Breaking News

Daily Archives: ಆಗಷ್ಟ್ 2, 2023

ನಾಳೆ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕೀಯ ಬುಧವಾರ ದೆಹಲಿಗೆ ಶಿಫ್ಟ್ ಆಗಲಿದೆ. ರಾಜ್ಯ ನಾಯಕರ ಜೊತೆ ಕೈ ಹೈಕಮಾಂಡ್ ಲೋಕಸಭೆ ಚುನಾವಣೆ ಕಾರ್ಯತಂತ್ರ ನಡೆಸಲಿದೆ.‌ ಅದರ ಜೊತೆಗೆ ಶಾಸಕರ ಅಸಮಾಧಾನಕ್ಕೆ ಮದ್ದು ಅರೆಯುವ ಕೆಲಸವೂ ನಡೆಯಲಿದೆ.   ಕೈ ಪಕ್ಷದಲ್ಲಿನ ಬೇಗುದಿ ತಣಿಸಲು ಹೈಕಮಾಂಡ್ ಎಂಟ್ರಿ ಕೊಟ್ಟಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆ ಬುಧವಾರ ಸಿಎಂ, ಡಿಸಿಎಂ, ಸಚಿವರು ಸೇರಿ ಪ್ರಮುಖ ನಾಯಕರೆಲ್ಲ ದೆಹಲಿ ಕಡೆ ದೌಡಾಯಿಸ್ತಿದ್ದಾರೆ. ಶಾಸಕರ ಅತೃಪ್ತಿ ಶಮನಕ್ಕೆ ಮದ್ದೆರಚಲು ಎಐಸಿಸಿ …

Read More »

”ಠೇವಣಿ ಏಜೆಂಟ್​ಗಳಿಂದ ಪಿಗ್ಮಿ ಕಲೆಕ್ಷನ್​ಗಳಲ್ಲಿ ಈಗಾಗಲೇ ಅನೇಕ ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬಂದಿವೆ.

ಬೆಳಗಾವಿ: ”ಸಹಕಾರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪಿಕೆಪಿಎಸ್, ಡಿಸಿಸಿ ಬ್ಯಾಂಕ್, ಅರ್ಬನ್ ಸೊಸೈಟಿಗಳಲ್ಲಿ ಹಣ ಕಬಳಿಸಿ, ದುರುಪಯೋಗಪಡಿಸಿಕೊಂಡು ಸಂಸ್ಥೆಗಳಿಗೆ ವಂಚನೆ ಎಸಗುವವರ ವಿರುದ್ಧ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು” ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್ ರಾಜಣ್ಣ ಸೂಚನೆ ನೀಡಿದರು. ಸುವರ್ಣ ವಿಧಾನ ಸೌಧದ ಕಾನ್ಫರೆನ್ಸ್ ಹಾಲ್​ನಲ್ಲಿ ಇಂದು ನಡೆದ ಬೆಳಗಾವಿ ಪ್ರಾಂತ್ಯದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ”ಜಿಲ್ಲೆಗಳ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ …

Read More »

ವಿಟಿಯು 23ನೇ ಘಟಿಕೋತ್ಸವ ಜರುಗಿದ್ದು, ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರ ಅಧ್ಯಕ್ಷತೆಯಲ್ಲಿ ಚಿನ್ನದ ಪದಕ ವಿಜೇತರು ಹಾಗೂ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎ ಪಿ ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಮಂಗಳವಾರ 23ನೇ ಘಟಿಕೋತ್ಸವ ಜರುಗಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ‌ ಚಿನ್ನದ ಪದಕ ವಿಜೇತರು ಹಾಗೂ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಭಾರತೀಯ ತಂತ್ರಜ್ಞಾನ ಸಂಸ್ಥೆ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರು ಘಟಿಕೋತ್ಸವ ಭಾಷಣ ಮಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸನ್ನು ನನಸು ಮಾಡಿಕೊಳ್ಳಲು …

Read More »

ಟೊಮೆಟೊ ಕಳ್ಳನನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ ರೈತ

ಚಿಕ್ಕೋಡಿ (ಬೆಳಗಾವಿ) : ಕಳೆದ ಎರಡು ತಿಂಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದ್ದು, 200 ರೂ. ಗಡಿ ಮುಟ್ಟಿದೆ. ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿರುವ ಟೊಮೆಟೊ, ರೈತರಿಗೆ ಹೆಚ್ಚಿನ ಲಾಭವನ್ನು ತಂದುಕೊಡುತ್ತಿದೆ. ಆದರೆ ಇತ್ತೀಚೆಗೆ ತೋಟಕ್ಕೆ ನುಗ್ಗಿ ಟೊಮೆಟೊ ಕಳ್ಳತನ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಡುವೆ ರೈತರೋರ್ವರು ಟೊಮೆಟೊ ಕಳ್ಳನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಬುಜಪ್ಪಾ ಗಾಣಗೇರ ಎಂಬುವರು ಟೊಮೆಟೊ ಕಳ್ಳತನ …

Read More »

ಲೋಕಸಭೆ ಚುನಾವಣೆ ಕುರಿತು ಚರ್ಚೆ ನಡೆಸಲು ದೆಹಲಿಯಲ್ಲಿ ಹೈಕಮಾಂಡ್ ಸಭೆ : ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ): ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಪಕ್ಷ ಸಂಘಟನೆಯ ಕುರಿತು ಚರ್ಚೆ ನಡೆಸಲು ದೆಹಲಿಯಲ್ಲಿ ಹೈಕಮಾಂಡ್ ಸಭೆ ಕರೆದಿದೆ. ಈ ನಿಟ್ಟಿನಲ್ಲಿ ಕೆಲವರು ದೆಹಲಿಗೆ ಹೊರಟಿದ್ದೇವೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಕೆಡಿಪಿ ಸಭೆ ನಡೆಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವರ ವಿರುದ್ಧ ಶಾಸಕರು ದೂರು ನೀಡಿದ ವಿಚಾರವಾಗಿ …

Read More »

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು ಆಯ್ಕೆ

ಚಿಕ್ಕೋಡಿ: ರಾಜ್ಯದಲ್ಲೇ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದಿರುವ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಚ್ಚರಿಯ ಎಂಬಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದು, ಸ್ಥಳೀಯ ಶಾಸಕರು ಹಾಗೂ ಕಾಂಗ್ರೆಸ್ ವಲಯಕ್ಕೆ ಭಾರಿ ನಿರಾಸೆ ಮೂಡಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು …

Read More »