ನವದೆಹಲಿ: ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ 79ನೇ ಜನ್ಮದಿನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಇಂದು ಬೆಳಗ್ಗೆ ದೆಹಲಿಯ ‘ವೀರ ಭೂಮಿ’ಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಮಗಳು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪತಿ ರಾಬರ್ಟ್ ವಾದ್ರಾ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಮಾಜಿ ಪ್ರಧಾನಿಯ ಸಮಾಧಿಗೆ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ವೀರಭೂಮಿಯ ಹೊರಗೆ …
Read More »Daily Archives: ಆಗಷ್ಟ್ 20, 2023
ಯೋಗಿ ಆದಿತ್ಯನಾಥ್ ಪಾದ ಸ್ಪರ್ಶಿಸಿ ಸಮಸ್ಕರಿಸಿದ ‘ಜೈಲರ್’ ಸ್ಟಾರ್ ರಜನಿಕಾಂತ್
ರಜನಿಕಾಂತ್ ಅವರು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಶನಿವಾರ ಭೇಟಿಯಾದರು. ಕಾಲಿವುಡ್ ಸೂಪರ್ ಸ್ಟಾರ್ ‘ತಲೈವಾ’ ರಜನಿಕಾಂತ್ ಅವರ ಜೈಲರ್ ಸಿನಿಮಾ ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ಸು ಕಂಡಿದೆ. ನಿನ್ನೆ (ಶನಿವಾರ) ರಜನಿಕಾಂತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಲಕ್ನೋದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಸಿಎಂ ಪಾದ ಸ್ಪರ್ಶಿಸಿದ ರಜನಿಕಾಂತ್: ಶುಕ್ರವಾರ ಲಕ್ನೋದಲ್ಲಿ ಜೈಲರ್ ಸ್ಪೆಷಲ್ ಸ್ಕ್ರೀನಿಂಗ್ ಆಯೋಜಿಸಲಾಗಿತ್ತು. ಈವೆಂಟ್ನಲ್ಲಿ ಡಿಸಿಎಂ …
Read More »ಒಂದೆಡೆ ಮಳೆ ಆಗುತ್ತಿಲ್ಲ. ಮತ್ತೊಂದೆಡೆ, ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲ ಕಣ್ಣಾಮುಚ್ಚಾಲೆ ಆಟ ಅನ್ನದಾತನ ನಿದ್ದೆಗೆಡಿಸಿದೆ.
ಬೆಳಗಾವಿ: ಒಂದೆಡೆ ಮಳೆ ಆಗುತ್ತಿಲ್ಲ. ಮತ್ತೊಂದೆಡೆ, ಸಮರ್ಪಕ ವಿದ್ಯುತ್ ಪೂರೈಕೆ ಇಲ್ಲ. ಇದರಿಂದಾಗಿ ಸಾಲ ಮಾಡಿ ಭತ್ತ ಬೆಳೆದ ರೈತರನ್ನು ಬೆಳೆಹಾನಿ ಭೀತಿ ಕಾಡುತ್ತಿದೆ. ಮಳೆ ಸುರಿಸದ ಮಳೆರಾಯನ ವಿರುದ್ಧ ಕೋಪಗೊಂಡಿರುವ ರೈತರು ಲೋಡ್ ಶೆಡ್ಡಿಂಗ್ ಮಾಡುತ್ತಿರುವ ಸರ್ಕಾರದ ವಿರುದ್ಧವೂ ಹಿಡಿಶಾಪ ಹಾಕುತ್ತಿದ್ದಾರೆ. ನೀರಿಲ್ಲದೇ ಭತ್ತದ ಗದ್ದೆ ಬಿರುಕು ಬಿಡುತ್ತಿದೆ. ಒಣಗುವ ಸ್ಥಿತಿ ತಲುಪಿವೆ ನಾಟಿ ಮಾಡಿರುವ ಭತ್ತದ ಸಸಿಗಳು. ಮಳೆಗಾಗಿ ಆಕಾಶದತ್ತ ಮುಖಮಾಡಿ ಅನ್ನದಾತ ಕುಳಿತಿದ್ದಾನೆ. ಇಂಥ ದೃಶ್ಯಗಳು …
Read More »ಚಂದ್ರಯಾನ-3: ಲ್ಯಾಂಡರ್‌ನ ವೇಗ ತಗ್ಗಿಸುವ ಅಂತಿಮ ಹಂತದ ಪ್ರಕ್ರಿಯೆ ಯಶಸ್ವಿ
Chandrayaan-3: ‘ಚಂದ್ರಯಾನ-3’ ಯೋಜನೆಯ ಲ್ಯಾಂಡರ್ ಘಟಕವನ್ನು ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ (South Pole) ಇಸ್ರೋ ಸಾಫ್ಟ್ ಲ್ಯಾಂಡಿಂಗ್ ಮಾಡಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ, ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ. ಈ ನಿಟ್ಟಿನಲ್ಲಿ ಡೀಬೂಸ್ಟ್ (ಲ್ಯಾಂಡರ್‌ನ ವೇಗ ತಗ್ಗಿಸುವುದು) ಪ್ರಕ್ರಿಯೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸುತ್ತಿದೆ. ಬೆಂಗಳೂರು/ನವದೆಹಲಿ : ಚಂದ್ರಯಾನ-3 ಗಗನನೌಕೆಯು ಭೂಮಿಯ ಏಕೈಕ ಉಪಗ್ರಹ ಚಂದ್ರನಿಗೆ ಮತ್ತಷ್ಟು ಹತ್ತಿರವಾಗುತ್ತಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಇಂದು …
Read More »ಈರುಳ್ಳಿ ರಫ್ತು ಮೇಲೆ ಶೇ 40ರಷ್ಟು ಸುಂಕ ವಿಧಿಸಿದ ಕೇಂದ್ರ ಸರ್ಕಾರ
ನವದೆಹಲಿ : ದೇಶಿ ಮಾರುಕಟ್ಟೆಯಲ್ಲಿ ಈರುಳ್ಳಿ ಪೂರೈಕೆ ಅಭಾವ ತಗ್ಗಿಸಲು ಕೇಂದ್ರ ಸರ್ಕಾರವು ವಿದೇಶಗಳಿಗೆ ರಫ್ತಾಗುವ ಈರುಳ್ಳಿಗೆ ಶೇ.40ರಷ್ಟು ಸುಂಕ ವಿಧಿಸಿದೆ. ರಫ್ತು ಸುಂಕವನ್ನು ಡಿಸೆಂಬರ್ 31ರ ವರೆಗೆ ವಿಧಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವಾಲಯ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರದ ಅಂಕಿ-ಅಂಶಗಳ ಪ್ರಕಾರ, ನವದೆಹಲಿಯಲ್ಲಿ ಶನಿವಾರ ಈರುಳ್ಳಿ ಚಿಲ್ಲರೆ ಮಾರಾಟ ದರ ಕೆ.ಜಿಗೆ 37 ರೂ ಇತ್ತು. ಈ ದರವು ಸೆಪ್ಟೆಂಬರ್ದಲ್ಲಿ ಏರಿಕೆ ಆಗುವ ಸಾಧ್ಯತೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ …
Read More »ಹಿಂದಿ ಪ್ರಚಾರ ಸಭಾದಲ್ಲಿ ಅನುದಾನ ದುರ್ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಆರಂಭಿಸಿದೆ.
ಧಾರವಾಡ: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಕರ್ನಾಟಕ ಪ್ರಾಂತದ ಕಚೇರಿಗಳಲ್ಲಿ ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ಶುರು ಮಾಡಿದೆ. ಕಳೆದೊಂದು ವಾರದಿಂದ ಬೀಡುಬಿಟ್ಟಿರುವ ತನಿಖಾಧಿಕಾರಿಗಳು ಧಾರವಾಡದ ಹಿಂದಿ ಪ್ರಚಾರ ಸಭಾದ 50ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಕೇಂದ್ರ ಸರ್ಕಾರದ 22 ಕೋಟಿ ರೂ.ಗೂ ಹೆಚ್ಚು ಹಣ ದುರ್ಬಳಕೆ ಮಾಡಿರುವ ಆರೋಪವನ್ನು ಪ್ರಚಾರ ಸಭಾ ಎದುರಿಸುತ್ತಿದೆ. ಪ್ರಕರಣವನ್ನು ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ವಹಿಸಿತ್ತು. ಸಿಬಿಐ ತಂಡವು ಸಭಾದ …
Read More »ಉತ್ತರ ಕನ್ನಡದಲ್ಲಿ ಗೋವಾ ಸರ್ಕಾರದ ‘ಮಿಷನ್ ರೇಬೀಸ್’ ಯೋಜನೆ ಅನುಷ್ಠಾನ
ಕಾರವಾರ (ಉತ್ತರಕನ್ನಡ) : ಗೋವಾ-ಕರ್ನಾಟಕ ಗಡಿ ವಿವಾದ ಹಲವು ವರ್ಷಗಳಿಂದ ನಡೆಯುತ್ತಿದೆ. ಇದರ ನಡುವೆ ಗಡಿ ಹಂಚಿಕೊಂಡಿರುವ ಕರ್ನಾಟಕದ ತಾಲೂಕುಗಳಿಗೆ ಅಲ್ಲಿನ ಸರ್ಕಾರ ತನ್ನ ಯೊಜನೆಯೊಂದನ್ನು ವಿಸ್ತರಿಸಿದೆ. ಗಡಿ ತಾಲೂಕುಗಳಲ್ಲಿ ಮಿಷನ್ ರೇಬೀಸ್ ಅನುಷ್ಠಾನ ಮಾಡುತ್ತಿದೆ. ರಾಜ್ಯದಲ್ಲಿ ಬೀದಿ ನಾಯಿಗಳ ಉಪಟಳದಿಂದ ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಬೀದಿ ನಾಯಿಗಳನ್ನು ಹಿಡಿದು ಸಂತಾನಹರಣ ಚಿಕಿತ್ಸೆಯೊಂದಿಗೆ ರೇಬೀಸ್ ಚುಚ್ಚುಮದ್ದು ನೀಡುವಂತೆ ಅನೇಕ ವರ್ಷಗಳಿಂದ ಜನರು ಆಗ್ರಹಿಸುತ್ತಿದ್ದಾರೆ. ಕೆಲವು ಜಿಲ್ಲೆಗಳಲ್ಲಷ್ಟೇ ಕರ್ನಾಟಕ ಸರ್ಕಾರ ಈ …
Read More »