ದಾವಣಗೆರೆ: 184ನೇ ವಿಶ್ವ ಛಾಯಾಗ್ರಾಹಕರ ದಿನವನ್ನು (World Photography Day) ಜಿಲ್ಲೆಯ ಫೋಟೊಗ್ರಾಫರ್ಸ್ ವಿಭಿನ್ನವಾಗಿ ಆಚರಣೆ ಮಾಡಿದ್ದಾರೆ. 1920ರ ಕಾಲದಲ್ಲಿ ಬಳಕೆ ಮಾಡುತ್ತಿದ್ದ ಹಳೇ ಕ್ಯಾಮೆರಾಗಳನ್ನು ಪ್ರದರ್ಶನಕ್ಕಿಟ್ಟಿದ್ದು ಯುವಜನತೆಯನ್ನು ಆಕರ್ಷಿಸಿತು. ಪ್ರಸ್ತುತ ಮೊಬೈಲ್ ಜಮಾನದಲ್ಲಿ ಸುಲಭವಾಗಿ ಫೋಟೊ ತೆಗೆಯಬಹುದು. ಅದರೆ 1920ರ ಕಾಲದಲ್ಲಿ ಒಂದು ಫೋಟೊ ತೆಗೆಯಲು ಫೋಟೊಗ್ರಾಫರ್ಸ್ ಎಷ್ಟು ಕಷ್ಟಪಡುತ್ತಿದ್ದರು ಎಂಬುದನ್ನು ಈ ಹಳೇ ಕ್ಯಾಮೆರಾಗಳು, ಅದರ ಬಿಡಿಭಾಗಗಳನ್ನು ಪ್ರದರ್ಶನಕ್ಕಿಡುವ ಮೂಲಕ ತೋರಿಸಲಾಯಿತು. ಫೀಲ್ಡ್ ಕ್ಯಾಮರಾಫೋಟೋಗ್ರಾಫರ್ ಯೂತ್ ವೆಲ್ಫೇರ್ ಅಸೋಸಿಯೇಷನ್ …
Read More »Monthly Archives: ಆಗಷ್ಟ್ 2023
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ನೇಣಿಗೇರಲು ಸಿದ್ದವಿದ್ದೇನೆ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಕೆ.ಗೋಪಾಲಯ್ಯ
ಬೆಂಗಳೂರು: ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ದವಿದ್ದೇನೆ ಎಂದು ಮಹಾಲಕ್ಷ್ಮಿ ಲೇಔಟ್ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಬಿಡುತ್ತಾರೆ ಎನ್ನುವ ವದಂತಿ ಹರಡಿದೆ. ಹಾಗಾಗಿ ನನಗೆ ನಿನ್ನೆಯಿಂದ ಸ್ವೀಕರಿಸಲು ಸಾಧ್ಯವಾಗದಷ್ಟು ದೂರವಾಣಿ ಕರೆಗಳು ಬರುತ್ತಿದೆ. ಆದರೆ, ನಾನು ಯಾರನ್ನು ಭೇಟಿ ಆಗಿಲ್ಲ. ನಿನ್ನೆ ಸಂಜೆ (ಗುರುವಾರ) …
Read More »ಬೆಳಗಾವಿ: ಆಸ್ತಿಗಾಗಿ ಉಪ್ಪಿಟ್ಟಿನಲ್ಲಿ ಗಂಡನಿಗೆ ವಿಷ ಹಾಕಿದ ಪತ್ನಿ; ಪತಿ ಐಸಿಯುಗೆ, ನಾಯಿ-ಬೆಕ್ಕು ಸಾವು
ಬೆಳಗಾವಿ: ಎರಡು ಎಕರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬಳು, ತನ್ನ ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣ ಪತ್ತೆ ಹಚ್ಚುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಷಪೂರಿತ ಉಪ್ಪಿಟ್ಟು ಸೇವಿಸಿ ಅಸ್ವಸ್ಥರಾಗಿದ್ದ ಸವದತ್ತಿ ತಾಲೂಕಿನ ಗೋರಾಬಾಳ ಗ್ರಾಮದ ನಿಂಗಪ್ಪ ಫಕೀರಪ್ಪ ಹಮಾನಿ (35) ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಸಾವಕ್ಕ (32) ಹಾಗೂ ಇವರ ಸಹೋದರ ಫಕೀರಪ್ಪ ಲಕ್ಷ್ಮಣ ಸಿಂಧೋಗಿ (30) ಕೊಲೆಗೆ …
Read More »ಬಿಜೆಪಿಯಲ್ಲಿ ಕಿರುಕುಳ ಅನುಭವಿಸುವವರು ಕಾಂಗ್ರೆಸ್ಗೆ ಬರಬಹುದು: ಗೃಹ ಸಚಿವ
ಬೆಳಗಾವಿ: ನಮ್ಮಲ್ಲಿಂದ ಹೋಗಿರುವ ಶಾಸಕರಿಗೆ ಬಿಜೆಪಿಯಲ್ಲಿ ಕಿರುಕುಳ ಇರೋದು ಸತ್ಯವಾದರೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ನಾವು ಯಾರಿಗೂ ಬರಬೇಡಿ ಅಂತ ಹೇಳಿಲ್ಲ. ನಮ್ಮ ಸಿದ್ಧಾಂತ ಒಪ್ಪಿ ಬರೋದಾದರೆ ಬರಲಿ ಅವರನ್ನು ಸ್ವಾಗತ ಮಾಡುತ್ತೇವೆ. ಯಾವ ಶಾಸಕರು ಬರ್ತಾರೆ ಅಂತ ನನಗೆ ಗೊತ್ತಿಲ್ಲ. ಆದರೆ, ಬರ್ತಾರೆ ಎನ್ನುವ ಮಾತಿದೆ …
Read More »ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗದಿದ್ದರೆ ಉಗ್ರ ಪ್ರತಿಭಟನೆ:ಕಡಾಡಿ
ಬೆಳಗಾವಿ: ಲೋಡ್ ಶೆಡ್ಡಿಂಗ್ ಪರಿಣಾಮವಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುವ ಪರಿಸ್ಥಿತಿಗೆ ತಲುಪಿದ್ದು, ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರೊಂದಿಗೆ ಸೇರಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐಪಿ ಸೆಟ್ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದಿದ್ದರೆ ಈಗ ಬಿತ್ತಿರುವ ಶೇ.80ರಷ್ಟು ಬೆಳೆಗಳು ಒಣಗಿ, ಜಿಲ್ಲೆಯಲ್ಲಿ ಆಹಾರ …
Read More »ಬಾಕ್ಸ್ ಆಫೀಸ್ನಲ್ಲಿ Gadar 2 vs OMG 2 ಫೈಟ್: 7ನೇ ದಿನದ ಕಲೆಕ್ಷನ್ ಎಷ್ಟು?
Gadar 2 vs OMG 2- Collection Day 7: ಬಿಡುಗಡೆಯಾದ ಏಳನೇ ದಿನದಂದು ಗದರ್ 2 ಮತ್ತು ಓಎಂಜಿ 2 ಸಿನಿಮಾಗಳು ಗಳಿಸಿದೆಷ್ಟು? ಆಗಸ್ಟ್ 11ರಂದು ಬಿಡುಗಡೆಯಾದ ಬ್ಲಾಕ್ಬಸ್ಟರ್ ಸೀಕ್ವೆಲ್ಗಳು ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿವೆ. ಸೂಪರ್ಸ್ಟಾರ್ ಸನ್ನಿ ಡಿಯೋಲ್ ಅಭಿನಯದ ಗದರ್ 2 ಮತ್ತು ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ನಟನೆಯ ಓಎಂಜಿ 2 ಸಿನಿಮಾಗೆ ನಿರೀಕ್ಷೆಗೂ ಮೀರಿದ ರೆಸ್ಪಾನ್ಸ್ ಸಿಕ್ಕಿದೆ. ವಾರದ ದಿನಗಳಲ್ಲಿಯೂ ಸಿನಿ ಪ್ರೇಮಿಗಳನ್ನು ಥಿಯೇಟರ್ಗೆ …
Read More »6 ತಿಂಗಳಿನಿಂದ 5 ವರ್ಷಗಳವರೆಗೆ ನೂರಾರು ತಕರಾರು ಪ್ರಕರಣಗಳು ಬಾಕಿ ಉಳಿದಿವೆ. ಈ ಎಲ್ಲ ಪ್ರಕರಣಗಳನ್ನು 4 ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದ ಕಂದಾಯ ಸಚಿವ
ಬೆಂಗಳೂರು: ತಹಶೀಲ್ದಾರ್, ಎಸಿ ಹಾಗೂ ಡಿಸಿ ಮಟ್ಟದ ನ್ಯಾಯಾಲಯಗಳಲ್ಲಿ 6 ತಿಂಗಳಿನಿಂದ 5 ವರ್ಷಗಳವರೆಗೆ ನೂರಾರು ತಕರಾರು ಪ್ರಕರಣಗಳು ಬಾಕಿ ಉಳಿದಿವೆ. ಈ ಎಲ್ಲ ಪ್ರಕರಣಗಳನ್ನು 4 ತಿಂಗಳ ಕಾಲಮಿತಿಯಲ್ಲಿ ಇತ್ಯರ್ಥಪಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ವಿಕಾಸಸೌಧದಲ್ಲಿ ಇಂದು ಆಯೋಜಿಸಲಾಗಿದ್ದ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಸಚಿವರು, “ಕಳೆದ ಐದು ವರ್ಷಗಳಿಂದ ಇತ್ಯರ್ಥವಾಗದ ತಕರಾರು ಪ್ರಕರಣಗಳನ್ನು ಶೀಘ್ರದಲ್ಲೇ ವಿಲೇವಾರಿಗೊಳಿಸಿ ಎಂದು ಅಧಿಕಾರಿಳಿಗೆ …
Read More »ಕಾಮಗಾರಿ ಬಿಲ್ ಬಾಕಿ ಪ್ರಕರಣ: 2ನೇ ದಿನವೂ ಮುಂದುವರೆದ ಗುತ್ತಿಗೆದಾರರ ಪೊಲೀಸ್ ವಿಚಾರಣೆ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸಿ ಬಾಕಿ ಉಳಿಸಿಕೊಂಡಿರುವ ಬಿಲ್ ಪಾವತಿಸುವಂತೆ ರಾಜ್ಯ ಸರ್ಕಾರದ ವಿರುದ್ಧ ಸಮರ ಸಾರಿ ಬೇಸತ್ತು ರಾಜ್ಯಪಾಲರಿಗೆ ಪತ್ರ ಬರೆದಿದ್ದ ಗುತ್ತಿಗೆದಾರರ ಪೊಲೀಸ್ ವಿಚಾರಣೆ ಎರಡನೇ ದಿನವೂ ಮುಂದುವರೆದಿದೆ. 57 ಗುತ್ತಿಗೆದಾರರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೊಟೀಸ್ ನೀಡಿದ್ದರು. ನಿನ್ನೆ ಹಾಜರಾಗಿದ್ದ 16 ಜನ ಗುತ್ತಿಗೆದಾರರನ್ನು ಶೇಷಾದ್ರಿಪುರಂ ಉಪ ವಿಭಾಗದ ಎಸಿಪಿ ವಿಚಾರಣೆ ನಡೆಸಿದ್ದರು. “ಇಂದು ಕೆಲವೊಂದಿಷ್ಟು ಗುತ್ತಿಗೆದಾರರು ಹಾಜರಾಗಿದ್ದು, ಅವರ ವಿಚಾರಣೆ ನಡೆಯುತ್ತಿದೆ. 28 ತಿಂಗಳಿನಿಂದ …
Read More »ಸಿದ್ದಾಪುರ ಮಹೇಶ್ ಹತ್ಯೆ ಪ್ರಕರಣ: ಕೋರ್ಟ್ಗೆ ಶರಣಾದ ವಿಲ್ಸನ್ ಗಾರ್ಡನ್ ನಾಗ, ಡಬಲ್ ಮೀಟರ್ ಮೋಹನ
ಬೆಂಗಳೂರು : ಜೈಲಿಂದ ಬಿಡುಗಡೆಯಾಗುತ್ತಿದ್ದಂತೆ ಸಿದ್ದಾಪುರ ಮಹೇಶನನ್ನು ಭೀಕರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ, ಹತ್ಯೆಯ ಹಿಂದಿದ್ದರು ಎನ್ನಲಾಗುತ್ತಿರುವ ಇಬ್ಬರು ಕುಖ್ಯಾತ ರೌಡಿಶೀಟರ್‌ಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿ ಹೊರಬಂದ ಕೆಲವೇ ಹೊತ್ತಿನಲ್ಲಿ ರೌಡಿಶೀಟರ್ ಮಹೇಶನನ್ನು ಕ್ಷಣಮಾತ್ರದಲ್ಲಿ ಅಟ್ಟಾಡಿಸಿ ಕೊಲೆ ಮಾಡಲಾಗಿತ್ತು. ಭೀಕರ ಕೊಲೆ ಬೆಂಗಳೂರು ಭೂಗತ ಜಗತ್ತಿನ ರಿವೆಂಜ್ ರೌಡಿಸಂ ಅನ್ನು ಅನಾವರಣಗೊಳಿಸಿತ್ತು. ಈಗ ಕೊಲೆಯ ಮಾಸ್ಟರ್ ಮೈಂಡ್ಗಳು ಎನ್ನಲಾದ ವಿಲ್ಸನ್ ಗಾರ್ಡನ್ ನಾಗ ಹಾಗೂ ಡಬಲ್ …
Read More »