Breaking News

Daily Archives: ಆಗಷ್ಟ್ 9, 2023

ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ, ಬೇಗ ಗುಣಮುಖರಾಗಿ’: ಹೆಚ್‌ಡಿಕೆಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ”ಚುನಾವಣಾ ಸೋಲಿನ ಆಘಾತದಿಂದ ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಸಚಿವ ಚಲುವರಾಯಸ್ವಾಮಿ ವಿರುದ್ಧ ದೂರಿನ ಪತ್ರದ ಬಗ್ಗೆ ತಮ್ಮ ವಿರುದ್ಧ ಹೆಚ್​ಡಿಕೆ ಮಾಡಿದ ತೀಕ್ಷ್ಣ ಟ್ವಿಟ್​ಗೆ ಪ್ರತಿಕ್ರಿಯಿಸಿದ ಅವರು, ”ಹೆಚ್.ಡಿ. ಕುಮಾರಸ್ವಾಮಿ ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ …

Read More »

ಆರೋಗ್ಯ ಇಲಾಖೆಯ ನಿವೃತ್ತ ಸ್ಟೋರ್‌ಕೀಪರ್‌ ಬಳಿ ₹10 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆ!

ಭೋಪಾಲ್ (ಮಧ್ಯಪ್ರದೇಶ): ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮಧ್ಯಪ್ರದೇಶದ ಆರೋಗ್ಯ ಇಲಾಖೆಯ ನಿವೃತ್ತ ಸ್ಟೋರ್‌ಕೀಪರ್‌ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದರು. ರಾಜ್‌ಗಢದ ಜಿಲ್ಲಾ ಆಸ್ಪತ್ರೆಯ ಸ್ಟೋರ್ ಕೀಪರ್ ಆಗಿ ನಿವೃತ್ತಗೊಂಡಿರುವ ಲಾಟೇರಿ ನಿವಾಸಿ ಅಶ್ಫಾಕ್ ಅಲಿ, ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಭ್ರಷ್ಟಾಚಾರ ಕಾಯ್ದೆಯಡಿ ಪೊಲೀಸರು ದೂರಿಗೆ ದೂರು ಬಂದಿದ್ದು, ತನಿಖೆ ಕೈಗೊಂಡಿದ್ದಾರೆ. ಈ ವೇಳೆ, ಭಾರಿ ಪ್ರಮಾಣದ …

Read More »

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಬೊಮ್ಮಾಯಿ

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವೇಳೆ ಅಮಿತ್ ಶಾ, “ಆದಷ್ಟು ಬೇಗ ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು. ಪಕ್ಷ ಸಂಘಟನೆ ನಿಟ್ಟಿನಲ್ಲಿ ಒಂದು ಉತ್ತಮ ತಂಡವನ್ನು ಆಯ್ಕೆ ಮಾಡಲಾಗುವುದು” ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. 5 ಗ್ಯಾರಂಟಿಗಳ ಮಾಹಿತಿ ಪಡೆದುಕೊಂಡ …

Read More »

ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕರೊಂದಿಗೆ ಮಾತುಕತೆ

ಬೆಂಗಳೂರು: ಆರು ಜಿಲ್ಲೆಗಳ ಶಾಸಕರು ಹಾಗೂ ಉಸ್ತುವಾರಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ಇಂದು ಸರಣಿ ಸಭೆ ನಡೆಸಿದರು. ಸಭೆಯಲ್ಲಿ ಬಹುತೇಕ ಶಾಸಕರು ಅನುದಾನ ಬಿಡುಗಡೆ ಬಗ್ಗೆ ಅಳಲು ತೋಡಿಕೊಂಡರು. ಬೆಳಗ್ಗೆ ರಾಯಚೂರು, ವಿಜಯಪುರ ಹಾಗೂ ಕೊಪ್ಪಳ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕರ ಜೊತೆ ಸಿಎಂ ಮಾತನಾಡಿದರು. ಸಂಜೆ ಬೆಳಗಾವಿ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳ ಶಾಸಕರು ಹಾಗೂ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಅಸಮಾಧಾನಕ್ಕೆ …

Read More »

ಯುವ ರೈತ ಕೇವಲ 30 ಗುಂಟೆಯಲ್ಲಿ ಟೊಮೆಟೊ ಬೆಳೆದು ಲಕ್ಷ ಲಕ್ಷ ಸಂಪಾದಿಸಿದ್ದಾನೆ.

ದಾವಣಗೆರೆ : ಟೊಮೆಟೊಗೆ ಚಿನ್ನದ ಬೆಲೆ ಸಿಕ್ಕಿದ್ದರಿಂದ ರೈತರು ಹೆಚ್ಚಿನ ಲಾಭ ಪಡೆಯುತ್ತಿದ್ದು, ಕೆಂಪು ಸುಂದರಿ ಬೆಳೆಯಲು ಮುಂದಾಗಿದ್ದಾರೆ. ಕೆಲ ರೈತರು ಕೋಟಿಗಟ್ಟಲೇ ಲಾಭ ಪಡೆದರೆ ಇನ್ನೂ ಕೆಲವರು ಲಕ್ಷಗಟ್ಟಲೇ ಆದಾಯ ಗಳಿಸಿದ್ದಾರೆ. ಈ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದ ರೈತರೊಬ್ಬರು ಸೇರಿದ್ದಾರೆ. ಕೇವಲ ಮೂವತ್ತು ಗುಂಟೆ ಜಮೀನಿನಲ್ಲಿ 7 ಲಕ್ಷ ರೂ. ಲಾಭ ಪಡೆದಿದ್ದು, ಇನ್ನೂ ಮೂರು ಲಕ್ಷ ಲಾಭದ ನಿರೀಕ್ಷೆಯಲ್ಲಿದ್ದಾರೆ. ಹೌದು, ದಾವಣಗೆರೆ ಜಿಲ್ಲೆಯ …

Read More »

ಸ್ಪಂದನಾ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪಿದ್ದು, ಅಂತಿಮ ದರ್ಶನದ ಬಳಿಕ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ.

ಬೆಂಗಳೂರು: ಬ್ಯಾಂಕಾಕ್ ಪ್ರವಾಸದ ವೇಳೆ ನಿಧನರಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಬೆಂಗಳೂರಿಗೆ ತಲುಪಿದ್ದು, ಅಂತಿಮ ದರ್ಶನ ನಡೆಯುತ್ತಿದೆ. ಅಂತಿಮ ದರ್ಶನದ ಬಳಿಕ ಇಂದು ಮಧ್ಯಾಹ್ನ ಅಂತ್ಯ ಸಂಸ್ಕಾರ ನಡೆಯಲಿದೆ. ಮಂಗಳವಾರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಥಾಯ್ ಏರ್ ವೇಸ್ ವಿಮಾನದಲ್ಲಿ ಕರೆತರಲಾಗಿದ್ದು, ಕಾರ್ಗೋ ಟರ್ಮಿನಲ್​ನಲ್ಲಿ ಕುಟುಂಬಸ್ಥರಿಗೆ ಪಾರ್ಥಿವ ಶರೀರ ಹಸ್ತಾಂತರ ಮಾಡಲಾಗಿದೆ. ಇದೇ ವಿಮಾನದಲ್ಲಿ ಪತಿ ವಿಜಯ ರಾಘವೇಂದ್ರ …

Read More »

ಬಾಬಾ ಸಾಹೇಬರ ಲೇಖನಿಯಿಂದ ಭಾರತ ಬದಲಾಯಿತು: ಜ್ಞಾನಪ್ರಕಾಶ ಸ್ವಾಮೀಜಿ

ಬೆಳಗಾವಿ: “ಜೀವ ಜಗತ್ತಿನಲ್ಲಿ ಮಹಿಳೆಯೇ ಶ್ರೇಷ್ಠ ಎಂದಿದ್ದರೂ ದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಲೇ ಇದೆ. ಶೋಷಿತ ಸಮುದಾಯಗಳೂ ಹೊರತಾಗಿಲ್ಲ. ಇದೆಲ್ಲದಕ್ಕೂ ಕಡಿವಾಣ ಹಾಕಬೇಕಿದ್ದರೆ ಶೋಷಿತ ಸಮುದಾಯಗಳು ಸುಶಿಕ್ಷಿತರಾಗಬೇಕು. ಆಗ ಮಾತ್ರ ಶಾಹುಮಹಾರಾಜರು ಮತ್ತು ಮಹಾತ್ಮಾ ಫುಲೆ ದಂಪತಿಯ ಕನಸು ನನಸಾಗಿಸಲು ಸಾಧ್ಯ” ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಅಭಿಪ್ರಾಯಪಟ್ಟರು. ಬೆಳಗಾವಿಯ ಕುಮಾರ ಗಂಧರ್ವ ಕಲಾಭವನದಲ್ಲಿ ಛತ್ರಪತಿ ಶಾಹುಮಹಾರಾಜರ 144ನೇ ಜಯಂತಿ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ …

Read More »