Breaking News

Daily Archives: ಆಗಷ್ಟ್ 23, 2023

ದಕ್ಷಿಣ ಆಫ್ರಿಕಾದಿಂದ ‘Chandrayaan 3’ ಲ್ಯಾಂಡಿಂಗ್ ವರ್ಚುಯಲ್ ಆಗಿ ವೀಕ್ಷಿಸಲಿರುವ ಪ್ರಧಾನಿ

ಜೋಹಾನ್ಸ್‌ಬರ್ಗ್(ದಕ್ಷಿಣ ಆಫ್ರಿಕಾ): 15ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿ ಸೌತ್ ಆಫ್ರಿಕಾದ ಜೋಹಾನ್ಸ್‌ಬರ್ಗ್ ತಲುಪಿದ್ದಾರೆ. ಹೀಗಾಗಿ ಸೌತ್ ಆಫ್ರಿಕಾದಿಂದಲೇ ಮೋದಿ ವರ್ಚುಯಲ್ ಆಗಿ ಐತಿಹಾಸಿಕ ವಿಕ್ರಮ್‌ ಲ್ಯಾಂಡರ್ ಲ್ಯಾಂಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಚಂದ್ರಯಾನ 3 ಚಂದ್ರನ ಅಜ್ಞಾತ ದಕ್ಷಿಣ ಧ್ರುವದಲ್ಲಿ ಇಳಿಯುವ ಮೂಲಕ ಇತಿಹಾಸ ಸೃಷ್ಟಿಸಲು ಸಿದ್ಧವಾಗಿದೆ ಎಂದು ಹೇಳಿದೆ. ದೇಶಾದ್ಯಂತ ಪೂಜೆ ಪ್ರಾರ್ಥನೆ: ಇಂದು ಸಂಜೆ 6.04ಕ್ಕೆ ಸಾಫ್ಟ್ ಲ್ಯಾಂಡಿಂಗ್ ಸಮಯ ನಿಗದಿಪಡಿಸಲಾಗಿದೆ. …

Read More »

ಕಾವೇರಿ ನದಿ ನೀರು ಹಂಚಿಕೆ ವಿವಾದ: ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಆರಂಭ

ಬೆಂಗಳೂರು: ಕಾವೇರಿ ನದಿ ನೀರು ವಿವಾದ ಕುರಿತು ಚರ್ಚಿಸಲು ಇಂದು(ಬುಧವಾರ) ಬೆಂಗಳೂರಿನ ವಿಧಾನಸೌಧದಲ್ಲಿ ಕರೆದಿದ್ದ ಸರ್ವಪಕ್ಷ ಸಭೆ ಆರಂಭವಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ, ಎಚ್‌ಡಿ ಕುಮಾರಸ್ವಾಮಿ, ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭೆ ಸಂಸದೆ ಸುಮಲತಾ ಅಂಬರೀಶ್ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದಾರೆ.   ಮಳೆ ಕೊರತೆ ಇದ್ದರೂ ತನಗೆ ಬಾಕಿ ಇರುವ ನೀರನ್ನು ಬಿಡಬೇಕು ಎಂದು ಕೋರಿ ತಮಿಳುನಾಡು ಸರ್ಕಾರ …

Read More »