Breaking News

Monthly Archives: ಆಗಷ್ಟ್ 2023

ಬೀದಿ ನಾಯಿ ರಕ್ಷಿಸಿದ ಕುಟುಂಬದ ಮೇಲೆ ದ್ವೇಷ: ಬಾಲಕನ ಥಳಿಸಿ ಕೊಂದ ನೆರೆಮನೆ ವ್ಯಕ್ತಿ

ಕುಶಿನಗರ (ಉತ್ತರ ಪ್ರದೇಶ): ಬೀದಿ ನಾಯಿಯ ರಕ್ಷಣೆಗೆ ಯತ್ನಿಸಿದ್ದ ನೆರೆಯ ಕುಟುಂಬದ ಮೇಲಿನ ಕೋಪದಿಂದ ವ್ಯಕ್ತಿಯೋರ್ವ ಆ ಕುಟುಂಬದ 12 ವರ್ಷದ ಬಾಲಕನನ್ನು ಕೊಲೆ ಮಾಡಿ ಶವ ಚರಂಡಿಗೆ ಎಸೆದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ನಡೆದಿದೆ.   ಇಲ್ಲಿನ ಮೈನ್​ಪುರ ಗ್ರಾಮದ ನಿವಾಸಿ ಮಧುಕರ್​ ಲಲಿತ್​ ತ್ರಿಪಾಠಿ ಎಂಬವರ ಪುತ್ರಿ ರಮಣ್ ತ್ರಿಪಾಠಿ ಕೊಲೆಯಾದ ಬಾಲಕ ಎಂದು ಗುರುತಿಸಲಾಗಿದೆ. ಇದೇ ಗ್ರಾಮದ ಶಮ್ಶುದ್ದೀನ್​ ಅಲಿಯಾಸ್​ ಮಾಂಗ್ರೂ ಎಂಬಾತನೇ …

Read More »

ಪಕ್ಷದಲ್ಲಿನ ಗೊಂದಲ ನಿವಾರಣೆಗೆ ಶಾಸಕರ ಜೊತೆ ಬಿಎಸ್​ವೈ ಮಹತ್ವದ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಕಳೆದ ಕೆಲ ದಿನಗಳಿಂದ ತಲೆದೋರಿರುವ ಗೊಂದಲಗಳ ನಿವಾರಣೆಗೆ ಖುದ್ದು ಪಕ್ಷದ ಹಿರಿಯ ನಾಯಕ ಹಾಗೂ ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕಿಳಿದಿದ್ದು, ಬೆಂಗಳೂರು ಶಾಸಕರ ಸಭೆ ನಡೆಸುತ್ತಿದ್ದಾರೆ. ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಿ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ ಧವಳಗಿರಿಯಲ್ಲಿ ಬೆಂಗಳೂರು ಬಿಜೆಪಿ ಶಾಸಕರ ಸಭೆ ನಡೆಯುತ್ತಿದೆ. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ …

Read More »

ಡಾ.ರಾಜ್​ಕುಮಾರ್ ಮಗಳು ಲಕ್ಷ್ಮೀ ಅವರ ಮಗ ಷಣ್ಮುಖ ಗೋವಿಂದರಾಜ್ ಬೆಳ್ಳಿ ತೆರೆಯಲ್ಲಿ ಮಿಂಚಲು ಸಜ್ಜಾಗಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ದೊಡ್ಮನೆ ಅಂದಾಕ್ಷಣ ಸಹಜವಾಗಿ ನೆನಪಾಗುವುದು ಸದಾಶಿವನಗರದಲ್ಲಿರುವ ಡಾ.ರಾಜ್​ಕುಮಾರ್ ಅವರ ಐಷಾರಾಮಿ ಮನೆ. ಅಣ್ಣಾವ್ರಂತೆ ಅವರ ಮೂರು ಮಕ್ಕಳಾದ ಶಿವ ರಾಜ್​ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಹಾಗೂ ದಿವಂಗತ ಪುನೀತ್ ರಾಜ್​ಕುಮಾರ್ ಸ್ಟಾರ್ ನಟರಾಗಿ ಮಿಂಚಿದ್ದಾರೆ. ಇವರು ಮಾತ್ರವಲ್ಲದೇ ಅಣ್ಣಾವ್ರ ಮೊಮ್ಮಕ್ಕಳಾದ ವಿನಯ್ ರಾಜ್​ಕುಮಾರ್, ಯುವ ರಾಜ್​ಕುಮಾರ್, ಧೀರೇನ್ ರಾಮ್ ಕುಮಾರ್, ಧನ್ಯ ರಾಮ್ ಕುಮಾರ್ ಹಾಗು ಶಿವಣ್ಣನ ಮಗಳು ನಿವೇದಿತಾ ಶಿವ ರಾಜ್​ಕುಮಾರ್ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. …

Read More »

ಗಂಗಾವತಿಯ ಶಾಸಕ ಜಿ. ಜನಾರ್ದನ ರೆಡ್ಡಿ ಅವರು ಖಾಸಗಿ ಕಾರ್ಯಕ್ರಮದಲ್ಲಿ ಹಾಡು ಹಾಡಿ ಗಮನ ಸೆಳೆದರು

ಗಂಗಾವತಿ (ಕೊಪ್ಪಳ) : ಗಾಯನ ಎನ್ನುವ ಶಕ್ತಿಗೆ ಎಂಥ ವ್ಯಕ್ತಿಯನ್ನಾದರೂ ಸೆಳೆದುಕೊಳ್ಳುವ ಮಾಂತ್ರಿಕತೆ ಇದೆ. ಇಂತಹ ಗಾಯನ ಇದೀಗ ಗಂಗಾವತಿಯ ಶಾಸಕ ಜಿ.ಜನಾರ್ದನ ರೆಡ್ಡಿ ಅವರನ್ನು ಮೈಕು ಹಿಡಿದು ಹಾಡು ಹೇಳಿಸುವಂತೆ ಮಾಡಿದ್ದು, ಜನರ ಕುತೂಹಲಕ್ಕೆ ಕಾರಣವಾಯಿತು. ನಗರದಲ್ಲಿಂದು ಖಾಸಗಿ ಕರೋಕೆ ಮೆಲೋಡೀಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕರನ್ನು ಹಿಂಬಾಲಕರು ಮತ್ತು ಅಭಿಮಾನಿಗಳು ಒಂದು ಹಾಡು ಹೇಳುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ರೆಡ್ಡಿ, “ಇಲ್ಲ ನನಗೆ ಹಾಡು ಹಾಡಲು ಬರುವುದಿಲ್ಲ. ಬೇಕಿದ್ದರೆ …

Read More »

ಸೌಜನ್ಯ ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ರಾಯಣ್ಣ ಅಭಿಮಾನಿ ಬಳಗದ ಸದಸ್ಯರ ಪ್ರತಿಭಟನೆ

ಸೌಜನ್ಯ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು ಪ್ರತಿಭಟನೆ ನಡೆಸಿದರು ಸೌಜನ್ಯ ಕೊಲೆ ಪ್ರಕರಣ ನಡೆದು 11 ತಿಂಗಳು ಕಳೆದಿವೆ. ಸಂತೋಷ ರಾವ್ ಅವರನ್ನು ಬಂಧಿಸಿ ಅವರಿಗೆ ಕಿರುಕುಳ ನೀಡಲಾಗಿದೆ. ಈಗ ಅವರನ್ನು ಅಮಾಯಕ ಎಂದು ಬಿಡುಗಡೆ ಮಾಡಲಾಗಿದೆ. ಆದರೆ ಈ ಪ್ರಕರಣದಲ್ಲಿ ಸೌಜನ್ಯ ಕುಟುಂಬಕ್ಕೆ ಹಾಗೂ ಸಂತೋಷ ರಾವ್ ಕುಟುಂಬಕ್ಕೆ ಅನ್ಯಾಯ ಮಾಡಲಾಗಿದೆ. ಎಂದು …

Read More »

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಟೋಪಣ್ಣವರ ಮತ್ತು ಸುಜೀತ ಮುಳಗುಂದ ಜಿಲ್ಲಾಧಿಕಾರಿಗೆ ಮನವಿ

ಶಹಾಪುರ ಎಸ್ ಬಿಐ ವೃತ್ತದಿಂದ ಹಳೆ ಪಿಬಿ ರಸ್ತೆಯ ಅವೈಜ್ಞಾನಿಕವಾಗಿ ರಸ್ತೆ ಅಗಲೀಕರಣ ಮಾಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶುಕ್ರವಾರ ರಾಜಕುಮಾರ ಟೋಪಣ್ಣವರ ಮತ್ತು ಸುಜೀತ ಮುಳಗುಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಶಹಾಪುರದ ಎಸ್ ಬಿಐ ವೃತ್ತದಿಂದ ಹಳೆ ಪಿ.ಬಿ.ರಸ್ತೆಯ ಅಗಲೀಕರಣದ ಸಂದರ್ಭದಲ್ಲಿ ಬಿಜೆಪಿ ನಾಯಕರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಸ್ಮಾಟ್೯ ಸಿಟಿಯಿಂದ ರಸ್ತೆ ಅಗಲೀಕರಣ ಮಾಡಲಾಗಿದೆ. ಕೋಟ್ಯಂತರ ರೂ. ವೆಚ್ಚ ಮಾಡಿ ರಸ್ತೆ ನಿರ್ಮಾಣ …

Read More »

ಬಿಜೆಪಿ ಮತ್ತು ಜೆಡಿಎಸ್​ನಿಂದ 10 ರಿಂದ 15 ಮಂದಿ ಕಾಂಗ್ರೆಸ್​ ಸೇರಲಿದ್ದಾರೆ: ಚಲುವರಾಯಸ್ವಾಮಿ

ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು ಸಾಧ್ಯವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಇಂದು ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ 10 …

Read More »

ನಮ್ಮ ಕುಟುಂಬದ ಯಾವೊಬ್ಬ ವ್ಯಕ್ತಿ ಹೆಸರಲ್ಲಿ ನೈಸ್ ಆಸ್ತಿ ಇಲ್ಲ. ಒಂದು ವೇಳೆ ನಮ್ಮ ಕುಟುಂಬದ ಒಬ್ಬರ ಹೆಸರಲ್ಲಿ ಜಮೀನು ಇದ್ದರೂ ಇಡೀ ಕುಟುಂಬ ರಾಜಕೀಯ ನಿವೃತ್ತಿ ಪಡೆಯುತ್ತೇವೆ

ಬೆಂಗಳೂರು : ನಮ್ಮ ಕುಟುಂಬದ ಯಾವೊಬ್ಬ ವ್ಯಕ್ತಿ ಹೆಸರಲ್ಲಿ ನೈಸ್ ಆಸ್ತಿ ಇಲ್ಲ. ಒಂದು ವೇಳೆ ನಮ್ಮ ಕುಟುಂಬದ ಒಬ್ಬರ ಹೆಸರಲ್ಲಿ ಜಮೀನು ಇದ್ದರೂ ಇಡೀ ಕುಟುಂಬ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಜೆಡಿಎಸ್​​ ಕಚೇರಿ ಜೆಪಿ ಭವನದಲ್ಲಿ ಇಂದು ನಡೆಯುತ್ತಿರುವ ಕೋರ್ ಕಮಿಟಿ ಸಭೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನೈಸ್ ವಿಚಾರವಾಗಿ ಸಂಸದ ಡಿ ಕೆ ಸುರೇಶ್ …

Read More »

ಕಾಂಗ್ರೆಸ್​ನಲ್ಲಿ ಮತ್ತೆ ಪತ್ರ ಸಮರ ಪ್ರಾರಂಭ

ಬೆಂಗಳೂರು: ಕಾಂಗ್ರೆಸ್​ನಲ್ಲಿ ಮತ್ತೆ ಪತ್ರ ಸಮರ ಪ್ರಾರಂಭವಾಗಿದೆ. ಈ ಬಾರಿ ವಿಧಾನ ಪರಿಷತ್ ನಾಮನಿರ್ದೇಶನ ವಿಚಾರದಲ್ಲಿ ಜಟಾಪಟಿ ಶುರುವಾಗಿದ್ದು, ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ಆಕ್ಷೇಪಿಸಿ ಎಐಸಿಸಿ ಅಧ್ಯಕ್ಷರಿಗೆ ನಾಲ್ವರು ಸಚಿವರು ಪತ್ರ ಬರೆದಿದ್ದಾರೆ. ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಹೆಚ್.ಸಿ.ಮಹದೇವಪ್ಪ ಹಾಗು ಆರ್.ಬಿ.ತಿಮ್ಮಾಪುರ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ಸುಧಾಮ್ ದಾಸ್ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಯಾಗಿ ಇದ್ದವರು. ಕೆಲ ವರ್ಷಗಳ ಹಿಂದೆ ಏಕಾಏಕಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಮಾರ್ಚ್ 2023ಕ್ಕೆ ಮಾಹಿತಿ ಆಯುಕ್ತರ …

Read More »

ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ ಅಂದುಕೊಂಡ ಮಗು ಅಂತ್ಯಸಂಸ್ಕಾರ ಮಾಡುವ ವೇಳೆ ಜೀವಂತ

ಧಾರವಾಡ: ಮೃತಪಟ್ಟಿದ್ದಾನೆ ಅಂದುಕೊಂಡಿದ್ದ ಮಗುವೊಂದು ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡುವಾಗ ಜೀವಂತವಾಗಿರುವುದು ಗೊತ್ತಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ. ಒಂದೂವರೆ ವರ್ಷದ ಆಕಾಶ ಬಸವರಾಜ ಪೂಜಾರ ಎಂಬ ಮಗು ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿತ್ತು. ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂದು ಕಿಮ್ಸ್ ವೈದ್ಯರು ಹೇಳಿದ್ದರು. ಹೀಗಾಗಿ ಆಕಾಶನನ್ನು ಊರಿನಲ್ಲಿಯೇ ಅಂತ್ಯಕ್ರಿಯೆ ಮಾಡಲು ಪಾಲಕರು ಬಸಾಪುರ ಗ್ರಾಮಕ್ಕೆ ತೆಗೆದುಕೊಂಡು …

Read More »