Breaking News

Daily Archives: ಸೆಪ್ಟೆಂಬರ್ 12, 2023

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್​ 2ರಲ್ಲಿ ವಿದೇಶಿ ವಿಮಾನ ಹಾರಾಟ ಶುರು

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್​ 2ರಲ್ಲಿ ವಿದೇಶಿ ವಿಮಾನಗಳ ಹಾರಾಟ ಇಂದಿನಿಂದ ಪ್ರಾರಂಭವಾಗಿದೆ. ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಇಂದಿನಿಂದ ಟರ್ಮಿನಲ್​ 2ಗೆ ಶಿಫ್ಟ್​ ಆಗಿದೆ. 5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಗಾರ್ಡನ್​ ಟರ್ಮಿನಲ್ ಅತ್ಯಾಧುನಿಕ ತಂತ್ರಜ್ಞಾನವುಳ್ಳದ್ದಾಗಿದೆ.​ ಕಳೆದ ವರ್ಷ ನವೆಂಬರ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ಟರ್ಮಿನಲ್​ ಅನ್ನು ಉದ್ಘಾಟನೆ ಮಾಡಿದ್ದರು. ಜನವರಿ 15ರಿಂದ ಕೆಲ ದೇಶಿಯ ವಿಮಾನಗಳ ಹಾರಾಟ ಮಾತ್ರ ಟಿ2ನಲ್ಲಿ …

Read More »

ಡೀಸೆಲ್ ವಾಹನಗಳ ಮೇಲೆ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿ ವರದಿ: ಸ್ಪಷ್ಟನೆ ನೀಡಿದ ನಿತಿನ್ ಗಡ್ಕರಿ

ನವದೆಹಲಿ: ”ವಾಯು ಮಾಲಿನ್ಯ ಕಡಿಮೆ ಮಾಡುವ ನಿಟ್ಟಿನಲ್ಲಿ ಡೀಸೆಲ್ ವಾಹನಗಳು ಮತ್ತು ಜೆನ್​ಸೆಟ್‌ಗಳ (ಡೀಸೆಲ್ ಜನರೇಟರ್) ಮೇಲೆ ‘ಮಾಲಿನ್ಯ ತೆರಿಗೆ’ ರೂಪದಲ್ಲಿ ಶೇ.10ರಷ್ಟು ಹೆಚ್ಚುವರಿ ಜಿಎಸ್‌ಟಿ ವಿಧಿಸಲು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಲಾಗುತ್ತದೆ” ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ ಎಂಬುವುದು ವರದಿಯಾಗಿದೆ. ಈ ಕುರಿತು ಖುದ್ದು ಸಚಿವರೇ ಸ್ಪಷ್ಟನೆ ಕೊಟ್ಟಿದ್ದು, ಇಂತಹ ಯಾವುದೇ ಪ್ರಸ್ತಾವನೆಯು ಸರ್ಕಾರದ ಮುಂದಿಲ್ಲ ಎಂದು ತಿಳಿಸಿದ್ದಾರೆ. ನವದೆಹಲಿಯಲ್ಲಿ …

Read More »

ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರ ಖಚಿತವಾದ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಇಂದು ರಾಜ್ಯ ಪದಾಧಿಕಾರಿಗಳ ಸಭೆ ಕರೆಯಲಾಗಿದೆ. ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆ, ಲೋಕಸಭಾ ಚುನಾವಣೆಗೆ ಸಿದ್ಧತೆ ಮತ್ತು ಜೆಡಿಎಸ್‌ನೊಂದಿಗಿನ ಹೊಂದಾಣಿಕೆಯ ನಂತರದ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆ ನಡೆಸಲಾಗುತ್ತದೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ಆಯೋಜಿಸಲಾಗಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಹಿರಿಯ ನಾಯಕ ಹಾಗೂ ಕೇಂದ್ರ …

Read More »

ಬಹಿರಂಗ ಹೇಳಿಕೆ ನೀಡದಂತೆ ಬಿ.ಕೆ.ಹರಿಪ್ರಸಾದ್​ಗೆ ಕಾಂಗ್ರೆಸ್​ ಹೈಕಮಾಂಡ್ ತಾಕೀತು

ಬೆಂಗಳೂರು: ಸಚಿವ ಸ್ಥಾನ ಕೈ ತಪ್ಪಿರುವುದರಿಂದ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿರುವ ಕಾಂಗ್ರೆಸ್‌ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಶನಿವಾರ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಟೀಕಾಪ್ರಹಾರ ನಡೆಸಿದ್ದರು. ಈ ಬೆಳವಣಿಗೆಯ ಬೆನ್ನಲ್ಲೇ, ಯಾರ ಬಗ್ಗೆಯೂ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್​​ ಹೈಕಮಾಂಡ್ ಮೌಖಿಕ ಸೂಚನೆ ನೀಡಿದೆ ಎಂದು ಮೂಲಗಳು ತಿಳಿಸಿವೆ. ಹರಿಪ್ರಸಾದ್ ಹೇಳಿಕೆಗೆ ಆಕ್ಷೇಪ: ಸಿದ್ದರಾಮಯ್ಯರ ವಿರುದ್ಧ ಹರಿಪ್ರಸಾದ್ ಅವರು ಮುಸುಕಿನ ಗುದ್ದಾಟ ನಡೆಸುತ್ತಿರುವುದು ಆಡಳಿತ ಪಕ್ಷದೊಳಗೆ ಅಸಮಾಧಾನ ಉಂಟುಮಾಡಿದೆ. ಬಹಿರಂಗ ಹೇಳಿಕೆ ನೀಡುವ …

Read More »