Breaking News

Monthly Archives: ಆಗಷ್ಟ್ 2023

ತಾವು ಬೆಳೆದ ಬೆಳೆಯನ್ನು ಜಾನುವಾರುಗಳಿಗೆ ಉಚಿತವಾಗಿನೀಡಿದ ರೈತ

ಚಿಕ್ಕೋಡಿ: ಜಿಲ್ಲೆಯ ಕೆಲ ಭಾಗಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆ ಸುರಿದ ಪರಿಣಾಮವಾಗಿ ಅಥಣಿ, ಕಾಗವಾಡ, ರಾಯಭಾಗ, ಭಾಗದಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರಿಂದ ದನಕರುಗಳಿಗೆ ಮೇವು ಇಲ್ಲದೇ ಸೊರಗಿವೆ. ಇದನೆಲ್ಲ ನೋಡಿದ ರೈತರು ಸರ್ಕಾರಕ್ಕೆ ಈ ಭಾಗದಲ್ಲಿ ಗೋಶಾಲೆ ಪ್ರಾರಂಭಕ್ಕೆ ಮನವಿ ಮಾಡಿಕೊಂಡಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ರೈತರೊಬ್ಬರು ತಾವು ಬೆಳೆದ ಬೆಳೆಯನ್ನು ಕಟಾವು ಮಾಡಿ ಅಕ್ಕಪಕ್ಕದ ಗ್ರಾಮದ ದನಕರುಗಳಿಗೆ ಉಚಿತವಾಗಿ ಮೇವು ವಿತರಣೆ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ …

Read More »

ಜರ್ಮನಿಯಲ್ಲಿ ನಡೆದ 8ನೇ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಬೆಳಗಾವಿಯ ಚಿಕ್ಕನಂದಿ ಗ್ರಾಮದ ಮಂಜುಳಾ ಶಿವಾನಂದ ಗೊರಗುದ್ದಿ ಅವರು ಒಂದೊಂದು ಚಿನ್ನ, ಬೆಳ್ಳಿ, ಕಂಚಿನ ಪದಕ ಗೆದ್ದಿದ್ದಾರೆ.

ಬೆಳಗಾವಿ : ಸಾಧಿಸುವ ಛಲವೊಂದಿದ್ದರೆ ಸಾಕು ಗೆಲುವು ನಮ್ಮದೆ ಎಂದು ಅನೇಕ ಮಂದಿ ಸಾಬೀತು ಮಾಡಿದ್ದಾರೆ. ಈ ಮಾತನ್ನು ಇದೀಗ ಜಿಲ್ಲೆಯ ಯುವತಿಯೊಬ್ಬರು ತೋರಿಸಿಕೊಟ್ಟಿದ್ದಾರೆ. ಬಡ್ಡಿ ಸಾಲ ಪಡೆದು ಜರ್ಮನಿಯಲ್ಲಿ ನಡೆದ ವಿಶ್ವ ಕುಬ್ಜರ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬೆಳಗಾವಿಯ ಕುವರಿಯೊಬ್ಬರು ಮೂರು ಪದಕ ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಮಂಜುಳಾ ಶಿವಾನಂದ ಗೊರಗುದ್ದಿ ಅವರು ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಗುಂಡು ಎಸೆತದಲ್ಲಿ ಪ್ರಥಮ …

Read More »

ನಾಳೆ ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ; ಸಕಲ ಸಿದ್ಧತೆ

ಕಲಬುರಗಿ : 2023ರ ರಾಜ್ಯ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಕಾಂಗ್ರೆಸ್​ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಸರ್ಕಾರ ರಚನೆಯಾದ ಬೆನ್ನಲ್ಲೇ ಮೊದಲು ಶಕ್ತಿ ಯೋಜನೆ ಜಾರಿಯಾಗಿತ್ತು. ನಾಳೆ ಎರಡನೇ ಯೋಜನೆಯಾದ ಗೃಹಜ್ಯೋತಿಗೆ ಕಲುಬುರಗಿಯಲ್ಲಿ ಚಾಲನೆ ಸಿಗಲಿದೆ. ಪ್ರತಿ ಮನೆಗೆ 200 ಯೂನಿಟ್​ ಉಚಿತ ವಿದ್ಯುತ್​ ನೀಡುವ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ‌ ಖರ್ಗೆ ಚಾಲನೆ‌ ನೀಡುವರು. ಈ ಹಿನ್ನೆಲೆಯಲ್ಲಿ ಕಲಬುರಗಿ ನಗರದಲ್ಲಿನ ನೂತನ ವಿದ್ಯಾಲಯ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮಕ್ಕೆ …

Read More »

ಲೋಕಸಭೆಯಲ್ಲಿ ದೆಹಲಿ ಸೇವೆಗಳ ಮಸೂದೆ ಅಂಗೀಕಾರ: ಕೇಜ್ರಿವಾಲ್

ನವದೆಹಲಿ: ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದೆ. ದೆಹಲಿ ಸರ್ಕಾರದ ರಾಷ್ಟ್ರೀಯ ರಾಜಧಾನಿ ಪ್ರದೇಶದ (ತಿದ್ದುಪಡಿ) ಮಸೂದೆ 2023 ಅನ್ನು ಗುರುವಾರ ಭಾರೀ ಗದ್ದಲದ ನಡುವೆ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ದೆಹಲಿ ಸೇವೆಗಳ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿದ್ದು ಗಮನಾರ್ಹ..     ವಿಧೇಯಕ ಅಂಗೀಕಾರವಾಗುತ್ತಿದ್ದಂತೆ ಪ್ರತಿಪಕ್ಷಗಳು ಸದನದಿಂದ ಹೊರ ನಡೆದರು. ಸದನವು ಮಸೂದೆಯನ್ನು ತೆರವುಗೊಳಿಸುವ ಸ್ವಲ್ಪ ಮೊದಲು, ದೆಹಲಿ ಮುಖ್ಯಮಂತ್ರಿ ಅರವಿಂದ್ …

Read More »

SC&ST ಸಮುದಾಯದ ಅಭಿವೃದ್ಧಿಗೆ ಮೀಸಲಿರಿಸಿರುವ ಹಣವನ್ನು ಇತರ ಜನ ಸಮುದಾಯ ಹಾಗೂ ಇತರ ಉದ್ದೇಶಕ್ಕೆ ಬಳಕೆ ಮಾಡುವುದಿಲ್ಲ ಎಂದು ಸಿಎಂ

ಬೆಂಗಳೂರು: ಸರ್ಕಾರ ಯಾವುದೇ ರೀತಿಯಲ್ಲೂ ಪರಿಶಿಷ್ಟ ಜಾತಿ/ಪಂಗಡಗಳ ಕಲ್ಯಾಣಕ್ಕೆ ಎಂದು ಮೀಸಲಿರಿಸಿದ ಹಣವನ್ನು ಇತರ ಜನ ಸಮುದಾಯಗಳ, ಇತರ ಉದ್ದೇಶಗಳಿಗೆ ಬಳಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಎಸ್​​​ಸಿಪಿ ಮತ್ತು ಟಿಎಸ್‌ಪಿ ಯೋಜನೆಯಲ್ಲಿನ ಅನುದಾನಗಳನ್ನು ಇತರ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಕೆಲವರು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದಿದ್ದಾರೆ. ಕೆಲವು ಮಾಧ್ಯಮಗಳಲ್ಲೂ ಈ ಕುರಿತು ವರದಿಗಳಿವೆ. ಪರಿಶಿಷ್ಟ ಜಾತಿ/ಪಂಗಡಗಳಿಗೆ ಮೀಸಲಿರಿಸಿದ ಅನುದಾನಗಳನ್ನು …

Read More »

ಗಂಭೀರ ಸ್ವರೂಪದ ಪ್ರಕರಣಗಳ ಮಾಹಿತಿ ನೀಡಿದ ತಕ್ಷಣ ಎಫ್‌ಐಆರ್ ದಾಖಲಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ

ಬೆಂಗಳೂರು: ಗಂಭೀರ ಸ್ವರೂಪದ ಅಪರಾಧದ ಪ್ರಕರಣಗಳ ಮಾಹಿತಿ ನೀಡಿದಾಗ ತಕ್ಷಣ ಎಫ್‌ಐಆರ್ ದಾಖಲು ಮಾಡಬೇಕು ಎಂದು ನಿರ್ದೇಶಿಸಿರುವ ಹೈಕೋರ್ಟ್, ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಲಲಿತಾಕುಮಾರಿ ಪ್ರಕರಣದ ಸಾರಾಂಶವನ್ನು ಎಲ್ಲ ಪೊಲೀಸ್ ಠಾಣೆಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಒದಗಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದೆ.   ದೂರು ಸಲ್ಲಿಸಿದ್ದರೂ ಎಫ್‌ಐಆರ್ ದಾಖಲಿಸದ ಬಬಲೇಶ್ವರ ಪೊಲೀಸ್ ಠಾಣಾಧಿಕಾರಿಯ ಕ್ರಮವನ್ನು ಪ್ರಶ್ನಿಸಿ ವಿಜಯಪುರ ಜಿಲ್ಲೆಯ ಕಿಲಾರಹಟ್ಟಿಯ ವಿಠ್ಠಲ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ …

Read More »

ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಮಾನವೀಯತೆ ಮೆರೆದಿದ್ದಾರೆ.

ವಿಜಯಪುರ : ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರ ಮುಂದೆ ಅಳಲು ತೋಡಿಕೊಂಡು ಬಂದ ಬಡ ವೃದ್ಧ ದಂಪತಿಗೆ ಒಂದೇ ಗಂಟೆಯೊಳಗೆ ವೃದ್ಧಾಪ್ಯ ವೇತನ ಮಂಜೂರು ಮಾಡುವ ಮೂಲಕ ಡಿಸಿ ಮಾನವೀಯತೆ ಮೆರೆದಿದ್ದಾರೆ. ಬಡತನ ರೇಖೆಗಿಂತ (ಬಿಪಿಎಲ್) ಕೆಳಗಡೆ ಇರುವ ಮತ್ತು 60 ವರ್ಷ ಮೇಲ್ಪಟ್ಟ ವಯಸ್ಸಿನ ಹಿರಿಯ ನಾಗರಿಕರಿಗೆ ಈ ಯೋಜನೆಯಡಿ ಮಾಸಾಶನ ನೀಡಲಾಗುತ್ತದೆ. ನಗರದ ಗ್ಯಾಂಗಬಾವಡಿಯ ನಿವಾಸಿಗಳಾದ ಸೂರ್ಯಕಾಂತ ರಾಮದುರ್ಗಕರ ಹಾಗೂ ಅವರ ಪತ್ನಿ ಸುರೇಖಾ ರಾಮದುರ್ಗಕರ ಗುರುವಾರ ನಗರದ ಜಿಲ್ಲಾಧಿಕಾರಿಗಳ …

Read More »

ಕೇರಳ ಪೊಲೀಸ್ ವಶದಲ್ಲಿರುವವರು ಕರ್ನಾಟಕ ಸೈಬರ್ ಪೊಲೀಸ್ ವಿಭಾಗದ ಸಿಬ್ಬಂದಿ

ಕೊಚ್ಚಿ: ಆನ್​ಲೈನ್​ ವಂಚನೆ ಪ್ರಕರಣದಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಆರೋಪಿಗಳಿಂದ ಲಂಚ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಕರ್ನಾಟಕದ ಓರ್ವ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೊಚ್ಚಿಯಲ್ಲಿ ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸ್​ನಲ್ಲಿ ಹೆಸರನ್ನು ಕೈಬಿಡಲು ಆರೋಪಿಗಳಿಂದ ಲಂಚ ಪಡೆದಿದ್ದರೆಂದು ಆರೋಪಿಸಲಾಗಿದೆ. ಹಣ ಪಡೆದು ಸಹ ಆರೋಪಿಯೊಬ್ಬರನ್ನು ಕರೆದುಕೊಂಡು ಹೋಗುತ್ತಿದ್ದಾಗ ಅವರ ಸಂಬಂಧಿಯೊಬ್ಬರು ಕೊಚ್ಚಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ತನಿಖೆಗಿಳಿದ ಕಲಮಶ್ಶೇರಿ ಪೊಲೀಸರು ವಾಹನ ತಡೆದು, …

Read More »

ಸ್ವಾತಂತ್ರ್ಯೋತ್ಸವದ ನಿಮಿತ್ತ ಇಂದಿನಿಂದ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ನಿಮಿತ್ತ ಇಂದಿನಿಂದ ಲಾಲ್ ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ತೋಟಗಾರಿಕಾ ಇಲಾಖೆಯಿಂದ ಆಯೋಜನೆಯಾಗಿರುವ ಹನ್ನೆರಡು ದಿನಗಳ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ಸುಮಾರು ಎಂಟರಿಂದ ಹತ್ತು ಲಕ್ಷ ಜನರ ಆಗಮನದ ನಿರೀಕ್ಷೆಯಿದ್ದು, ಸಂಚಾರ ದಟ್ಟಣೆಯಾಗದಂತೆ ಕೆಲ ಮಾರ್ಪಾಡುಗಳನ್ನು ಮಾಡಲಾಗಿದೆ. ವಾಹನಗಳ ನಿಲುಗಡೆಗೆ ಅವಕಾಶ, ಮತ್ತು ನಿಷೇಧದ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ವಾಹನ ನಿಲುಗಡೆಗೆ ಅವಕಾಶವಿರುವ ಸ್ಥಳಗಳು: ಡಾ.ಮರೀಗೌಡ ರಸ್ತೆಯ ಅಲ್ ಅಮೀನ್ ಕಾಲೇಜು ಅವರಣದಲ್ಲಿ ದ್ವಿಚಕ್ರ ವಾಹನಗಳಿಗೆ, …

Read More »

ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ನಿಷೇಧವಿದ್ದರೂ, ಬೆಳಗಾವಿಯಲ್ಲಿ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ತರಹೇವಾರಿ ಗಣೇಶನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ

ಬೆಳಗಾವಿ: ಪರಿಸರಕ್ಕೆ ಮಾರಕವಾಗಿರುವ ಪಿಒಪಿ ಗಣೇಶ ಮೂರ್ತಿಗಳ ಮಾರಾಟಕ್ಕೆ ನಿಷೇಧವಿದ್ದರೂ, ಬೆಳಗಾವಿಯಲ್ಲಿ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ತರಹೇವಾರಿ ಗಣೇಶನ ಮೂರ್ತಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ಹಲವಾರು ವರ್ಷಗಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳಿಗೆ ಮಾತ್ರ ಅನುಮತಿ ನೀಡಬೇಕೆಂದು ಜಿಲ್ಲೆಯ ಪರಿಸರ ಪ್ರೇಮಿಗಳು ಆಗ್ರಹಿಸುತ್ತಿದ್ದಾರೆ. ಹೌದು, ಗಣೇಶೋತ್ಸವಕ್ಕೆ ಇನ್ನೂ ಒಂದು ತಿಂಗಳು ಬಾಕಿ ಇರುವಾಗ ಬೆಳಗಾವಿಯಲ್ಲಿ ಗಣೇಶ ಮೂರ್ತಿಗಳ ತಯಾರಿಕೆ ಭರದಿಂದ ಸಾಗಿದೆ. ಪರಿಸರ ಸ್ನೇಹಿ ಮೂರ್ತಿ ತಯಾರಕರು, ಮಾರಾಟಗಾರರು …

Read More »