Breaking News

Monthly Archives: ಆಗಷ್ಟ್ 2023

ಮಹಿಳೆ ಮೇಲೆ ಅತ್ಯಾಚಾರ, ಹಣ ವಸೂಲಿ ಆರೋಪ: ಸ್ಯಾಂಡಲ್​ವುಡ್​ ನಿರ್ಮಾಪಕನ ಬಂಧನ

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಹಣ ವಸೂಲಿ ಮಾಡಿದ ಆರೋಪದಡಿ ಕೊಡಿಗೆಹಳ್ಳಿ ಠಾಣೆ ಪೊಲೀಸರು ಕನ್ನಡ ಚಿತ್ರರಂಗದಲ್ಲಿ ‘ಸ್ವಯಂಕೃಷಿ’ ಎಂಬ ಚಿತ್ರ ನಿರ್ಮಾಣ ಮಾಡಿ, ನಟಿಸಿದ್ದ ವೀರೇಂದ್ರ ಬಾಬು ಎಂಬುವರನ್ನು ಬಂಧಿಸಿದ್ದಾರೆ. ನಿರ್ಮಾಪಕ ತನ್ನ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿ, ಅದರ ವಿಡಿಯೋ ಸೆರೆ ಹಿಡಿದುಕೊಂಡು ಬೆದರಿಕೆ ಹಾಕಿದ್ದಾರೆ ಹಾಗೂ 15 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ 36 ವರ್ಷದ ಮಹಿಳೆಯೊಬ್ಬರು ಕೊಡಿಗೆಹಳ್ಳಿ ಪೊಲೀಸ್​ …

Read More »

ಗುತ್ತಿಗೆದಾರರ ಬಿಲ್ ಬಾಕಿ – ತನಿಖೆ ಬಳಿಕ ಸತ್ಯಾಂಶ ಗೊತ್ತಾಗಲಿದೆ: ಸಿಎಂ

ಮೈಸೂರು: ಗುತ್ತಿಗೆದಾರರ ಬಿಲ್ ಬಾಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಬಳಿಕ ಸತ್ಯಾಂಶ ಗೊತ್ತಾಗಲಿದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇಂದು ರಾಜ್ಯ ಮಟ್ಟದ ವಕೀಲರ ಪರಿಷತ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ, ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ನನ್ನ ಹುಟ್ಟುಹಬ್ಬ ಆಗಸ್ಟ್ 3, ಆಗಸ್ಟ್ 12 ಎಂಬ ಎರಡು ದಿನಾಂಕಗಳು ಕೂಡ ತಪ್ಪು. ಒಂದನ್ನು ನಮ್ಮ ಮೇಷ್ಟ್ರು ಬರೆಸಿದ್ದರು, ಮತ್ತೊಂದನ್ನು …

Read More »

ಬಿಬಿಎಂಪಿ ಅಗ್ನಿ ದುರಂತ.. ಇಬ್ಬರು ಸಿಬ್ಬಂದಿ ವಿಚಾರಣೆ: ಡಿಸಿಪಿ ಶ್ರೀನಿವಾಸ್ ಗೌಡ

ಬೆಂಗಳೂರು: ಬಿಬಿಎಂಪಿಯ ಗುಣ ನಿಯಂತ್ರಣ ವಿಭಾಗದ ಪ್ರಯೋಗಾಲಯ ಮತ್ತು ಕಚೇರಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡ ಪ್ರಕರಣ ಸಂಬಂಧ ಇಬ್ಬರು ಸಿಬ್ಬಂದಿಯನ್ನು ಹಲಸೂರು ಗೇಟ್ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದವರನ್ನ ಖುದ್ದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಬಿಬಿಎಂಪಿ ಅಧಿಕಾರಿಗಳು ತಡರಾತ್ರಿ ದೂರು ನೀಡಿದ್ದರು. ಅದರ ಅನ್ವಯ ನಿರ್ಲಕ್ಷ್ಯತನ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ. ಗುಣ ನಿಯಂತ್ರಣ …

Read More »

ಬೆಳ್ಳಂ ಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ಮೂವರು ಸಾವ

ಬೆಳಗಾವಿ: ಬೆಳ್ಳಂ ಬೆಳಿಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದು, ವಿದ್ಯುತ್ ತಂತಿ ತುಳಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯವಿದ್ರಾವಕ ನಗರದಲ್ಲಿ ಸಂಭವಿಸಿದೆ. ಇಲ್ಲಿನ ಶಾಹುನಗರದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ಮೂವರು ಸದಸ್ಯರು ದುರ್ಮರಣ ಹಿನ್ನೆಲೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟದೆ. ಸ್ಥಳಕ್ಕೆ ಕಟ್ಟಡದ ಮಾಲೀಕ ಮತ್ತು ಇಂಜಿನಿಯರ್ ಬಂದ ಬಳಿಕ ಮೃತದೇಹಗಳನ್ನು ತೆರವು ಮಾಡುತ್ತೇವೆ ಎಂದು ಸಂಬಂಧಿಕರು ಪಟ್ಟು ಹಿಡಿದಿದ್ದಾರೆ. ಬೋರವೆಲ್ ಸ್ವಿಚ್ ಆನ್​ ಮಾಡುವ ವೇಳೆ ಕರೆಂಟ್ …

Read More »

ಶ್ರೀ ಸದ್ಗುರು ಶಿವಯೋಗಿಶ್ವರ ಮಠ ಸುಕ್ಷೇತ್ರ ಕುಳ್ಳುರು ಗ್ರಾಮದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ

ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.   ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲೂಕಿನ ಕುಳ್ಳುರು ಗ್ರಾಮದಲ್ಲಿ ಶ್ರೀ ಶಿವಯೋಗಿಶ್ವರ ಮಠದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.   ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …

Read More »

ವಿಜೇತರ ಪಟ್ಟಿ: ಪ್ರಶಸ್ತಿ ಮುಡಿಗೇರಿಸಿಕೊಂಡ ‘ಸೀತಾ ರಾಮಂ’ , ‘ಪಠಾಣ್​’

ಮೆಲ್ಬೋರ್ನ್ (ಆಸ್ಟ್ರೇಲಿಯಾ): ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಚಿತ್ರ ಭಾರಿ ಗಳಿಕೆ ಮಾಡುವ ಮೂಲದ ದೇಶ ಮಾತ್ರವಲ್ಲದೇ, ವಿಶ್ವದೆಲ್ಲೆಡೆ ಸದ್ದು ಮಾಡಿತ್ತು. ಇದೀಗ ಮತ್ತೊಮ್ಮೆ ‘ಪಠಾಣ್’​ ಶಾರುಖ್ ಖಾನ್ ಅಭಿಮಾನಿಗಳಲ್ಲಿ ಸಂತಸವನ್ನ ತಂದಿದೆ. ಶುಕ್ರವಾರ ನಡೆದ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಆಫ್ ಮೆಲ್ಬೋರ್ನ್ (IFFM) ನ 14 ನೇ ಆವೃತ್ತಿಯಲ್ಲಿ ಪೀಪಲ್ಸ್ ಚಾಯ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಪಠಾಣ್ ಸಿನಿಮಾ​ ಜನವರಿ …

Read More »

ಗುತ್ತಿಗೆದಾರರ ಬೇಡಿಕೆ ಈಡೇರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ​ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿ

ಬೆಂಗಳೂರು : ಗುತ್ತಿಗೆದಾರರ ಸಂಶಯ ನಿವಾರಣೆ ಮಾಡುವ ಕೆಲಸ ಬಿಟ್ಟು ರಾಜಕೀಯ ನಿವೃತ್ತಿ ಮಾತು ಹೇಳಿದ್ದಾರೆ. ಇಂತಹ ನಿಮ್ಮ ನಿವೃತ್ತಿ ಭಾಷಣವನ್ನು ನಾವು ಎಷ್ಟು ಕೇಳಿಲ್ಲ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು ಕೊಟ್ಟರು. ಮಹಾಲಕ್ಷ್ಮಿ ಲೇಔಟ್​ನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಾಲದಲ್ಲಿ ಬಿಡುಗಡೆಯಾಗಿರುವ 650 ಕೋಟಿ ರೂ ಹಣವನ್ನು ಯಾಕೆ ಇಟ್ಟುಕೊಂಡಿದ್ದೀರಿ, 3 ತಿಂಗಳಾಗಿದೆ ತನಿಖೆಯಾಗಿರಬೇಕಲ್ಲವೇ? ನಾವು ಜನವರಿಯಲ್ಲಿ ಪಾವತಿ ಮಾಡಿ ನಂತರದ ಮೂರು …

Read More »

ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ.

ಬೆಂಗಳೂರು: ”ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ. ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯ ನೀಡಬೇಕಿದೆ. ಸಮಯಾವಕಾಶ ನೀಡಿ, ಬಳಿಕ ಹಂತಹಂತವಾಗಿ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ. ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯ. ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಲಾಗುವುದು” ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿಂದು ಸುದ್ದಿಗೋಷ್ಠಿ …

Read More »

ಬಿಬಿಎಂಪಿ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಅಗ್ನಿ ಅವಘಡ: ತಾಂತ್ರಿಕ ವಿಚಾರಣೆಗೆ ಆದೇಶ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ವ್ಯಾಪ್ತಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದೆ. ಈ ಸಂಬಂಧ ಆಂತರಿಕ ತಾಂತ್ರಿಕ ವಿಚಾರಣೆ ನಡೆಸಲು ಪಾಲಿಕೆ ಇಂಜಿನಿಯರ್ ಇನ್ ಚೀಫ್ ಬಿ.ಎಸ್ ಪ್ರಹ್ಲಾದ್ ಅವರನ್ನು ನೇಮಿಸಲಾಗಿದೆ. ತಾಂತ್ರಿಕ ವಿಚಾರಣೆ ವರದಿಯನ್ನು ಆಗಸ್ಟ್ 31ರೊಳಗೆ ಸಲ್ಲಿಸುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಆದೇಶಿಸಿದ್ದಾರೆ.     “ಬಿಬಿಎಂಪಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ದಿನಾಂಕ: 11-08-2023 ರಂದು ಅಗ್ನಿ ಅವಘಡ ಸಂಭವಿಸಿದ್ದು, ಈ …

Read More »

13 – 15 ರವರೆಗೆ ನಡೆಯುವ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ರಾಷ್ಟ್ರದ ಜನತೆಗೆ ಮನವಿ

ನವದೆಹಲಿ: ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಸಂದಿವೆ. ಈ ಸಂದರ್ಭದಲ್ಲಿ ಈ ವರ್ಷ ಆ.13 ರಿಂದ 15ರವರೆಗೆ ‘ಹರ್ ಘರ್ ತಿರಂಗಾ'(ಪ್ರತಿ ಮನೆಯಲ್ಲೂ ತ್ರಿವರ್ಣ) ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ದೇಶದ ಜನತೆಗೆ ಕರೆ ನೀಡಿದರು. ‘ಹರ್ ಘರ್ ತಿರಂಗ’ ವೆಬ್​ ಸೈಟ್​ನಲ್ಲಿ ತಿರಂಗದೊಂದಿಗೆ ನಿಮ್ಮ ಭಾವಚಿತ್ರಗಳನ್ನು ಅಪ್​ಲೋಡ್​ ಮಾಡಿ ಎಂದು ಪ್ರಧಾನಿ ಹೇಳಿದರು.     “ತಿರಂಗ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಚೈತನ್ಯವನ್ನು …

Read More »