ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನಾಗಿ ಅಜಯ್ ಸಿಂಗ್ ಅವರನ್ನು ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧಿನಿಯಮ 2013ರ ನಿಯಮಿತ ಅನ್ವಯ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ 11 ಸದಸ್ಯರನ್ನೊಳಗೊಂಡಂತೆ ಮಂಡಳಿ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಜೇವರ್ಗಿ ಕ್ಷೇತ್ರದ ಶಾಸಕ ಅಜಯ್ ಸಿಂಗ್ ತೀವ್ರ ಅಸಮಾಧಾನಗೊಂಡಿದ್ದರು. ಈ ಸಂಬಂಧ ಕೆಲ ದಿನಗಳಿಂದ ಪಕ್ಷದ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದರು. …
Read More »Daily Archives: ಆಗಷ್ಟ್ 10, 2023
ರಾಜ್ಯಾದ್ಯಂತ ಆಗಸ್ಟ್ 27ರಂದು ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ
ಬೆಂಗಳೂರು: ರಾಜ್ಯ ಸರ್ಕಾರದ ‘ಬಹುನಿರೀಕ್ಷಿತ’ ಗೃಹ ಲಕ್ಷ್ಮೀ ಯೋಜನೆಗೆ ಆಗಸ್ಟ್ 27ರಂದು ಚಾಲನೆ ನೀಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಆಗಸ್ಟ್ 27ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …
Read More »ನಿರ್ಮಾಪಕರ ವಿರುದ್ಧ ಮಾನಹಾನಿ ಆರೋಪ ಕೇಸ್; ಕೋರ್ಟ್‌ನಲ್ಲಿ ಹೇಳಿಕೆ ದಾಖಲಿಸಿದ ನಟ ಸುದೀಪ್
ಬೆಂಗಳೂರು : ಚಿತ್ರ ನಿರ್ಮಾಪಕ ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರ ವಿರುದ್ಧ ಮಾನಹಾನಿ ದಾವೆ ದಾಖಲಿಸಬೇಕು ಹಾಗೂ 10 ಸಾವಿರ ರೂಪಾಯಿ ದಂಡ ಪಾವತಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಖಾಸಗಿ ದೂರಿನ ಸಂಬಂಧ ನಟ ಸುದೀಪ್ ಅವರ ಪ್ರಮಾಣೀಕೃತ ಹೇಳಿಕೆಯನ್ನು ಬೆಂಗಳೂರಿನ ಎಸಿಎಂಎಂ ನ್ಯಾಯಾಲಯ ಇಂದು ದಾಖಲಿಸಿಕೊಂಡಿದೆ. ಎಂ.ಎನ್.ಕುಮಾರ್ ಮತ್ತು ಎಂ.ಎನ್.ಸುರೇಶ್ ಅವರು ತಮ್ಮ ವಿರುದ್ಧ ಮಾನಹಾನಿ ಹೇಳಿಕೆ ಮತ್ತು ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಸುದೀಪ್ …
Read More »ಮಗಳನ್ನು ಮದುವೆ ಮಾಡಿಕೊಡದ್ದಕ್ಕೆ 850 ಅಡಿಕೆ ಗಿಡ ಕಡಿದು ಹಾಕಿದ ಯುವಕ’- ಪೊಲೀಸರಿಗೆ ದೂರು ನೀಡಿದ ವ್ಯಕ್ತಿ
ಮೈಸೂರು: ಮಗಳನ್ನು ಮದುವೆ ಮಾಡಿಕೊಡಲು ಒಪ್ಪದ ತಂದೆಯ ನಿರ್ಧಾರದಿಂದ ಕೋಪಗೊಂಡ ಯುವಕನೊಬ್ಬ, ಯುವತಿಯ ತಂದೆಗೆ ಸೇರಿದ ಫಸಲಿಗೆ ಬಂದಿದ್ದ 850ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಮನಬಂದಂತೆ ಕತ್ತರಿಸಿ ಹಾಕಿರುವ ಆರೋಪ ಪ್ರಕರಣ ಹುಣಸೂರು ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಈ ಸಂಬಂಧ ಯುವತಿಯ ತಂದೆ ಆರೋಪಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಹುಣಸೂರು ತಾಲೂಕಿನ ಕಡೆಮನುಗನಹಳ್ಳಿ ಎಂಬ ಗ್ರಾಮದಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದೆ. ಕಡೆಮನುಗನಹಳ್ಳಿ …
Read More »ವಿಶೇಷ ಬಸ್ಗಳ ವ್ಯವಸ್ಥೆ: ಬೆಳಗಾವಿಯಿಂದ ಒಂದು ದಿನದ ಟೂರ್ ಪ್ಯಾಕೇಜ್; ಶಕ್ತಿ ಯೋಜನೆಗಿಲ್ಲ ಅವಕಾಶ
ಹುಬ್ಬಳ್ಳಿ : ಮಳೆಗಾಲದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾರಾಂತ್ಯ ಹಾಗೂ ಸಾರ್ವಜನಿಕ ರಜಾ ದಿನಗಳಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಆರಂಭಿಸಲಾದ ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್ಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ವ್ಯವಸ್ಥೆಯನ್ನು ಬೇರೆ ಸ್ಥಳಗಳಿಗೂ ವಿಸ್ತರಿಸುವಂತೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಮತ್ತಷ್ಟು ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗುತ್ತಿದೆ. ವಿಶೇಷ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ …
Read More »ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಬಂಧಿಸಿರುವುದಾಗಿ ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮೀಷನರ್ ಸಂತೋಷ ಬಾಬು ತಿಳಿಸಿದ್ದಾರೆ.
ಹುಬ್ಬಳ್ಳಿ : ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿಯರನ್ನು ಅಸಭ್ಯವಾಗಿ ಬಿಂಬಿಸುವಂತಹ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಈ ಸಂಬಂಧ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮೀಷನರ್ ಸಂತೋಷ ಬಾಬು ಮಾಹಿತಿ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತನ ಇ-ಮೇಲ್ ಐಡಿ ಮತ್ತು ಸಾಮಾಜಿಕ ಜಾಲತಾಣಗಳ ವಿವರಗಳನ್ನು ವಿಧಿ …
Read More »ತುಂಗಭದ್ರಾ ತೀರದ ಅಕ್ರಮ ಮರಳು ಅಡ್ಡೆಗಳ ಮೇಲೆ ದಾಳಿ: ಸಿಬ್ಬಂದಿ ಮೇಲೆಯೇ ಹಲ್ಲೆ – ದೂರು ದಾಖಲು
ರಾಯಚೂರು : ಜಿಲ್ಲೆಯ ಮಾನವಿ ತಾಲೂಕಿನ ಚಿಕಲಪರ್ವಿ ಗ್ರಾಮ ಸೇರಿದಂತೆ ವಿವಿಧೆಡೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಟಿಪ್ಪರ್ ಹಾಗೂ ಜೆಸಿಬಿ ಜಪ್ತಿ ಮಾಡಿಕೊಂಡಿದ್ದಾರೆ. ಈ ವೇಳೆ ಆರು ಜನರ ತಂಡವೊಂದು ರಕ್ಷಣಾ ಸಿಬ್ಬಂದಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದು, ಅಧಿಕಾರಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮಾಜಿ ಸೈನಿಕ ಹಾಗೂ ಖನಿಜಾ ರಕ್ಷಣಾ ಪಡೆಯ ಸಿಬ್ಬಂದಿ ನೀಲಪ್ಪ ಹಲ್ಲೆಗೊಳಗಾದವರು. ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಲಾಗಿದ್ದು, …
Read More »ಬೆಂಗಳೂರಲ್ಲಿ ಮಹಿಳೆ ಮೇಲೆ ಹಲ್ಲೆ ಆರೋಪ: ಕ್ಯಾಬ್ ಚಾಲಕ ಪೊಲೀಸ್ ವಶಕ್ಕೆ
ಬೆಂಗಳೂರು: ಮಹಿಳೆಗೆ ನಿಂದಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ಕ್ಯಾಬ್ ಚಾಲಕನನ್ನು ಬೆಳ್ಳಂದೂರು ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪತ್ನಿಯ ಮೇಲೆ ಹಲ್ಲೆ ಮಾಡಿರುವುದಾಗಿ ಮಹಿಳೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಕ್ಯಾಬ್ ಚಾಲಕ ಬಸವರಾಜ್ ಎಂಬಾತನನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಬೆಳ್ಳಂದೂರಿನ ಬೋಗನಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಮಹಿಳೆಯ ಕುಟುಂಬ ವಾಸವಾಗಿದೆ. ಮಗನ ಚಿಕಿತ್ಸೆ ಸಲುವಾಗಿ ಬುಧವಾರ ಬೋಗನಹಳ್ಳಿಯಿಂದ ಮಣಿಪಾಲ್ ಆಸ್ಪತ್ರೆಗೆ ತೆರಳಲು ಮಹಿಳೆಯು ಕ್ಯಾಬ್ ಬುಕ್ …
Read More »ಮನೆ ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆಗೆ ಚಾಕುವಿನಿಂದ ಇರಿದ ಬಾಡಿಗೆದಾರ..
ಬೆಂಗಳೂರು: ಬಾಡಿಗೆ ಹಣ ಕೇಳಿದ್ದಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮುನೇಶ್ವರ ನಗರದ ನಿವಾಸಿ ಶ್ರೀದೇವಿ ತೀವ್ರ ಹಲ್ಲೆಗೊಳಗಾಗಿದ್ದು, ಈಕೆ ನೀಡಿದ ದೂರಿನ ಮೇರೆಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಜೀರ್, ಈತನ ಪುತ್ರ ಸದ್ದಾಂ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಮುನೇಶ್ವರ ನಗರದಲ್ಲಿ ಕಳೆದ 16 ವರ್ಷಗಳಿಂದ ಶ್ರೀದೇವಿ ವಾಸವಾಗಿದ್ದಳು. ಈಕೆ ಉಳಿದುಕೊಂಡಿದ್ದ ಕಟ್ಟಡದಲ್ಲಿ ನಜೀರ್ ವಾಸವಾಗಿದ್ದ. …
Read More »ಹೊಸಪೇಟೆ ಎಸ್ಟಿ ಕಾಲೇಜು ಹಾಸ್ಟೆಲ್ನಲ್ಲಿ ಚಿಕನ್ ಊಟ ಮಾಡಿದ್ದ ವಿದ್ಯಾರ್ಥಿನಿಯರು ಅಸ್ವಸ್ಥ
ವಿಜಯನಗರ: ಹೊಸಪೇಟೆ ಎಸ್ಟಿ ಕಾಲೇಜು ಹಾಸ್ಟೆಲ್ನಲ್ಲಿ ನಿನ್ನೆ ರಾತ್ರಿ ಚಿಕನ್ ಊಟ ಮಾಡಿದ್ದ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಘಟನೆ ಕುರಿತು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಮಾಹಿತಿ ನೀಡಿದ್ದಾರೆ. “ಜಂಬುನಾಥ ರಸ್ತೆಯಲ್ಲಿರೋ ಬಾಲಕಿಯರ ಮೆಟ್ರಿಕ್ ಎಸ್ಟಿ ಹಾಸ್ಟೆಲ್ನಲ್ಲಿ ಒಟ್ಟು 148 ವಿದ್ಯಾರ್ಥಿಗಳಿದ್ದಾರೆ. ಈ ಪೈಕಿ 17 ಸಸ್ಯಹಾರಿ ಮಕ್ಕಳಿದ್ದು, ಇವರನ್ನು ಬಿಟ್ಟು ಉಳಿದ ಮಕ್ಕಳೆಲ್ಲಾ ನಿನ್ನೆ ರಾತ್ರಿ 7.30 ರಿಂದ 8 ಗಂಟೆ ಒಳ ಸಮಯದಲ್ಲಿ ಚಿಕನ್ ಊಟ …
Read More »