ಬೆಳಗಾವಿ: ನೆರೆಯ ರಾಜ್ಯ ಪುಣೆ ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಮೂರು ದಿನಗಳವರೆಗೆ ನಡೆದ 5 ನೇ ರಾಷ್ಟ್ರೀಯ ವಿಲಚೆರ್ ರಜ್ವಿ ಚಾಂಪಿಯನಶಿಪ್ ನಲ್ಲಿ ಕರ್ನಾಟಕ ತಂಡವು ದ್ವೀತಿಯ ಸ್ಥಾನ ಪಡೆದು, ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡಿದೆ. ಸೆ. 9 ರಿಂದ 11 ವರೆಗೆ ಮೂರು ದಿನಗಳ ಕಾಲ ಪುಣೆನ ಛತ್ರಪತಿ ಶಿವಾಜಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ನಡೆದ 5 ನೇ ರಾಷ್ಟ್ರೀಯ ವಿಲಚೆರ್ ರಜ್ವಿ ಚಾಂಪಿಯನಶಿಪ್ ನಲ್ಲಿ ಕರ್ನಾಟಕ …
Read More »Daily Archives: ಸೆಪ್ಟೆಂಬರ್ 14, 2023
ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ: ಸೇನೆಯ ಕರ್ನಲ್, ಮೇಜರ್ ಸೇರಿ ಮೂವರು ಹುತಾತ್ಮ
ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೋಕರ್‌ನಾಗ್ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ವೇಳೆ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಸೇನೆಯ ಮೇಜರ್, ಕರ್ನಲ್ ಹಾಗೂ ಡಿಎಸ್ಪಿ ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಕಾಶ್ಮೀರ ಪೊಲೀಸರು, ಅನಂತ್ನಾಗ್ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಭಾರತೀಯ …
Read More »ಹನಿಟ್ರ್ಯಾಪ್ ಕೇಸ್ನ ಕಿಂಗ್ ಪಿನ್ ಆಗಿದ್ದ ಮಹಿಳೆನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಬೆಂಗಳೂರು: ಮಧ್ಯಪ್ರದೇಶದ ಇಂದೋರ್ನಲ್ಲಿ ಹನಿಟ್ರ್ಯಾಪ್ ಕಿಂಗ್ ಪಿನ್ ಎಂದೇ ಕುಖ್ಯಾತಿಗೊಂಡು ಕೆಲವು ತಿಂಗಳುಗಳಿಂದ ನಾಪತ್ತೆಯಾಗಿದ್ದ ಮಹಿಳೆಯನ್ನು ಕಳ್ಳತನ ಪ್ರಕರಣದಲ್ಲಿ ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರತಿ ದಯಾಳ್ ಬಂಧಿತ ಆರೋಪಿ. ಕಳ್ಳತನ ಮಾಡಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ವಿಜಯವಾಡದಲ್ಲಿ ಈಕೆಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈಕೆ ಕಳೆದ ಒಂದು ತಿಂಗಳ ಹಿಂದಷ್ಟೇ ಆರತಿ ನಗರಕ್ಕೆ ಬಂದಿದ್ದಳು. ಪಿಜಿಯೊಂದರಲ್ಲಿ ವಾಸವಾಗಿದ್ದ ವೇಳೆ ರೂಮ್ಮೇಟ್ಳ ಚಿನ್ನದ ಆಭರಣ ಕದ್ದು ಎಸ್ಕೇಪ್ ಆಗಿದ್ದಳು. …
Read More »ಐಎಎಸ್ ಆಧಿಕಾರಿ ರೋಹಿಣಿ ಸಿಂಧೂರಿಗೆ ಆರು ತಿಂಗಳ ನಂತರ ಹುದ್ದೆ: ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಆರು ತಿಂಗಳ ನಂತರ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಹುದ್ದೆಗೆ ನಿಯುಕ್ತಿ ಮಾಡಲಾಗಿದೆ. ಇವರು ಸೇರಿದಂತೆ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆರು ತಿಂಗಳ ಹಿಂದೆ ಐಪಿಎಸ್ ಅಧಿಕಾರಿ ಡಿ.ರೂಪ ಮತ್ತು ರೋಹಿಣಿ ಸಿಂಧೂರಿ ನಡುವೆ ಕೆಲ ವಾದ – ಪ್ರತಿವಾದಗಳು ನಡೆದಿದ್ದವು. ಅವರೊಂದಿಗಿನ ವಿವಾದದ ಬಳಿಕ ಯಾವುದೇ ಹುದ್ದೆ ತೋರಿಸದೇ ವರ್ಗಾವಣೆ ಮಾಡಿದ್ದ ರೋಹಿಣಿ ಸಿಂಧೂರಿ ಅವರಿಗೆ ಈಗ ಕಡೆಗೂ …
Read More »ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ವಿಷಾಹಾರ ಸೇವಿಸಿ ಅಸ್ವಸ್ಥರಾಗಿದ್ದ ಯುವಕರು ಚೇತರಿಸಿಕೊಂಡಿದ್ದಾರೆ
ಬೆಳಗಾವಿ : ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ಉತ್ತರ ಪ್ರದೇಶ ರಾಜ್ಯದ ಝಾನ್ಸಿ ಮೂಲದ 8 ಜನ ಯುವಕರು ಚೇತರಿಸಿಕೊಂಡಿದ್ದಾರೆ ಎಂದು ಬಿಮ್ಸ್ ನಿರ್ದೇಶಕ ಅಶೋಕ ಶೆಟ್ಟಿ ತಿಳಿಸಿದ್ದಾರೆ. ಈ ಘಟನೆ ಹಿಂದೆ ಚಾಕೊಲೇಟ್ ಗ್ಯಾಂಗ್ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೌದು ಸೆ. 11ರಂದು ರಾತ್ರಿ ಗೋವಾದಿಂದ ಉತ್ತರಪ್ರದೇಶಕ್ಕೆ ಹೋಗುತ್ತಿದ್ದ ನಿಜಾಮುದ್ದೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ವಿಷಾಹಾರ ಸೇವಿಸಿ 8 ಯುವಕರು ಬೆಳಗಾವಿ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಅಸ್ವಸ್ತಗೊಂಡಿದ್ದರು. ತಕ್ಷಣವೇ …
Read More »ಸಾಮಾಜಿಕ ಅನಿಷ್ಠಗಳಿಂದ ಸಮಾಜವನ್ನು ಮುಕ್ತಗೊಳಿಸಲು ಬಸವ ಧರ್ಮವೊಂದೇ ಪರಿಹಾರ ಎಂದು ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ
ಬೆಳಗಾವಿ: ಬಸವ ಧರ್ಮ ಎಲ್ಲರನ್ನು ಪ್ರೀತಿಸುವ, ಅಪ್ಪಿಕೊಳ್ಳುವ, ಸಕಲ ಜೀವಾತ್ಮರಿಗೂ ಲೇಸನ್ನೇ ಬಯಸುವ ಧರ್ಮ. ಜಾತಿ, ಮತ, ಪಂಥ, ವರ್ಣ, ವರ್ಗ, ಲಿಂಗ ಭೇದವನ್ನು ತೊಡೆದು ಹಾಕಿದ ವಿಶಿಷ್ಠ ಧರ್ಮ ಎಂದು ಗದಗಡಂಬಳದ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದಿಂದ, ಬೆಳಗಾವಿಯಲ್ಲಿ ಶ್ರಾವಣ ಮಾಸದ ನಿಮಿತ್ತ ಒಂದು ತಿಂಗಳು ಹಮ್ಮಿಕೊಂಡಿದ್ದ ಜನಜಾಗೃತಿ ಪಾದಯಾತ್ರೆ ಮತ್ತು ರುದ್ರಾಕ್ಷಿಧಾರಣ ಕಾರ್ಯಕ್ರಮದ ಸಮಾರೋಪ ಸಮಾರಂಭ …
Read More »