರು …

Read More »

ಮೊಬೈಲ್ ಫೋನ್ ಪ್ರಿಯರಿಗೆ ಆಗಸ್ಟ್​​ನಲ್ಲಿ ಸ್ಮಾರ್ಟ್ ಫೋನ್​ಗಳ ಸುರಿಮಳೆ

ಹೊಸ ಫೋನ್‌ಗಳನ್ನು ಬಿಡುಗಡೆ ಮಾಡಲು ಟಾಪ್ ಕಂಪನಿಗಳು ಸಾಲುಗಟ್ಟಿ ನಿಂತಿವೆ. ಆಗಸ್ಟ್​ನಲ್ಲಿ ಯಾವ ಕಂಪನಿ ಯಾವ ಮಾಡೆಲ್​ಗಳನ್ನು ಬಿಡುಗಡೆ ಮಾಡುತ್ತಿವೆ ಎಂಬುದರ ಬಗ್ಗೆ ತಿಳಿಯೋಣಾ ಬನ್ನಿ.. Oneplus ಓಪನ್: ಬಹುನಿರೀಕ್ಷಿತ OnePlus ಫೋಲ್ಡಿಂಗ್ ಫೋನ್ ಅಂತಿಮವಾಗಿ ಆಗಸ್ಟ್ ತಿಂಗಳಲ್ಲಿ ಮಾರುಕಟ್ಟೆಗೆ ಬರಲಿದೆ. OnePlus ಆಗಸ್ಟ್ 29 ರಂದು ಫೋಲ್ಡಿಂಗ್ ಫೋನ್ ಅನ್ನು ಬಿಡುಗಡೆ ಮಾಡಲಿದೆ. OnePlus Open ಅಥವಾ OnePlus 11 Fold ಎಂಬ ಹೆಸರಿನಲ್ಲಿ ಈ ಫೋನ್ ಮಾರುಕಟ್ಟೆಯಲ್ಲಿ …

Read More »

ಪತಿಯೊಬ್ಬ ಪತ್ನಿಯ ಕತ್ತು ಕೊಯ್ದು ಪರಾರಿ ಬೆಚ್ಚಿಬಿದ್ದ ಗ್ರಾಮಸ್ಥರು

ಮಂಡ್ಯ: ಜಿಲ್ಲೆಯಲ್ಲಿ ದಾರುಣ ಘಟನೆಯೊಂದು ನಡೆದಿದೆ. ಪತ್ನಿಯನ್ನ ಚಾಕುವಿನಿಂದ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಹುಲಿಕೆರೆ ಗ್ರಾಮದಲ್ಲಿ ನಡೆದಿದೆ. ಸೌಮ್ಯ (28) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ಗಣೇಶ್ (33) ಎಂಬಾತ ಪತ್ನಿಯನ್ನು ಕೊಂದು ಪರಾರಿ ಆಗಿರುವ ಆರೋಪಿ. ಕಳೆದ 8 ವರ್ಷಗಳ ಹಿಂದೆ ನಂಜನಗೂಡು ತಾಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ ಜೊತೆ ಗಣೇಶ್ ಮದುವೆ ಆಗಿತ್ತು. ಈ ದಂಪತಿಗೆ ಏಳು ವರ್ಷದ ಗಂಡು ಮಗ …

Read More »

ಪತ್ರಕರ್ತನ ಮೇಲೆ ನೈತಿಕ ಪೊಲೀಸ್​ ಗಿರಿ ನಡೆದಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿ ಹೆಚ್ಚಿನ ವಿಚಾರಣೆ

ಮಂಗಳೂರು: ಇತ್ತೀಚೆಗೆ ಆರೋಪಿಗಳು ಪೊಲೀಸರ ‌ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಬೆನ್ನಲ್ಲೇ ಮಾಧ್ಯಮವೊಂದರ ವರದಿಗಾರನ ಮೇಲೂ ನೈತಿಕ ಪೊಲೀಸ್​ ಗಿರಿ ನಡೆದಿದೆ. ಈ ಘಟನೆ ನಗರದ ಕಾವೂರು ಬಳಿಯ ರೆಸ್ಟೋರೆಂಟ್ ಒಂದರಲ್ಲಿ ನಡೆದಿದೆ. ಮಂಗಳೂರಿನ ಸ್ಥಳೀಯ ಖಾಸಗಿ ನ್ಯೂಸ್ ವೆಬ್​ಸೈಟ್ ವರದಿಗಾರನ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ತಕ್ಷಣ ವರದಿಗಾರ ಕಾವೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ‌. ದೂರಿನ ಹಿನ್ನೆಲೆ ಎಫ್‌ಐಆರ್ ದಾಖಲಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. …

Read More »

ಪೊಲೀಸ್, ಅರಣ್ಯ ಇಲಾಖೆಯಿಂದ ಜಂಟಿ ಕಾರ್ಯಾಚರಣೆ ನಡೆಸಿ, ಶ್ರೀಗಂಧ ಮರಗಳ್ಳರ ಬಂಧಿಸಲಾಗಿದೆ. ಬಂಧಿತರಿಂದ 8.75 ಲಕ್ಷ ರೂ. ಮೌಲ್ಯದ ವಿವಿಧ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ.

ಬೀದರ್​: ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ಜಿಲ್ಲೆಯಲ್ಲಿ ವಿವಿಧ ಠಾಣೆಗಳಲ್ಲಿ ಮತ್ತು ಅರಣ್ಯ ಇಲಾಖೆಯಲ್ಲಿ ದಾಖಲಾದ ಶ್ರೀಗಂಧ ಮರಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 8,75,000 ರೂ. ಮೌಲ್ಯದ ವಿವಿಧ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್. ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾಲ್ಕಿ ಅಂಬೆಸಾಂಗಾವಿ ಗ್ರಾಮದ …

Read More »

ಡಿಕೆಶಿ ಪ್ರಕರಣದ ಕೇಸ್‌ ಡೈರಿ ಸಲ್ಲಿಸಿ.. ಸಿಬಿಐಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಸಂಬಂಧಿಸಿದ ಕೇಸ್ ಡೈರಿಯನ್ನು ಆಗಸ್ಟ್ 2ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.   ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಸಂಬಂಧ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ಮತ್ತು ಆ ಕುರಿತ ತನಿಖೆ ರದ್ದುಪಡಿಸುವಂತೆ ಕೋರಿ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರಿದ್ದ ನ್ಯಾಯಪೀಠ ವಿಚಾರಣೆಯನ್ನು ಪೂರ್ಣಗೊಳಿಸಿತು. …

Read More »

ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳು ಆಗಸ್ಟ್ 15 ರಿಂದ ಇ ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು : ಕೃಷ್ಣ ಬೈರೇಗೌಡ

ಕಲಬುರಗಿ: ಹಳೇ ಕಾಲದ ಪತ್ರ ವ್ಯವಹಾರವನ್ನು ಕೈಬಿಟ್ಟು ತಂತ್ರಜ್ಞಾನಕ್ಕೆ ಒಗ್ಗಿ ಇ-ಆಫೀಸ್ ಅನುಷ್ಠಾನಗೊಳಿಸಲಾಗಿದೆ. ಇನ್ಮುಂದೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಗಸ್ಟ್ 15 ರಿಂದ ಸರ್ಕಾರಕ್ಕೆ ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು. ಭೌತಿಕವಾಗಿ ಪತ್ರ ಸ್ವೀಕರಿಸುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಕಲಬುರಗಿ ಡಿಸಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಒಂದು ಪ್ರಕರಣದಲ್ಲಿ ಗ್ರಾಮ ಪಂಚಾಯತಿಯ ಸ್ವಚ್ಛತಾ ಸಂಕೀರ್ಣಕ್ಕೆ …

Read More »

ಹಿಂದಿನ ಕಾಮಗಾರಿಗಳಿಗೆ ತಡೆಹಿಡಿಯಲಾಗಿದ್ದ ಅನುದಾನ ಬಿಡುಗಡೆ ಆದೇಶವನ್ನ ಕಾಂಗ್ರೆಸ್ ಹಿಂಪಡೆದಿದೆ.

ಬೆಂಗಳೂರು: ಎಲ್ಲಾ ಇಲಾಖೆಗಳಡಿ ಬರುವ ನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರಿದ ಕಾಮಗಾರಿಗಳಿಗೆ ತಡೆಹಿಡಿಯಲಾಗಿದ್ದ ಅನುದಾನ ಬಿಡುಗಡೆಗೊಳಿಸಿ ಸರ್ಕಾರ ಆದೇಶಿಸಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಹಿಂದಿನ ಬಿಜೆಪಿ ಆಡಳಿತಾವಧಿಯಲ್ಲಿನ ಎಲ್ಲಾ ಇಲಾಖೆಗಳಡಿ ಬರುವ ನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರಿದ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯನ್ನು ತಡೆಹಿಡಿಯಲಾಗಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಅನುದಾನ ತಡೆಹಿಡಿದ ಆದೇಶವನ್ನು ಹಿಂಪಡೆದಿದ್ದಾರೆ. ಈ ಸಂಬಂಧ ಆರ್ಥಿಕ ಇಲಾಖೆ ಅನುದಾನ ಬಿಡುಗಡೆ ಆದೇಶ ಹೊರಡಿಸಿದೆ. ಎಲ್ಲಾ ಇಲಾಖೆಗಳು ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ/ಮಂಡಳಿ/ಪ್ರಾಧಿಕಾರಗಳ ಮುಂದುವರಿದ …

Read More »

ತಮ್ಮ ಕಚೇರಿಯ ಗುಮಾಸ್ತನನ್ನು ಸರ್ಕಾರಿ ವಾಹನದಲ್ಲಿ ಮನೆಗೆ ಡ್ರಾಪ್​ ಮಾಡುವ ಮೂಲಕ ಗೌರವಯುತವಾಗಿ ಬೀಳ್ಕೊಟ್ಟಿದ್ದಾರೆ.

ಶಿವಮೊಗ್ಗ: ತಮ್ಮ ಕಚೇರಿಯ ಗುಮಾಸ್ತರೊಬ್ಬರು ವಯೋ ನಿವೃತ್ತಿಯಾದ ಹಿನ್ನೆಲೆಯಲ್ಲಿ ಸಾಗರ ಉಪವಿಭಾಗಾಧಿಕಾರಿ ವಿಶೇಷ ಗೌರವದೊಂದಿಗೆ ಅವರನ್ನು ಬೀಳ್ಕೊಟ್ಟು, ಎಲ್ಲರಿಗೂ ಮಾದರಿಯಾಗಿದ್ದಾರೆ. ಸಾಗರದ ಉಪ ವಿಭಾಗಧಿಕಾರಿಯಾದ ಪಲ್ಲವಿ ಸಾತೇನಹಳ್ಳಿ ಅವರು ತಮ್ಮ ಕಚೇರಿಯಲ್ಲಿ ಡಿ ಗ್ರೂಪ್​ ನೌಕರರಾಗಿ ನಿವೃತ್ತಿಯಾದ ಕೃಷ್ಣಪ್ಪ ಅವರನ್ನು ತಮ್ಮ ಸರ್ಕಾರಿ ವಾಹನದಲ್ಲಿ ಕೂರಿಸಿಕೊಂಡು ಮನೆಗೆ ಡ್ರಾಪ್‌ ಮಾಡುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ. ಸಾಗರ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸಿದ ಕೃಷ್ಣಪ್ಪ ಅವರು ಸೋಮವಾರ ವಯೋನಿವೃತ್ತಿ …

Read More »

ಅತಿವೃಷ್ಟಿ ವಿಚಾರದಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ

ಕಲಬುರಗಿ: ಬಿಜೆಪಿಯವರು ತಮ್ಮ ಮನೆಯ ಹುಳಕನ್ನು ಮುಚ್ಚಿಕೊಳ್ಳಲು ರಾಜಕೀಯ ಬೆರೆಸುತ್ತಿದ್ದಾರೆ. ಬಿಜೆಪಿಯವರು ಸಂಪೂರ್ಣ ಹತಾಶರಾಗಿದ್ದಾರೆ. ನಮ್ಮ ಸರ್ಕಾರ ಜನರ ನಾಡಿ ಮಿಡಿತ ಅರಿತು ಕೆಲಸ ಮಾಡುತ್ತಿದೆ. ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ತಮ್ಮ ಮನೆಯಲ್ಲಿನ ಹುಳುಕನ್ನು ಸರಿಪಡಿಸಿಕೊಳ್ಳಲಾಗದೇ ರಾಜಕೀಯ ಬೆರೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿ ವಿಚಾರದಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಟೀಕೆಗೆ …

Read More »