Breaking News

Monthly Archives: ಆಗಷ್ಟ್ 2023

ಮೂಲಸೌಕರ್ಯಕ್ಕೆ ಬಂಡವಾಳ ವೆಚ್ಚ ಅತ್ಯಲ್ಪ! ಇದು ಪಂಚ ಗ್ಯಾರಂಟಿ ಪರಿಣಾಮವೇ?

ಬೆಂಗಳೂರು: ಮೂಲಸೌಕರ್ಯ ಅಭಿವೃದ್ಧಿಪಡಿಸುವ ಬಂಡವಾಳ ವೆಚ್ಚಕ್ಕೆ ಮೀಸಲಿರಿಸುವ ಮೊತ್ತದ ಆಧಾರದಲ್ಲಿ ಬಜೆಟ್ ಅಭಿವೃದ್ದಿ ಪೂರಕವೋ ಅಲ್ಲವೋ ಎಂಬುದನ್ನು ವ್ಯಾಖ್ಯಾನಿಸಲಾಗುತ್ತದೆ. ಆದರೆ, ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಕರ್ನಾಟಕ ಸರ್ಕಾರ ವ್ಯಯಿಸಿರುವ ಬಂಡವಾಳ ವೆಚ್ಚ ನಿರಾಶಾದಾಯಕವಾಗಿದೆ ಎನ್ನುವುದು ಅಂಕಿಅಂಶಗಳಿಂದ ಗೊತ್ತಾಗುತ್ತಿದೆ. ಬಂಡವಾಳ ವೆಚ್ಚ ಎಂದರೆ ರಾಜ್ಯದ ಆರ್ಥಿಕ ಅಭಿವೃದ್ಧಿ, ಮೂಲ ಸೌಕರ್ಯ ಅಭಿವೃದ್ಧಿ, ಆಸ್ತಿ ಸೃಜನೆಗಾಗಿ ಮಾಡುವ ಮಹತ್ವದ ವೆಚ್ಚವಾಗಿದೆ. ಬಂಡವಾಳ ವೆಚ್ಚಕ್ಕೆ ಬಜೆಟ್​ನಲ್ಲಿ ಹೆಚ್ಚಿನ ಹಣ ಮೀಸಲಿಟ್ಟರೆ, ಅದು ಅಭಿವೃದ್ಧಿಪರ …

Read More »

ಕಾರ್ಮಿಕರಿಲ್ಲದೆ ಲಂಗರು ಹಾಕಿದ ಬೋಟ್​ಗಳು; ಉತ್ತಮ ವಾತಾವರಣವಿದ್ದರೂ ಶುರುವಾಗದ ಮೀನುಗಾರಿಕೆ!

ಕಾರವಾರ (ಉತ್ತರಕನ್ನಡ) : ಉತ್ತಮ ವಾತಾವರಣ ಇರುವ ಹಿನ್ನೆಲೆಯಲ್ಲಿ ಮೀನುಗಾರಿಕೆ ನಿರೀಕ್ಷೆಯಲ್ಲಿದ್ದ ಮೀನುಗಾರರಿಗೆ ಆರಂಭದಲ್ಲಿಯೇ ವಿಘ್ನ ಎದುರಾಗಿದೆ. ಹೊರರಾಜ್ಯದ ಮೀನುಗಾರರನ್ನು ನಂಬಿದ್ದ ಬೋಟ್‌ಗಳಿಗೆ ಎರಡು ವಾರ ಕಳೆದರೂ ಕಾರ್ಮಿಕರು ಬಾರದೇ ಇರುವುದು ಬೋಟ್‌ಗಳು ಬಂದರುಗಳಲ್ಲಿಯೇ ಲಂಗರು ಹಾಕಿವೆ. ಜಿಲ್ಲೆಯ ಬಹುತೇಕ ಮೀನುಗಾರಿಕಾ ಬೋಟುಗಳು ಒಡಿಶಾ, ಜಾರ್ಖಂಡ್, ಉತ್ತರಪ್ರದೇಶ ಸೇರಿದಂತೆ ಇನ್ನಿತರ ರಾಜ್ಯದ ಕಾರ್ಮಿಕರನ್ನೇ ಹೆಚ್ಚಾಗಿ ನಂಬಿಕೊಂಡಿವೆ. ಈ ಕಾರ್ಮಿಕರ ಮೂಲಕವೇ ವರ್ಷವಿಡೀ ಮೀನುಗಾರಿಕೆ ನಡೆಯುತ್ತದೆ. ಆದರೆ ಈಗ ಮೀನುಗಾರಿಕೆ ಪ್ರಾರಂಭವಾಗಿ ಎರಡು …

Read More »

MSP: 9 ವರ್ಷಗಳಲ್ಲಿ ಜೋಳ, ಸಜ್ಜೆ, ರಾಗಿಯ ಕನಿಷ್ಠ ಬೆಂಬಲ ಬೆಲೆ ಶೇ 100ರಿಂದ 150ರಷ್ಟು ಹೆಚ್ಚಳ

ನವದೆಹಲಿ : ಕಳೆದ ಒಂಬತ್ತು ವರ್ಷಗಳಲ್ಲಿ ಜೋಳ, ಸಜ್ಜೆ ಮತ್ತು ರಾಗಿಯ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್​​ಪಿ) ಶೇ 100ರಿಂದ ಶೇ 150ರಷ್ಟು ಹೆಚ್ಚಳವಾಗಿದೆ. ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2014-15 ಮತ್ತು 2023-24ರ ನಡುವೆ ಜೋಳದ ಎಂಎಸ್​ಪಿ ಶೇಕಡಾ 108 ರಷ್ಟು ಹೆಚ್ಚಾಗಿದೆ. 2014-15ರಲ್ಲಿ ಜೋಳದ ಕನಿಷ್ಠ ಬೆಂಬಲ ಬೆಲೆ ಕ್ವಿಂಟಾಲ್​ಗೆ 1,550 ರೂ.ಗಳಷ್ಟಿತ್ತು. ಇದು 2023-24ರಲ್ಲಿ ಪ್ರತಿ ಕ್ವಿಂಟಾಲ್​ಗೆ ಶೇ 108ರಷ್ಟು ಏರಿಕೆಯಾಗಿ 3,225 …

Read More »

ಇನ್ನೇನು ಪುರಾವೆ ಬೇಕು ದೀದಿ?: ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ನಡ್ಡಾ ವಾಗ್ದಾಳಿ

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮಾಧ್ಯಮದ ಮೂಲಕ ಕೋಲಾಘಾಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಪಶ್ಚಿಮ ಬಂಗಾಳದಲ್ಲಿ ಅನೇಕ ಭ್ರಷ್ಟಾಚಾರ ಪ್ರಕರಣಗಳ ಕುರಿತು ಮಾತನಾಡಿದ್ದರು. ಬಳಿಕ ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ‘ಪ್ರಧಾನ ಮಂತ್ರಿಗಳ ಆರೋಪಕ್ಕೆ ಆಧಾರ ಅಥವಾ ಪುರಾವೆ ಏನು? ಎಂದು ಆಡಿಯೋ ಸಂದೇಶದ ಮೂಲಕ ತಿರುಗೇಟು ನೀಡಿದ್ದರು. ಇದಕ್ಕೆ ಉತ್ತರಿಸಿದ ನಡ್ಡಾ “ಇನ್ನೆಷ್ಟು ಪುರಾವೆ ಬೇಕು ದೀದಿ(ಮಮತಾ ಬ್ಯಾನರ್ಜಿ)?. ಈ ರಾಜ್ಯದಲ್ಲಿ ಎಲ್ಲಾ …

Read More »

ಸಾಮಾಜಿಕ ಮಾಧ್ಯಮಗಳ ಡಿಪಿ ಬದಲಿಸಿದ ಪ್ರಧಾನಿ ಮೋದಿ.. ಹರ್​ಘರ್​ ತಿರಂಗಾ ಅಭಿಯಾನದಲ್ಲಿ ಭಾಗವಹಿಸಲು ಕರೆ

ನವದೆಹಲಿ (ಭಾರತ) : ದೇಶ ಸ್ವಾತಂತ್ರ್ಯೋತ್ಸವ ಅಮೃತೋತ್ಸವದಲ್ಲಿದ್ದು, ಕಳೆದ ವರ್ಷದಂತೆ ಈ ಬಾರಿಯೂ ‘ಹರ್​ ಘರ್​ ತಿರಂಗಾ ಅಭಿಯಾನ’ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಜನರಲ್ಲಿ ಕೋರಿದ್ದಾರೆ. ಸಾಮಾಜಿಕ ಜಾಲತಾಣಗಳ ಪ್ರೊಫೈಲ್​ ಜಾಗದಲ್ಲಿ (ಡಿಪಿ) ತ್ರಿವರ್ಣ ಧ್ವಜದ ಚಿತ್ರವನ್ನು ಅಳವಡಿಸಲೂ ಕರೆ ನೀಡಿದ್ದು, ಸ್ವತಃ ಅವರು ತಮ್ಮ ಭಾವಚಿತ್ರವನ್ನು ಬದಲಿಸಿದ್ದಾರೆ. #HarGharTiranga ಆಂದೋಲನದ ಭಾಗವಾಗಿ ನಾವು ಬಳಸುವ ಸಾಮಾಜಿಕ ಮಾಧ್ಯಮ ಖಾತೆಗಳ ಡಿಪಿಯನ್ನು ಬದಲಾಯಿಸೋಣ. ಪ್ರೀತಿಯ ದೇಶ ಮತ್ತು ನಮ್ಮ …

Read More »

ಮಾಯಾವತಿ ಜನ್ಮದಿನದಂದು ಮಣ್ಣಿನ ಕೇಕ್ ಕತ್ತರಿಸಿದ ಆರೋಪ: ಮೂವರ ಬಂಧನ

ಸಂಭಾಲ್ (ಉತ್ತರ ಪ್ರದೇಶ): ಎಂಟು ವರ್ಷಗಳ ಹಿಂದೆ ಬಹುಜನ ಸಮಾಜ ಪಕ್ಷದ (ಬಿಎಸ್​ಪಿ) ಮುಖ್ಯಸ್ಥೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರ ಜನ್ಮದಿನದಂದು ಮಣ್ಣಿನ ಕೇಕ್ ಕತ್ತರಿಸಿ, ಮಣ್ಣಿನ ಲಡ್ಡುಗಳನ್ನು ವಿತರಿಸಿದ್ದ ಆರೋಪ ಪ್ರಕರಣದಲ್ಲಿ ​ಮೂವರನ್ನು ಸಂಭಾಲ್ ಪೊಲೀಸರು ಬಂಧಿಸಿದ್ದಾರೆ. ಶನಿವಾರ ನ್ಯಾಯಾಲಯ ಹೊರಡಿಸಿದ ಬಂಧನ ವಾರೆಂಟ್​ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಶಕೀಲ್ ಉರ್ ರೆಹಮಾನ್ ಮಲಿಕ್, ನೂರ್ ಖಾನ್ ಹಾಗೂ ಜುಲ್ಫಿಕರ್​ ಎಂಬುವವರೇ ಬಂಧಿತರೆಂದು ಗುರುತಿಸಲಾಗಿದೆ. …

Read More »

ಅಜಿತ್​ ನನ್ನ ಸೋದರ ಸಂಬಂಧಿ, ಭೇಟಿಯಲ್ಲಿ ತಪ್ಪೇನು?- ಶರದ್ ಪವಾರ್

ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್​ಸಿಪಿ) ತಿಂಗಳ ಹಿಂದೆ ಎರಡು ಬಣಗಳಾಗಿ ಇಬ್ಭಾಗವಾಗಿತ್ತು. ಒಂದೆಡೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗು ಹಿರಿಯ ರಾಜಕಾರಣಿ ಶರದ್​ ಪವಾರ್​ ಬಿಜೆಪಿಯನ್ನು ಕಟುವಾಗಿ ವಿರೋಧಿಸುತ್ತಿದ್ದಾರೆ. ಮತ್ತೊಂದೆಡೆ, ಸಂಬಂಧದಲ್ಲಿ ಪುತ್ರರಾದ ಅಜಿತ್​ ಪವಾರ್​ ಅವರು ಶಿವಸೇನೆ (ಏಕನಾಥ್ ಶಿಂಧೆ ಬಣ) ಹಾಗೂ ಬಿಜೆಪಿ ಸಮ್ಮಿಶ್ರ ಸರ್ಕಾರ ಸೇರುವ ಮೂಲಕ ಕೇಸರಿ ಪಕ್ಷದ ಸಖ್ಯ ಬೆಳೆಸಿದ್ದಾರೆ. ಹೀಗಾಗಿ ಎನ್​ಸಿಪಿ ಶರದ್​ ಹಾಗೂ ಅಜಿತ್​ ಬಣವಾಗಿ ರೂಪುಗೊಂಡಿದೆ. …

Read More »

ಬೆಳಗಾವಿಯಲ್ಲಿ ಏಡಿ ಖರೀದಿಗೆ ಮುಗಿಬಿದ್ದ ಜನರು; ಏಡಿ ಆರೋಗ್ಯಕ್ಕೆ ಒಳ್ಳೆಯದೇ? ನ್ಯೂಟ್ರಿಶಿಯನ್​ ಹೇಳುವುದೇನು?

ಬೆಳಗಾವಿ : ಕುಂದಾನಗರಿ ಬೆಳಗಾವಿಯಲ್ಲಿ ಏಡಿಗಳ ಮಾರಾಟ ಬಿರುಸಾಗಿದೆ. ಮಳೆ ಹಿನ್ನೆಲೆಯಲ್ಲಿ ಏಡಿಗಳ ಮಾರಾಟ ನಡೆಯುತ್ತಿದ್ದು, ಗ್ರಾಹಕರು ಮುಗಿಬೀಳುತ್ತಿದ್ದಾರೆ. ಕಳೆದೊಂದು ತಿಂಗಳಿನಿಂದ ನಗರದ ಕ್ಯಾಂಪ್​ ಪ್ರದೇಶದಲ್ಲಿನ ಏಡಿ ಖರೀದಿ ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ಸಾಗುತ್ತಿದೆ. ಕ್ಯಾಂಪ್ ಪ್ರದೇಶ, ಖಾಸಬಾಗ, ಕಸಾಯಿಗಲ್ಲಿ ಸೇರಿದಂತೆ ನಗರದ ಹಲವೆಡೆ ಮಾರಾಟ ನಡೆಯುತ್ತಿದೆ. ಬೆಳಗಾವಿ ನಗರ ಸೇರಿ ಸುತ್ತಲಿನ ಹಳ್ಳಿಗಳಿಂದಲೂ ಆಗಮಿಸುತ್ತಿರುವ ಜನ ದುಂಬಾಲು ಬಿದ್ದು ಏಡಿ ಖರೀದಿಸುತ್ತಿದ್ದಾರೆ. ಕಳೆದೊಂದು ತಿಂಗಳಿನಿಂದ ಏಡಿ ಮಾರಾಟ ನಡೆಯುತ್ತಿದ್ದು, ಹಿಡಕಲ್ …

Read More »

ಮದರಸಾ ಹಾಸ್ಟೆಲ್ ಕೊಠಡಿಯಲ್ಲಿ ಶಿರಚ್ಛೇದಗೊಳಿಸಿದ ವಿದ್ಯಾರ್ಥಿಯ ಶವ ಪತ್ತೆ!

(ಅಸ್ಸಾಂ): ಮದರಸಾವೊಂದರ ಹಾಸ್ಟೆಲ್ ಕೊಠಡಿಯಲ್ಲಿ ಶಿರಚ್ಛೇದಿಸಿದ ಸ್ಥಿತಿಯಲ್ಲಿ 12 ವರ್ಷದ ವಿದ್ಯಾರ್ಥಿಯ ಮೃತದೇಹ ಪತ್ತೆಯಾದ ಘಟನೆ ಈಶಾನ್ಯ ರಾಜ್ಯ ಅಸ್ಸಾಂನ ಕಚಾರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಢೋಲೈ ಗ್ರಾಮದ ದಾರುಸ್ ಸಲಾಮ್ ಹಫೀಜಿಯಾ ಮದರಸಾದ ಹಾಸ್ಟೆಲ್​ನಲ್ಲಿ ಶಿಕ್ಷಕರು ಬೆಳಗ್ಗೆ ವಿದ್ಯಾರ್ಥಿಗಳನ್ನು ಎಬ್ಬಿಸಲು ಹೋಗಿದ್ದಾಗ ಘಟನೆ ಬೆಳಕಿಗೆ ಬಂದಿದೆ. ಹತ್ಯೆಯಾದ ವಿದ್ಯಾರ್ಥಿ ಕಳೆದ ರಾತ್ರಿ ಊಟ ಮುಗಿಸಿ ನಿದ್ರಿಸಲು ತನ್ನ ಕೊಠಡಿಗೆ ತೆರಳಿದ್ದ. ಬೆಳಗ್ಗೆ ಫಜ್ರ್ ನಮಾಝ್‌ಗಾಗಿ (ಬೆಳಗಿನ ಪ್ರಾರ್ಥನೆ) ವಿದ್ಯಾರ್ಥಿಗಳನ್ನು ಎಬ್ಬಿಸಲು …

Read More »

ಸಿದ್ದಗಂಗಾ ಮಠದ ಹಿಂಭಾಗದ ಗೋ ಕಟ್ಟೆಯಲ್ಲಿ ಈಜಲು ತೆರಳಿ ಮುಳುಗುತ್ತಿದ್ದ ಬಾಲಕನನ್ನು ರಕ್ಷಿಸಲು ಹೋಗಿ ನಾಲ್ವರು ಮೃತಪಟ್ಟಿದ್ದಾರೆ.

ತುಮಕೂರು : ಸಿದ್ದಗಂಗಾ ಮಠದ ಹಿಂಭಾಗದಲ್ಲಿರುವ ಗೋ ಕಟ್ಟೆಯಲ್ಲಿ (ಕೃಷಿ ಹೊಂಡದಂತಿರುವ ಕೆರೆ) ಬಿದ್ದು ನಾಲ್ವರು ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಬಾಗಲಗುಂಟೆಯ ಲಕ್ಷ್ಮೀ (33) ಹಾಗೂ ಯಾದಗಿರಿ ಜಿಲ್ಲೆಯ ಅಫಜಲಪುರದ ಮಹದೇವಪ್ಪ (44) ಚಿಕ್ಕಮಗಳೂರಿನ ಶಂಕರ್ (11), ರಾಮನಗರದ ಹರ್ಷಿತ್ (11) ಮೃತರು ಎಂದು ತಿಳಿದುಬಂದಿದೆ. ರಂಜಿತ್​, ಶಂಕರ್​, ಹರ್ಷಿತ್​ ಮಠದಲ್ಲಿ 6ನೇ ತರಗತಿಯನ್ನು ಓದುತ್ತಿದ್ದರು. ರಂಜಿತ್‌ನ​ ತಾಯಿ ಲಕ್ಷ್ಮೀ ಮಗನನ್ನು ಭೇಟಿಯಾಗಲು ಮಠಕ್ಕೆ ಬಂದಿದ್ದರು. ಈ ವೇಳೆ ಅವರು …

Read More »