Breaking News

Monthly Archives: ಆಗಷ್ಟ್ 2023

NIA: ಬೆಳ್ಳಂದೂರಿನಲ್ಲಿ ಪತ್ತೆಯಾಗಿರುವುದು 43 ಅಕ್ರಮ ಬಾಂಗ್ಲಾ ವಲಸಿಗರು,

ಬೆಂಗಳೂರು, ಆಗಸ್ಟ್​ 11: ಇತ್ತೀಚೆಗೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು (illegal Bangladeshi immigrants) ಪತ್ತೆಯಾಗಿದ್ದು, ಆ ಪ್ರಕರಣದ ಪರಿಶೀಲನೆ ವೇಳೆ ಪತ್ತೆಯಾಗಿದ್ದು ಮೂವರಲ್ಲ 43 ಬಾಂಗ್ಲಾ ವಲಸಿಗರು ಎಂದು ತಿಳಿದುಬಂದಿದೆ. ಬೆಳ್ಳಂದೂರಿನಲ್ಲಿ ಒಟ್ಟು 43 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿರುವ ಬಗ್ಗೆ ಎನ್​ಐಎ(National Investigation Agency -NIA) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಮೊದಲು ಕೇವಲ ಮೂವರು ಬಾಂಗ್ಲಾದೇಶಿ ಅಕ್ರಮ ವಲಸಿಗರು ಇದ್ದಾರೆ ಎಂಬ ಮಾಹಿತಿ ಇತ್ತು. ಬಾಂಗ್ಲಾ ಪ್ರಜೆಗಳು ದೇಶದಲ್ಲಿ …

Read More »

21 ನಾಯಕರನ್ನೊಳಗೊಂಡ ಜೆಡಿಎಸ್ ಕೋರ್ ಕಮಿಟಿ ರಚನೆ, ಜಿಟಿ ದೇವೇಗೌಡ ಅಧ್ಯಕ್ಷ

ಬೆಂಗಳೂರು, (ಆಗಸ್ಟ್ 18): ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಮುಗ್ಗರಿಸಿರುವ ಜೆಡಿಎಸ್​ ಇದೀಗ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಸ್ಥಳೀಯ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿದೆ. ಹೀಗಾಗಿ ಪಕ್ಷವನ್ನು ಬಲಪಡಿಸಲು ಇಂದು ಜೆಡಿಎಸ್​ ಕೋರ್ ಕಮಿಟಿ(jds core committee) ರಚನೆ ಮಾಡಲಾಗಿದೆ. ಒಟ್ಟು 21 ಜೆಡಿಎಸ್ (JDS) ನಾಯಕರನ್ನೊಳಗೊಂಡ ಕೋರ್ ಕಮಿಟಿಗೆ ಚಾಮುಂಡೇಶ್ವರಿ ಶಾಸಕ ಜಿಟಿ ದೇವೇಗೌಡ ಅವರು ಜೆಡಿಎಸ್​ ಕೋರ್​ ಕಮಿಟಿಯ …

Read More »

ಕರ್ನಾಟಕ, ಮಹಾರಾಷ್ಟ್ರದ ಹಲವೆಡೆ ಬೈಕ್​ಗಳ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬೆಳಗಾವಿ ಅಂಕಲಗಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧೆಡೆ ಬೈಕ್‌ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಅಂಕಲಗಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 8.25 ಲಕ್ಷ ರೂ ಮೌಲ್ಯದ ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ತಾಲ್ಲಕಿನ ಕಳಂಭದ ನಿವಾಸಿ ಸಂತೋಷ ರಾಮಚಂದ್ರ ನಿಶಾನೆ (30) ಹಾಗೂ ಗೋಕಾಕ ತಾಲ್ಲೂಕಿನ ತೆಳಗಿನಹಟ್ಟಿಯ ಭರಮಪ್ಪ ಯಲ್ಲಪ್ಪ ಕೊಪ್ಪದ (21) ಬಂಧಿತರು. ಇವರಿಂದ ವಿವಿಧ ಕಂಪನಿಗಳ 23 ಬೈಕ್‌ಗಳನ್ನು ಜಪ್ತಿ ಮಾಡಲಾಗಿದೆ. ಗೋಕಾಕ …

Read More »

ಸಿದ್ದರಾಮಯ್ಯ ಇಸ್ರೋಕ್ಕೆ ಭೇಟಿ ನೀಡಿ ಅಭಿನಂದಿಸಿದ ಕ್ಷಣ

ಬೆಂಗಳೂರು: ಇಸ್ರೋದ ಮಹೋನ್ನತ ಸಾಧನೆಗೆ ಇಡೀ ವಿಶ್ವವೇ ಅಭಿನಂದಿಸಿ ಕೊಂಡಾಡುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದರು. ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಿ ಗೌರವಿಸಿದರು. ಇಸ್ರೋ ಅಧ್ಯಕ್ಷರಿಗೆ ಸಿಎಂ ಸಿದ್ದರಾಮಯ್ಯ ಮೈಸೂರು ಪೇಟಾ ತೊಡಿಸಿ ಅಭಿನಂದನೆ ಸಲ್ಲಿಸಿದರು. ಜತೆಗೆ ಸಿಹಿ ಹಂಚಿ ಸಂಭ್ರಮಿಸಿದರು.     ಬಳಿಕ ಇಸ್ರೋ ಸಾಧನೆ ಕುರಿತು ಸಿಎಂ ಸಿದ್ದರಾಮಯ್ಯ ಸಂತಸ …

Read More »

ಮೂರು ಸಾವಿರ ರೂಪಾಯಿಗಾಗಿ ಹೆಂಡತಿಯನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಕಿರಾತಕ!

ಪುಣೆ (ಮಹಾರಾಷ್ಟ್ರ): ಪುಣೆ ನಗರದಲ್ಲಿ ಸಂಬಂಧಗಳಿಗೆ ಕಳಂಕ ತರುವ ಪ್ರಕರಣವೊಂದು ನಡೆದಿದೆ. ಕೆಲ ದಿನಗಳ ಹಿಂದೆ ಬಾಲಕಿಗೆ ತಂದೆ ಕಿರುಕುಳ ನೀಡಿದ ಘಟನೆ ನಡೆದಿತ್ತು. ಇದೀಗ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಯೊಬ್ಬ ತನ್ನ ಪತ್ನಿಯನ್ನು ಮೂರು ಸಾವಿರ ರೂಪಾಯಿಗೆ ವೇಶ್ಯಾವಾಟಿಕೆಗೆ ತಳ್ಳಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಸಂತ್ರಸ್ತೆಯ ಪತಿ ಹಾಗೂ ಆತನ ಇಬ್ಬರು ಸ್ನೇಹಿತರನ್ನು ಬುಧವಾರ ಬಂಧಿಸಲಾಗಿದೆ. ಕಳೆದ ಕೆಲವು ದಿನಗಳಿಂದ ಪುಣೆ ನಗರದಲ್ಲಿ ಅಪರಾಧ ಪ್ರಕರಣಗಳು …

Read More »

ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ.: ಡಿ.ಕೆ.ಶಿ

ಮೈಸೂರು : “ನಾವು ಆಪರೇಷನ್ ಹಸ್ತ ಮಾಡುತ್ತಿಲ್ಲ. ನಮ್ಮ ಪಕ್ಷದ ವರ್ಚಸ್ಸು ಮತ್ತು ಸಿದ್ಧಾಂತವನ್ನು ಒಪ್ಪಿ ಬಿಜೆಪಿ, ಜೆಡಿಎಸ್ ನಾಯಕರುಗಳು ಅವರಾಗಿಯೇ ಬರುತ್ತೇವೆ ಎನ್ನುತ್ತಿದ್ದಾರೆ. ಹಾಗೆ ಬರುವವರಿಗೆ ನಮ್ಮ ಸ್ವಾಗತ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಗೃಹ ಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ಇಂದು ಆಗಮಿಸಿದ ಡಿ.ಕೆ.ಶಿವಕುಮಾರ್​, ಮೈಸೂರಿನ ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು. “ನಾವಾಗಿಯೇ ಯಾರನ್ನೂ ಕರೆತರುವ ಪ್ರಯತ್ನ ಮಾಡುತ್ತಿಲ್ಲ. …

Read More »

ಅನ್ನಭಾಗ್ಯ ಯೋಜನೆ .. ಡಿಬಿಟಿ ಮೂಲಕ ಆಗಸ್ಟ್ ತಿಂಗಳ ಹಣ ಪಾವತಿ

ಬೆಂಗಳೂರು : ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಆಗಸ್ಟ್​ ತಿಂಗಳ ಹಣವನ್ನು ಡಿಬಿಟಿ ಮೂಲಕ ನೇರವಾಗಿ ಪಡಿತರದಾರರ ಬ್ಯಾಂಕ್​ ಖಾತೆಗೆ ಪಾವತಿಸಲಾಗುತ್ತಿದೆ.   ರಾಜ್ಯ ಸರ್ಕಾರವು ಜುಲೈ ತಿಂಗಳಿನಿಂದ ರಾಜ್ಯದ ಅಂತ್ಯೋದಯ ಅನ್ನಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿ (ಪಿಎಚ್‌ಎಚ್) ಹೊಂದಿರುವ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ವಿತರಿಸುವುದಾಗಿ ಘೋಷಿಸಿತ್ತು. ಈ ಅಕ್ಕಿಯ ಅಗತ್ಯವನ್ನು FCI (ಫುಡ್​ ಕಾರ್ಪೋರೇಷನ್​)ನಿಂದ ದೇಶೀಯ ಮುಕ್ತ ಮಾರುಕಟ್ಟೆಯಲ್ಲಿ (OMSS(D) ಅಕ್ಕಿಯನ್ನು …

Read More »

ಮಹಾತ್ಮ ಗಾಂಧಿ ಪ್ರತಿಮೆ ಹಾನಿಗೊಳಿಸಿದ ಇಬ್ಬರು ಕಿಡಿಗೇಡಿಗಳ ಬಂಧನ: ಎಸ್ಪಿ ಮಿಥುನ್ ಕುಮಾರ್

ಶಿವಮೊಗ್ಗ : ಆಗಸ್ಟ್ 21 ರಂದು ಭದ್ರಾವತಿ ತಾಲೂಕು ಹೊಳೆಹೊನ್ನೂರು ಪಟ್ಟಣದ ಗಾಂಧಿ ವೃತ್ತದಲ್ಲಿನ ಮಹಾತ್ಮ ಗಾಂಧಿ ಮೂರ್ತಿಯನ್ನು ಧ್ವಂಸಗೊಳಿಸಿದ ಇಬ್ಬರು ಆರೋಪಿಗಳನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಅವರು ಮಾಧ್ಯಮಗೋಷ್ಟಿ ನಡೆಸಿ, ಬಂಧಿತ ಆರೋಪಿಗಳ ಕುರಿತು ಮಾಹಿತಿ ನೀಡಿದರು. ಆಗಸ್ಟ್ 21ರ ಬೆಳಗಿನ ಜಾವ ಕಿಡಿಗೇಡಿಗಳಿಬ್ಬರು ಬೈಕ್​ನಲ್ಲಿ ಬಂದು ಗಾಂಧಿ ಪ್ರತಿಮೆಯನ್ನು ಧ್ವಂಸ ಮಾಡಿದ್ದರು. …

Read More »

ಬಿಜೆಪಿ ತ್ಯಜಿಸುವ ಕುರಿತು ಸುದ್ದಿಗಳಿಗೆ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗು ಶಿವಮಾರ್ ಹೆಬ್ಬಾರ್ ಸ್ಪಷ್ಟನೆ

ಬೆಂಗಳೂರು : “ನಾನು ಪಕ್ಷ ಬಿಡುವುದೂ ಇಲ್ಲ, ಲೋಕಸಭೆ ಚುನಾವಣೆಗೂ ಸ್ಪರ್ಧಿಸುವುದಿಲ್ಲ” ಎಂದು ಮಾಜಿ ಸಚಿವ ಹಾಗೂ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಶೇ.100ರಷ್ಟು ಕಾಂಗ್ರೆಸ್​ಗೆ ಹೋಗಲ್ಲ. ನನ್ನ ಮಗನೂ ರಾಜಕೀಯಕ್ಕೆ ಬರಲ್ಲ. ಒಂದು ವೇಳೆ ಹಾಗೆ ಮಾಡಿದರೆ ಆ ದಿನವೇ ಬಂದು ನನ್ನನ್ನು ಕೇಳಿ” ಎಂದರು. “ಕೆಲವರು ಶಾಸಕ ಮುನಿರತ್ನ ಅವರ ಕ್ಷೇತ್ರದಿಂದ ಕಾಂಗ್ರೆಸ್​ಗೆ ಹೋಗಿದ್ದಾರೆ. ಇನ್ನು ಕೆಲವರು ಕೆ.ಆರ್.ಪುರಂನಿಂದಲೂ ಹೋಗಿದ್ದಾರೆ. …

Read More »

KSRTC: ಕೆಂಪು ಬಣ್ಣದ ಬಸ್​ಗಳಿಗೆ ಹೈಟೆಕ್ ಸ್ಪರ್ಶ

ಬೆಂಗಳೂರು : ಇನ್ಮುಂದೆ ಕೆಎಸ್‌ಆರ್​ಟಿಸಿಯ ಕೆಂಪು ಬಣ್ಣದ ಬಸ್​ಗಳಲ್ಲಿ ಪ್ರಯಾಸದ ಪ್ರಯಾಣಕ್ಕೆ ಗುಡ್ ಬೈ ಹೇಳಿ ಆರಾಮದಾಯಕ ಅನುಭವದ ಪ್ರಯಾಣ ಮಾಡಬಹುದಾಗಿದೆ. ಪುಷ್ ಬ್ಯಾಕ್ ಹೊರತುಪಡಿಸಿ ಬಹುತೇಕ ರಾಜಹಂಸ ಬಸ್ ಪ್ರಯಾಣದ ಅನುಭವ ನೀಡುವ ವ್ಯವಸ್ಥೆಯನ್ನು ಸಾಮಾನ್ಯ ಸಾರಿಗೆಯಲ್ಲಿ ನೀಡಲು ಸಂಸ್ಥೆ ಸಿದ್ಧತೆ ಆರಂಭಿಸಿದೆ. ಅದಕ್ಕಾಗಿಯೇ ವಿಶೇಷವಾಗಿ ವಿನ್ಯಾಸಗೊಂಡ ಪ್ರೋಟೋಟೈಪ್ ಬಸ್​ಗಳು ಅಕ್ಟೋಬರ್ ವೇಳೆಗೆ ರಸ್ತೆಗಿಳಿಯಲಿವೆ. ಹತ್ತು ಹಲವು ಪ್ರಯೋಗಗಳ ಮೂಲಕ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅತ್ಯುತ್ತಮ …

Read More »