ಬೆಂಗಳೂರು : ರಾಜ್ಯದ ಆನೆಗಳ ಸಂಖ್ಯೆಯಲ್ಲಿ 350ರಷ್ಟು ಹೆಚ್ಚಳವಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಆನೆಗಳ ಗಣತಿಯ ವರದಿ ಬಿಡುಗಡೆ ಮಾಡಿ ಮಾತನಾಡಿದ ಅವರು, 2017ರಲ್ಲಿ ರಾಜ್ಯದಲ್ಲಿ ಸುಮಾರು 6049 ಆನೆಗಳಿದ್ದವು. ಈ ಬಾರಿ ಗಣತಿಯ ವೇಳೆ 6,395 ಆನೆಗಳಿವೆ ಎಂದು ಅಂದಾಜು ಮಾಡಲಾಗಿದ್ದು, ಸುಮಾರು 350ರಷ್ಟು ಹೆಚ್ಚಳವಾಗಿದೆ ಎಂದರು. ಅವಸಾನದ ಅಂಚಿನಲ್ಲಿರುವ ಆನೆಗಳನ್ನು ಸಂರಕ್ಷಿಸುವ ಸಲುವಾಗಿ, ಆನೆಗಳಿಗೂ ನೆಮ್ಮದಿಯಿಂದ …
Read More »Monthly Archives: ಆಗಷ್ಟ್ 2023
ಅಕ್ಕಿ, ಗೋಧಿ ಮಾರಾಟ; ಬೆಲೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ
ನವದೆಹಲಿ : ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ (ಒಎಂಎಸ್‌ಎಸ್) ಅಡಿಯಲ್ಲಿ ಹೆಚ್ಚುವರಿ 50 ಲಕ್ಷ ಟನ್ ಗೋಧಿ ಮತ್ತು 25 ಲಕ್ಷ ಟನ್ ಅಕ್ಕಿ ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸ್ಥಳೀಯ ಮಾರುಕಟ್ಟೆಗಳಲ್ಲಿ ಅಕ್ಕಿ ಮತ್ತು ಗೋಧಿಯ ಬೆಲೆಗಳನ್ನು ನಿಯಂತ್ರಿಸಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಆಗಸ್ಟ್ 7 ರ ಹೊತ್ತಿಗೆ ಕಳೆದ ಒಂದು ವರ್ಷದಲ್ಲಿ ಗೋಧಿ ಬೆಲೆಗಳು ಚಿಲ್ಲರೆ ಮಾರುಕಟ್ಟೆಯಲ್ಲಿ ಶೇಕಡಾ 6.77 ಮತ್ತು ಸಗಟು ಮಾರುಕಟ್ಟೆಯಲ್ಲಿ ಶೇಕಡಾ 7.37 …
Read More »ಸತತ ಮಳೆ ಮತ್ತು ವರದಾ ನದಿಯ ಪ್ರವಾಹದಿಂದ ರೈತ ನಾಲ್ಕೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೊ ಬೆಳೆ ಹಾನಿ
ಹಾವೇರಿ: ಕಳೆದ ಎರಡು ತಿಂಗಳಿಂದ ಎಲ್ಲೆಡೆ ಕಿಚನ್ ಕ್ವೀನ್ ಟೊಮೆಟೊದ್ದೇ ಮಾತು. ಟೊಮೆಟೊ ಬೆಳೆ ಈ ಬಾರಿ ರೈತರ ಕೈ ಹಿಡಿದಿದ್ದು, ಅಧಿಕ ಲಾಭ ತಂದುಕೊಟ್ಟಿದೆ. ಇದರ ನಡುವೆ ಕೆಲ ರೈತರು ಟೊಮೆಟೊ ಕಳ್ಳತನವಾಗಬಾರದು ಎಂದು ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ. ಆದರೆ ಹಾವೇರಿ ಸಮೀಪದ ದೇವಗಿರಿ ಗ್ರಾಮದ ಟೊಮೆಟೊ ಬೆಳೆಗಾರ ದುರ್ಗಪ್ಪ ಎಂಬುವನ ಕಥೆ ಇದಕ್ಕೆ ಭಿನ್ನವಾಗಿದೆ. ದೇವಗಿರಿಯ ವರದಾ ನದಿ ತಟದಲ್ಲಿ ನಾಲ್ಕೂವರೆ ಎಕರೆ ಜಮೀನಿನಲ್ಲಿ ಟೊಮೆಟೊ ಬೆಳೆದ ರೈತ …
Read More »ಬೆಳಗಾವಿ ಜಿಲ್ಲೆಯ ರಾಯಬಾಗ ಬಸ್ ನಿಲ್ದಾಣದ ಕಟ್ಟಡದ ಮೊದಲ ಮಹಡಿಯಲ್ಲಿ ಶಿವಾನಂದ ಭಜಂತ್ರಿ (48) ಸಾವಿಗೆ ಶರಣಾಗಿದ್ದಾರೆ.
ಚಿಕ್ಕೋಡಿ: ಬಸ್ ನಿಲ್ದಾಣದ ಕಟ್ಟಡದಲ್ಲೇ ಡಿಪೋ ಕಂಟ್ರೋಲರ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ಬಸ್ ನಿಲ್ದಾಣದ ಕಟ್ಟಡದ ಮೊದಲ ಮಹಡಿಯಲ್ಲಿ ಶಿವಾನಂದ ಭಜಂತ್ರಿ (48) ಸಾವಿಗೆ ಶರಣಾಗಿದ್ದಾರೆ. ಇಂದು ಬೆಳಗ್ಗೆ ಸಿಬ್ಬಂದಿ ಬಸ್ ನಿಲ್ದಾಣಕ್ಕೆ ಆಗಮಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ರಾಯಬಾಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. …
Read More »ಬೆಳಗಾವಿಯಲ್ಲಿ ಇಂದು ಕೇಂದ್ರ ಸರ್ಕಾರದ ವಿರುದ್ಧ ಸಿಐಟಿಯು ಕಾರ್ಯಕರ್ತರ ಪ್ರತಿಭಟನೆ
ಬೆಳಗಾವಿ: ಕಾರ್ಮಿಕರಿಗೆ ಕನಿಷ್ಠ ಕೂಲಿ, ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು (ಬುಧವಾರ) ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದ ಆಶ್ರಯದಲ್ಲಿ ನಗರದ …
Read More »ಆಗಸ್ಟ್ 11 ರಂದು ಅಥಣಿಗೆ ಸಿಎಂ ಸಿದ್ದರಾಮಯ್ಯ ಆಗಮನ: ಸ್ಥಳೀಯರಲ್ಲಿ ಗರಿಗೆದರಿದ ನಿರೀಕ್ಷೆಗಳು
ಚಿಕ್ಕೋಡಿ : ಆಗಸ್ಟ್ 11 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟದ ಆರು ಜನ ಸಚಿವರು ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಆಗಮಿಸುವ ಹಿನ್ನೆಲೆ ಈ ಭಾಗದ ಜನರಲ್ಲಿ ನಿರೀಕ್ಷೆಗಳು ಗರಿಗೆದರಿವೆ. ಬಹು ದಿನಗಳ ಕೆಲ ಬೇಡಿಕೆಗಳಿಗೆ ಈಗಲಾದರೂ ಸಿಎಂ ಮನ್ನಣೆ ನೀಡಬಹುದೆಂದು ಶಿವಯೋಗಿಗಳ ನಾಡಿನ ಜನರಲ್ಲಿ ಭರವಸೆ ಮೂಡಿದೆ. ಹೌದು, ಆ.11 ರಂದು ಸಿಎಂ ಸಿದ್ದರಾಮಯ್ಯ ಹಾಗೂ ಆರು ಜನ ಸಚಿವರು ತಾಲೂಕಿನ ಕೋಕಟನೂರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ …
Read More »ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತಿದೆ, ಬೇಗ ಗುಣಮುಖರಾಗಿ’: ಹೆಚ್‌ಡಿಕೆಗೆ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು: ”ಚುನಾವಣಾ ಸೋಲಿನ ಆಘಾತದಿಂದ ನೀವು ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ” ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಸಚಿವ ಚಲುವರಾಯಸ್ವಾಮಿ ವಿರುದ್ಧ ದೂರಿನ ಪತ್ರದ ಬಗ್ಗೆ ತಮ್ಮ ವಿರುದ್ಧ ಹೆಚ್ಡಿಕೆ ಮಾಡಿದ ತೀಕ್ಷ್ಣ ಟ್ವಿಟ್ಗೆ ಪ್ರತಿಕ್ರಿಯಿಸಿದ ಅವರು, ”ಹೆಚ್.ಡಿ. ಕುಮಾರಸ್ವಾಮಿ ಅವರೇ, ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ …
Read More »ಆರೋಗ್ಯ ಇಲಾಖೆಯ ನಿವೃತ್ತ ಸ್ಟೋರ್‌ಕೀಪರ್ ಬಳಿ ₹10 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ ಪತ್ತೆ!
ಭೋಪಾಲ್ (ಮಧ್ಯಪ್ರದೇಶ): ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಮಧ್ಯಪ್ರದೇಶದ ಆರೋಗ್ಯ ಇಲಾಖೆಯ ನಿವೃತ್ತ ಸ್ಟೋರ್‌ಕೀಪರ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದರು. ರಾಜ್‌ಗಢದ ಜಿಲ್ಲಾ ಆಸ್ಪತ್ರೆಯ ಸ್ಟೋರ್ ಕೀಪರ್ ಆಗಿ ನಿವೃತ್ತಗೊಂಡಿರುವ ಲಾಟೇರಿ ನಿವಾಸಿ ಅಶ್ಫಾಕ್ ಅಲಿ, ಅಕ್ರಮ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಭ್ರಷ್ಟಾಚಾರ ಕಾಯ್ದೆಯಡಿ ಪೊಲೀಸರು ದೂರಿಗೆ ದೂರು ಬಂದಿದ್ದು, ತನಿಖೆ ಕೈಗೊಂಡಿದ್ದಾರೆ. ಈ ವೇಳೆ, ಭಾರಿ ಪ್ರಮಾಣದ …
Read More »ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಬೊಮ್ಮಾಯಿ
ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವೇಳೆ ಅಮಿತ್ ಶಾ, “ಆದಷ್ಟು ಬೇಗ ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲಾಗುವುದು. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು. ಪಕ್ಷ ಸಂಘಟನೆ ನಿಟ್ಟಿನಲ್ಲಿ ಒಂದು ಉತ್ತಮ ತಂಡವನ್ನು ಆಯ್ಕೆ ಮಾಡಲಾಗುವುದು” ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. 5 ಗ್ಯಾರಂಟಿಗಳ ಮಾಹಿತಿ ಪಡೆದುಕೊಂಡ …
Read More »ಸಿಎಂ ಸಿದ್ದರಾಮಯ್ಯ ಅವರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ
ಬೆಂಗಳೂರು: ಆರು ಜಿಲ್ಲೆಗಳ ಶಾಸಕರು ಹಾಗೂ ಉಸ್ತುವಾರಿ ಸಚಿವರ ಜೊತೆಗೆ ಸಿಎಂ ಸಿದ್ದರಾಮಯ್ಯ ಇಂದು ಸರಣಿ ಸಭೆ ನಡೆಸಿದರು. ಸಭೆಯಲ್ಲಿ ಬಹುತೇಕ ಶಾಸಕರು ಅನುದಾನ ಬಿಡುಗಡೆ ಬಗ್ಗೆ ಅಳಲು ತೋಡಿಕೊಂಡರು. ಬೆಳಗ್ಗೆ ರಾಯಚೂರು, ವಿಜಯಪುರ ಹಾಗೂ ಕೊಪ್ಪಳ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರ ಜೊತೆ ಸಿಎಂ ಮಾತನಾಡಿದರು. ಸಂಜೆ ಬೆಳಗಾವಿ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳ ಶಾಸಕರು ಹಾಗೂ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ ಅಸಮಾಧಾನಕ್ಕೆ …
Read More »