Breaking News

Daily Archives: ಆಗಷ್ಟ್ 4, 2023

SC&ST ಸಮುದಾಯದ ಅಭಿವೃದ್ಧಿಗೆ ಮೀಸಲಿರಿಸಿರುವ ಹಣವನ್ನು ಇತರ ಜನ ಸಮುದಾಯ ಹಾಗೂ ಇತರ ಉದ್ದೇಶಕ್ಕೆ ಬಳಕೆ ಮಾಡುವುದಿಲ್ಲ ಎಂದು ಸಿಎಂ

ಬೆಂಗಳೂರು: ಸರ್ಕಾರ ಯಾವುದೇ ರೀತಿಯಲ್ಲೂ ಪರಿಶಿಷ್ಟ ಜಾತಿ/ಪಂಗಡಗಳ ಕಲ್ಯಾಣಕ್ಕೆ ಎಂದು ಮೀಸಲಿರಿಸಿದ ಹಣವನ್ನು ಇತರ ಜನ ಸಮುದಾಯಗಳ, ಇತರ ಉದ್ದೇಶಗಳಿಗೆ ಬಳಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಎಸ್​​​ಸಿಪಿ ಮತ್ತು ಟಿಎಸ್‌ಪಿ ಯೋಜನೆಯಲ್ಲಿನ ಅನುದಾನಗಳನ್ನು ಇತರ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಕೆಲವರು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದಿದ್ದಾರೆ. ಕೆಲವು ಮಾಧ್ಯಮಗಳಲ್ಲೂ ಈ ಕುರಿತು ವರದಿಗಳಿವೆ. ಪರಿಶಿಷ್ಟ ಜಾತಿ/ಪಂಗಡಗಳಿಗೆ ಮೀಸಲಿರಿಸಿದ ಅನುದಾನಗಳನ್ನು …

Read More »

ಗಂಭೀರ ಸ್ವರೂಪದ ಪ್ರಕರಣಗಳ ಮಾಹಿತಿ ನೀಡಿದ ತಕ್ಷಣ ಎಫ್‌ಐಆರ್ ದಾಖಲಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ

ಬೆಂಗಳೂರು: ಗಂಭೀರ ಸ್ವರೂಪದ ಅಪರಾಧದ ಪ್ರಕರಣಗಳ ಮಾಹಿತಿ ನೀಡಿದಾಗ ತಕ್ಷಣ ಎಫ್‌ಐಆರ್ ದಾಖಲು ಮಾಡಬೇಕು ಎಂದು ನಿರ್ದೇಶಿಸಿರುವ ಹೈಕೋರ್ಟ್, ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಲಲಿತಾಕುಮಾರಿ ಪ್ರಕರಣದ ಸಾರಾಂಶವನ್ನು ಎಲ್ಲ ಪೊಲೀಸ್ ಠಾಣೆಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಒದಗಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ.   ದೂರು ಸಲ್ಲಿಸಿದ್ದರೂ ಎಫ್‌ಐಆರ್ ದಾಖಲಿಸದ ಬಬಲೇಶ್ವರ ಪೊಲೀಸ್ ಠಾಣಾಧಿಕಾರಿಯ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಜಿಲ್ಲೆಯ ಕಿಲಾರಹಟ್ಟಿಯ ವಿಠ್ಠಲ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ …

Read More »

ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಮಾನವೀಯತೆ ಮೆರೆದಿದ್ದಾರೆ.

ವಿಜಯಪುರ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಮುಂದೆ ಅಳಲು ತೋಡಿಕೊಂಡು ಬಂದ ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ಡಿಸಿ ಮಾನವೀಯತೆ ಮೆರೆದಿದ್ದಾರೆ. ಬಡತನ ರೇಖೆಗಿಂತ (ಬಿಪಿಎಲ್) ಕೆಳಗಡೆ ಇರುವ ಮತ್ತು 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಈ ಯೋಜನೆಯಡಿ ಮಾಸಾಶನ ನೀಡಲಾಗುತ್ತದೆ. ನಗರದ ಗ್ಯಾಂಗಬಾವಡಿಯ ನಿವಾಸಿಗಳಾದ ಸೂರ್ಯಕಾಂತ ರಾಮದುರ್ಗಕರ ಹಾಗೂ ಅವರ ಪತ್ನಿ ಸುರೇಖಾ ರಾಮದುರ್ಗಕರ ಗುರುವಾರ ನಗರದ ಜಿಲ್ಲಾಧಿಕಾರಿಗಳ …

Read More »

ಕೇರಳ ಪೊಲೀಸ್ ವಶದಲ್ಲಿರುವವರು ಕರ್ನಾಟಕ ಸೈಬರ್ ಪೊಲೀಸ್ ವಿಭಾಗದ ಸಿಬ್ಬಂದಿ

ಕೊಚ್ಚಿ: ಆನ್​ಲೈನ್​ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಆರೋಪಿಗಳಿಂದ ಲಂಚ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಕರ್ನಾಟಕದ ಓರ್ವ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೊಚ್ಚಿಯಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸ್​ನಲ್ಲಿ ಹೆಸರನ್ನು ಕೈಬಿಡಲು ಆರೋಪಿಗಳಿಂದ ಲಂಚ ಪಡೆದಿದ್ದರೆಂದು ಆರೋಪಿಸಲಾಗಿದೆ. ಹಣ ಪಡೆದು ಸಹ ಆರೋಪಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದಾಗ ಅವರ ಸಂಬಂಧಿಯೊಬ್ಬರು ಕೊಚ್ಚಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ತನಿಖೆಗಿಳಿದ ಕಲಮಶ್ಶೇರಿ ಪೊಲೀಸರು ವಾಹನ ತಡೆದು, …

Read More »

ಸ್ವಾತಂತ್ರ್ಯೋತ್ಸವದ ನಿಮಿತ್ತ ಇಂದಿನಿಂದ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ನಿಮಿತ್ತ ಇಂದಿನಿಂದ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ತೋಟಗಾರಿಕಾ ಇಲಾಖೆಯಿಂದ ಆಯೋಜನೆಯಾಗಿರುವ ಹನ್ನೆರಡು ದಿನಗಳ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಸುಮಾರು ಎಂಟರಿಂದ ಹತ್ತು ಲಕ್ಷ ಜನರ ಆಗಮನದ ನಿರೀಕ್ಷೆಯಿದ್ದು, ಸಂಚಾರ ದಟ್ಟಣೆಯಾಗದಂತೆ ಕೆಲ ಮಾರ್ಪಾಡುಗಳನ್ನು ಮಾಡಲಾಗಿದೆ. ವಾಹನಗಳ ನಿಲುಗಡೆಗೆ ಅವಕಾಶ, ಮತ್ತು ನಿಷೇಧದ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ವಾಹನ ನಿಲುಗಡೆಗೆ ಅವಕಾಶವಿರುವ ಸ್ಥಳಗಳು: ಡಾ.ಮರೀಗೌಡ ರಸ್ತೆಯ ಅಲ್ ಅಮೀನ್ ಕಾಲೇಜು ಅವರಣದಲ್ಲಿ ದ್ವಿಚಕ್ರ ವಾಹನಗಳಿಗೆ, …

Read More »

ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ನಿಷೇಧವಿದ್ದರೂ, ಬೆಳಗಾವಿಯಲ್ಲಿ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ತರಹೇವಾರಿ ಗಣೇಶನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ

ಬೆಳಗಾವಿ: ಪರಿಸರಕ್ಕೆ ಮಾರಕವಾಗಿರುವ ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ನಿಷೇಧವಿದ್ದರೂ, ಬೆಳಗಾವಿಯಲ್ಲಿ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ತರಹೇವಾರಿ ಗಣೇಶನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಹಲವಾರು ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಮಾತ್ರ ಅನುಮತಿ ನೀಡಬೇಕೆಂದು ಜಿಲ್ಲೆಯ ಪರಿಸರ ಪ್ರೇಮಿಗಳು ಆಗ್ರಹಿಸುತ್ತಿದ್ದಾರೆ. ಹೌದು, ಗಣೇಶೋತ್ಸವಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇರುವಾಗ ಬೆಳಗಾವಿಯಲ್ಲಿ ಗಣೇಶ ಮೂರ್ತಿಗಳ ತಯಾರಿಕೆ ಭರದಿಂದ ಸಾಗಿದೆ. ಪರಿಸರ ಸ್ನೇಹಿ ಮೂರ್ತಿ ತಯಾರಕರು, ಮಾರಾಟಗಾರರು …

Read More »