Breaking News

Daily Archives: ಆಗಷ್ಟ್ 31, 2023

ಶಿವಮೊಗ್ಗದಲ್ಲಿ ಇಂದಿನಿಂದ ಲೋಹದ ಹಕ್ಕಿಗಳ ಹಾರಾಟ

ಶಿವಮೊಗ್ಗ: ಮಲೆನಾಡಿಗರ ಬಹುದಿನದ ಕನಸು ಇಂದು ನನಸಾಗುತ್ತಿದೆ. ಇಂದಿನಿಂದ ಶಿವಮೊಗ್ಗದಲ್ಲಿ ಲೋಹದ ಹಕ್ಕಿಗಳ ಹಾರಾಟ ಪ್ರಾರಂಭವಾಗಲಿದೆ. ಇಂದು (ಗುರುವಾರ) ಬೆಳಗ್ಗೆ ಬೆಂಗಳೂರಿನಿಂದ ಇಂಡಿಗೋ ವಿಮಾನ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.   ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9:50ಕ್ಕೆ ಇಂಡಿಗೋ 6E 7731 ವಿಮಾನವು ಕುವೆಂಪು ವಿಮಾನ ನಿಲ್ದಾಣಕ್ಕೆ ಸುಮಾರು 11:05ಕ್ಕೆ ಆಗಮಿಸಲಿದೆ. ಈ ಮೂಲಕ ನಾಗರಿಕ ವಿಮಾನ ಹಾರಾಟ ಪ್ರಥಮವಾಗಿ ಪ್ರಾರಂಭವಾಗಲಿದೆ. ಇಂಡಿಗೋ ವಿಮಾನ …

Read More »

ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈ ಭಾರಿ ಮಳೆ ಕೊರತೆಯಿಂದ ಬೆಳೆದ ಬೆಳೆಗಳೆಲ್ಲ ನೀರಿಲ್ಲದೇ ನಾಶ

ಶಿರಸಿ(ಉತ್ತರ ಕನ್ನಡ): ಮಳೆಯ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಪೂರ್ವ ಭಾಗದಲ್ಲಿ ಭತ್ತ, ಮೆಕ್ಕೆ ಜೋಳ ಬೆಳೆಗಳು ಒಣಗಿ ಹಾಳಾಗಿದ್ದು, ಹಸಿರಿನಿಂದ ಕಂಗೊಳಿಸಬೇಕಾಗಿದ್ದ ಹೊಲಗಳು ಬರಿದಾಗಿದೆ. ಇದು ರೈತರನ್ನು ಮಮ್ಮಲ ಮರುವಂತೆ ಮಾಡಿದ್ದು, ಬರಗಾಲ ಘೋಷಣೆ ಮಾಡುವಂತೆ ಆಗ್ರಹ ಹೆಚ್ಚಾಗಿದೆ. ಬನವಾಸಿ, ಬದನಗೋಡ, ಸಂತೊಳ್ಳಿ ವ್ಯಾಪ್ತಿಯು ಮಳೆಯಾಶ್ರಿತ ಭತ್ತದ ಬೆಳೆಯ ಪ್ರದೇಶವಾಗಿದ್ದು, ಪ್ರಸಕ್ತ ಸಾಲಿನಲ್ಲಿ 2,480 ಹೆಕ್ಟೇರ್ ಭತ್ತ, 1,550 ಹೆಕ್ಟೇರ್​ ಅಡಿಕೆ, ನೂರಾರು ಎಕರೆ ಮೆಕ್ಕೆ ಜೋಳ, …

Read More »

ತಮಿಳು ನೆಲದಲ್ಲಿ ಕಿಂಗ್​ ಖಾನ್​ ಶಾರುಖ್​ ಹವಾ

ಚೆನ್ನೈನ ಶ್ರೀ ಸಾಯಿರಾಮ್​ ಇಂಜಿನಿಯರಿಂಗ್​ ಕಾಲೇಜಿನಲ್ಲಿ ಜವಾನ್​ ಪ್ರೀ ರಿಲೀಸ್​ ಈವೆಂಟ್​ ನಡೆಯಲಿದ್ದು, ಶಾರುಖ್​ ಖಾನ್​ ಆಗಮಿಸಿದ್ದಾರೆ. ಬಾಲಿವುಡ್​ ಕಿಂಗ್​ ಖಾನ್​​ ಶಾರುಖ್​​ ಮತ್ತೊಮ್ಮೆ ಬಾಕ್ಸ್​ ಆಫೀಸ್​ ಕೊಳ್ಳೆ ಹೊಡೆಯಲು ಸಜ್ಜಾಗಿದ್ದಾರೆ. ಪಠಾಣ್​ ಬಳಿಕ ಮತ್ತೊಂದು ಆಯಕ್ಷನ್​ ಪ್ಯಾಕ್ಡ್​ ಸಿನಿಮಾದೊಂದಿಗೆ ಗಲ್ಲಾಪೆಟ್ಟಿಗೆ ದಾಖಲೆಗಳನ್ನು ಮುರಿಯಲು ಬರುತ್ತಿದ್ದಾರೆ. ನಟನ ಮುಂದಿನ ಬಹುನಿರೀಕ್ಷಿತ ಸಿನಿಮಾ ‘ಜವಾನ್’​. ಸೆಪ್ಟೆಂಬರ್​ 7 ರಂದು ವಿಶ್ವಾದ್ಯಂತ ಚಿತ್ರಮಂದಿಗಳಲ್ಲಿ ಜವಾನ್​ ಬಿಡುಗಡೆ ಆಗಲಿದ್ದು, ಪ್ರಮೋಶನ್​​ ವರ್ಕ್ ಜೋರಾಗೇ ನಡೆಯುತ್ತಿದೆ. …

Read More »

ಮಂಗಳೂರು: ಸಂಚರಿಸುತ್ತಿದ್ದ ಬಸ್​ನಿಂದ ಹೊರಗೆ ಬಿದ್ದು ಕಂಡಕ್ಟರ್ ಸಾವು​- ಘಟನೆಯ ವಿಡಿಯೋ ವೈರಲ್​

ಮಂಗಳೂರು: ಸಂಚಾರದಲ್ಲಿದ್ದ ನಗರ ಸಾರಿಗೆ ಬಸ್​ನಿಂದ ಕಂಡಕ್ಟರ್‌ ಹೊರಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟಿರುವ ಘಟನೆ ನಂತೂರಿನಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ನಿವಾಸಿ, ಪ್ರಸ್ತುತ ಸುರತ್ಕಲ್ ತಡಂಬೈಲ್​​ನಲ್ಲಿ ನೆಲೆಸಿರುವ ಈರಯ್ಯ (23) ಮೃತಪಟ್ಟವರು. ಇವರು 15 ಸಂಖ್ಯೆಯ ಖಾಸಗಿ ಸಿಟಿ ಬಸ್ ನಿರ್ವಾಹಕರಾಗಿದ್ದರು. ಮಂಗಳವಾರ ಮಧ್ಯಾಹ್ನದ ಸುಮಾರಿಗೆ ಘಟನೆ ನಡೆದಿದೆ. ಬಸ್ ಕೆಪಿಟಿಯಿಂದ ಆಗಮಿಸಿ ನಂತೂರು ವೃತ್ತದಲ್ಲಿ ವೇಗವಾಗಿ ತಿರುವು ಪಡೆಯುತ್ತಿದ್ದಾಗ, ಮುಂಭಾಗದ ಬಾಗಿಲಲ್ಲಿ ನಿಂತಿದ್ದ ಕಂಡಕ್ಟರ್ ಕೆಳಕ್ಕೆ ಬಿದ್ದಿದ್ದಾರೆ. …

Read More »

ದೆಹಲಿಯಲ್ಲಿ ಖಾಸಗಿ ಕಂಪನಿಯ​ ಹಿರಿಯ ಮ್ಯಾನೇಜರ್​ಗೆ ಗುಂಡಿಕ್ಕಿ ಹತ್ಯೆ

ನವದೆಹಲಿ: ಖಾಸಗಿ ಆನ್​ಲೈನ್​ ಶಾಪಿಂಗ್​ ವೆಬ್​ಸೈಟ್​ವೊಂದರ​ ಕಂಪನಿಯಲ್ಲಿ ಹಿರಿಯ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಹರ್​ಪ್ರೀತ್​ ಗಿಲ್​ (36) ಕೊಲೆಯಾದ ವ್ಯಕ್ತಿಯಾಗಿದ್ದು, ಇವರ ಸಂಬಂಧಿ ಗೋವಿಂದ್​ ಸಿಂಗ್​ ಎಂಬುವವರು ಕೂಡ ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಭಜನಪುರ ಪ್ರದೇಶದ ಸುಭಾಷ್ ವಿಹಾರ ಪ್ರದೇಶದಲ್ಲಿ ಕಳೆದ ರಾತ್ರಿ 11.20ರ ಸುಮಾರಿಗೆ ಐವರು ದುಷ್ಕರ್ಮಿಗಳ ತಂಡ …

Read More »

ಮಹಾನಗರ ಪಾಲಿಕೆಯಲ್ಲಿ ನೇಮಕಗೊಂಡ ಮಹಾರಾಷ್ಟ್ರ ಮೂಲದ ಪೌರ ಕಾರ್ಮಿಕರನ್ನು ತಕ್ಷಣ ವಜಾಗೊಳಿಸಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಪ್ರತಿಭಟನೆ

ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನೇಮಕಗೊಂಡ ಮಹಾರಾಷ್ಟ್ರ ಮೂಲದ ಪೌರ ಕಾರ್ಮಿಕರನ್ನು ತಕ್ಷಣ ವಜಾಗೊಳಿಸಬೇಕೆಂದು ಒತ್ತಾಯಿಸಿ ಇಂದು ಕರ್ನಾಟಕ ನವ ನಿರ್ಮಾಣ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು.   ಬೆಳಗಾವಿ ಪಾಲಿಕೆಯ ವ್ಯಾಪ್ತಿಯಲ್ಲಿ ಸಾಕಷ್ಟು ಪೌರ ಕಾರ್ಮಿಕರು ಇದ್ದಾರೆ. ಕೆಲ‌ ಬಿಜೆಪಿ‌ ಸದಸ್ಯರ ಕುಮ್ಮಕ್ಕಿನಿಂದ ಮಹಾರಾಷ್ಟ್ರ ಮೂಲದ ಪೌರಕಾರ್ಮಿಕರ ನೇಮಕ ಮಾಡಿಕೊಂಡಿರುವ ಕ್ರಮ ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ”ಪಾಲಿಕೆಯಲ್ಲಿ ಮಹಾರಾಷ್ಟ್ರದ ಕೋವಾಡದ ಪೌರ …

Read More »

ಬೆಳಗಾವಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಅನಿರೀಕ್ಷಿತ ಭೇಟಿ‌

ಬೆಳಗಾವಿ: ಇಲ್ಲಿನ ಸಬ್ ರಿಜಿಸ್ಟ್ರಾರ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಅನಿರೀಕ್ಷಿತ ಭೇಟಿ‌ ನೀಡಿ, ದಾಖಲೆಗಳನ್ನು ಪರಿಶೀಲಿಸಿದರು. ಸಾರ್ವಜನಿಕರಿಂದ ಅನೇಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ದಕ್ಷಿಣ ಕ್ಷೇತ್ರದಲ್ಲಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಲೋಕಾಯುಕ್ತ ಎಸ್​ಪಿ ಹನುಮಂತರಾಯ್ ನೇತೃತ್ವದಲ್ಲಿ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು. ಬೇನಾಮಿ ಹೆಸರಲ್ಲಿ ಆಸ್ತಿ ಖರೀದಿಗೆ ಅವಕಾಶ ನೀಡದಂತೆ ನೋಂದಣಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೇನಾಮಿ ಹೆಸರಿನಲ್ಲಿ ಆಸ್ತಿ ಖರೀದಿಗೆ ಬಂದರೆ ಅಂಥವರ ವಿರುದ್ಧ ದೂರು ದಾಖಲಿಸಬೇಕು. …

Read More »

ಪಿಜಿಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ.. ಸೆಪ್ಟೆಂಬರ್ 23 ಮತ್ತು 24 ರಂದು ಪರೀಕ್ಷೆ

ಬೆಂಗಳೂರು: ಬಹು ನಿರೀಕ್ಷಿತ ಪಿಜಿ ಸಿಇಟಿ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ. ಸೆಪ್ಟಂಬರ್ 9 ಮತ್ತು 10 ರಂದು ನಡೆಯಬೇಕಿದ್ದ ಪಿಜಿಸಿಇಟಿ-2023 ಪರೀಕ್ಷೆಯನ್ನು ಸೆಪ್ಟೆಂಬರ್ 23 ಮತ್ತು 24 ರಂದು ನಿಗದಿಪಡಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇಂದು ಪ್ರಕಟಣೆ ಹೊರಡಿಸಿದೆ. ಕರ್ನಾಟಕದಲ್ಲಿನ ವಿವಿಧ ವಿಶ್ವವಿದ್ಯಾಲಯಗಳಲ್ಲಿ 2023ನೇ ಸಾಲಿನ ಪದವಿ ಕೋರ್ಸ್​ಗಳ ಅಂತಿಮ ಸೆಮಿಸ್ಟರ್​ ಪರೀಕ್ಷೆಗಳು ಪೂರ್ಣಗೊಳ್ಳದೇ ಇರುವುದರಿಂದ ಮತ್ತು ಅಭ್ಯರ್ಥಿಗಳ ಹಿತದೃಷ್ಟಿಯಿಂದ ಪಿಜಿಸಿಇಟಿ-2023 ಪರೀಕ್ಷೆಯನ್ನು ಮುಂದೂಡಲಾಗಿತ್ತು. ಪ್ರಸ್ತುತ ಎಂಬಿಎ, ಎಂಸಿಎ, …

Read More »

ಅಕ್ರಮ ಜಾಹೀರಾತುದಾರರ ವಿರುದ್ಧ 264 ಎಫ್​ಐಆರ್​​

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಸೇರಿ ಅಕ್ರಮ ಜಾಹೀರಾತುಗಳ ಹಾವಳಿ ತಪ್ಪಿಸಲು ಪ್ರತಿ ಅಕ್ರಮ ಜಾಹೀರಾತು ಅಳವಡಿಕೆಗೆ 50 ಸಾವಿರ ರೂ ದಂಡ ವಿಧಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ.   ಅಲ್ಲದೆ, ಈ ಸಂಬಂಧ 50 ಸಾವಿರ ರೂ.ಗಳವರೆಗೂ ದಂಡ ವಿಧಿಸಲಾಗುತ್ತಿದೆ. ಅಕ್ರಮ ಜಾಹೀರಾತು ಅಳವಡಿಸಿದ್ದ ವ್ಯಕ್ತಿಗಳ ವಿರುದ್ಧ ಒಟ್ಟು 264 ಎಫ್‌ಐಆರ್​ಗಳನ್ನು ದಾಖಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ಬಿಬಿಎಂಪಿ …

Read More »

ಬಿಬಿಎಂಪಿ ಅಗ್ನಿ ಅನಾಹುತದಲ್ಲಿ ಗಾಯಗೊಂಡ ಮುಖ್ಯ ಅಭಿಯಂತರ ಶಿವಕುಮಾರ್ ಸಾವು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿ ಆವರಣದ ಗುಣ ನಿಯಂತ್ರಣ ಪ್ರಯೋಗಾಲಯದ ಕಚೇರಿಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭಾರಿ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮುಖ್ಯ ಅಭಿಯಂತರ ಶಿವಕುಮಾರ್ ಇಂದು (ಬುಧವಾರ) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಗುರುವಾರ ಕುಟುಂಬಸ್ಥರಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ. ಶೇಷಾದ್ರಿಪುರ ಅಪೋಲೊ ಆಸ್ಪತ್ರೆ ಮುಖ್ಯಸ್ಥ ಡಾ.ಉದಯ್ ಮಾತನಾಡಿ, “ಬಿಬಿಎಂಪಿ ಎಂಜಿನಿಯರ್ ಶಿವಕುಮಾರ್ ಚಿಕಿತ್ಸೆ …

Read More »