ಬೆಳಗಾವಿ: ”ಬೆಳಗಾವಿಯಲ್ಲಿ ಆಗಸ್ಟ್ 29 ಅಥವಾ 30 ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುತ್ತೇವೆ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಸ್ಥಳ ಪರಿಶೀಲನೆ ನಡೆಸಿ, ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ”ಕಾರ್ಯಕ್ರಮಕ್ಕಾಗಿ ಈ ಜಾಗ ಗುರುತಿಸಲಾಗಿದೆ. ರಾಹುಲ್ ಗಾಂಧಿ ಅವರೂ ಆಗಮಿಸುತ್ತಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆಯಿದೆ” ಎಂದರು. ”ಒಂದು ವಿಭಾಗದಲ್ಲಿ ಒಂದು ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಶಕ್ತಿ ಯೋಜನೆ, …
Read More »Monthly Archives: ಆಗಷ್ಟ್ 2023
ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಕಟ್ಟಡ ಲೋಕಾರ್ಪಣೆ
ಚಿಕ್ಕೋಡಿ: ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಪಶು ವೈದ್ಯಕೀಯ ಮಹಾವಿದ್ಯಾಲಯ ಕಟ್ಟಡ ಲೋಕಾರ್ಪಣೆ ಮತ್ತು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅಯೋಜಿಸಿದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಆದಿಯಾಗಿ ಭಾಷಣ ಮಾಡಿದ ಕಾಂಗ್ರೆಸ್ ನಾಯಕರೆಲ್ಲ ಅಥಣಿ ಶಾಸಕ ಲಕ್ಷ್ಮಣ ಸವದಿಯವರನ್ನು (Lakshman Savadi) ಮನಸಾರೆ ಹೊಗಳಿದರು, ಕೊಂಡಾಡಿದರು. ಶಿವಕುಮಾರ್ ಮಾತಾಡಿ, ತನಗೆ ಹಲವಾರು ಕೆಲಸಗಳ ಒತ್ತಡವಿದ್ದರೂ ಸವದಿ ಬಹಳ ಅಭಿಮಾನದಿಂದ ಆಹ್ವಾನಿಸಿದ್ದರಿಂದ ಬಂದಿರುವುದಾಗಿ ಹೇಳಿದರು. ತಾವು …
Read More »ಆನೆದಂತ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿ ಬಂಧನ
ಬೆಂಗಳೂರು: ಆನೆದಂತ (Elephant Ivory) ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಆರ್ಎಂಸಿ ಯಾರ್ಡ್ ಪೊಲೀಸರು (Police) ಬಂಧಿಸಿದ್ದಾರೆ. ಶ್ರೀಶೈಲ ಬಂಧಿತ ಆರೋಪಿ. ಆರೋಪಿ ಶ್ರೀಶೈಲ್ ಗುರುವಾರ ಸಂಜೆ 6.30 ರ ಸುಮಾರಿಗೆ ಆರ್ಎಂಸಿ ಯಾರ್ಡ್ ಠಾಣಾ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿ ಆನೆ ದಂತ ಮಾರಾಟಕ್ಕೆ ಯತ್ನಿಸುತ್ತಿದ್ದನು. ಈ ಬಗ್ಗೆ ಆರ್ಎಂಸಿ ಯಾರ್ಡ್ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಕೂಡಲೆ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 7.42 ಕೆಜಿ ತೂಕದ 5 ಆನೆ …
Read More »ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು
ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ (Puneeth Kerehalli) ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ (Goond Act) ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಬಿ ಪೊಲೀಸರು (CCB Police) ಆತನನ್ನು ಬಂಧಿಸಿದ್ದಾರೆ. ಪುನೀತ್ ಕೆರೆಹಳ್ಳಿ 2013 ರಿಂದ 2023 ರವರಗೆ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಸಮಾಜದಲ್ಲಿ ಶಾಂತಿ ಕದಡುವ ಯತ್ನ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಹಿನ್ನೆಲೆಯಲ್ಲಿ ಮೇಲೆ ಮೇಲಿಂದ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ …
Read More »ಫೋರ್ಜರಿ ಮಾಡಿದ್ದ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ DC ಆದೇಶ
ಬೀದರ್, (ಆಗಸ್ಟ್ 09): ಕೋರ್ಟ್ ತೀರ್ಪು (Court Verdict) ಫೋರ್ಜರಿ ಮಾಡಿದ್ದ ಹುಮ್ನಾಬಾದ್(humnabad) ತಾಲೂಕಿನ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಬೀದರ್ ಜಿಲ್ಲಾಧಿಕಾರಿ (Bidar DC) ಆದೇಶಿಸಿದ್ದಾರೆ. ಭೂವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ(ಕೆಎಟಿ ) ತೀರ್ಪನ್ನು ತಿದ್ದಿದ್ದ ಪ್ರಕರಣಕ್ಕೆ ಬಸವತೀರ್ಥ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಹಶೀಲ್ದಾರ್ಗೆ ಜಿಲ್ಲಾಧಿಕಾರಿ ಗೋಂವಿದರೆಡ್ಡಿ ಸೂಚನೆ ನೀಡಿದ್ದಾರೆ. ದೂರುದಾರ ಚಂದ್ರಕಾಂತ ಜಲಾದಾರ, ಸ್ವಾಮೀಜಿ ನಡುವೆ ಭೂವಿವಾದಕ್ಕೆ ಸಂಬಂಧಿಸಿದಂತೆ 2017ರ …
Read More »ಕರ್ನಾಟಕ ಗೆಲುವಿನ ಹುಮ್ಮಸ್ಸು, ತೆಲಂಗಾಣದಲ್ಲೂ ಪಕ್ಷವನ್ನು ಗೆಲ್ಲಿಸುವ ಗಟ್ಟಿ ವಿಶ್ವಾಸ: ಡಿಕೆಶಿ- ಪ್ರಿಯಾಂಕಾಗೆ ಹೆಚ್ಚಿನ ಹೊಣೆ!?
ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿರುವ ಅಭೂತಪೂರ್ವ ಗೆಲುವು, ಕೈ ಹಕಮಾಂಡ್ಗೆ ಭರ್ಜರಿ ಬೂಸ್ಟ್ ನೀಡಿದೆ. ಹೀಗಾಗಿ ಮುಂಬರುವ ಚುನಾವಣೆಗಳನ್ನು ಎದುರಿಸಲು ಕಾಂಗ್ರೆಸ್ ರಣೋತ್ಸಾಹದಿಂದ ಮುನ್ನುಗ್ಗುತ್ತಿದೆ. ಯಾವುದೇ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಿ ಮುನ್ನಡೆಯುವ ಛಾತಿಯಲ್ಲಿದೆ. ಕರ್ನಾಟಕ ಗೆಲುವಿನ ಹುಮ್ಮಸ್ಸು, ತೆಲಂಗಾಣದಲ್ಲೂ ಪಕ್ಷವನ್ನು ಗೆಲ್ಲಿಸುವ ಗಟ್ಟಿ ವಿಶ್ವಾಸವನ್ನು ಪಕ್ಷದ ನಾಯಕರಲ್ಲಿ ಬಲಗೊಳಿಸಿದೆ. ಹೀಗಾಗಿ ಕಾಂಗ್ರೆಸ್ ಮತ್ತಷ್ಟು ಸಮರ್ಥವಾಗಿ ಮುನ್ನಡೆಯಲು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ಪಕ್ಷದ ಪ್ರಧಾನ …
Read More »ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ
ಮೈಸೂರು: ಕಬ್ಬಿನ ಗದ್ದೆಯೊಂದರಲ್ಲಿ ಕಬ್ಬು ಬೆಳೆ ಕಟಾವಿನ ವೇಳೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ಟಿ.ನರಸೀಪುರ ತಾಲೂಕಿನ ಗುಡ್ಡದ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕಬ್ಬು ಕಟಾವು ಮಾಡಲು ಬಂದಿದ್ದ ಕೂಲಿ ಕಾರ್ಮಿಕರು ಮರಿಗಳನ್ನು ರಕ್ಷಣೆ ಮಾಡಿದ್ದಾರೆ. ಟಿ.ನರಸೀಪುರ ತಾಲೂಕಿನ ಗುಡ್ಡದ ಕೊಪ್ಪಲು ಗ್ರಾಮದಲ್ಲಿ, ದೊರೆಸ್ವಾಮಿ ಎಂಬುವವರ ಜಮೀನಿನಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಅವರ ಜಮೀನಿನಲ್ಲಿ ಕಬ್ಬು ಬೆಳೆಯನ್ನು ಕಟಾವು ಮಾಡುವ ಸಮಯದಲ್ಲಿ, ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಕಾಣಿಸಿಕೊಂಡಿವೆ. ಈ …
Read More »ಮನೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಹಠಾತ್ ಹೃದಯಾಘಾತ ಸಂಭವಿಸಿ ಪೊಲೀಸ್ ಕಾನ್ಸ್ಟೇಬಲ್ ಮೃತಪಟ್ಟಿದ್ದಾರೆ.
ರಾಯಚೂರು: ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ಇಂದು ನಡೆದಿದೆ. ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಗುರುವಾರ ರಾತ್ರಿ ಘಟನೆ ಜರುಗಿದೆ. ಬಸವನಗೌಡ ಆಗೋಲಿ (34) ಮೃತರು. ಇವರು ಮಸ್ಕಿ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಕೆಲಸ ಮುಗಿಸಿಕೊಂಡು ಮನೆಯಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದೆ. ತಕ್ಷಣವೇ ಆಸ್ಪತ್ರೆಗೆ ರವಾನಿಸುತ್ತಿದ್ದಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ. …
Read More »ರಾಜ್ಯದ ಮೊದಲ ‘ಬೀದಿ ನಾಯಿಗಳ ಪುನರ್ವಸತಿ ಕೇಂದ್ರ’ ಉದ್ಘಾಟನೆಗೆ ಸಿದ್ದ: ಇಲ್ಲಿರುವ ಸೌಲಭ್ಯಗಳೇನು?
ಮೈಸೂರು: ರಾಜ್ಯದಲ್ಲಿ ಮೊದಲ ಬಾರಿಗೆ ಮೈಸೂರಿನ ಮಹಾನಗರ ಪಾಲಿಕೆಯ ವತಿಯಿಂದ ಬೀದಿ ನಾಯಿಗಳ ಪುನರ್ವಸತಿ ಕೇಂದ್ರ ನಿರ್ಮಾಣಗೊಂಡಿದೆ. ಇದು ಹಲವಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಮೂಲಕ ರಾಜ್ಯದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊದಲ ‘ಬೀದಿ ನಾಯಿಗಳ ಆರೈಕೆ ಕೇಂದ್ರ’ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಇಲ್ಲಿ ಯಾವ ರೀತಿಯ ಸೌಲಭ್ಯಗಳಿವೆ? ಎಷ್ಟು ವೆಚ್ಚದಲ್ಲಿ ಕೇಂದ್ರವನ್ನು ಸ್ಥಾಪಿಸಲಾಗಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ನಾಗರಾಜ್ ಈಟಿವಿ ಭಾರತಕ್ಕೆ ವಿವರ ನೀಡಿದರು. ಶೀಘ್ರದಲ್ಲೇ ಉದ್ಘಾಟನೆ: ಕೇಂದ್ರ ಸರ್ಕಾರದ ಸಹಯೋಗದೊಂದಿಗೆ …
Read More »ಮಾರ್ಗದರ್ಶಿ ಚಿಟ್ ಗ್ರೂಪ್ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್ ರಿಜಿಸ್ಟ್ರಾರ್ ಹೊರಡಿಸಿದ್ದ ಸಾರ್ವಜನಿಕ ನೊಟೀಸ್ಗೆ ಆಂಧ್ರ ಪ್ರದೇಶ ಹೈಕೋರ್ಟ್ ತಡೆಯಾಜ್ಞೆ
ಅಮರಾವತಿ (ಆಂಧ್ರ ಪ್ರದೇಶ): ಮಾರ್ಗದರ್ಶಿ ಚಿಟ್ ಗ್ರೂಪ್ಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವ ಕುರಿತು ಚಿಟ್ ರಿಜಿಸ್ಟ್ರಾರ್ ಹೊರಡಿಸಿದ್ದ ಸಾರ್ವಜನಿಕ ನೊಟೀಸ್ಗೆ ಆಂಧ್ರ ಪ್ರದೇಶ ಹೈಕೋರ್ಟ್ ಇಂದು ತಡೆ ನೀಡಿತು. ಸಾರ್ವಜನಿಕ ನೊಟೀಸ್ ಆಧಾರದ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳುವುದಕ್ಕೆ ಹೈಕೋರ್ಟ್ ತಡೆ ಕೊಟ್ಟಿದೆ. ಚಂದಾದಾರರು ಈಗಾಗಲೇ ಸಲ್ಲಿಸಿರುವ ಅರ್ಜಿಗಳ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಅರ್ಜಿಗಳನ್ನು ಜೊತೆಯಾಗಿಯೇ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ನ್ಯಾಯಾಲಯ ತಿಳಿಸಿತು. ಚಂದಾದಾರರು ತಮ್ಮ …
Read More »