Breaking News

Daily Archives: ಸೆಪ್ಟೆಂಬರ್ 13, 2023

20ರ ಪ್ರಾಯದಲ್ಲಿ ಎಮ್ಮೆ ಕದ್ದು ತಲೆಮರೆಸಿಕೊಂಡಿದ್ದ ಆರೋಪಿ.. 78ನೇ ವಯಸ್ಸಿನಲ್ಲಿ ಬಂಧನ!

ಬೀದರ್: ಎಮ್ಮೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 58 ವರ್ಷಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 1965ರಲ್ಲಿ ಮೇಹಕರ್‍ನಲ್ಲಿ ನಡೆದ ಎರಡು ಎಮ್ಮೆ, ಒಂದು ಕರು ಕಳುವಾದ ಕುರಿತು ಮುರಳೀಧರರಾವ್ ಕುಲಕರ್ಣಿ ಎನ್ನುವವರು ಮೇಹಕರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಘಟನೆ ನಂತರ ಮಹಾರಾಷ್ಟ್ರದ ಉದಗೀರ್ ಮೂಲದ ಕಿಶನ್ ಚಂದರ್ (30) ಹಾಗೂ ಗಣಪತಿ ವಾಗ್ಮೋರೆ (20) ಅವರನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದ ಬಳಿಕ ಈ ಆರೋಪಿಗಳು ನ್ಯಾಯಾಲಯಕ್ಕೆ ಬರದೇ ತಲೆ …

Read More »

ಬಿಜೆಪಿ – ಜೆಡಿಎಸ್ ಮೈತ್ರಿ ಮಾತುಕತೆ: ಸೆ.20 ರೊಳಗೆ ಅಂತಿಮ?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಈ ತಿಂಗಳ 19 ಅಥವಾ 20 ರಂದು ಫೈನಲ್ ಆಗಲಿದೆ. ಮುಂದಿನ ವಾರ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನದ ಸಂದರ್ಭದಲ್ಲಿ ಮೈತ್ರಿ ಮಾತುಕತೆಯನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೆಹಲಿಗೆ ತೆರಳಲಿದ್ದು, ಸೆ.19 ಇಲ್ಲವೇ 20 ರಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ …

Read More »

ತಮಿಳುನಾಡಿಗೆ ನೀರು ಬಿಡುಗಡೆಗೆ ಸೂಚನೆ: ಇಂದು ಸಿಎಂ ನೇತೃತ್ವದಲ್ಲಿ ತುರ್ತು ಸರ್ವಪಕ್ಷ ಸಭೆ

ಬೆಂಗಳೂರು: ಕಾವೇರಿ ನದಿ ನೀರು ಬಿಡುಗಡೆಗೆ ಸೂಚಿಸಿರುವ ಹಿನ್ನೆಲೆ ಇಂದು (ಬುಧವಾರ) ರಾಜ್ಯ ಸರ್ಕಾರ ತುರ್ತು ಸರ್ವಪಕ್ಷ ಸಭೆ ಕರೆದಿದೆ. ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್​​ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಧ್ಯಾಹ್ನ 12:30ಕ್ಕೆ ವಿಶೇಷ ತುರ್ತು ಸಭೆ ನಡೆಯಲಿದೆ. ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ …

Read More »

ಪಿಒಪಿ ಗಣೇಶ ಮೂರ್ತಿ ತಯಾರಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ:ಈಶ್ವರ್ ಖಂಡ್ರೆ

ಬೆಂಗಳೂರು : ಪರಿಸರಕ್ಕೆ ಮಾರಕವಾದ ಪ್ಲಾಸ್ಟರ್ ಆಫ್‌ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದರು. ಮುಂಬರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪರಿಸರಸ್ನೇಹಿ ಗಣಪತಿ ಹಬ್ಬದ ಆಚರಣೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಚಿವರು ತಮ್ಮ ಕಚೇರಿಯಲ್ಲಿ ಮಂಗಳವಾರ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ರಾಸಾಯನಿಕಲೇಪಿತ ಪಿಒಪಿ ಗಣಪತಿ ತಯಾರಕರಿಗೆ ಮಂಡಳಿ ನೊಟೀಸ್ ನೀಡಿದ್ದರೂ ಅವರು ಮತ್ತೆ ತಯಾರಿಕೆಯಲ್ಲಿ ತೊಡಗಿದ್ದರೆ …

Read More »

ಸಂಸತ್ ಸಿಬ್ಬಂದಿಗೆ ಹೊಸ ಡ್ರೆಸ್ ಕೋಡ್: ರಾಜಕೀಯ ಕೆಸರೆರಚಾಟಕ್ಕೆ ನಾಂದಿ

ನವದೆಹಲಿ: ದೇಶದ ನೂತನ ಸಂಸತ್​ ಭವನ ಸಿದ್ಧವಾಗಿದೆ. ಇದು ನವ ಭಾರತದ ಸಂಕೇತ ಎಂದು ಬಣ್ಣಿಸಲಾಗುತ್ತಿದೆ. ಇದರೊಂದಿಗೆ ಹೊಸ ಕಟ್ಟಡದಲ್ಲಿ ಕೆಲಸ ಮಾಡುವ ನೌಕರರ ಡ್ರೆಸ್ ಕೂಡ ಬದಲಿಸಲು ನಿರ್ಧರಿಸಲಾಗಿದೆ. ಹೊಸ ಉಡುಗೆಯು ಸಂಪೂರ್ಣವಾಗಿ ಭಾರತೀಯ ಸಾಂಪ್ರದಾಯಿಕ ಶೈಲಿಯಲ್ಲಿರಲಿದೆ. ಇದೀಗ ನೂತನ ಡ್ರೆಸ್ ಕೋಡ್ ರಾಜಕೀಯ ಗದ್ದಲಕ್ಕೆ ನಾಂದಿ ಹಾಡಿದೆ. “ಆಡಳಿತ ಪಕ್ಷದ ಚುನಾವಣಾ ಚಿಹ್ನೆಯನ್ನು ಪ್ರಚಾರ ಮಾಡಲಾಗುತ್ತಿದೆ, ಇದು ತೀರಾ ಕೆಳಮಟ್ಟದ ರಾಜಕೀಯ ತಂತ್ರಗಾರಿಕೆ” ಎಂದು ಕಾಂಗ್ರೆಸ್ ಟೀಕಿಸಿದೆ. ಲೋಕಸಭೆಯ …

Read More »