Breaking News

Daily Archives: ಆಗಷ್ಟ್ 27, 2023

40% ಕಮಿಷನ್ ಆರೋಪ ತನಿಖೆಗೆ ಆಯೋಗ ರಚಿಸಿ ಸರ್ಕಾರ ಆದೇಶ

ಬೆಂಗಳೂರು: ಬಿಜೆಪಿ ವಿರುದ್ಧ ಸರ್ಕಾರ ಮತ್ತೊಂದು ತನಿಖಾಸ್ತ್ರ ಬಿಟ್ಟಿದೆ. ಕೋವಿಡ್ ಅಕ್ರಮಗಳ ತ‌ನಿಖೆಗೆ ನಿವೃತ್ತ ನ್ಯಾಯಾಧೀಶ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಮೂರು ತಿಂಗಳೊಳಗೆ ವರದಿ ಕೊಡಲು ಆಯೋಗಕ್ಕೆ ಸೂಚನೆ ನೀಡಿ ಒಳಾಡಳಿತ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಈ ಮೊದಲು ಕೋವಿಡ್ ಕಾಲದ ಅಕ್ರಮಗಳ ಬಗ್ಗೆ‌ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಹಲವು ಆರೋಪಗಳನ್ನು ಮಾಡಿತ್ತು.‌ ಅಂದು ಪ್ರತಿಪಕ್ಷವಾಗಿ ಕಾಂಗ್ರೆಸ್, …

Read More »

ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1 ಗಗನನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ

ತಿರುವನಂತಪುರಂ (ಕೇರಳ) : ಚಂದ್ರಯಾನ-3 ಬಾಹ್ಯಾಕಾಶ ಯೋಜನೆಯ ಲ್ಯಾಂಡರ್ ‘ವಿಕ್ರಮ್’ ಈಗಾಗಲೇ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್​ ಆಗಿದ್ದು, ವೈಜ್ಞಾನಿಕ ಸಂಶೋಧನೆಗಳ ಕೆಲಸ ಪ್ರಾರಂಭಿಸಿದೆ. ಇದರ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳು ತಮ್ಮ ಮುಂದಿನ ಗಮನವನ್ನು ಸೂರ್ಯನತ್ತ ಕೇಂದ್ರೀಕರಿಸಿದ್ದು, ದೇಶದ ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ಉಡಾವಣೆಗೆ ಸಿದ್ಧವಾಗಿದೆ. ಈ ನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) …

Read More »

ಎಸ್‌.ಟಿ.ಸೋಮಶೇಖರ್​ ‘ಘರ್​ ವಾಪಸಿ’ ನಿಶ್ಚಿತ? ಕುತೂಹಲ ಹುಟ್ಟಿಸಿದ ಡಿಕೆಶಿ ಮಾತು!

ಬೆಂಗಳೂರು: ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್​​ಗೆ ಇನ್ನಷ್ಟು ಹತ್ತಿರವಾಗುತ್ತಿದ್ದಾರಾ? ಎಂಬ ಬಲವಾದ ಅನುಮಾನ ಮೂಡಿಸಿದೆ. ಡಿಸಿಎಂ ಮಾತನಾಡುತ್ತಾ, “ನನ್ನದು ಮತ್ತು ಎಸ್.ಟಿ. ಸೋಮಶೇಖರ್ ಅವರದು 35 ವರ್ಷಗಳ ಸ್ನೇಹ. ಅವರನ್ನು ನೀರು, ಗೊಬ್ಬರ ಹಾಕಿ ರಾಜಕೀಯವಾಗಿ ಬೆಳೆಸಿದ್ದೇವೆ, ಹಣ್ಣು ಬಿಟ್ಟಿದೆ. ಅದನ್ನು ಬೇರೆಯವರು ಕಿತ್ಕೊಂಡು ತಿನ್ನೋದಕ್ಕೆ ಬಿಡಬಾರದು ಅನ್ನೋದು ನನ್ನ ಭಾವನೆ” ಎಂದು …

Read More »

ಇಂದು ನಿಷ್ಠೆ ಎನ್ನುವುದು ಯಾವುದೇ ಪಕ್ಷದಲ್ಲೂ ಉಳಿದಿಲ್ಲ.: H.D.K.

ಹಾಸನ: “ಇಂದು ನಿಷ್ಠೆ ಎನ್ನುವುದು ಯಾವುದೇ ಪಕ್ಷದಲ್ಲೂ ಉಳಿದಿಲ್ಲ. ಕೇವಲ ತಕ್ಷಣಕ್ಕೆ ಸಿಗುವ ಅಧಿಕಾರಕ್ಕೆ ಮರುಳಾಗುತ್ತಾರೆ” ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. “1999ರಲ್ಲಿ ಆಪರೇಷನ್​ ಹಸ್ತ ಮಾಡಿದ್ದ ಎಸ್​.ಎಂ.ಕೃಷ್ಣ ನಮ್ಮಿಂದ ಐವರನ್ನು, ಬಿಜೆಪಿಯಿಂದ 8-10 ಜನರನ್ನು ಕರೆದುಕೊಂಡು ಹೋಗಿದ್ದರು. ನಂತರ ಅವರ ಸ್ಥಿತಿ ಎಲ್ಲಿಗೆ ಬಂತು?. ಬಿಜೆಪಿಯವರು ಆಪರೇಷನ್ ಕಮಲ ಮಾಡಿ 40 ಸೀಟ್​ಗೆ ತೃಪ್ತಿಪಟ್ಟರು. 2013-2014ರಲ್ಲಿ ಸಿದ್ದರಾಮಯ್ಯ ಆಪರೇಷನ್ ಆಟವಾಡಿ 2018ರಲ್ಲಿ 78ಕ್ಕೆ ಬಂದು ನಿಂತಿದ್ದರು. ಹೀಗಾಗಿ, ಇತ್ತೀಚೆಗೆ ನಿಷ್ಠೆ ಎಂಬುದು …

Read More »