Breaking News

Monthly Archives: ಆಗಷ್ಟ್ 2023

ಅತಿವೃಷ್ಟಿ ವಿಚಾರದಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ

ಕಲಬುರಗಿ: ಬಿಜೆಪಿಯವರು ತಮ್ಮ ಮನೆಯ ಹುಳಕನ್ನು ಮುಚ್ಚಿಕೊಳ್ಳಲು ರಾಜಕೀಯ ಬೆರೆಸುತ್ತಿದ್ದಾರೆ. ಬಿಜೆಪಿಯವರು ಸಂಪೂರ್ಣ ಹತಾಶರಾಗಿದ್ದಾರೆ. ನಮ್ಮ ಸರ್ಕಾರ ಜನರ ನಾಡಿ ಮಿಡಿತ ಅರಿತು ಕೆಲಸ ಮಾಡುತ್ತಿದೆ. ಅಧಿಕಾರ ಕಳೆದುಕೊಂಡಿರುವ ಬಿಜೆಪಿಯವರು ತಮ್ಮ ಮನೆಯಲ್ಲಿನ ಹುಳುಕನ್ನು ಸರಿಪಡಿಸಿಕೊಳ್ಳಲಾಗದೇ ರಾಜಕೀಯ ಬೆರೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿ ವಿಚಾರದಲ್ಲಿ ರಾಜ್ಯ ಸರ್ಕಾರವು ಸಂಪೂರ್ಣ ವಿಫಲವಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಟೀಕೆಗೆ …

Read More »

ಸಮೃದ್ಧಿ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕಾರ್ಯದ ವೇಳೆ ಗರ್ಡರ್ ಬಿದ್ದು ಸಾವು ನೋವು

ಮಹಾರಾಷ್ಟ್ರ: ಸಮೃದ್ಧಿ ಹೆದ್ದಾರಿಯಲ್ಲಿ ಗರ್ಡರ್‌ಗಳನ್ನು ಅಳವಡಿಸುವಾಗ ದುರಂತ ಸಂಭವಿಸಿದೆ. ಫ್ಲೈಓವರ್ ಗರ್ಡರ್ ಲಾಂಚಿಂಗ್ ಮಷಿನ್ ಕುಸಿದು 14 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಥಾಣೆ ಜಿಲ್ಲೆಯ ಶಹಪುರದ ಸರ್ಲಾಂಬೆ ಗ್ರಾಮದಲ್ಲಿ6 ಪಥಗಳ ಸಮೃದ್ಧಿ ಎಕ್ಸ್‌ಪ್ರೆಸ್ ಹೆದ್ದಾರಿಯ ಮೂರನೇ ಹಂತದ ನಿರ್ಮಾಣದ ವೇಳೆ ಈ ದುರಂತ ಘಟನೆ ನಡೆದಿದೆ. ಶಹಾಪುರ ತಾಲೂಕಿನಲ್ಲಿ ಮುಂಬೈ ನಾಗಪುರ ಸಮೃದ್ಧಿ ಹೆದ್ದಾರಿಯ ಅಂತಿಮ ಹಂತದ ಕಾಮಗಾರಿ ನಡೆಯುತ್ತಿರುವಾಗಲೇ ಗರ್ಡರ್ ಕೆಲಸ ಮಾಡುತ್ತಿದ್ದ ಕಾರ್ಮಿಕರು ಗರ್ಡರ್ ಲಾಂಚರ್ …

Read More »