ಗಂಗಾವತಿ (ಕೊಪ್ಪಳ) : ಸರಿಯಾದ ಮಳೆ ಇಲ್ಲದಿರುವ ಕಾರಣಕ್ಕೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಕಾರಟಗಿಯಲ್ಲಿ ರೈತರು ನಡೆಸುತ್ತಿರುವ ಧರಣಿ ಸಂದರ್ಭದಲ್ಲಿ ಇಬ್ಬರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ ಘಟನೆ ನಡೆದಿದೆ. ಆರೋಗ್ಯದಲ್ಲಿ ದಿಢೀರ್ ಏರುಪೇರಿನಿಂದಾಗಿ ಆಸ್ಪತ್ರೆ ಪಾಲಾದ ರೈತರನ್ನು ಕಾರಟಗಿಯ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ನಲೀನ್ ಅತುಲ್ ಕುಮಾರ್ ಹಾಗೂ ಜಿಲ್ಲಾ ಎಸ್ಪಿ ಯಶೋಧಾ …
Read More »Daily Archives: ಆಗಷ್ಟ್ 27, 2023
70 ವರ್ಷದ ಮಾರುತಿ ಜ್ಯೋತಿಬಾ ಕುಂಬಾರ ತಮ್ಮ ಇಳಿ ವಯಸ್ಸಿನಲ್ಲೂ ಶ್ರದ್ಧೆಯಿಂದ ಮೂರ್ತಿ ತಯಾರಿಸುವ ಕಾಯಕದಲ್ಲಿ ತೊಡಗಿದ್ದಾರೆ.
ಬೆಳಗಾವಿ: ಗಣೇಶೋತ್ಸವಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಇವೆ. ಹೀಗಾಗಿ ಗಣೇಶ ಮೂರ್ತಿ ತಯಾರಕರು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ಎಲ್ಲೆಡೆ ಪಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳೇ ರಾರಾಜಿಸುತ್ತಿವೆ. ಆದರೆ ಇಲ್ಲೊಂದು ಕುಟುಂಬ ಆರು ದಶಕಗಳಿಂದ ಮಣ್ಣಿನ ಗಣಪನಿಗೆ ಪ್ರಾಶಸ್ತ್ಯವನ್ನು ಕೊಟ್ಟಿದ್ದು, ನಮಗೆ ಎಷ್ಟೇ ಶ್ರಮವಾದರೂ ಕೂಡ ನಾವು ಮಣ್ಣಿನ ಗಣಪನನ್ನೇ ತಯಾರಿಸುತ್ತೇವೆ ಎನ್ನುತ್ತಿದ್ದಾರೆ. ಹೌದು, ಬೆಳಗಾವಿಯ ಕಪಿಲೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಶ್ರೀ ಗಣೇಶ ಚಿತ್ರಕಲಾದ …
Read More »ಒಂದೇ ಕುಟುಂಬದ ನಾಲ್ವರ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆ
ಮೈಸೂರು: ಒಂದೇ ಕುಟುಂಬದ ನಾಲ್ವರು ಮನೆಯಲ್ಲಿಶವವಾಗಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ನಗರದ ಚಾಮುಂಡಿ ಪುರಂನಲ್ಲಿ ನಡೆದಿದೆ. ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾಲಭಾದೆಯಿಂದಲೇ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ. ಈ ಘಟನೆ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ಚಾಮುಂಡಿಪುರಂನ ಮನೆಯಲ್ಲಿ ಮಹದೇವ ಸ್ವಾಮಿ (48), ಇವರ ಪತ್ನಿ ಅನಿತಾ(35), 17 ಹಾಗೂ 15 ವರ್ಷ ವಯಸ್ಸಿನ ಪುತ್ರಿಯರು ಶವವಾಗಿ ಪತ್ತೆಯಾದವರು. ಮಹದೇವ ಸ್ವಾಮಿ ಶವ ಮನೆಯ ಹಾಲ್ನಲ್ಲಿ …
Read More »ಸಾವಯವ ಕೃಷಿಯ ಮಹತ್ವದ ಬಗ್ಗೆ ರೈತ ಶ್ರೀಶೈಲ ಕೂಗಲಿ ಮಾಹಿತಿ
ಬಾಗಲಕೋಟೆ : ಸರ್ಕಾರಿ ಸೇವೆಯಿಂದ ನಿವೃತ್ತರಾದ ಬಳಿಕ ಆರಾಮಾಗಿ ಜೀವನ ಕಳೆಯಬೇಕು ಎನ್ನುವರು ಹೆಚ್ಚಾಗಿ ಇರುತ್ತಾರೆ. ಆದರೆ ಇಲ್ಲೊಬ್ಬರು ನಿವೃತ್ತರಾದ ಬಳಿಕ ರೈತರಾಗಿ ಮತ್ತೆ ತಮ್ಮ ಹೊಸ ಜೀವನ ಸಾಗಿಸುತ್ತಿದ್ದಾರೆ. ಇಷ್ಟೇ ಅಲ್ಲದೆ ಜಮೀನಿಗೆ ಸಾವಯವ ಕೃಷಿ ಅಳವಡಿಸಿಕೊಳ್ಳಬೇಕು ಎಂದು ರೈತರಿಗೆ ಜಾಗೃತಿ ಮೂಡಿಸುವ ಜೊತೆಗೆ ಉಚಿತ ಸಾವಯವ ಗೊಬ್ಬರ ವಿತರಣೆ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಶ್ರೀಶೈಲ ಕೂಗಲಿ ಎಂಬ ಇವರು ಮೊದಲು ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದಾರೆ. 17 ವರ್ಷ ಸೇನೆಯಲ್ಲಿ …
Read More »ರಾಜಕೀಯ ಸೇಡು ತೀರಿಸಿಕೊಳ್ಳುವ ಹುನ್ನಾರ: ವಿಚಾರಣಾ ಆಯೋಗ ರಚನೆಗೆ ಬೊಮ್ಮಾಯಿ ಕಿಡಿ
ಬೆಂಗಳೂರು : ನಮ್ಮ ಕಾಲದ ಆರೋಪಗಳನ್ನು ತನಿಖೆ ಮಾಡಿ ಎಂದು ಮುಕ್ತವಾಗಿ ಹೇಳಿದ್ದೇವೆ. ಆದರೆ ಅವರ ಕಾಲದ ಆರೋಪಗಳ ಬಗ್ಗೆಯೂ ತನಿಖೆ ಮಾಡಬೇಕು, ಅದಕ್ಯಾಕೆ ಹಿಂದೇಟು ಹಾಕುತ್ತಿದ್ದಾರೆ? ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ, ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುವ ಹುನ್ನಾರ ಇದರ ಹಿಂದೆ ಇದೆ ಎಂದು ವಿಚಾರಣಾ ಆಯೋಗ ರಚನೆ ಮಾಡಿದ ಸರ್ಕಾರದ ನಡೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚಂದ್ರಯಾನ-3 ಸಕ್ಸಸ್ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ನಾಗಸಂದ್ರದ ಖಾಸಗಿ ಅಪಾರ್ಟ್ಮೆಂಟ್ ನಿವಾಸಿಗಳಿಂದ …
Read More »ಮಣಿಪುರದಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ.. ಮನೆಗಳಿಗೆ ಬೆಂಕಿ, ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತ್ರ ಲೂಟಿ
ಇಂಫಾಲ (ಮಣಿಪುರ): ಈಶಾನ್ಯ ರಾಜ್ಯ ಮಣಿಪುರದಲ್ಲಿ ಭಾನುವಾರ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇಂಫಾಲ ಪೂರ್ವ ಜಿಲ್ಲೆಯಲ್ಲಿ ದುಷ್ಕರ್ಮಿಗಳು ಹೊಸದಾಗಿ ಐದು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ಭದ್ರತಾ ಪಡೆಗಳ ಸಿಬ್ಬಂದಿ ನಡುವೆ ಘರ್ಷಣೆ ಕೂಡ ಭುಗಿಲೆದ್ದಿದೆ. ಮೇ 3ರಿಂದ ಮಣಿಪುರ ರಾಜ್ಯಾದ್ಯಂತ ನಿರಂತರವಾಗಿ ಹಿಂಸಾಚಾರ ನಡೆಯುತ್ತಿದೆ. ಆಗಸ್ಟ್ 29ರಂದು ರಾಜ್ಯ ವಿಧಾನಸಭೆಯ ಅಧಿವೇಶನ ಕರೆಯಲಾಗಿದೆ. ಇದರ ನಡುವೆ ಇಂಫಾಲ ಪೂರ್ವ ಜಿಲ್ಲೆಯ ನ್ಯೂ ಲಂಬುಲೇನ್ ಪ್ರದೇಶದಲ್ಲಿ …
Read More »ಸಾಲಾಬಾಧೆಯಿಂದ ಹಾವೇರಿಯಲ್ಲಿ ಇಬ್ಬರು ರೈತರು ಆತ್ಮಹತ್ಯೆ.
ಹಾವೇರಿ : ಜಿಲ್ಲೆಯಲ್ಲಿ ರವಿವಾರ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿಯಲ್ಲಿ ಗಿರೀಶ್ ಮುರ್ಡೆಪ್ಪನವರ್ ಮೃತಪಟ್ಟಿದ್ದರೆ, ಮತ್ತೊಂದು ಕಡೆ ಬ್ಯಾಡಗಿ ತಾಲೂಕಿನ ಶೀಡೆನೂರು ಗ್ರಾಮದ ನಾಗೇಶಪ್ಪ ಕೊಡಗದ್ದಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಿರೀಶ್ ಬ್ಯಾಂಕ್‌ನಲ್ಲಿ ನಾಲ್ಕು ಲಕ್ಷ ರೂಪಾಯಿ ಸಾಲ ಮತ್ತು ಸೊಸೈಟಿಯಲ್ಲಿ ಎರಡು ಲಕ್ಷ ಮತ್ತು ಕೈಗಡ ಒಂದೂವರೆ ಲಕ್ಷ ಸಾಲ ಮಾಡಿದ್ದ. ತಮ್ಮ ಮನೆಯಲ್ಲಿ ಗಿರೀಶ್ ಸಾವಿಗೆ ಶರಣಾಗಿದ್ದಾರೆ. ಈ ಕುರಿತಂತೆ ಹಲಗೇರಿ …
Read More »ರಾಜೀವ್ ಗಾಂಧಿ ವಿವಿಗೆ ಸೇರಿದ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡುವುದು ಬೇಡ.:H.D.K.
ರಾಮನಗರ : ರೇಷ್ಮೆನಗರಿ ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿಗೆ ಸೇರಿದ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡುವುದು ಬೇಡ. ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ನಾನೇ ಮೆಡಿಕಲ್ ಕಾಲೇಜಿಗೆ 100 ಕೋಟಿ ಹಣ ಕೊಟ್ಟಿದ್ದೆ. ಡಿ ಕೆ ಶಿವಕುಮಾರ್ ಆಗ ವೈದ್ಯಕೀಯ ಸಚಿವರಾಗಿದ್ದರು. ಟೆಂಡರ್ ಕೊಟ್ಟಿದ್ದೂ ಕೂಡಾ ಇನ್ನೂ ಜೀವಂತವಾಗಿದೆ. ಆ ಬಳಿಕ ಬಿಜೆಪಿ ಸರ್ಕಾರ ಬಂದು ಕನಕಪುರಕ್ಕೆ ಕೊಟ್ಟಿದ್ದ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋಯಿತು. ಈಗ ನಿಮ್ಮದೇ ಸರ್ಕಾರ ಇದೆ. ನಾನು …
Read More »ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ
ಧಾರವಾಡ : ಜಿಲ್ಲೆಯಲ್ಲಿ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಎಂಬ ಮಾಹಿತಿಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಜಿಲ್ಲೆಯಲ್ಲಿ ಬಿಜೆಪಿಗರು ಕಾಂಗ್ರೆಸ್ಗೆ ಬರುತ್ತಿದ್ದಾರೆ. ಹಾಗೇ ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಬಿಜೆಪಿಗರು ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ. ಬಿಜೆಪಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡ ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ …
Read More »ಜಪ್ತಿ ಮಾಡಿದ ಡ್ರಗ್ಸ್ ಮಾರಾಟಕ್ಕೆ ಯತ್ನ ಆರೋಪ: ಹೈದರಾಬಾದ್ನಲ್ಲಿ ಎಸ್‌ಐ ಅರೆಸ್ಟ್
ಹೈದರಾಬಾದ್ (ತೆಲಂಗಾಣ): ತೆಲಂಗಾಣ ರಾಜಧಾನಿ ಹೈದರಾಬಾದ್ನಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ವೊಬ್ಬರು ಸಿಕ್ಕಿ ಬಿದ್ದಿದ್ದಾರೆ. ಪೊಲೀಸ್ ದಾಳಿ ವೇಳೆ ವಶಪಡಿಸಿಕೊಂಡ ಡ್ರಗ್ಸ್ ಕದ್ದು ಅದನ್ನೇ ಮಾರಾಟ ಮಾಡಲು ಎಸ್‌ಐ ಯತ್ನಿಸುತ್ತಿದ್ದ. ಆರೋಪಿ ಮನೆಯಲ್ಲಿ ಪತ್ತೆಯಾದ ಸುಮಾರು 1,775 ಗ್ರಾಂ ಎಂಡಿಎಂಎ ಡ್ರಗ್ಸ್ಅನ್ನು ತಮ್ಮ ಬಳಿ ಈ ಎಸ್‌ಐ ಇಟ್ಟುಕೊಂಡಿದ್ದ ಎಂದು ವರದಿಯಾಗಿದೆ. ಸೈಬರಾಬಾದ್ ಪೊಲೀಸ್ ಕಮಿಷನರೇಟ್‌ನ ಸೈಬರ್ ಕ್ರೈಂ ವಿಭಾಗದಲ್ಲಿ (ಸಿಸಿಎಸ್) ಕಾರ್ಯನಿರ್ವಹಿಸುತ್ತಿದ್ದ ಕೆ.ರಾಜೇಂದರ್ ಎಂಬಾತನೇ ಬಂಧಿತ ಎಸ್‌ಐ. ರಾಜೇಂದರ್ …
Read More »