ಬೆಂಗಳೂರು: ಗುತ್ತಿಗೆದಾರರನ್ನು ಮಾಧ್ಯಮದವರ ಮುಂದೆ ಯಾರು ಕಳಿಸುತ್ತಿದ್ದಾರೆ ಅಂತ ಗೊತ್ತಿದೆ. ನನಗೆ ಎಲ್ಲವೂ ಗೊತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಟೀಕಿಸಿದ್ದಾರೆ. ಇಂದು ಸದಾಶಿವನಗರದಲ್ಲಿರುವ ನಿವಾಸದ ಬಳಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುತ್ತಿಗೆದಾರರು ವಿರೋಧ ಪಕ್ಷದ ನಾಯಕರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದರು. ಕಾನೂನು ಪ್ರಕಾರ ತನಿಖೆ ಮಾಡಬೇಕು ಅಂತ ಹೇಳಿದ್ದೇವೆ. ಕೆಂಪಣ್ಣ ದೂರು ಕೊಟ್ಟಿದ್ದಾರೆ, ಅವರಿಗೆ ನ್ಯಾಯ ಒದಗಿಸಬೇಕು. ಕೆಲಸಕ್ಕೆ ನ್ಯಾಯ ಒದಗಿಸಬೇಕು, ಜನರಿಗೂ ನ್ಯಾಯ ಸಿಗಬೇಕು ಎಂದು …
Read More »Monthly Archives: ಆಗಷ್ಟ್ 2023
ಸ್ಮಾರ್ಟ್ ಸಿಟಿ ಮೊದಲ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆ ಸ್ಥಾನ ಪಡೆದಿದ್ದರೂ ಸಹ ಯಾವುದೇ ಬೆಳವಣಿಗೆ ಆಗಿಲ್ಲ,
ಬೆಳಗಾವಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸ್ಮಾರ್ಟ್ ಸಿಟಿ ಮೊದಲ ಪಟ್ಟಿಯಲ್ಲೇ ಬೆಳಗಾವಿ ಜಿಲ್ಲೆ ಸ್ಥಾನ ಪಡೆದಿದ್ದರಿಂದ ಕುಂದಾನಗರಿ ಜನ ಸಂಭ್ರಮಿಸಿದ್ದರು. ಆದರೆ ಸ್ಮಾರ್ಟ್ ಸಿಟಿ ಯೋಜನೆಯಿಂದ ಯಾವುದೇ ಉಪಯೋಗ ಆಗಿಲ್ಲವೆಂದು ಜನ ಆರೋಪಿಸುತ್ತಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆ ಅಂದಾಕ್ಷಣ ಬೆಳಗಾವಿ ಜನ ನಮ್ಮ ಕುಂದಾನಗರಿ ಸ್ಮಾರ್ಟ್ ಸಿಟಿ ಆಗುತ್ತದೆ, ನಮಗೆಲ್ಲಾ ಒಳ್ಳೆಯ ಸೌಲಭ್ಯಗಳು ಸಿಗುತ್ತವೆ ಅಂದುಕೊಂಡಿದ್ದರು. ಆದರೆ ತಮ್ಮ ನಂಬಿಕೆಗಳು ಮಾತ್ರ ಹುಸಿಯಾಗಿವೆ. ನಗರದ ಧರ್ಮವೀರ ಸಂಭಾಜಿ ವೃತ್ತದಲ್ಲಿ …
Read More »ಎಲ್ಲ ಗ್ರಾಮಗಳಿಗೆ ಸ್ಮಶಾನ ಭೂಮಿ ಮತ್ತು ಒತ್ತುವರಿಯಾದ ಸರ್ಕಾರ ಭೂಮಿಯನ್ನು ತೆರವುಗೊಳಿಸಿರುವ ಬಗ್ಗೆ ವಿವರಣೆ ನೀಡಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಬೆಂಗಳೂರು : ರಾಜ್ಯದಲ್ಲಿ ಜನವಸತಿ ಇರುವ ಎಲ್ಲ ಗ್ರಾಮಗಳಿಗೆ ಗೌರವಯುತ ಮತ್ತು ಸಾಂಪ್ರದಾಯಿಕವಾಗಿ ಶವ ಸಂಸ್ಕಾರ ಮಾಡಲು ಸ್ಮಶಾನ ಭೂಮಿ ಒದಗಿಸಲು ಹಾಗೂ ಒತ್ತುವರಿಯಾದ ಸರ್ಕಾರಿ ಜಮೀನುಗಳನ್ನು ತೆರವುಗೊಳಿಸಲು ಕೈಗೊಂಡಿರುವ ಕ್ರಮಗಳ ವಿರುದ್ಧ ಅರ್ಜಿದಾರರು ಎತ್ತಿರುವ ಆಕ್ಷೇಪಗಳಿಗೆ ಎರಡು ವಾರಗಳಲ್ಲಿ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಸ್ಮಶಾನವಿಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ಒದಗಿಸಲು ಹೈಕೋರ್ಟ್ ಹೊರಡಿಸಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು …
Read More »ರಾಜ್ಯದಲ್ಲಿ ನಮ್ಮ ಕ್ಲಿನಿಕ್ಗಳನ್ನು ಇನ್ನಷ್ಟು ಜನಸ್ನೇಹಿಯನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ
ಬೆಂಗಳೂರು: ಜನಸಾಮಾನ್ಯರಿಗೆ ಉಚಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ನಮ್ಮ ಕ್ಲಿನಿಕ್ಗಳಿಗೆ ಆರೋಗ್ಯ ಸಚಿವರು ಜನಸ್ನೇಹಿ ಸ್ಪರ್ಶ ನೀಡಿದ್ದು, ಕ್ಲಿನಿಕ್ಗಳ ಸಮಯ ಬದಲಾವಣೆ ಮಾಡಿ ಸಂಜೆ ವೇಳೆಯೂ ಚಿಕಿತ್ಸೆ ಲಭಿಸುವಂತೆ ಮಾಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇರುವ ಕ್ಲಿನಿಕ್ಗಳ ಪೈಕಿ ಶೇಕಡಾ 25ರಷ್ಟು ನಮ್ಮ ಕ್ಲಿನಿಕ್ಗಳ ಸಮಯ ಬದಲಾವಣೆ ಮಾಡಲು ಆರೋಗ್ಯ ಸಚಿವರು ಆದೇಶಿಸಿದ್ದಾರೆ. ಸಂಜೆ 4.30ಕ್ಕೆ ಬಾಗಿಲು ಮುಚ್ಚುತ್ತಿದ್ದ ನಮ್ಮ ಕ್ಲಿನಿಕ್ಗಳು ಇನ್ನು ಮುಂದೆ ರಾತ್ರಿ 8 ಗಂಟೆಯ ತನಕ …
Read More »ಹುಬ್ಬಳ್ಳಿ – ಧಾರವಾಡ ಮೊಟ್ಟ ಮೊದಲ ಮಹಿಳಾ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ
ಹುಬ್ಬಳ್ಳಿ/ಬೆಂಗಳೂರು: ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದೆ. ಹುಬ್ಬಳ್ಳಿ ಧಾರವಾಡ ನೂತನ ಪೊಲೀಸ್ ಆಯುಕ್ತರನ್ನಾಗಿ ಮಹಿಳಾ ಐಪಿಎಸ್ ಅಧಿಕಾರಿ ರೇಣುಕಾ ಸುಕುಮಾರ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರೇಟ್ನ ಮೊಟ್ಟ ಮೊದಲ ಮಹಿಳಾ ಕಮಿಷನರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಭಾರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂತೋಷ ಬಾಬು ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ರೇಣುಕಾ ಸುಕುಮಾರ ಅವರು 2011ರ ಐಪಿಎಸ್ …
Read More »ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ವಾರಾಹಿ ಯಾತ್ರೆಯ ಮೂರನೇ ಹಂತ ಇಂದಿನಿಂದ ವಿಶಾಖಪಟ್ಟಣದಲ್ಲಿ ಆರಂಭವಾಗಲಿದೆ.
ವಿಶಾಖಪಟ್ಟಣಂ, ಆಂಧ್ರಪ್ರದೇಶ: ನಟ ರಾಜಕಾರಣಿ ಪವನ್ ಕಲ್ಯಾಣ್ ಅವರಿಂದ ನಡೆಯುತ್ತಿರುವ ವಾರಾಹಿ ಯಾತ್ರೆ ಮುಂದುವರಿಯಲಿದೆ.ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ಮೂರನೇ ಹಂತದ ವಾರಾಹಿ ಯಾತ್ರೆಗೆ ಇಂದಿನಿಂದ ಚಾಲನೆ ದೊರೆಯಲಿದೆ. ವಿಶಾಖಪಟ್ಟಣದಲ್ಲಿ ಆರಂಭವಾಗಲಿರುವ ಈ ಯಾತ್ರೆ ಇದೇ ತಿಂಗಳ 19ರವರೆಗೆ ಮುಂದುವರಿಯಲಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನದಂದು ತಮ್ಮ ಈ ವಾರಾಹಿ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ಇಂದು ಮಧ್ಯಾಹ್ನ ಪವನ್ ಕಲ್ಯಾಣ್ ನಗರವನ್ನು ತಲುಪಲಿದ್ದು, …
Read More »ಚುನಾವಣೆ ಗೆಲ್ಲಲು ಕೈ ಮಹಾಪ್ಲಾನ್.. ವಿದ್ಯಾರ್ಥಿನಿಗೆ ಸ್ಮಾರ್ಟ್ ಫೋನ್ ವಿತರಿಸಿದ ರಾಹುಲ್
ಜೈಪುರ(ರಾಜಸ್ಥಾನ): ಮತ್ತೆ ಅಧಿಕಾರಕ್ಕೆ ಮರಳಲು ಪ್ಲಾನ್ ಹಾಕಿರುವ ಸಿಎಂ ಅಶೋಕ್ ಗೆಹ್ಲೋಟ್ ಅದಕ್ಕಾಗಿ ಭರ್ಜರಿ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ. ಇದಕ್ಕಾಗಿ ಅವರು ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಜೈಪುರದ ಬಿರ್ಲಾ ಆಡಿಟೋರಿಯಂನಲ್ಲಿ ಇಂದು ಸ್ಮಾರ್ಟ್‌ಫೋನ್ ಯೋಜನೆಗೆ ಚಾಲನೆ ನೀಡಲಿದ್ದಾರೆ. ಯೋಜನೆಗೆ ಚಾಲನೆ ಸಿಗುವ ಮುನ್ನವೇ ಕಾಂಗ್ರೆಸ್ ನೇತಾರ, ರಾಹುಲ್ ಗಾಂಧಿ ನಿನ್ನೆ ಮಂಗರ್‌ನಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಸ್ಮಾರ್ಟ್‌ಫೋನ್ ಹಸ್ತಾಂತರಿಸುವ ಮೂಲಕ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ಮೊದಲ ಸುತ್ತಿನಲ್ಲಿ ಚಿರಂಜೀವಿ ಕುಟುಂಬದ ಮಹಿಳಾ ಮುಖ್ಯಸ್ಥರು …
Read More »ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಐಎಎಸ್, ಕೆಎಎಸ್ ಅಧಿಕಾರಿಗಳು ಕಣ್ಣು ಮತ್ತು ಕಿವಿಗಳಿದ್ದಂತೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಪ್ರತಿಯೊಬ್ಬ ಅಧಿಕಾರಿ ಸಂವಿಧಾನದ ಚೌಕಟ್ಟಿನೊಳಗೆ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ಕಾರ್ಯನಿರ್ವಹಿಸಬೇಕು. ವಿದ್ಯಾವಂತರಾದ ಅಧಿಕಾರಿಗಳು, ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆಯೊಂದಿಗೆ ಕರ್ತವ್ಯ ನಿರ್ವಹಿಸುವ ಮೂಲಕ ಜಾತ್ಯತೀತ ಹಾಗೂ ಸಮಾನ ಸಮಾಜವನ್ನು ನಿರ್ಮಿಸಬಹುದಾಗಿದೆ. ಸರ್ಕಾರದ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವ ಶಪಥವನ್ನು ಅಧಿಕಾರಿಗಳು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ‘ಶತಮಾನೋತ್ಸವ’ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜಕಾರಣಿಗಳು …
Read More »ರಾಜ್ಯ ಸರ್ಕಾರದಿಂದ ಡ್ರೈವರ್ ಹುದ್ದೆಗೆ ಅರ್ಜಿ ಆಹ್ವಾನ
ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಲಾಗಿದೆ. ಒಟ್ಟು ಮೂರು ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುವುದು. ಸೂಕ್ತ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಸೂಚನೆಹುದ್ದೆ …
Read More »ಸ್ತ್ರೀ ದ್ವೇಷಿ ವ್ಯಕ್ತಿ’: ಸಂಸತ್ತಿನಲ್ಲಿ ರಾಹುಲ್ ‘ಫ್ಲೈಯಿಂಗ್ ಕಿಸ್’ಗೆ ಸ್ಮೃತಿ ಇರಾನಿ ಆರೋಪ; ಸ್ಪೀಕರ್‌ಗೆ ಶೋಭಾ ಕರಂದ್ಲಾಜೆ ದೂರು
ನವದೆಹಲಿ: ಲೋಕಸಭೆಯಲ್ಲಿಂದು ಮಣಿಪುರ ಹಿಂಸಾಚಾರ ವಿಷಯವಾಗಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿಲುವಳಿ ಮೇಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತಮ್ಮ ಭಾಷಣದ ನಂತರ ‘ಫ್ಲೈಯಿಂಗ್ ಕಿಸ್’ (ಗಾಳಿಯಲ್ಲಿ ಮುತ್ತು) ನೀಡಿದ್ದಕ್ಕೆ ಬಿಜೆಪಿ ಮಹಿಳಾ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸದನದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರತ್ತ ರಾಹುಲ್ ಗಾಂಧಿ ‘ಅನುಚಿತ ಸನ್ನೆ’ …
Read More »