ಬೆಳಗಾವಿ : ಕುಂದಾನಗರಿ ಜನರಿಗೆ ಕೇಂದ್ರ ರೈಲ್ವೆ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ – ಮೈಸೂರು ಏಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ( Iranna Kadadi ) ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಂಸದ ಈರಣ್ಣ ಕಡಾಡಿ. ರೈಲು ಸಂಖ್ಯೆ 17302 – ಬೆಳಗಾವಿಯಿಂದ …
Read More »Daily Archives: ಸೆಪ್ಟೆಂಬರ್ 7, 2023
ರಾಷ್ಟ್ರರಾಜಧಾನಿಯಲ್ಲಿ ಭಾರಿ ಭದ್ರತೆ… ಟ್ರ್ಯಾಕ್ಟರ್ನಲ್ಲಿ ಗಸ್ತು ತಿರುಗುತ್ತಿರುವ ದೆಹಲಿ ಪೊಲೀಸರು
ನವದೆಹಲಿ: ಇದೇ ಸೆಪ್ಟೆಂಬರ್ 9 ರಿಂದ ನವದೆಹಲಿಯಲ್ಲಿ ಜಿ20 ಶೃಂಗಸಭೆ ನಡೆಯಲಿದ್ದು, ಇಡೀ ದೇಶವೇ ಅತಿಥಿಗಳನ್ನು ಸ್ವಾಗತಿಸಲು ಸಜ್ಜಾಗುತ್ತಿದೆ. ದೇಶ – ವಿದೇಶಗಳಿಂದ ನೂರಾರು ಗಣ್ಯವ್ಯಕ್ತಿಗಳು ರಾಷ್ಟ್ರರಾಜಧಾನಿಗೆ ಆಗಮಿಸುತ್ತಿದ್ದು ಅವರೆಲ್ಲರ ಭದ್ರತೆ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಭಾರೀ ಭದ್ರತೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ರಾಷ್ಟ್ರರಾಜಧಾನಿ ಸುತ್ತ-ಮುತ್ತ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ. ಭದ್ರತಾ ದೃಷ್ಟಿಯಿಂದ ದೆಹಲಿ ಪೊಲೀಸರು ಗುರುವಾರ ರಾಜ್ ಘಾಟ್ ಪ್ರದೇಶದಲ್ಲಿ ಟ್ರ್ಯಾಕ್ಟರ್ ಸಹಾಯದಿಂದ …
Read More »ಡೇರಿಗಳಿಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ ವಸತಿ ನಿಲಯ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕಹಾಮ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಸಹಯೋಗದಲ್ಲಿ ಬೆಳಗಾವಿಯಲ್ಲಿ ರೈತರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ನಿಲಯವನ್ನು ನಿರ್ಮಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಕೆ ಮಾಡುವ ರೈತರ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕಹಾಮ ನಿರ್ದೇಶಕ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಜರುಗಿದ ವಿವಿಧ ಫಲಾನುಭವಿಗಳಿಗೆ 6.40 ಲಕ್ಷ ರೂ.ಗಳ ಚೆಕ್‍ಗಳನ್ನು …
Read More »ಧಾರವಾಡ: ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಅಧಿಕಾರಿ ಸಾವು..
ಧಾರವಾಡ: ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆ ನಗರದಲ್ಲಿ ನಿನ್ನೆ(ಸೋಮವಾರ) ನಡೆದಿದೆ. ಬಡ್ತಿ ಪಡೆದುಕೊಂಡು ಅಧಿಕಾರ ಸ್ವೀಕಾರ ಮಾಡಿದ್ದ ಅಧಿಕಾರಿ ಜಯಪ್ರಕಾಶ ಕಲಕೋಟಿ ಮೃತಪಟ್ಟವರು. ಇವರು ಧಾರವಾಡ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕ ಹುದ್ದೆ ಅಲಂಕರಿಸಿದ್ದರು. ನಿನ್ನೆ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದರು. ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೊದಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ತಾಲೂಕು ಖಜಾನೆ ಕಚೇರಿಯಲ್ಲಿ ಜಯಪ್ರಕಾಶ ಕೆಲಸ ಮಾಡುತ್ತಿದ್ದರು. 15 ದಿನಗಳ …
Read More »ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ.. ಹುಬ್ಬಳ್ಳಿಯಲ್ಲಿ ಆರೋಪಿ ಬಂಧನ
ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು ಜಾಯ್ನಿಂಗ್ ಲೆಟರ್ ತೋರಿಸಿ ನಂಬಿಕೆ ಬರುವಂತೆ ಮಾಡಿದ್ದನು. ರೈಲ್ವೆ ಇಲಾಖೆಯಲ್ಲಿ ನೌಕರಿ …
Read More »ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ವಾಚ್ ವಿಚಾರವಾಗಿ ಸ್ನೇಹಿತರ ನಡುವೆ ಜಗಳ.. ಕೊಲೆಯಲ್ಲಿ ಅಂತ್ಯ
ಹುಬ್ಬಳ್ಳಿ: ಸ್ಮಾರ್ಟ್ ವಾಚ್ ವಿಚಾರವಾಗಿ ಸ್ನೇಹಿತರಿಬ್ಬರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ನಗರದ ಬೆಂಗೇರಿಯ ವೆಂಕಟೇಶ ಕಾಲೋನಿಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಸಿದ್ರಾಮನಗರ ನಿವಾಸಿ ಅಸ್ಲಾಂ ಮಕಾಂದಾರ್ (31) ಕೊಲೆಯಾದ ವ್ಯಕ್ತಿ. ಗಾಯತ್ರಿ ನಗರದ ಮಂಜುನಾಥ ನಾಗರಾಜ ಜೀನಹಳ್ಳಿ ಕೊಲೆ ಆರೋಪಿ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಮೃತ ಅಸ್ಲಾಂ ಮಕಾಂದಾರ್ ಹಾಗೂ ಅರೋಪಿ ಮಂಜುನಾಥ ಇಬ್ಬರು ಸ್ನೇಹಿತರಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಮಂಜುನಾಥ್ …
Read More »ಒಂದು ದೇಶ ಒಂದು ಚುನಾವಣೆ ಅದು ಸಾಧ್ಯವಿಲ್ಲ
ಹುಬ್ಬಳ್ಳಿ: ಒಂದು ದೇಶ ಒಂದು ಚುನಾವಣೆ ನಡೆದರೇ ಒಳ್ಳೆಯದು. ಆದರೆ, ಭಾರತ ವಿಭಿನ್ನ ಸಂಸ್ಕೃತಿಯ ದೇಶ. ಹೀಗಾಗಿ ಇದು ಇಂಪ್ರ್ಯಾಕ್ಟಿಕಲ್ ಆಗಿದೆ ಎಂದು ಮಾಜಿ ಸಿಎಂ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮ್ಮೆಯೇ ಚುನಾವಣೆ ಆಗಬೇಕೆಂದರೇ ಸದ್ಯದ ರಾಜ್ಯ ಸರ್ಕಾರವನ್ನು ವಿಸರ್ಜಿಸಿಸಬೇಕಾ. ಹಾಗಾಗಿ ರಾಷ್ಟ್ರದಲ್ಲಿ ಒಂದು ದೇಶ ಒಂದು ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದರು. ಇಂಡಿಯಾ ಭಾರತ ನಾಮಕರಣ ವಿಚಾರವಾಗಿ ಮಾತನಾಡಿ, ಭಾರತ …
Read More »ಉತ್ತರಕನ್ನಡ: 1 ಸಾವಿರ ಲಂಚ ಪಡೆದ ಅಧಿಕಾರಿಗೆ 1 ವರ್ಷ ಜೈಲು ಶಿಕ್ಷೆ
ಕಾರವಾರ(ಉತ್ತರಕನ್ನಡ): ತಂದೆಯ ಹೆಸರಿನಲ್ಲಿದ್ದ ಜಮೀನನ್ನು ವಾರಸಾ ಮಾಡಲು ಒಂದು ಸಾವಿರ ಲಂಚ ಪಡೆದಿದ್ದ ಶಿರಸ್ತೇದಾರನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ವಿಶೇಷ ಮತ್ತು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ 1 ವರ್ಷ ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಯಲ್ಲಾಪುರ ತಹಶೀಲ್ದಾರ ಕಚೇರಿಯ ಶಿರಸ್ತೆದಾರ ವಿನಾಯಕ ಪಾಯ್ಕಾರಾಮ ಗಾಂವಕಾರ ಶಿಕ್ಷೆಗೊಳಗಾದವರು. ಈತ ಯಲ್ಲಾಪುರ ತಾಲೂಕಿನ ಹಿತ್ಲಳ್ಳಿ ನಾಗೇಂದ್ರ ಶಿವರಾಮ ಹೆಗಡೆ ಎಂಬುವವರ ತಂದೆಯವರ ಹೆಸರಿನಲ್ಲಿದ್ದ ಜಮೀನಿನ …
Read More »ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ನಾನು ಮಾತನಾಡಿಲ್ಲ: ಸಚಿವ ಡಾ.ಜಿ.ಪರಮೇಶ್ವರ್
ಬೆಂಗಳೂರು: ”ಹಿಂದೂ ಧರ್ಮದ ವಿರುದ್ದ ಅವಹೇಳನಕಾರಿಯಾಗಿ ನಾನು ಮಾತನಾಡಿಲ್ಲ. ನಾವೆಲ್ಲಾ ಹಿಂದೂಗಳು” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಹಿಂದೂ ಧರ್ಮ ಬಗ್ಗೆ ವಿವಾದಿತ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ”ಅದನ್ನು ಬೇರೆ ರೀತಿ ಅರ್ಥೈಸುವ ಕೆಲಸವನ್ನು ನಾನು ಯಾವತ್ತು ಮಾಡಿಲ್ಲ. ನಾವೆಲ್ಲ ಹಿಂದೂಗಳು. ಬೆಳಗ್ಗೆ ಎದ್ದರೆ ಗಣಪತಿಯನ್ನು ನೆನಪು ಮಾಡಿಕೊಳ್ತೀವಿ. ನಾನು ಬೆಳಗ್ಗೆ ಎದ್ದ ಕೂಡಲೇ ಲಕ್ಷ್ಮಿ ಶ್ಲೋಕ ಹೇಳುತ್ತೇನೆ. ಮಲಗೋವಾಗ …
Read More »G20: ಆರ್ಥಿಕ ಅಪರಾಧಿಗಳ ಹಸ್ತಾಂತರಕ್ಕೆ ಜಾಗತಿಕ ವೇದಿಕೆ ರಚಿಸಲು ಭಾರತದ ಒತ್ತಾಯ
ನವದೆಹಲಿ: ವಿದೇಶಗಳಲ್ಲಿ ಆಶ್ರಯ ಪಡೆದಿರುವ ದೇಶಭ್ರಷ್ಟರ ವಿರುದ್ಧ ಕ್ರಮ ಕೈಗೊಳ್ಳಲು, ಅವರನ್ನು ಹಸ್ತಾಂತರಿಸಲು ಮತ್ತು ಆರ್ಥಿಕ ಅಪರಾಧಿಗಳ ಆಸ್ತಿಗಳನ್ನು ಪತ್ತೆಹಚ್ಚಲು ಸಾಮಾನ್ಯ ವೇದಿಕೆಯೊಂದನ್ನು ಸ್ಥಾಪಿಸುವ ನಿಟ್ಟಿನಲ್ಲಿ ಜಿ 20 ನಾಯಕರನ್ನು ಒತ್ತಾಯಿಸಲು ಕೇಂದ್ರ ಸರ್ಕಾರ ಕಾರ್ಯತಂತ್ರವೊಂದನ್ನು ರೂಪಿಸಿದೆ. ಈ ಕಾರ್ಯತಂತ್ರವು ಎಲ್ಲ ಜಿ 20 ನಾಯಕರ ಬೆಂಬಲ ಪಡೆದದ್ದೇ ಆದಲ್ಲಿ ವಿಜಯ್ ಮಲ್ಯ, ನೀರವ್ ಮೋದಿ, ಜುನೈದ್ ಇಕ್ಬಾಲ್ ಮೆಮನ್ ಮತ್ತು ಅಭಿಜಿತ್ ಅಸೋಮ್ ಅವರಂತಹ ಹಲವಾರು ದೇಶಭ್ರಷ್ಟ ಮತ್ತು ಆರ್ಥಿಕ …
Read More »