ಬೆಂಗಳೂರು: ಕಾಂಗ್ರೆಸ್ ಸೇರುವಂತೆ ಹಾಗು ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಆಹ್ವಾನ ಬಂದಿದ್ದು ನಿಜ ಎನ್ನುವುದನ್ನು ಶಾಸಕ ಎಸ್ ಟಿ ಸೋಮಶೇಖರ್ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ಗೆ ಹೋಗಿ ಭವಿಷ್ಯ ಹಾಳು ಮಾಡಿಕೊಳ್ಳದಂತೆ ಅವರಿಗೆ ಹೇಳಿದ್ದೇನೆ, ಅವರೂ ಕೂಡ ಪಕ್ಷ ತೊರೆಯುವುದಿಲ್ಲ ಎಂದೇ ಸ್ಪಷ್ಟಪಡಿಸಿದ್ದಾರೆ ಎಂದು ಮಾಜಿ ಡಿಸಿಎಂ ಆರ್ ಅಶೋಕ್ ತಿಳಿಸಿದ್ದಾರೆ. ಆಪರೇಷನ್ ಹಸ್ತ ಪ್ರಯತ್ನಗಳ ಹಿನ್ನೆಲೆಯಲ್ಲಿ ಮಾತುಕತೆ ನಡೆಸಲು ಆಗಮಿಸುವಂತೆ ಮಾಜಿ ಡಿಸಿಎಂ ಆರ್ ಅಶೋಕ್ ಸೂಚನೆಯಂತೆ …
Read More »Monthly Archives: ಆಗಷ್ಟ್ 2023
ರಕ್ಷಿತ್ ಶೆಟ್ಟಿ ಅಭಿನಯದ ‘ಚಾರ್ಲಿ 777’ಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
ನವದೆಹಲಿ: 69ನೇ ಪ್ರತಿಷ್ಠಿತ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಇಂದು (ಗುರುವಾರ) ಪ್ರಕಟಿಸಿದೆ. ಕನ್ನಡ ಚಿತ್ರರಂಗದ ರಕ್ಷಿತ್ ಶೆಟ್ಟಿ ಅವರ ‘ಚಾರ್ಲಿ 777’ ಸಿನಿಮಾ ಉತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ‘ಆರ್ಆರ್ಆರ್’ ಸಿನಿಮಾಗೆ ಅತ್ಯುತ್ತಮ ಸಾಹಸ ನಿರ್ದೇಶನ ಪ್ರಶಸ್ತಿ, ನೃತ್ಯ ನಿರ್ದೇಶನ ಪ್ರಶಸ್ತಿಗಳ ಗೌರವ ಸಿಕ್ಕಿದೆ. ‘ಉಪ್ಪೇನಾ’ ಸಿನಿಮಾವನ್ನು ಅತ್ಯುತ್ತಮ ತೆಲುಗು ಚಲನಚಿತ್ರವಾಗಿ ಘೋಷಿಸಲಾಗಿದೆ. ‘ಹೋಮ್’ ಅತ್ಯುತ್ತಮ ಮಲಯಾಳಂ ಚಿತ್ರ. ‘ಸರ್ದಾರ್ ಉಧಮ್’ ಅತ್ಯುತ್ತಮ ಹಿಂದಿ …
Read More »ವಿಕ್ರಮ್ ಲ್ಯಾಂಡರ್ಗೆ ಬಿಡಿಭಾಗಗಳ ಪೂರೈಕೆ.. ಚಂದ್ರಲೋಕಕ್ಕೂ ಹಬ್ಬಿದ ಬೆಳಗಾವಿ ಕೀರ್ತಿ
ಬೆಳಗಾವಿ: ಚಂದ್ರಯಾನ 3 ಯಶಸ್ಸಿನಲ್ಲಿ ಬೆಳಗಾವಿ ಕೂಡ ಪ್ರಮುಖ ಪಾತ್ರ ನಿರ್ವಹಿಸಿದ್ದು, ಸರ್ವೋ ಕಂಟ್ರೋಲ್ಸ್ ಏರೋಸ್ಪೇಸ್ ಆಂಡ್ ಟೆಕ್ನಾಲಜಿ ಕಂಪನಿಯು ವಿಕ್ರಮ್ ಲ್ಯಾಂಡರ್ಗೆ ಬಿಡಿಭಾಗಗಳನ್ನು ಪೂರೈಕೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಚಂದ್ರಲೋಕಕ್ಕೂ ಹರಡುವಂತೆ ಮಾಡಿದೆ. ಇಡೀ ವಿಶ್ವವೇ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಅಂಗಳಕ್ಕೆ ಇಳಿಯುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಹೊಸ ಮೈಲಿಗಲ್ಲು ನಿರ್ಮಿಸಿದೆ. ಇನ್ನು ಚಂದ್ರಯಾನ 3 …
Read More »ಚಂದ್ರನ ಅಂಗಳಕ್ಕೆ ವಿಕ್ರಂ ಲ್ಯಾಂಡರ್ ಕಾಲಿಟ್ಟಿರುವುದು ಎಲ್ಲೆಡೆ ಸಂಭ್ರಮಾಚರಣೆಗೆ ಕಾರಣವಾಗಿದೆ.
ಬೆಳಗಾವಿ : ಇಸ್ರೋದ ಬಹುನಿರೀಕ್ಷಿತ ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಅಂಗಳಕ್ಕೆ ಇಳಿಯುತ್ತಿದಂತೆ ಬೆಳಗಾವಿ ಹಾಗು ಮೈಸೂರಿನಲ್ಲಿ ಜನರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಬೆಳಗಾವಿ ಶಿವಬಸವ ನಗರದ ಡಾ. ಶಿವಬಸವ ಸ್ವಾಮೀಜಿ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಸ್ವಾಮೀಜಿ ಪಾಲ್ಗೊಂಡಿದ್ದರು. ಭಾರತ ಮಾತಾಕಿ ಜೈ ಮತ್ತು ಇಸ್ರೋ ವಿಜ್ಞಾನಿಗಳಿಗೆ ಜಯವಾಗಲಿ ಎಂಬ ಘೋಷಣೆಗಳು ಕೇಳಿಬಂದವು. …
Read More »‘ಪ್ರತಿ ತಿಂಗಳು 35 ಸಾವಿರ ಲಂಚ ಕೊಡಬೇಕಾ?”..ಅಬಕಾರಿ ಇಲಾಖೆಗೆ ಪ್ರಶ್ನೆ ಮಾಡಿ ಬೆವರಿಳಿಸಿದ ಸಂಸದ ಪ್ರಜ್ವಲ್ ರೇವಣ್ಣ
ಹಾಸನ: ಪ್ರತಿ ತಿಂಗಳು ಮದ್ಯದಂಗಡಿ ಮಾಲೀಕರು ಅಬಕಾರಿ ಇಲಾಖೆಗೆ “35 ಸಾವಿರ ಲಂಚ” ಕೊಡಬೇಕಾ ಎಂದು ಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಗಂಭೀರವಾಗಿ ಆರೋಪ ಮಾಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಅಕ್ರಮ ಮದ್ಯ ಮತ್ತು ಲಂಚ ಪಡೆಯುತ್ತಿರುವ ಬಗ್ಗೆ ಗಂಭೀರವಾಗಿ ಅಬಕಾರಿ ಇಲಾಖೆ ಮೇಲೆ ಆರೋಪ ಮಾಡಿದ ಪ್ರಜ್ವಲ್ ರೇವಣ್ಣ ‘ಪ್ರತಿ ತಿಂಗಳು 35 ಸಾವಿರ ಲಂಚ ತಗೋತಿರಲ್ಲ, ಅದನ್ನು …
Read More »ಮುರುಘಾ ಮಠಕ್ಕೆ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಸಂಬಂಧ ಸಲ್ಲಿಕೆಯಾದ ಮೇಲ್ಮನವಿ ಅರ್ಜಿ ವಿಚಾರಣೆ ಮುಗಿಸಿರುವ ಹೈಕೋರ್ಟ್,
ಬೆಂಗಳೂರು: ಚಿತ್ರದುರ್ಗದ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ತೀರ್ಪು ಕಾಯ್ದಿರಿಸಿದೆ. ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್. ಕಮಲ್ ಅವರಿದ್ದ ನ್ಯಾಯಪೀಠ ಸುಧೀರ್ಘ ವಿಚಾರಣೆ ನಡೆಸಿ ಅಂತಿಮ ತೀರ್ಪನ್ನು ಕಾಯ್ದಿರಿಸಿದೆ. ಪ್ರಕರಣದ …
Read More »ಲ್ಯಾಂಡರ್ ವಿಕ್ರಮ್ ಮತ್ತು ರೋವರ್ ಪ್ರಜ್ಞಾನ್; ಚಂದ್ರನ ಮೇಲೆ ಇವು ಮಾಡುವ ಕೆಲಸಗಳೇನು?
ಬೆಂಗಳೂರು: ಚಂದ್ರಯಾನ -3 ಮಿಷನ್ನ ಲ್ಯಾಂಡರ್ ‘ವಿಕ್ರಮ್’ ಮತ್ತು ರೋವರ್ ‘ಪ್ರಜ್ಞಾನ್’ ಮೇಲೆ ಈಗ ಎಲ್ಲರ ದೃಷ್ಟಿ ನೆಟ್ಟಿದೆ. ಆದರೆ, ಚಂದ್ರನ ಮೇಲಿನ ಕಾರ್ಯಾಚರಣೆಯ ಒಟ್ಟಾರೆ ಯಶಸ್ಸಿಗೆ ನಿರ್ಣಾಯಕವಾದ ಲ್ಯಾಂಡರ್ ಮತ್ತು ರೋವರ್ ಇವುಗಳು ತಕ್ಷಣವೇ ಕೆಲ ಮುಖ್ಯ ಕೆಲಸಗಳನ್ನು ಮಾಡಲಿವೆ. ಏತನ್ಮಧ್ಯೆ ವಿಕ್ರಮ್ ಮತ್ತು ಪ್ರಜ್ಞಾನ್ ಇವೆರಡೂ ಯಶಸ್ವಿಯಾಗಿ ಕೆಲಸ ಮಾಡಲಿವೆ ಎಂದು ಇಸ್ರೋ ವಿಜ್ಞಾನಿಗಳು ಕೂಡ ವಿಶ್ವಾಸ ಹೊಂದಿದ್ದಾರೆ. ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸುವ ಮತ್ತು ರೋವರ್ ಅನ್ನು ನಿಯೋಜಿಸುವ …
Read More »307 ಟ್ರಾನ್ಸ್ಲೇಟರ್ ಹುದ್ದೆಗೆ ಅರ್ಜಿ ಆಹ್ವಾನ.. ಪದವಿ ಆಗಿದ್ರೆ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಲ್ಲಿ ಖಾಲಿ ಇರುವ ಟ್ರಾನ್ಸ್ಲೇಟರ್ ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗದಿಂದ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಜ್ಯೂನಿಯರ್ ಟ್ರಾನ್ಸ್ಲೇಟರ್ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 307 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸ್ನಾತಕೋತ್ತರ ಪದವಿ ಆಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ ಮತ್ತು ವೇತನ ಸೇರಿದಂತೆ …
Read More »ಬುಧವಾರದ ವಹಿವಾಟಿನಲ್ಲಿ ಭಾರತೀಯ ಷೇರು ಮಾರುಕಟ್ಟೆಗಳು ಏರಿಕೆಯೊಂದಿಗೆ ವಹಿವಾಟು ಕೊನೆಗೊಳಿಸಿವೆ.
ಮುಂಬೈ : ದೇಶೀಯ ಈಕ್ವಿಟಿ ಬೆಂಚ್ ಮಾರ್ಕ್ ಸೂಚ್ಯಂಕಗಳು ಬುಧವಾರ ಏರಿಕೆಯೊಂದಿಗೆ ವಹಿವಾಟು ಆರಂಭಿಸಿದವು. ಆದರೆ ನಂತರ ಮಿಶ್ರ ಜಾಗತಿಕ ಮಾರುಕಟ್ಟೆ ಪ್ರವೃತ್ತಿಗಳು ಮತ್ತು ನಿರಂತರ ವಿದೇಶಿ ನಿಧಿಯ ಹೊರಹರಿವಿನ ಹಿನ್ನೆಲೆಯಲ್ಲಿ ವಹಿವಾಟಿನ ಮಧ್ಯದಲ್ಲಿ ಶೇರು ಮಾರುಕಟ್ಟೆಗಳು ಏರಿಕೆಯನ್ನು ತುಸು ಕಡಿಮೆ ಮಾಡಿಕೊಂಡವು. ದೇಶೀಯ ಸೂಚ್ಯಂಕಗಳಾದ ಎನ್‌ಎಸ್‌ಇ ನಿಫ್ಟಿ ಮತ್ತು ಬಿಎಸ್‌ಇ ಸೆನ್ಸೆಕ್ಸ್ ಒಂದು ದಿನದ ಅಸ್ಥಿರ ವಹಿವಾಟಿನ ನಂತರ ಬುಧವಾರ ಏರಿಕೆಯಲ್ಲಿ ಕೊನೆಗೊಂಡವು. ಸೆನ್ಸೆಕ್ಸ್ 213.27 ಪಾಯಿಂಟ್ ಅಥವಾ …
Read More »ಚೆಸ್ ವಿಶ್ವಕಪ್ ಫೈನಲ್: ಪ್ರಜ್ಞಾನಂದ vs ಕಾರ್ಲ್‌ಸನ್ ಎರಡನೇ ಪಂದ್ಯ ಡ್ರಾ, ನಾಳೆ ಟೈ ಬ್ರೇಕರ್ನಲ್ಲಿ ಫಲಿತಾಂಶ
ಬಾಕು (ಅಜರ್‌ಬೈಜಾನ್): ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಜ್ಞಾನಂದ ಮತ್ತು ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ಅವರ ನಡುವೆ ನಡೆಯುತ್ತಿರುವ ಫಿಡೆ ಚೆಸ್ ವಿಶ್ವಕಪ್ 2023ರ ಫೈನಲ್ ಪಂದ್ಯದ ಎರಡನೇ ಮ್ಯಾಚ್ ಕೂಡಾ ಡ್ರಾ ಆಗಿದೆ. ಫಲಿತಾಂಶ ನಾಳೆ ನಡೆಯಲಿರುವ ಟೈ ಬ್ರೇಕರ್ ಪಂದ್ಯದದಲ್ಲಿ ತಿಳಿದು ಬರಲಿದೆ. ಇಂದು ಪಂದ್ಯ ಆರಂಭವಾಗಿ ಒಂದು ಗಂಟೆಯಲ್ಲಿ 21 ನಡೆಗಳ ನಂತರ ವಿಶ್ವದ ಅಗ್ರ ಶ್ರೇಯಾಂಕಿತ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ಅವರು ಆರ್ ಪ್ರಜ್ಞಾನಂದ ಅವರ …
Read More »