ಮುಂಬೈ (ಮಹಾರಾಷ್ಟ್ರ) : ಕ್ವಿಟ್ ಇಂಡಿಯಾ ಚಳವಳಿಯ 81ನೇ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿ ನಡೆಸದಂತೆ ನನ್ನನ್ನು ಪೊಲೀಸರು ತಡೆದಿದ್ದಾರೆ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಆರೋಪಿಸಿದ್ದಾರೆ. ಇಲ್ಲಿನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ತುಷಾರ್ ಗಾಂಧಿ ಅವರು ಇಂದು ಬೆಳಿಗ್ಗೆ ಸುಬುರ್ಬಾನ್ ಸಾಂತಾ ಕ್ರೂಝ್ನಲ್ಲಿರುವ ಮನೆಯಿಂದ ಹೊರಟಿದ್ದರು. ಈ ವೇಳೆ ಮನೆಗೆ ಆಗಮಿಸಿದ …
Read More »Monthly Archives: ಆಗಷ್ಟ್ 2023
ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ತಂದೆಯ ಹತ್ಯೆಗೆ ಸಂಚು ರೂಪಿಸಿದ ಮಗಳು
ಸೊಲ್ಲಾಪುರ (ಮಹಾರಾಷ್ಟ್ರ): ಪ್ರೇಮ ವಿವಾಹಕ್ಕೆ ತಂದೆ ವಿರೋಧ ವ್ಯಕ್ತಪಡಿಸಿದ್ದರಿಂದ ಮಗಳು ತಂದೆಯ ಹತ್ಯೆಗೆ ಸಂಚು ರೂಪಿಸಿದ್ದಾಳೆ. ಕೊಲೆ ಮಾಡಲು ನಾಲ್ವರಿಗೆ 60 ಸಾವಿರ ರೂ. ಸುಪಾರಿ (ತಲಾ 15 ಸಾವಿರ) ನೀಡಿದ್ದಾಳೆ. ಸೊಲ್ಲಾಪುರದ ಮಾಧಾ ಪೊಲೀಸರು ಕೂಲಂಕಷವಾಗಿ ವಿಚಾರಣೆ ನಡೆಸಿದ ಬಳಿಕ ಯುವತಿ, ಪ್ರಿಯಕರ ಹಾಗೂ ತಂದೆಯ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ಬಂಧಿಸಿದ್ದಾರೆ. ತಾಲೂಕಿನ ವಡಚಿ ವಾಡಿಯಲ್ಲಿ ಈ ಘಟನೆ ನಡೆದಿದೆ. ಗಾಯಾಳು ಯವತಿಯ ತಂದೆ ಮಾದ ತಾಲೂಕಿನ ನಿವಾಸಿ …
Read More »ಧಾರವಾಡದಲ್ಲಿ ತಮ್ಮದೇ ತಂಪು ಪಾನೀಯ ಉದ್ಯಮ ಆರಂಭಿಸಲಿದ್ದಾರೆ. ಮುತ್ತಯ್ಯ ಮುರಳೀಧರನ್
ಧಾರವಾಡ : ಶ್ರೀಲಂಕಾದ ಖ್ಯಾತ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ಧಾರವಾಡದಲ್ಲಿ ಸ್ವಂತ ತಂಪು ಪಾನೀಯ ಉದ್ಯಮ ಪ್ರಾರಂಭಿಸಲು ಮುಂದಾಗಿದ್ದಾರೆ. ಈಗಾಗಲೇ ಶ್ರೀಲಂಕಾದಲ್ಲಿ ಸಿಲೋನ್ ಬೇವರೆಜಸ್ ಕ್ಯಾನ್ ಕಂಪನಿ ಮೂಲಕ ತಂಪು ಪಾನೀಯ ಮತ್ತು ಎನರ್ಜಿ ಡ್ರಿಂಕ್ ಉತ್ಪಾದನಾ ಉದ್ಯಮದಲ್ಲಿ ತೊಡಗಿರುವ ಅವರು ಧಾರವಾಡದಲ್ಲಿ ತಮ್ಮದೇ ತಂಪು ಪಾನೀಯ ಉದ್ಯಮ ಆರಂಭಿಸಲಿದ್ದಾರೆ. ಈ ಸಂಬಂಧ ಕಳೆದ ವಾರವಷ್ಟೇ ಮುತ್ತಯ್ಯ ಮುರಳೀಧರನ್ ಅವರು ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದ ಬಳಿ ಇರುವ …
Read More »ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಬೈಕ್ ಸವಾರರಿಬ್ಬರ ದುರ್ಮರಣ
ಕಲಬುರಗಿ: ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಚಿತ್ತಾಪುರ ತಾಲೂಕಿನ ಸಾತನೂರ ಬಳಿ ನಡೆದಿದೆ. ಮೃತ ಬೈಕ್ ಸವಾರರು ದಿಗ್ಗಾಂವ ಗ್ರಾಮದ ಮರೆಪ್ಪ (54) ಹಾಗೂ ಭಾಗಣ್ಣಾ (35) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರ ರಕ್ತಸ್ರಾವದಿಂದ ಇಬ್ಬರು ದುರ್ಮರಣ ಹೊಂದಿದ್ದಾರೆ. ಸ್ಥಳಕ್ಕೆ ಸಿಪಿಐ ಪ್ರಕಾಶ್ ಯಾತನೂರ, ಚಿತ್ತಾಪುರ ಪಿಎಸ್‌ಐ ಶ್ರೀಶೈಲ ಅಂಬಾಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಶಿವಯ್ಯಾ, ಮುಕ್ತುಂ …
Read More »ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಷೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಶಾಸಕರ ಅಸಮಾಧಾನ ಸ್ಫೋಟದ ಸುಳಿವು ಸಿಗುತ್ತಿದ್ದಂತೆ ಎಚ್ಷೆತ್ತುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸತತ ಮೂರನೇ ದಿನವೂ ಜಿಲ್ಲಾವಾರು ಶಾಸಕರು ಮತ್ತು ಸಚಿವರ ಸಭೆ ನಡೆಸಿ ಶಾಸಕರು ಹಾಗೂ ಸಚಿವರ ನಡುವೆ ಸಮನ್ವಯತೆ ಮೂಡಿಸುವ ಪ್ರಯತ್ನ ನಡೆಸಿದ್ದಾರೆ. ಅನುದಾನ ಕೊರತೆಯ ಬಗ್ಗೆಯೂ ಮಾಹಿತಿ ನೀಡಿ ಮಿತಿಯೊಳಗೆ ಬೇಡಿಕೆ ತನ್ನಿ ಎನ್ನುವ ಸಲಹೆ ನೀಡಿದ್ದಾರೆ. ಈ ವರ್ಷ ಹೆಚ್ಚು ಅನುದಾನದ ನಿರೀಕ್ಷೆ ಇಟ್ಟುಕೊಳ್ಳದೇ, ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆದ್ಯತೆ ನೀಡಬೇಕು ಎಂದು ಸಿಎಂ …
Read More »ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬ
ಬೆಂಗಳೂರು: ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಪರಿಣಾಮ ರಾಜ್ಯ ಪೊಲೀಸ್ ದೂರು ಪ್ರಾಧಿಕಾರ (ಪಿಸಿಎ)ದಲ್ಲಿ ಖಾಲಿಯಿರುವ ಇಬ್ಬರು ಸದಸ್ಯರ ನೇಮಕಾತಿಗೆ ವಿಳಂಬವಾಗುತ್ತಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ಅಧ್ಯಕ್ಷರ ನೇಮಕ ಕುರಿತಂತೆ ನಿರ್ದೇಶಿಸಬೇಕು ಎಂದು ವಕೀಲೆ ಸುಧಾ ಕಟ್ವಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು. …
Read More »ಹಾಳಾದ ರಸ್ತೆಯನ್ನು ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸದ ಪಿಡಬ್ಲ್ಯೂಡಿ ಅಧಿಕಾರಿಗಳು
ಚಿಕ್ಕೋಡಿ (ಬೆಳಗಾವಿ): ಆಗಸ್ಟ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಆಗಮಿಸುತ್ತಿದ್ದು ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಅಥಣಿಯಿಂದ ಕೋಕಟನೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 20 ಕಿಮೀ ರಸ್ತೆ ದುರಸ್ತಿ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಈ ಹಿಂದೆ ರಸ್ತೆ ದುರಸ್ತಿಗೆ ಅಥಣಿ ಲೋಕೋಪಯೋಗಿ ಅಧಿಕಾರಿಗಳಿಗೆ ಹಲವು ಬಾರಿ ಜನರು ಮನವಿ ಸಲ್ಲಿಸಿದರೂ ಕ್ಯಾರೆನ್ನದ ಅಧಿಕಾರಿಗಳು ಸದ್ಯ …
Read More »ಕಡೂರು ತಾಲೂಕಿನ ಗರ್ಜೆ ಗ್ರಾಮ ಪಂಚಾಯತ್ನಲ್ಲಿ ಮಗಳು ಅಧ್ಯಕ್ಷರಾಗಿ ಆಯ್ಕೆಯಾದರೆ, ತಾಯಿ ಉಪಾಧ್ಯಕ್ಷರಾಗಿ ಆಯ್ಕೆ
ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಗರ್ಜೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದು ಅಮ್ಮ, ಮಗಳು ಇಬ್ಬರು ಅಧ್ಯಕ್ಷ ಹಾಗು ಉಪಾಧ್ಯಕ್ಷ ಸ್ಥಾನ ಅಲಂಕರಿಸಿ ಗಮನ ಸೆಳೆದಿದ್ದಾರೆ. ಅಧ್ಯಕ್ಷೆಯಾಗಿ ಮಗಳು ಸ್ನೇಹ ಆಯ್ಕೆಯಾದರೆ, ತಾಯಿ ನೇತ್ರಾವತಿ ಉಪಾಧ್ಯಕ್ಷೆಯಾದರು. ಗರ್ಜೆ ಹಾಗೂ ಜಿ.ಮಾದಾಪುರ ಗ್ರಾಮಗಳನ್ನು ಸೇರಿಸಿ ಒಂದು ಪಂಚಾಯತ್ ಮಾಡಲಾಗಿದೆ. ಎರಡು ಗ್ರಾಮಗಳಿಂದ ಒಟ್ಟು 7 ಜನ ಗ್ರಾ.ಪಂ ಸದಸ್ಯರಿದ್ದಾರೆ. ಕಳೆದ ಅವಧಿಗೆ ಬೇರೆಯವರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದರು. ಈ ಬಾರಿ ಅಧ್ಯಕ್ಷ …
Read More »ಹಾಸನದ ಹೊರವಲಯದ ಬಳಿ ಗ್ರಾನೈಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ
ಹಾಸನ : ಹಳೆಯ ದ್ವೇಷದ ಹಿನ್ನೆಲೆ ಹಾಡಹಗಲೇ ಗ್ರಾನೈಟ್ ಉದ್ಯಮಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನದ ಹೊರವಲಯದ ಬಳಿ ನಡೆದಿದೆ. ಕೃಷ್ಣೇಗೌಡ (55) ಕೊಲೆಯಾದ ಮೃತ ಗ್ರಾನೈಟ್ ಉದ್ಯಮಿ. ಹಾಸನ ಮೂಲದ ಕೃಷ್ಣೇಗೌಡ, ಹಾಸನದ ಡೈರಿ ವೃತ್ತದ ಸಮೀಪ ಶ್ರೀರಾಮ ಮಾರ್ಬಲ್ ಎಂಬ ಉದ್ಯಮವನ್ನು ನಡೆಸುತ್ತಿದ್ದರು. ಜೊತೆಗೆ ಜೆಡಿಎಸ್ ಮುಖಂಡರಾಗಿರುವ ಇವರು ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಆಪ್ತರಾಗಿದ್ದರು. ಇಂದು ಬೆಳಗ್ಗೆ ಎಂದಿನಂತೆ ತಮ್ಮ ಗ್ರಾನೈಟ್ ಫ್ಯಾಕ್ಟರಿಗೆ ಹೋಗಿ …
Read More »ಮಂಡ್ಯದ ಜಂಟಿ ಕೃಷಿ ಇಲಾಖೆ ಕಚೇರಿಗೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲನೆ
ಮಂಡ್ಯ : ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿರುವ ಹಿನ್ನೆಲೆ, ತನಿಖೆ ನಡೆಸಲು ಸಿಐಡಿ ಅಧಿಕಾರಿಗಳ ತಂಡ ಬುಧವಾರ ಜಂಟಿ ಕೃಷಿ ಇಲಾಖೆ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿ ಮಂಗಳವಾರ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ, ಐಜಿ ಪ್ರವೀಣ್ ಮಧುಕರ್ ಪವಾರ್ ನೇತೃತ್ವದ ತಂಡ ಜಿಲ್ಲಾಧಿಕಾರಿ …
Read More »