ಗಂಗಾವತಿ (ಕೊಪ್ಪಳ): ಗ್ರಾಮ ಪಂಚಾಯಿತಿಗೆ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಪ್ರಕಟವಾದ ಮೀಸಲಾತಿ ಅವೈಜ್ಞಾನಿಕವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಎರಡು ಕೋಮುಗಳ ನಡುವೆ ಸಂಘರ್ಷ ಉಂಟಾಗಿದೆ. ಪರಸ್ಪರ ದೊಣ್ಣೆ, ರಾಡ್ ಸೇರಿದಂತೆ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಕಾರಟಗಿ ತಾಲ್ಲೂಕಿನ ಬೂದಗುಂಪಾ ಗ್ರಾಮದಲ್ಲಿ ಇಂದು (ಭಾನುವಾರ) ಘಟನೆ ನಡೆಯಿತು. ಗಂಭೀರ ಗಾಯಗೊಳಗಾದವರನ್ನು ಸಮುದಾಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಗಂಗಾವತಿ ಉಪವಿಭಾಗ ಆಸ್ಪತ್ರೆಗೆ ಕಳುಹಿಸಲಾಗಿದೆ. ಸದ್ಯ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. …
Read More »Monthly Archives: ಆಗಷ್ಟ್ 2023
ಅದ್ಧೂರಿ ಸ್ವಾತಂತ್ರ್ಯೋತ್ಸವಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜು
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು. ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆಗಳ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು. ಆಗಸ್ಟ್ 15ರಂದು ಬೆಳಗ್ಗೆ 8:58ಕ್ಕೆ ಮುಖ್ಯಮಂತ್ರಿಗಳು ಮೈದಾನಕ್ಕೆ ಆಗಮಿಸಲಿದ್ದು, 9:00 ಗಂಟೆಗೆ ರಾಷ್ಟ್ರ ಧ್ವಜಾರೋಹಣ ಮಾಡುವರು. ನಂತರ ತೆರೆದ ಜೀಪಿನಲ್ಲಿ ಪೆರೇಡ್ …
Read More »ಅಮೃತಹಳ್ಳಿ ಜೋಡಿ ಕೊಲೆ ಪ್ರಕರಣ: 30 ದಿನದಲ್ಲಿ ತನಿಖೆ ನಡೆಸಿ ಚಾರ್ಜ್ಶೀಟ್ ಸಲ್ಲಿಕೆ
ಬೆಂಗಳೂರು : ಖಾಸಗಿ ಕಂಪನಿಯಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಜೋಡಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ನಗರದ ಅಮೃತಹಳ್ಳಿ ಠಾಣಾ ಪೊಲೀಸರು 30 ದಿನಗಳೊಳಗೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಜೀ-ನೆಟ್ ಕಂಪನಿಯ ಅರುಣ್ ಫೆಲಿಕ್ಸ್, ವಿನಯ್ ರೆಡ್ಡಿ ಹಾಗೂ ಸಂತೋಷ್ ಎಂಬಾತನ ವಿರುದ್ಧ ದೋಷಾರೋಪಣೆ ಸಲ್ಲಿಕೆಯಾಗಿದೆ. ಉದ್ಯಮದಲ್ಲಿ ಸ್ಪರ್ಧಿಸಲಾಗದೇ ಎದುರಾಳಿ ಕಂಪನಿಯ ಅರುಣ್ ಕೊಲೆ ಸಂಚು ರೂಪಿಸಿದ್ದು ತನಿಖೆಯಲ್ಲಿ ಸಾಬೀತಾಗಿದೆ. ಇತ್ತೀಚಿನ ದಿನಗಳಲ್ಲಿ ಕಡಿಮೆ ಅವಧಿಯಲ್ಲಿ ತನಿಖೆ …
Read More »ಬೊಮ್ಮಾಯಿ ಸರ್ಕಾರ ₹1.5 ಲಕ್ಷ ಕೋಟಿ ಮೌಲ್ಯದ ಟೆಂಡರ್ ಕರೆದು ಕಿಕ್‌ಬ್ಯಾಕ್ ಪಡೆದಿತ್ತು- ಹೆಚ್.ವಿಶ್ವನಾಥ್
ಬೆಳಗಾವಿ : “ವಿಧಾನಸಭೆ ಚುನಾವಣೆಗೂ ಮುನ್ನ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದೂವರೆ ಲಕ್ಷ ಕೋಟಿ ರೂಪಾಯಿ ಮೌಲ್ಯದ ಟೆಂಡರ್ ಕರೆದು ಕಿಕ್ ಬ್ಯಾಕ್ ತೆಗೆದುಕೊಂಡಿದೆ” ಎಂದು ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರರಿಂದ ಕಮಿಷನ್ ಆರೋಪದ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಮಾತನಾಡುವುದು ಸುಲಭ, ಮಾತನಾಡುವವನು ಸತ್ಯವಂತನಿರಬೇಕು. ಇಡೀ ದೇಶ, ರಾಜ್ಯದಲ್ಲಿ ನೀ ಕಳ್ಳ, ನೀ ಕಳ್ಳ ಎನ್ನುತ್ತಾರೆ. ಆದರೆ ಯಾರು ಕಳ್ಳ …
Read More »ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕುಟುಂಬ ಸಮೇತರಾಗಿ ಭಾನುವಾರ ಹಾವೇರಿ ಸಿಂದಗಿ ಮಠಕ್ಕೆ ಭೇಟಿ
ಹಾವೇರಿ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕುಟುಂಬ ಸಮೇತರಾಗಿ ಭಾನುವಾರ ಹಾವೇರಿ ಸಿಂದಗಿ ಮಠಕ್ಕೆ ಭೇಟಿ ನೀಡಿದರು. ಸಿಂದಗಿ ಮಠದ ಶಾಂತವೀರೇಶ್ವರ ಗದ್ದುಗಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ನನ್ನ ರಾಜಕೀಯ ಜೀವನಕ್ಕೆ ಆಶೀರ್ವಾದ ಮಾಡಿರುವ ಮಠ “ಸಿಂದಗಿಮಠ” ಎಂದು ತಿಳಿಸಿದರು. ಟಿಕೆಟ್ ವಿಚಾರವನ್ನು ರಾಜ್ಯ, ರಾಷ್ಟ್ರೀಯ ಸಮಿತಿ ನಾಯಕರು ನಿರ್ಧರಿಸುತ್ತಾರೆ: 25 ವರ್ಷಗಳಿಂದ ನಾನು ಈ ಮಠದೊಂದಿಗೆ ಸಂಪರ್ಕ ಇಟ್ಟುಕೊಂಡಿದ್ದೇನೆ. ಇದು ಸಮಾಜವನ್ನು ಒಂದೂಗೂಡಿಸುವ ಮಠ. …
Read More »ಬಿಡುಗಡೆಗೂ ಮುನ್ನವೇ ದಾಖಲೆ ಬರೆದ ‘ಪುಷ್ಪ 2’
2021ರಲ್ಲಿ ತೆರೆ ಕಂಡು ವಿಶ್ವದಾದ್ಯಂತ ಧೂಳೆಬ್ಬಿಸಿದ್ದ ‘ಪುಷ್ಪ: ದಿ ರೈಸ್’ನ ಮುಂದುವರೆದ ಭಾಗ ಇದಾಗಿದೆ. ನಟ ಅಲ್ಲು ಅರ್ಜುನ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರದ ಮೇಲೆ ಮುಗಿಲೆತ್ತರದ ನಿರೀಕ್ಷೆಯಿದೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ದಾಖಲೆಯನ್ನು ಸೃಷ್ಟಿಸಿದೆ. ಇತಿಹಾಸದಲ್ಲಿ ಇದೇ ಮೊದಲು.. ಏಪ್ರಿಲ್ 8 ರಂದು ಪುಷ್ಪ 2 ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆಗೊಳಿಸಿತ್ತು. ಈ ಪೋಸ್ಟರ್ 4 ತಿಂಗಳಲ್ಲಿ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ನಲ್ಲಿ …
Read More »ಏಷ್ಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆ ಮಾಡಿದ ಕಲಬುರಗಿಯ ಬಾಲಕ
ಕಲಬುರಗಿ : ಕೋವಿಡ್ ಸಂದರ್ಭದಲ್ಲಿ ಶಾಲೆಗಳಿಗೆ ಸಾಲು ಸಾಲು ರಜೆ ನೀಡಿದ್ದ ಪರಿಣಾಮ ಮನೆಯಲ್ಲಿ ಕುಳಿತಿದ್ದ ಬಹುತೇಕ ಮಕ್ಕಳು ಮೊಬೈಲ್ ಬಳಕೆಗೆ ಅಂಟಿಕೊಂಡಿದ್ರು. ಆದ್ರೆ ಇಲ್ಲೊಬ್ಬ ಪೋರ ರಜೆ ಸಮಯ ಸದುಪಯೋಗ ಮಾಡಿಕೊಂಡು ದಾಖಲೆ ಬರೆಯುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾನೆ. ಮೊದಲು ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಪಟ್ಟಿಗೆ ಸೇರಿದ್ದ ಈ ಬಾಲಕ, ಇದೀಗ ಏಷ್ಯಾ ಬುಕ್ ಆಪ್ ರೆಕಾರ್ಡ್‌ನಲ್ಲಿ ಗ್ರಾಂಡ್ ಮಾಸ್ಟರ್ ಎಂಬ ಬಿರುದು ಪಡೆದು …
Read More »ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಟ ಉಪೇಂದ್ರ ಅವರ ವಿರುದ್ಧ F.I.R. ದಾಖಲ
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದಡಿ ನಟ, ನಿರ್ದೇಶಕ ಉಪೇಂದ್ರ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್‌ಐಆರ್) ದಾಖಲಾಗಿದೆ. ಜಾತಿಯೊಂದರ ಭಾವನೆಗಳಿಗೆ ಧಕ್ಕೆಯಾಗುವ ಪದ ಬಳಸಿದ್ದಾರೆ ಎಂದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಅವರು ದೂರು ನೀಡಿದ್ದರು. ಇತ್ತೀಚಿಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯ ನೇರಪ್ರಸಾರದಲ್ಲಿ ಮಾತನಾಡಿದ್ದ ಉಪೇಂದ್ರ ಸಮುದಾಯವೊಂದರ ಕುರಿತು ಆಕ್ಷೇಪಾರ್ಹ …
Read More »ಹೊಸಕೋಟೆ ಮತ್ತು ಬೆಳಗಾವಿಯಲ್ಲಿ ವಿದ್ಯುತ್ ಕಂಬ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಲೈನ್‌ಮ್ಯಾನ್‌ಗಳು ಸಾವನ್ನಪ್ಪಿದ್ದಾರೆ.
(ಬೆ. ಗ್ರಾ)/ಬೆಳಗಾವಿ : ಪ್ರತ್ಯೇಕ ಕಡೆಗಳಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುವಾಗ ಹೈ ವೋಲ್ಟೇಜ್ ವಿದ್ಯುತ್ ಪ್ರವಹಿಸಿ ಇಬ್ಬರು ಲೈನ್‌ಮ್ಯಾನ್‌ಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಕೋಲಾರ ಜಿಲ್ಲೆಯವ ಅನಿಲ್ (35) ಮತ್ತು ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಸಿದ್ದರಾಮ ಕುಪವಾಡೆ (38) ಎಂದು ಗುರುತಿಸಲಾಗಿದೆ. ಪ್ರಕರಣ -1: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಾಲೂರು ರಸ್ತೆಯ ವಿಜಯನಗರ ಗೇಟ್ ಬಳಿ ಅನಿಲ್ ಕೆಲಸ ಮಾಡುವಾಗ ಘಟನೆ ನಡೆಯಿತು. ಬೆಸ್ಕಾಂನಲ್ಲಿ ಗುತ್ತಿಗೆ …
Read More »ಸಾಯುವ ಕೊನೆಕ್ಷಣದಲ್ಲಿ ವಿಡಿಯೋ ಮಾಡಿದ ಪ್ರಿಯಕರನೊಬ್ಬ, ಪ್ರಿಯತಮೆಗೆ ತನ್ನ ಅಂತ್ಯಕ್ರಿಯೆಗೆ ಬರುವಂತೆ ಆಹ್ವಾನ ನೀಡಿ ಅಸುನೀಗಿದ್ದಾನೆ.
ಬೆಂಗಳೂರು): ರೋಗ ಉಲ್ಬಣಗೊಂಡು ಸಾಯುವ ಕೊನೆಕ್ಷಣದಲ್ಲಿ ವಿಡಿಯೋ ಮಾಡಿದ ಪ್ರಿಯಕರನೊಬ್ಬ, ಪ್ರಿಯತಮೆಗೆ ತನ್ನ ಅಂತ್ಯಕ್ರಿಯೆಗೆ ಬರುವಂತೆ ಆಹ್ವಾನ ನೀಡಿ ಅಸುನೀಗಿದ್ದಾನೆ. ನೆಲಮಂಗಲ ತಾಲೂಕಿನ ದಾಬಸ್ ಪೇಟೆಯ ಕಿರಣ್ (22) ಮೃತಪಟ್ಟ ಯುವಕ. ಆಗಸ್ಟ್ 9ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯ ವಿವರ: ಕಿರಣ್ ರೇಬೀಸ್ ರೋಗದಿಂದಾಗಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ. ಯುವಕನಿಗೆ ತನ್ನ ಸಾವಿನ ಕ್ಷಣಗಳು ಸಮೀಪಿಸುತ್ತಿರುವ ಅರಿವಾಗಿತ್ತು. ಹೀಗಾಗಿ, ಪ್ರೀತಿಸಿದ ಹುಡುಗಿಯ ನೆನಪಾಗಿ ಬದುಕಿನ ಕಡೇಯ ಕ್ಷಣಗಳಲ್ಲಿ …
Read More »