Breaking News

Daily Archives: ಆಗಷ್ಟ್ 15, 2023

ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ಒಟ್ಟು 54.61 ಕೋಟಿ ರೂ. ಕಲೆಕ್ಷನ್​ ಮಾಡಿದ OMG2

OMG 2: ‘ಓಎಂಜಿ 2’ ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ಒಟ್ಟು 54.61 ಕೋಟಿ ರೂ. ಕಲೆಕ್ಷನ್​ ಮಾಡಿದೆ. ಬಾಲಿವುಡ್​ ಕಿಲಾಡಿ ಅಕ್ಷಯ್​ ಕುಮಾರ್ ನಟನೆಯ ‘ಓಎಂಜಿ 2’ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಸನ್ನಿ ಡಿಯೋಲ್​ ಅವರ ‘ಗದರ್​ 2’ಗೆ ಪೈಪೋಟಿ ನೀಡುತ್ತಿದೆ. ಇವೆರಡು ಚಿತ್ರಗಳು ಥಿಯೇಟರ್​ಗಳಲ್ಲಿ ಸಿನಿ ಪ್ರೇಮಿಗಳನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಕಲೆಕ್ಷನ್​ ವಿಚಾರದಲ್ಲಿ ‘ಗದರ್​ 2’ ವೇಗದ ಓಟ ಮುಂದುವರೆಸಿದರೆ, ‘ಓಎಂಜಿ 2’ ತಕ್ಕ ಮಟ್ಟಿಗೆ ಗಳಿಕೆ ಕಂಡಿದೆ. …

Read More »

ಕೊಪ್ಪಳದ ಗಂಗಾವತಿಯಲ್ಲಿ ಅನಧಿಕೃತವಾಗಿ ಹೋಟೆಲ್​ ರೆಸಾರ್ಟ್​ಗಳು ಕಾರ್ಯನಿರ್ವಹಿಸಿದ್ದ ಹಿನ್ನೆಲೆ ದಾಳಿ ಮಾಡಿದ ಪೊಲೀಸರು

ಗಂಗಾವತಿ: ಹಂಪಿ ಪ್ರಾಧಿಕಾರದ ನಿಯಮ ಮೀರಿಯೂ ಅನಧಿಕೃತವಾಗಿ ಹೋಟೆಲ್​ ರೆಸಾರ್ಟ್​ಗಳು ಕಾರ್ಯನಿರ್ವಹಿಸಿದ್ದ ಹಿನ್ನೆಲೆ ದಾಳಿ ಮಾಡಿದ ಪ್ರಾಧಿಕಾರದ ಅಧಿಕಾರಿಗಳು, ಹನ್ನೊಂದು ರೆಸಾರ್ಟ್​ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರೂಪಕ ಕುಮಾರ ಬಿಸ್ವಾಸ್​, ರಾಜು , ವರುಣ್ , ಕರುಣಾಕರ್ , ಗಾಳೇಶ್ , ಆಸೀಫ್ , ಚಂದ್ರಶೇಖರಗೌಡ , ಶ್ರೀಕಾಂತ್ ಹೊಸಳ್ಳಿ, ರವಿಚಂದ್ರ, ಸಂದೀಪ್ ಶೇಟ್ ಹಾಗೂ ಮೌಲಾಲಿ ಎಂಬುವವರಿಗೆ ಸೇರಿದ ರೆಸಾರ್ಟ್​ಗಳ ಮೇಲೆ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ. ಈ …

Read More »

ಬಿಜೆಪಿಯವರು ತಮ್ಮ ಬಳಿ ಜಮಾ ಇರುವ 40 ಪರ್ಸೆಂಟ್ ಹಣವನ್ನು ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಳಸಬೇಕೆಂದುಕೊಂಡಿದ್ದಾರೆ. ಆದರೆ, ಈ ಬಾರಿ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ

ಹುಬ್ಬಳ್ಳಿ: ಬಿಜೆಪಿಯವರು 40 ಪರ್ಸೆಂಟ್ ಭ್ರಷ್ಟ ಹಣದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸಬಹುದು ಎಂದು ಕೊಂಡಿದ್ದಾರೆ. ಆದರೆ ಬಿಜೆಪಿಯಿಂದ ಕರ್ನಾಟಕ ಸರ್ಕಾರ ಅಭದ್ರಗೊಳಿಸುವುದು ಅಸಾಧ್ಯದ ಮಾತು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಿಎಂ ದಿಗ್ವಿಜಯ ಸಿಂಗ್ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಬಿಜೆಪಿ ದೇಶದ ಸಂವಿಧಾನವನ್ನು ಬುಡಮೇಲು ಮಾಡಲು ಹೊರಟಿದೆ. ಅಹಂಕಾರದಿಂದ ಅವರು ಮಾತನಾಡುತ್ತಿದ್ದಾರೆ. ತಮ್ಮ ಬಳಿ ಜಮಾ ಇರುವ 40 ಪರ್ಸೆಂಟ್ ಹಣವನ್ನು ಕಾಂಗ್ರೆಸ್ …

Read More »

ವ್ಹೀಲಿಂಗ್ ವೇಳೆ ಮತ್ತೊಂದು ಬೈಕ್​ಗೆ ಡಿಕ್ಕಿ.. ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆಗೆ ರಜೆ ಸಿಕ್ಕಿರುವ ಹಿನ್ನೆಲೆ ನಂದಿಬೆಟ್ಟದ ರಸ್ತೆಯಲ್ಲಿ ವ್ಹೀಲಿಂಗ್ ಮಾಡಲು ಹೋದ ಯುವಕನೊಬ್ಬ ಮತ್ತೊಂದು ಬೈಕ್​ಗೆ ಡಿಕ್ಕಿ ಹೊಡೆದು, ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ಸಮೀಪ ಇಂದು ನಡೆದಿದೆ. ಬೆಂಗಳೂರು ಮೂಲದ ಆದಿಲ್ (25) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಇಂದು ಸ್ವಾತಂತ್ರ್ಯ ದಿನಾಚರಣೆಯಾಗಿದ್ದು, ಬೆಂಗಳೂರಿನಿಂದ ಆಗಮಿಸುವ ಕೆಲವರು ಏರ್ಪೋರ್ಟ್​ ರಸ್ತೆ ಕಡೆ ಬಂದು ವ್ಹೀಲಿಂಗ್ ಮಾಡ್ತಾರೆ. ಹೀಗೆ ದೇವನಹಳ್ಳಿಯಿಂದ ನಂದಿಬೆಟ್ಟದ …

Read More »

ಶಿಕಾರಿಪುರದ ನಳಿನಕೊಪ್ಪ ಶಾಲೆಯಲ್ಲಿ‌ ನಡೆಯದ ಸ್ವಾತಂತ್ರ್ಯ ದಿನಾಚರಣೆ: ಶಾಲೆಯ ಮುಖ್ಯ ಶಿಕ್ಷಕಿ ಅಮಾನತು

ಶಿವಮೊಗ್ಗ: ಇಂದು ದೇಶಾದ್ಯಂತ ಎಲ್ಲೆಡೆ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಕಳೆಗಟ್ಟಿದೆ. ಸರ್ಕಾರಿ ಶಾಲೆ, ಕಾಲೇಜು, ಕಚೇರಿಗಳಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಲಾಗಿದೆ. ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದಾರೆ. ಆದ್ರೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಎಳನೀರು‌ಕೊಪ್ಪ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸದೆ ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಲ್ಲಾ ಸರ್ಕಾರಿ‌ ಶಾಲೆ, ಕಾಲೇಜು ಸೇರಿದಂತೆ ಸರ್ಕಾರಿ ಇಲಾಖೆಯ ಕಚೇರಿಯಲ್ಲಿ ಕಡ್ಡಾಯವಾಗಿ …

Read More »

ಬಸನಗೌಡ ಯತ್ನಾಳ್ ಅವರ ಮನಸ್ಥಿತಿ ಸರಿ ಇಲ್ಲ; ಸಚಿವ ಮಂಕಾಳು ವೈದ್ಯ ತಿರುಗೇಟು

ಕಾರವಾರ (ಉತ್ತರ ಕನ್ನಡ) : 7-8 ತಿಂಗಳಲ್ಲಿ ಸರ್ಕಾರ ಬೀಳಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಭವಿಷ್ಯ ಹೇಳಿದ್ದರು. ಅವರು ಏನಾದರೂ ಹೇಳಬೇಕೆಂದು ಹೇಳಿಕೆ ನೀಡುತ್ತಾರೆ. ಅವರ ಮನಸ್ಥಿತಿ ಸರಿ ಇಲ್ಲ ಎಂದು ಮೀನುಗಾರಿಕೆ ಇಲಾಖೆ ಸಚಿವ ಮಂಕಾಳು ವೈದ್ಯ ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರವೇ ಬೀಳುವುದಾಗಿ 5 ವರ್ಷದ ಹಿಂದೆ ಹೇಳಿದ್ದರು. ಆದರೆ ಸರ್ಕಾರವನ್ನು ಬೀಳಿಸಲು ಸಾಧ್ಯವಾಗಿಲ್ಲ. ಸಿಎಂ ಕುರ್ಚಿಗೆ ಒಂದೂವರೆ ಸಾವಿರ ಕೋಟಿ ನೀಡಬೇಕು ಎಂದಿದ್ದರು. ಅವರು …

Read More »

ಚನ್ನಮ್ಮ ಮೂರ್ತಿ ತೆರವಿಗೆ ಆಕ್ರೋಶ

ಬೆಳಗಾವಿ : ರಸ್ತೆ ಪಕ್ಕ ಪ್ರತಿಷ್ಠಾಪಿಸಿದ್ದ ವೀರರಾಣಿ ಚನ್ನಮ್ಮಾಜಿ ಮೂರ್ತಿಯನ್ನು ತೆರವುಗೊಳಿಸಿ, ಹೋರಾಟಗಾರರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಧಾಮಣೆ ಗ್ರಾ.ಪಂ ವ್ಯಾಪ್ತಿಯ ಕುರುಬರಹಟ್ಟಿ ಗ್ರಾಮದಲ್ಲಿ ಇಂದು ನಡೆದಿದೆ.‌ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ವೀರರಾಣಿ ಚನ್ನಮ್ಮನ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ಗ್ರಾಮಸ್ಥರು ಮುಂದಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಆಗಮಿಸಿದ ಪೊಲೀಸರು, ಸಮಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೇ ಯಾವುದೇ ಕಾರಣಕ್ಕೂ ಮೂರ್ತಿ …

Read More »

ಇತಿಹಾಸ ಸಾರುವ ಬೆಳಗಾವಿ ವೀರಸೌಧ; ಹಿರಿಯ ಸ್ವಾತಂತ್ರ್ಯ ಹೋರಾಟಗಾರ ರಾಜೇಂದ್ರ ಕಲಘಟಗಿ ಹೇಳಿದ್ದೇನು?

ಬೆಳಗಾವಿ : ಭಾರತ ದೇಶ ತನ್ನ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರದಲ್ಲಿದೆ. ಇನ್ನೊಂದೆಡೆ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿದ್ದ ಬೆಳಗಾವಿ ವೀರಸೌಧದಲ್ಲಿ ಪ್ರತಿ ವರ್ಷ ಆಗಸ್ಟ್ 15ರಂದು ಬೆಳಿಗ್ಗೆ 7 ಗಂಟೆಗೆ ಸ್ವಾತಂತ್ರ್ಯೋತ್ಸವ ಆಚರಿಸಲಾಗುತ್ತದೆ. ಅಲ್ಲದೇ ಬೆಳಗಾವಿಗೆ ಬರುವ ಎಲ್ಲ ಮಹನೀಯರು ಈ ಸೌಧಕ್ಕೆ ಭೇಟಿ ನೀಡುತ್ತಾರೆ. ಏಕೆಂದರೇ ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಇತಿಹಾಸ ತನ್ನದೇಯಾದ ಛಾಪು ಮೂಡಿಸಿದೆ. ಹೌದು, ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಮಣ್ಣಿಗೆ ವಿಶೇಷ ನಂಟಿದ್ದು, ಹಲವು …

Read More »

ತಾಯಿಯೊಬ್ಬಳು ತನ್ನ ಮಗನನ್ನೇ ಕೊಂದ ಘಟನೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ನಡೆದಿತ್ತು. ಇದೀಗ ಅಪರಾಧಿಗೆ ಚಿಕ್ಕೋಡಿ ಕೋರ್ಟ್‌ ದಂಡಸಹಿತ ಜೈಲುಶಿಕ್ಷೆ ವಿಧಿಸಿದೆ.

ಚಿಕ್ಕೋಡಿ (ಬೆಳಗಾವಿ) : ತನ್ನ ಅನೈತಿಕ ಸಂಬಂಧ ಗೊತ್ತಾಯಿತು ಎಂದು ಮಗನನ್ನು ಬಾವಿಗೆ ತಳ್ಳಿ ಕೊಲೆಗೈದ ಮಹಿಳೆಗೆ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 7 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಸುಧಾ ಸುರೇಶ ಕರಿಗಾರ (31) ಶಿಕ್ಷೆಗೊಳಗಾದವರು. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (22/10/2019ರಲ್ಲಿ) ನಡೆದ ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ …

Read More »

ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ.: ಸತೀಶ ಜಾರಕಿಹೊಳಿ

ಬೆಳಗಾವಿ: “ಬೆಳಗಾವಿ ಜಿಲ್ಲಾ ವಿಭಜನೆಗೆ ನಮ್ಮ ಒತ್ತಡ ಇದ್ದೇ ಇದೆ. ಅದಕ್ಕಿಂತಲೂ ಮೊದಲು 8 ಲಕ್ಷ ಮತದಾರರನ್ನು ಹೊಂದಿರುವ ಬೆಳಗಾವಿ ತಾಲೂಕು ರಚನೆಯಾಗಬೇಕಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಶೀಘ್ರವೇ ಹೊಸ ಬೆಳಗಾವಿ ತಾಲೂಕು ರಚನೆ ಆಗಬೇಕು ಎಂಬುದು ನಮ್ಮ ಬೇಡಿಕೆ. ಬೆಳಗಾವಿ ಉತ್ತರ, ದಕ್ಷಿಣ ಮತ್ತು ಗ್ರಾಮೀಣ ಯಾವುದಾದರೂ ಒಂದು …

Read More »