Breaking News

Monthly Archives: ಆಗಷ್ಟ್ 2023

ಸಚಿವಾಲಯ ಕಚೇರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ; ಆತಂಕ ಸೃಷ್ಟಿಸಿದ ಹುಸಿ ​ಕರೆ, ಆರೋಪಿ ಬಂಧನ

ಮುಂಬೈ (ಮಹಾರಾಷ್ಟ್ರ): ಎರಡು ದಿನಗಳ ಹಿಂದಷ್ಟೇ ರೈಲುಗಳಲ್ಲಿ ಸರಣಿ ಬಾಂಬ್​ ಇಟ್ಟಿರುವುದಾಗಿ ಹುಸಿ ಬಾಂಬ್​ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಬೆನ್ನಲ್ಲೇ, ಇಂದು ಮತ್ತೊಂದು ಹುಸಿ ಬಾಂಬ್​ ಕರೆ ಬಂದು ಮುಂಬೈ ಪೊಲೀಸರ ನೆಮ್ಮದಿಗೆ ಭಂಗ ತಂದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆಪಾದಿತ ವ್ಯಕ್ತಿಯನ್ನು ಬಂಧಿಸಲಾಗಿದೆ. ಮುಂಬೈಯಲ್ಲಿನ ಸಚಿವಾಲಯದಲ್ಲಿ ಬಾಂಬ್​ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಸೋಮವಾರ ರಾತ್ರಿ 10 ಗಂಟೆಗೆ ಕರೆ ಮಾಡಿ ಮಾಹಿತಿ ನೀಡಿದ್ದ. ತಕ್ಷಣವೇ ಪೊಲೀಸರಿಗೆ ಮಾಹಿತಿ ಸಿಕ್ಕ …

Read More »

ನಾನು ಹೋಮದಲ್ಲಿ ಭಾಗಿಯಾಗಿದ್ದು ನನಗೆ ಸಮಸ್ಯೆ ಇಲ್ಲ ಅಂದ್ಮೇಲೆ ನಿಮಗೇಕೆ?- ಪ್ರಕಾಶ್ ರಾಜ್

ಶಿವಮೊಗ್ಗ: “ದೇಹಕ್ಕಾದ ಗಾಯ ಸುಮ್ಮನಿದ್ದರೂ ವಾಸಿಯಾಗುತ್ತದೆ. ಆದರೆ ದೇಶಕ್ಕೆ, ಸಮಾಜಕ್ಕಾದ ಗಾಯ ಸುಮ್ಮನಿದ್ದಷ್ಟು ಹೆಚ್ಚುತ್ತದೆ” ಎಂದು ನಟ ಪ್ರಕಾಶ್ ರಾಜ್ ಹೇಳಿದರು. ನಗರದ ಖಾಸಗಿ ಹೋಟೆಲ್​ನಲ್ಲಿಂದು ನಡೆದ ಮಾಧ್ಯಮ ಸಂವಾದದಲ್ಲಿ ಭಾಗಿಯಾಗಿ ಹಲವು ವಿಚಾರಗಳ ಬಗ್ಗೆ ಮಾತನಾಡಿದ ಅವರು, “ಮಾನವೀಯತೆಯನ್ನು ತುಳಿಯುವರ ವಿರುದ್ಧ ನಾವು ನಿಲ್ಲುತ್ತಿದ್ದೇವೆ. ನಮಗೆ ದ್ವೇಷ ಬೇಕಿಲ್ಲ, ನಮಗೆ ಬೇಕಿರುವುದು ಪ್ರೀತಿ. ಎಲ್ಲರಲ್ಲೂ ಸಮಾನತೆ ಇರಬೇಕು. ನಮ್ಮ ಕ್ರೌರ್ಯ, ವಿರೋಧಗಳು ದೇಶ ಹಾಳಾಗಲು ಕಾರಣವಾಗುತ್ತವೆ” ಎಂದು ಕಳವಳ …

Read More »

ಹುಬ್ಬಳ್ಳಿ ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಂದು ವಾರ ಕಾಲೇಜಿನಿಂದ ಪ್ರಿನ್ಸಿಪಾಲ್ ಡಾ. ಈಶ್ವರ ಹೊಸಮನಿ ಅಮಾನತ್ತು

ಹುಬ್ಬಳ್ಳಿ : ನರ್ಸ್​ಗಳನ್ನು ಕುರಿತು ಕನ್ನಡ ಚಿತ್ರವೊಂದರ ಹಾಡಿಗೆ ರೀಲ್ಸ್ ಮಾಡಿ ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆ ಕಿಮ್ಸ್ ಆಸ್ಪತ್ರೆಯ ನರ್ಸ್​ಗಳಿಗೆ ಅಪಮಾನ ಮಾಡಲಾಗಿದೆ. ಈ 11 ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರಿಗೆ ನರ್ಸ್ ಅಸೋಸಿಯೇಷನ್ ಅಧ್ಯಕ್ಷೆ ಸುನೀತಾ ನಾಯ್ಕ ಸೋಮವಾರ ದೂರು ಸಲ್ಲಿಸಿದ್ದರು. ಹುಬ್ಬಳ್ಳಿ ಕಿಮ್ಸ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ನರ್ಸ್​ಗಳನ್ನು ಗುರಿಯಾಗಿಟ್ಟುಕೊಂಡು ಯಾವುದೇ ಅನುಮತಿ ಪಡೆಯದೆ …

Read More »

ಹಾಸ್ಟೆಲ್ ಹುಡುಗರಿಂದ ಪ್ರೇಕ್ಷಕರಿಗೆ ಬಿಗ್​ ಆಫರ್ 2 ಟಿಕೆಟ್​ ತಗೊಂಡ್ರೆ 1 ಫ್ರೀ

ಬುಕ್​ ಮೈ ಶೋನಲ್ಲಿ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ 2 ಟಿಕೆಟ್ ತೆಗೆದುಕೊಂಡರೆ 1 ಉಚಿತವಾಗಿ ಕೊಡುತ್ತಿದ್ದೇವೆ ಎಂದು ಚಿತ್ರತಂಡ ಹೇಳಿದೆ. ಯುವ ಪ್ರತಿಭೆಗಳ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಥಿಯೇಟರ್ ಅಂಗಳದಲ್ಲಿ ತುಂಗಾ ಹಾಸ್ಟೆಲ್ ಬಾಯ್ಸ್ ಓಟ ಮುಂದುವರೆದಿದೆ. ಮೂರನೇ ವಾರವೂ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಆರಂಭದಿಂದಲೂ ವಿಭಿನ್ನ ಬಗೆಯಲ್ಲಿ ಸಿನಿಮಾ ಪ್ರಮೋಷನ್ ಮಾಡಿ ಗೆದ್ದಿರುವ ಚಿತ್ರತಂಡಕ್ಕೆ ನಟಿ ಹಾಗೂ ಖ್ಯಾತ …

Read More »

ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಪತಿ

ಬೆಂಗಳೂರು : ಪತಿಯೋರ್ವ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿ ಭಾನುವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತಳನ್ನು ಸರಿತಾ(35) ಎಂದು ಗುರುತಿಸಲಾಗಿದೆ. ತಾರಾನಾಥ್​ ಕೊಲೆಗೈದ ಆರೋಪಿ. ಪತ್ನಿ ಸರಿತಾಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಹತ್ಯೆಗೈದಿರುವ ಪತಿ ತಾರಾನಾಥ್ ವೈಟ್ ಫೀಲ್ಡ್ ಠಾಣೆಗೆ ಬಂದು ಶರಣಾಗಿದ್ದಾನೆ. ಮೂಲತಃ ಮಂಗಳೂರಿನವರಾದ ಈ ದಂಪತಿ ಬೆಂಗಳೂರಿನಲ್ಲಿ ನೆಲೆಸಿ, ಪಾನೀಪುರಿ ಅಂಗಡಿ ನಡೆಸುತ್ತಿದ್ದರು. ಭಾನುವಾರ ಸಂಜೆ …

Read More »

ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್, ಏಕಗವಾಕ್ಷಿ ಮೂಲಕ ತಕ್ಷಣ ಪರವಾನಿಗೆ..: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ನಗರದಲ್ಲಿ ಅತ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಉತ್ಸವ ಮಂಡಳಿಗಳಿಗೆ ಯಾವುದೇ ರೀತಿಯ ವಿಳಂಬವಾಗದಂತೆ ಏಕಗವಾಕ್ಷಿ ಯೋಜನೆ ಮೂಲಕ ಕೂಡಲೇ ಪರವಾನಿಗೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶೋತ್ಸವ ಹಿನ್ನೆಲೆ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಿನ್ನೆ ಸಂಜೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣೇಶೋತ್ಸವ ಮಂಡಳಿಗಳಿಗೆ ರಿಯಾಯಿತಿ ದರದಲ್ಲಿ ವಿದ್ಯುತ್ ಒದಗಿಸುವ ಕುರಿತು ಸರ್ಕಾರದ …

Read More »

‘ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯ: ಸತೀಶ ಜಾರಕಿಹೊಳಿ

ಬೆಳಗಾವಿ: ”ಪಕ್ಷ ಭೇದ ಮರೆತು ಕೆಲಸ ಮಾಡಿದಾಗ ಮಾತ್ರ ಬೆಂಗಳೂರಿಗೆ ಸಮಾನಾಂತರವಾಗಿ ಬೆಳಗಾವಿ ಜಿಲ್ಲೆಯೂ ಬೆಳೆಯಲು ಸಾಧ್ಯವಾಗುತ್ತದೆ” ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಗರದ ಮಚ್ಛೆ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಇಂದು (ಮಂಗಳವಾರ) 260 ಕೋಟಿ ರೂಪಾಯಿ ವೆಚ್ಚದ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಹಾಗೂ ಬಹುವಿದ್ಯುತ್ ಪ್ರಸರಣ ಮಾರ್ಗ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ”ಬೆಳಗಾವಿ ನಗರ ರಾಜ್ಯದಲ್ಲಿ ಶರವೇಗದಲ್ಲಿ …

Read More »

5 ಜನರ ಬಾಳಿಗೆ ಬೆಳಕಾಗಿದ್ದಾರೆ.ಚಿಕ್ಕಮಗಳೂರಿನ ಮಹಿಳೆ

ಚಿಕ್ಕಮಗಳೂರು: ಇಲ್ಲಿನ ಗೌರಿ ಕಾಲುವೆಯ ನಿವಾಸಿ ಸಹನಾ ಮೊಸೆಸ್ ಎಂಬವರು​ ಸಾವಿನಲ್ಲೂ ಸಾರ್ಥಕತೆ ಮೆರೆದು ಮಾದರಿಯಾಗಿದ್ದಾರೆ. ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಒಂದಲ್ಲ, ಎರಡಲ್ಲ 5 ಜನರ ಬಾಳಿಗೆ ಬೆಳಕಾಗಿದ್ದಾರೆ. ಮೆದುಳು ನಿಷ್ಕ್ರಿಯಗೊಂಡಿದ್ದರಿಂದ ಅವರ ಕುಟುಂಬದವರ ದೃಢ ನಿರ್ಧಾರ ಹಾಗೂ ಸಹನಾ ಅವರ ಆಸೆಯಂತೆಯೇ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಇಂದು ನಗರದ ಜಿಲ್ಲಾಸ್ಪತ್ರೆಯಲ್ಲಿ ಸಹನಾರ ಕಣ್ಣು, ಕಿಡ್ನಿ ಹಾಗೂ ಯಕೃತ್ತನ್ನು ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಆಂಬುಲೆನ್ಸ್ …

Read More »

ಅನಾರೋಗ್ಯದ ಕಾರಣದಿಂದ ರಾಜ್ಯಸಭೆ ಕಲಾಪದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ;H.D.D.

ಬೆಂಗಳೂರು : ಅನಾರೋಗ್ಯದ ಕಾರಣದಿಂದ ಇಂದು ರಾಜ್ಯಸಭೆ ಕಲಾಪದಲ್ಲಿ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಇಂದು ರಾತ್ರಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಮಾಹಿತಿ ನೀಡಿರುವ ಅವರು, ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷದ ಮಹತ್ವದ ಸಭೆಯನ್ನು ಇಂದೇ ಆಯೋಜಿಸಲಾಗಿತ್ತು. ಸೊಂಟ ನೋವಿನ ಕಾರಣ ಆ ಸಭೆಯಲ್ಲೂ ಬಹಳ ಹೊತ್ತು ಕೂರಲು ತಮ್ಮಿಂದ ಆಗಲಿಲ್ಲ. ಹತ್ತು ನಿಮಿಷವಷ್ಟೇ ಸಭೆಗೆ ಹಾಜರಾಗಿ ನಂತರ ವೈದ್ಯರಲ್ಲಿ …

Read More »

‘ಶಾಸಕರ ಶಿಫಾರಸ್ಸು ಪತ್ರ ಪರಿಶೀಲನೆ ಮಾಡಿ ವರ್ಗಾವಣೆ:ಗೃಹ ಸಚಿವ

ಬೆಂಗಳೂರು: ”ಶಾಸಕರ ಶಿಫಾರಸ್ಸು ಪತ್ರ ಪರಿಶೀಲನೆ ಮಾಡಿ ವರ್ಗಾವಣೆ ಮಾಡಲಾಗುವುದು” ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ”ಬಹುಶಃ ಇನ್ನೊಂದು ವಾರದಲ್ಲಿ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಪೂರ್ಣವಾಗಲಿದೆ. ಒಂದು ವಾರದೊಳಗೆ ಅಂತಿಮ‌ ಮಾಡುತ್ತೇವೆ. ವರ್ಗಾವಣೆಗೆ ಶಾಸಕರ ಶಿಫಾರಸ್ಸು ಪತ್ರ ಒಂದು ಹಂತ. ಶಾಸಕರ ಶಿಫಾರಸ್ಸು ಪತ್ರ ಪರಿಶೀಲನೆ ಮಾಡಿ ವರ್ಗಾವಣೆ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು. ಸದಾಶಿವ ಆಯೋಗದ ವರದಿ ಜಾರಿ ಮಾಡುತ್ತೇವೆ: ”ಸದಾಶಿವ …

Read More »