ಬೆಂಗಳೂರು: ವಯೋವೃದ್ಧರನ್ನು ಗುರಿಯಾಗಿಸಿ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಹಣ ಸುಲಿಗೆ ಮಾಡುತ್ತಿದ್ದ ದಂಪತಿ ಸೇರಿ ಮೂವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ನಿವೃತ್ತ ಸರ್ಕಾರಿ ನೌಕರನಾಗಿರುವ ಸುಧೀಂದ್ರ ಎಂಬುವರು ನೀಡಿದ ದೂರಿನ ಮೇರೆಗೆ ಅಣ್ಣಮ್ಮ, ಲೋಕೇಶ್ ಹಾಗೂ ಸ್ನೇಹ ಎಂಬುವರನ್ನ ಬಂಧಿಸಲಾಗಿದೆ. ಬಂಧಿತರೆಲ್ಲರೂ ಮೂಲತಃ ಕೊಡಗಿನವರಾಗಿದ್ದು, ಬೊಮ್ಮನಹಳ್ಳಿಯಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಪ್ರಮುಖ ಆರೋಪಿ ಅಣ್ಣಮ್ಮ ತನ್ನ ಮಗುವಿಗೆ ಹುಷಾರಿಲ್ಲ, ಹಣಕಾಸಿನ ನೆರವು ನೀಡುವಂತೆ ಪರಿಚಯಸ್ಥರಾಗಿದ್ದ ಸುಧೀಂದ್ರ …
Read More »Daily Archives: ಆಗಷ್ಟ್ 16, 2023
ನ.2ರಿಂದ 15ರವರೆಗೆ ಹಾಸನಂಬಾ ಜಾತ್ರಾ ಮಹೋತ್ಸವ: ಡಿಸಿ ಸಿ.ಸತ್ಯಭಾಮ
ಹಾಸನ: ”ಹಾಸನದ ಅಧಿ ದೇವತೆ ಹಾಸನಾಂಬೆ ದೇವಿ ದರ್ಶನವು ಈ ವರ್ಷ ನವೆಂಬರ್ 2 ರಿಂದ 15ರ ವರೆಗೆ ತೆರೆಯಲಾಗುವುದು” ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾಹಿತಿ ನೀಡಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ”ಈ ಬಾರಿ ನ. 2 ರಿಂದ 15ನೇ ದಿನಾಂಕದವರೆಗೆ ಅಂದರೆ, 14 ದಿನಗಳ ಕಾಲ ಹಾಸನಾಂಬೆ ದೇವಿಯ ದರ್ಶನಕ್ಕಾಗಿ ಬಾಗಿಲು ತೆರೆಯಲಾಗುವುದು. ಅದರಲ್ಲಿ ಮೊದಲ ದಿವಸ ಮತ್ತು ಕೊನೆಯ ದಿನ ಸಾರ್ವಜನಿಕರ ದರ್ಶನಕ್ಕೆ …
Read More »ರಾಜ್ಯಾದ್ಯಂತ ವಿದ್ಯುತ್ ಲೋಡ್ ಶೆಡ್ಡಿಂಗ್; ಸಚಿವ ಕೆ ಜೆ ಜಾರ್ಜ್ ಹೇಳಿದ್ದೇನು?
ಚಿಕ್ಕಮಗಳೂರು : ಸಾಮಾನ್ಯವಾಗಿ ಮಳೆಗಾಲದಲ್ಲಿ ಥರ್ಮಲ್ ಪ್ಲಾಂಟ್ಗಳನ್ನು ಕಡಿಮೆ ಸರ್ವೀಸ್ ಮಾಡುತ್ತಿದ್ದೆವು. ಆದರೇ ಈ ಬಾರಿ ಮಳೆ ಕಡಿಮೆಯಾದ ಕಾರಣ ಥರ್ಮಲ್ ಪವರ್ ಪ್ಲಾಂಟ್ ಜನರೇಟರ್ ಮಾಡೋದು ಆರಂಭವಾಗಿದೆ. ಹೀಗಾಗಿ ಥರ್ಮಲ್ ಪ್ಲಾಂಟ್ ಜಾಸ್ತಿ ಮಾಡಲು ಆದೇಶ ಮಾಡಿದ್ದು, ವಿದ್ಯುತ್ ಲೋಡ್ ಶೆಡ್ಡಿಂಗ್ ಆಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಹೇಳಿದರು. ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಕುರಿತು ಇಂಧನ ಸಚಿವ ಜಾರ್ಜ್ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ …
Read More »ಆಕಸ್ಮಿಕವಾಗಿ ಸ್ವಚ್ಛತಾ ಕಾರ್ಮಿಕನಿಗೆ ಕಾರು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ನಟಿ ರಚಿತಾ ರಾಮ್ ಕ್ಷಮೆ ಯಾಚಿಸಿದ್ದಾರೆ
ಬೆಂಗಳೂರು: ಕಾರು ಚಾಲಕನಿಂದಾದ ಆಕಸ್ಮಿಕ ತಪ್ಪಿನಿಂದ ನಿನ್ನೆ (ಸೋಮವಾರ) ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಅವರು ಮುಜುಗರಕ್ಕೆ ಒಳಗಾಗಿದ್ದರು. ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಹೋಗುವ ಸಂದರ್ಭದಲ್ಲಿ ರಚಿತಾ ರಾಮ್ ಅವರಿದ್ದ ಕಾರು ಸ್ವಚ್ಛತಾ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದಿತ್ತು. ಈ ಸಂದರ್ಭದಲ್ಲಿ ನಟಿ ಕಾರ್ಮಿಕನ ಬಳಿ ಕ್ಷಮೆಯಾಚಿಸದೇ ಸ್ಥಳದಿಂದ ಹೊರಟು ಹೋಗಿದ್ದರು ಎಂದು ಆರೋಪಿಸಲಾಗಿತ್ತು. ಸಾಮಾಜಿಕ ಜಾಲತಾಣ ಸೇರಿದಂತೆ ಕಾರ್ಮಿಕರ ಒಕ್ಕೂಟಗಳಿಂದಲೂ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ …
Read More »ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ತೆರೆ; ₹4 ಕೋಟಿಗೂ ಹೆಚ್ಚು ಹಣ ಸಂಗ್ರಹ
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾದ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿ ತೆರೆಬಿದ್ದಿದ್ದು, ಕೊನೆಯ ದಿನವಾದ ಇಂದು (ಮಂಗಳವಾರ) ಪ್ರದರ್ಶನ ವೀಕ್ಷಿಸಲು ಸಸ್ಯಕಾಶಿಗೆ ಜನಸಾಗರವೇ ಹರಿದುಬಂದಿತ್ತು. ಆಗಸ್ಟ್ 4ರಿಂದ 15ರವರೆಗೆ ಒಟ್ಟಾರೆ 5 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದು, 4 ಕೋಟಿ ರೂ.ಗೂ ಅಧಿಕ ಹಣ ಸಂಗ್ರಹವಾಗುವ ಮೂಲಕ ದಾಖಲೆ ನಿರ್ಮಾಣವಾಗಿದೆ. ಲಾಲ್ ಬಾಗ್ ಫಲಪುಷ್ಪ ಪ್ರದರ್ಶನಸ್ವಾತಂತ್ರ್ಯೋತ್ಸವದ ದಿನವಾದ ಇಂದು ಜನಜಂಗುಳಿ ನೆರೆದಿತ್ತು. ಫ್ಲವರ್ ಶೋಗೆ 2.45 ಲಕ್ಷಕ್ಕೂ ಹೆಚ್ಚು …
Read More »ರಾಷ್ಟ್ರ ರಾಜಧಾನಿ ನವದೆಹಲಿ ತಟದಲ್ಲಿ ಹರಿಯುತ್ತಿರುವ ಯಮುನಾ ನದಿ
ನವದೆಹಲಿ: ಉತ್ತರ ಭಾರತ ಈ ಬಾರಿ ಮಹಾ ಮಳೆಗೆ ತತ್ತರಿಸಿ ಹೋಗಿದೆ. ಹಿಮಾಚಲಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಂತೂ ಗುಡ್ಡ ಕುಸಿತದಿಂದ ಕಂಗಾಲಾಗಿವೆ. ಮೇಘಸ್ಫೋಟಗಳಿಗೆ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ರಾಷ್ಟ್ರ ರಾಜಧಾನಿಯಲ್ಲೂ ಆತಂಕ ಶುರುವಾಗಿದೆ. ಕಾರಣ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಯಮುನಾ ನದಿಯ ನೀರಿನ ಮಟ್ಟವು ಮತ್ತೊಮ್ಮೆ ಅಪಾಯದ ಮಟ್ಟವನ್ನು ಮೀರಿದೆ. ಮಂಗಳವಾರ ದೆಹಲಿಯ ಹಳೆಯ ರೈಲ್ವೆ ಸೇತುವೆ ಬಳಿ ನೀರಿನಮಟ್ಟ 205.39 …
Read More »ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಪುಷ್ಪ ನಮನ
ನವದೆಹಲಿ : ಮಾಜಿ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ 5ನೇ ವರ್ಷದ ಪುಣ್ಯತಿಥಿ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು. ಜೊತೆಗೆ,” ವಾಜಪೇಯಿ ನಾಯಕತ್ವದಿಂದ ಭಾರತಕ್ಕೆ ಹೆಚ್ಚಿನ ಲಾಭವಾಗಿದೆ, ಅವರ ನಾಯಕತ್ವದಲ್ಲಿ ದೇಶವು ಹಿಂದೆಂದಿಗಿಂತಲೂ ಹೆಚ್ಚಿನ ಪ್ರಗತಿ ಸಾಧಿಸಿತ್ತು” ಎಂದು ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಈ ಕುರಿತು ಟ್ವೀಟ್ …
Read More »