Breaking News

Monthly Archives: ಆಗಷ್ಟ್ 2023

PSI Scam: ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರು ಪರೀಕ್ಷೆ ನಡೆಸಬಹುದು ಎಂದು ಹೈಕೋರ್ಟ್​!

ಬೆಂಗಳೂರು : ಪೊಲೀಸ್​ ಸಬ್​ಇನ್​ಸ್ಪೆಕ್ಟರ್​ (ಪಿಎಸ್‌ಐ) ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಸರ್ಕಾರ ಮರುಪರೀಕ್ಷೆೆ ನಡೆಸಬಹುದು ಎಂದು ಹೈಕೋರ್ಟ್ ಮೌಖಿಕವಾಗಿ ತಿಳಿಸಿದೆ. ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರುಪರೀಕ್ಷೆಗೆ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ 100ಕ್ಕೂ ಅಧಿಕ ಅಭ್ಯರ್ಥಿಗಳು ಹೈಕೋರ್ಟ್​ನಲ್ಲಿ ಅರ್ಜಿಗಳನ್ನು ಸಲ್ಲಿಸಿದ್ದರು. …

Read More »

ನನಗೆ ಸಚಿವ ಸ್ಥಾನ ಕೊಡಲಿಲ್ಲ ಅಂತ ಅಸಮಾಧಾನ ಇಲ್ಲ. ನನಗೆ ಅಸಮಾಧಾನ ಇರುವುದು ಇರುವ ವ್ಯವಸ್ಥೆಯ ವಿರುದ್ಧ ಎಂದ ಕಾಂಗ್ರೆಸ್ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್

ಬೆಂಗಳೂರು: ನನಗೆ ಸಚಿವ ಸ್ಥಾನ ಕೊಡಲಿಲ್ಲ ಅಂತ ಅಸಮಾಧಾನ ಇಲ್ಲ. ನನಗೆ ಅಸಮಾಧಾನ ಇರುವುದು ಇರುವ ವ್ಯವಸ್ಥೆಯ ವಿರುದ್ಧ ಎಂದು ಕಾಂಗ್ರೆಸ್ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ನಾನು ಎಂದೂ ಸಚಿವ ಸ್ಥಾನ ಕೇಳಿಲ್ಲ. ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೇಲ್ಮನೆ. ಅದನ್ನು ಸರಿಯಾಗಿ ನಿರ್ವಹಣೆ ಮಾಡ್ತಿಲ್ಲ. ತನ್ನದೇ ಆದ ಚರಿತ್ರೆ ಮೇಲ್ಮನೆ ಸಭೆಗಿದೆ, ಅದು ಹಾಳಾಗಬಾರದು. ನಾನು‌ ಕೆಪಿಸಿಸಿಯ ಯಾವುದೇ ಸ್ಥಾನಮಾನದ ಆಕಾಂಕ್ಷಿ …

Read More »

ಲಾಲ್ ಬಾಗ್​ನ ಫಲಪುಷ್ಪ ಪ್ರದರ್ಶನ ಸಿಎಂ ಚಾಲನೆ; ಸಾರ್ವಜನಿಕರಿಗೆ ಅವಕಾಶ

ಬೆಂಗಳೂರು: ಲಾಲ್‌ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದ ಉದ್ಯಾನವನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥ ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಇಂದು ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ ಬಗೆಯ ಮರ,ಗಿಡಗಳಿವೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಉದ್ಯಾನವನಕ್ಕೆ ಐತಿಹಾಸಿಕ ಮಹತ್ವವಿದೆ ಎಂದರು. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿ 140 ಎಕರೆ ಪ್ರದೇಶದಲ್ಲಿದ್ದ ಈ ಉದ್ಯಾನವನಕ್ಕೆ ಕೆಂಗಲ್ …

Read More »

ರಾಜ್ಯದಲ್ಲಿ ಈ ಬಾರಿ ಪ್ರವಾಹದಿಂದ ಮನೆ, ಬೆಳೆ ಹಾನಿಯಾದಂತಹ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಪರಿಷ್ಕೃತ ಪರಿಹಾರ ಮಂಜೂರು ಮಾಡಿದೆ

ಬೆಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಉಂಟಾದ ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ, ದುರಸ್ತಿ ಕಾರ್ಯಕ್ಕೆ ಹೆಚ್ಚಿನ ಪರಿಹಾರ ಪಾವತಿಸಲು ಸರ್ಕಾರ ಮಂಜೂರಾತಿ ನೀಡಿದೆ. ಪ್ರವಾಹದಿಂದ ರಾಜ್ಯದ ಹಲವೆಡೆ ಜನ, ಜಾನುವಾರುಗಳ ಸಾವು, ಮನೆ, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳು ಹಾನಿಯಾಗಿತ್ತು. ಈ ಕುರಿತು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದರು. 2022ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ/ಪ್ರವಾಹದಿಂದ ಮನೆಗಳು …

Read More »

ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರಿಗೆ ವಿಧಿಸಲಾಗಿದ್ದ ಎರಡು ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ

ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಸುಪ್ರಿಂ ಕೋರ್ಟ್‌ನಲ್ಲಿ ಇಂದು (ಶುಕ್ರವಾರ) ದೊಡ್ಡ ರಿಲೀಫ್ ಸಿಕ್ಕಿದೆ. ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್ ಅವರಿಗೆ ವಿಧಿಸಲಾಗಿದ್ದ 2 ವರ್ಷಗಳ ಶಿಕ್ಷೆಗೆ ಕೋರ್ಟ್‌ ಮಧ್ಯಂತರ ತಡೆ ನೀಡಿದೆ. ಹೀಗಾಗಿ ರಾಹುಲ್ ಅವರ ಸಂಸತ್‌ ಸದಸ್ಯ ಸ್ಥಾನ ಸದ್ಯಕ್ಕೆ ಅಬಾಧಿತವಾಗಿದೆ. ನ್ಯಾ.ಬಿ.ಆರ್.ಗವಾಯಿ, ನ್ಯಾ.ಪಿ.ಎಸ್.ನರಸಿಂಹ ಮತ್ತು ನ್ಯಾ.ಸಂಜಯ್ ಕುಮಾರ್ ಅವರಿದ್ದ ಮೂವರು ನ್ಯಾಯಮೂರ್ತಿಗಳ ನ್ಯಾಯಪೀಠವು ಈ ಆದೇಶ ಪ್ರಕಟಿಸಿ, “ಸಾರ್ವಜನಿಕ …

Read More »

ಪ್ರತಿ ದಿನ ಶೇ.1 ರಷ್ಟು ಶಕ್ತಿ ಯೋಜನೆ ದುರ್ಬಳಕೆ ಆಗ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ‌

ಬೆಂಗಳೂರು: ಪ್ರತಿ ದಿನ ಶೇ.1 ರಷ್ಟು ಶಕ್ತಿ ಯೋಜನೆ ದುರ್ಬಳಕೆ ಆಗ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ‌ ಹೇಳಿದ್ದಾರೆ. ಶಾಂತಿನಗರ ಬಿಎಂಟಿಸಿ ಕಚೇರಿಯಲ್ಲಿಂದು ಮಾತನಾಡಿದ ಅವರು, “ಪ್ರತಿ ನಿತ್ಯ 1 ಕೋಟಿ 39 ಲಕ್ಷ ಪ್ರಯಾಣಿಕರು ಓಡಾಟ ಮಾಡ್ತಿದ್ದಾರೆ. ಇದರಲ್ಲಿ ಶೇ.1 ರಷ್ಟು ಮಿಸ್‌ಯೂಸ್ ಆಗ್ತಿದೆ” ಎಂದು ತಿಳಿಸಿದರು. “749.30 ಕೋಟಿ ರೂ ಮೌಲ್ಯದ ಟಿಕೆಟ್ ನೀಡಲಾಗಿದೆ. ಪ್ರತಿನಿತ್ಯ ಸರಾಸರಿ 59.55 ಲಕ್ಷ ಮಹಿಳಾ ಪ್ರಯಾಣಿಕರು ಓಡಾಡಿದ್ದಾರೆ. ಶಕ್ತಿ ಜಾರಿ …

Read More »

ಹೆಚ್‌.ಡಿ.ಕುಮಾರಸ್ವಾಮಿ ಅವರ ಪೆನ್ ಡ್ರೈವ್​ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ”ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸ್ ಅಷ್ಟೇ. ವರ್ಗಾವಣೆ ವಿಚಾರದಲ್ಲಿ ಅನಗತ್ಯ ಆರೋಪ ಮಾಡಿದ್ದಾರೆ. ಪೆನ್ ಡ್ರೈವ್ ವಿಚಾರ ಬಿಡಲ್ಲ ಎಂದಿದ್ದಾರೆ. ಆದರೆ, ಪೆನ್ ಡ್ರೈವ್​ನಲ್ಲಿ ಏನಾದರೂ ಇದ್ದರಲ್ಲವೇ ಅವರು ಅದನ್ನು ಹೊರಬಿಡೋದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ಕೊಟ್ಟರು. ನಗರದ ಖಾಸಗಿ ಹೋಟೆಲ್​ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಹಿಂದೆ ಪೆನ್‍ಡ್ರೈವ್ ತೋರಿಸಿದ್ದರು. ಅದನ್ನು ಸಾಬೀತು ಮಾಡಿ ಎಂದರೆ ಮಾಡಿದರಾ? ಸುಮ್ಮನೆ ಆರೋಪ ಮಾಡುತ್ತಾರೆ” …

Read More »

ಪಿಹೆಚ್‌ಡಿ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಬಹುಭಾಷಾ ನಟಿ ಪವಿತ್ರಾ ಲೋಕೇಶ್ ತೇರ್ಗಡೆಯಾಗಿದ್ದಾರೆ.

ವಿಜಯನಗರ: ಕನ್ನಡ ವಿಶ್ವವಿದ್ಯಾಲಯದ ಪಿಹೆಚ್‌ಡಿ ಸಾಮಾನ್ಯ ಪ್ರವೇಶ ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಸೇರಿದಂತೆ 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.   ಕನ್ನಡ ವಿವಿಯಲ್ಲಿ ವಿಜ್ಞಾನ ನಿಕಾಯ ಹೊರತಾಗಿ ಭಾಷಾ ನಿಕಾಯ, ಸಮಾಜ ವಿಜ್ಞಾನ ಮತ್ತು ಲಲಿತಾ ಕಲೆ ನಿಕಾಯದ ವಿವಿಧ ವಿಭಾಗಗಳಡಿ ಸಂಶೋಧನೆಗೆ ಅವಕಾಶ ಕಲ್ಪಿಸಲಾಗುತ್ತದೆ. ಮೂರು ನಿಕಾಯಗಳಡಿ ಸಂಶೋಧನೆಗೆ ಆಸಕ್ತಿ ತೋರಿ 981 ಸಾಮಾನ್ಯ ಪ್ರವೇಶ ಪರೀಕ್ಷೆ ಎದುರಿಸಿದ್ದರು. ಈ ಪೈಕಿ ಒಟ್ಟು 259 …

Read More »

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಬಾಲಕಿ ಮೇಲೆ ಅತ್ಯಾಚಾರವೆಸಗಿದ ಗಂಭೀರ ಸ್ವರೂಪದ ಆರೋಪದಡಿ ಖಾಸಗಿ ಶಾಲೆಯ ಪ್ರಾಂಶುಪಾಲರನ್ನು ವರ್ತೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪವನ್ನು ಪ್ರಾಂಶುಪಾಲ ಎದುರಿಸುತ್ತಿದ್ದಾರೆ. ನಡೆದಿದ್ದೇನು?: ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕಿ ಎಂದಿನಂತೆ ನಿನ್ನೆ (ಗುರುವಾರ) ಬೆಳಗ್ಗೆ 8:30ಕ್ಕೆ ಶಾಲೆಗೆ ಹೋಗಿದ್ದಳು. ಪ್ರಾಂಶುಪಾಲರು ಶಾಲೆಯ ಪಕ್ಕದಲ್ಲಿಯೇ ಇದ್ದ ತನ್ನ ಮನೆಗೆ ಬಾಲಕಿಯನ್ನು ಕರೆದೊಯ್ದಿದ್ದರು. ನಂತರ ಕೇಕ್ ನೀಡಿ‌ …

Read More »

Jobs in HAL: ಒಟ್ಟು 185 ಮ್ಯಾನೇಜ್​ಮೆಂಟ್​ ಮತ್ತು ಡಿಸೈನ್​ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ

Jobs in HAL: ಒಟ್ಟು 185 ಮ್ಯಾನೇಜ್​ಮೆಂಟ್​ ಮತ್ತು ಡಿಸೈನ್​ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್​ನಿಂದ (ಹೆಚ್‌ಎಎಲ್‌) ವಿವಿಧ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 185 ಮ್ಯಾನೇಜ್​ಮೆಂಟ್​ ಮತ್ತು ಡಿಸೈನ್​ ಟ್ರೈನಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತದಾದ್ಯಂತ ನೇಮಕಾತಿ ನಡೆಯಲಿದೆ. ಬೆಂಗಳೂರು, ತುಮಕೂರು, ಹೈದರಾಬಾದ್​, ನಾಸಿಕ್​, ಖೋರ್​ಪಾಟ್​, ಬ್ಯಾರಕ್​ಪೊರ್​​, ಲಕ್ನೋ ಮತ್ತು ಕೊರ್ವಾದಲ್ಲಿ ನೇಮಕಾತಿ ನಡೆಯಲಿದೆ. ಹುದ್ದೆಗಳ ವಿವರ: …

Read More »