ಮೈಸೂರು : ಗೋಮಾಳದ ಜಾಗದಲ್ಲಿ ತನಗೂ ಪಾಲು ಬೇಕು ಎಂದು ಜಗಳ ತೆಗೆದು, ಸಹೋದರನೊಬ್ಬ ಜಮೀನಿನಲ್ಲೇ ಅಣ್ಣ, ಅತ್ತಿಗೆಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಟಿ ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿ. ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದ ಸಮೀಪದ ಜೀನುಗುಡ್ಡ ಬಳಿ ಸುಮಾರು 170 ಎಕರೆ ಗೋಮಾಳವಿದೆ. …
Read More »Daily Archives: ಆಗಷ್ಟ್ 30, 2023
ಶ್ರೀರಾಘವೇಂದ್ರಸ್ವಾಮಿಗಳ 352ನೇ ಆರಾಧನ ಮಹೋತ್ಸವಕ್ಕೆ ಶ್ರೀ ಸುಬುಧೇಂದ್ರ ತೀರ್ಥರು ಚಾಲನೆ ನೀಡಿದರು.
ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರಸ್ವಾಮಿಗಳ 352ನೇ ಆರಾಧನೆ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಂಗಳವಾರ ಚಾಲನೆ ನೀಡಿದರು. ಶ್ರೀಮಠದ ಮುಂಭಾಗದಲ್ಲಿ ಗೋ ಪೂಜೆ, ಧಾನ್ಯ ಪೂಜೆ, ಆಶ್ವ, ಒಂಟೆ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಏಳು ದಿನಗಳ ಸಪ್ತ ಮಹೋತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಬೆಳಗ್ಗೆ ರಾಯರ ಮೂಲ ಬೃಂದಾವನಕ್ಕೆ ಅಭಿಷೇಕ ಹಾಗೂ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಂದ ಮೂಲ ರಾಮದೇವರ ಪೂಜೆ ನೆರವೇರಿಸಲಾಯಿತು. …
Read More »ಮನೆಯ ಯಜಮಾನಿಯರ ಖಾತೆಗೆ ಒಂದೇ ಸಮಯಕ್ಕೆ ಬರಲಿದೆ 2000 ರೂಪಾಯಿ
ಬೆಂಗಳೂರು: ಬುಧವಾರ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಯಾಗಲಿದೆ. ಮೈಸೂರಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕೊನೆಗೂ ಹಲವು ದಿನಾಂಕಗಳ ಬಳಿಕ ಬೆಳಗ್ಗೆ ಮೈಸೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಜಾರಿಯಾಗಲಿದೆ. ಸಮಾವೇಶದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ ಸೇರಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು …
Read More »ಮೈಸೂರು ಮಣಿಸಿ ಮಹಾರಾಜ ಟ್ರೋಫಿ ಚಾಂಪಿಯನ್ ಪಟ್ಟ ಅಲಂಕರಿಸಿದ ಹುಬ್ಬಳ್ಳಿ
ಬೆಂಗಳೂರು : ರೋಚಕ ಫೈನಲ್ ಕಾದಾಟದಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು 8 ರನ್‌ಗಳಿಂದ ಸೋಲಿಸಿದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೈಸೂರು ಬೌಲರ್‌ಗಳ ವಿರುದ್ಧ ಬ್ಯಾಟಿಂಗ್ನಲ್ಲಿ ಮೇಲುಗೈ ಸಾಧಿಸಿದ ಮೊಹಮ್ಮದ್ ತಾಹಾ, ಮನೀಶ್ ಪಾಂಡೆ ಹಾಗೂ ಮನ್ವಂತ್ ಕುಮಾರ್ ಉತ್ತಮ ಬೌಲಿಂಗ್ ನೆರವಿನಿಂದ ಹುಬ್ಬಳ್ಳಿ ಗೆದ್ದು ಬೀಗಿತು. ಮಹಾರಾಜ ಟ್ರೋಫಿ ಫೈನಲ್ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಹುಬ್ಬಳ್ಳಿ ಟೈಗರ್ಸ್ ಮೊದಲು ಬ್ಯಾಟ್ ಮಾಡಿತು. ಎರಡನೇ …
Read More »ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ
ಮೈಸೂರು: ಬುಧವಾರ (ಆ.30) ನಗರದಲ್ಲಿ ನಡೆಯಲಿರುವ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ. ಹಲವಾರು ರೀತಿಯ ವೈಶಿಷ್ಟ್ಯತೆಗಳಿಂದ ಕೂಡಿರುವ ಈ ಬೃಹತ್ ವೇದಿಕೆಯ ಸಿದ್ಧತೆಯ ಕಾರ್ಯ ಮಹಾರಾಜ ಕಾಲೇಜು ಮೈದಾನದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೇಲ್ವಿಚಾರಣೆಯಲ್ಲಿ ನಡೆದಿದೆ. ಡಿಸಿಎಂ ನಿನ್ನೆ ಸಂಜೆ ಮೈದಾನದಲ್ಲಿ ಸಿದ್ಧವಾಗುತ್ತಿರುವ ವೇದಿಕೆ ನಿರ್ಮಾಣ ಕಾರ್ಯವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದರು. ವೇದಿಕೆಯ ವಿಶೇಷತೆಗಳೇನು: ಗೃಹ ಲಕ್ಷ್ಮಿ ಯೋಜನೆ ಜಾರಿಗೆ …
Read More »