Breaking News

Daily Archives: ಸೆಪ್ಟೆಂಬರ್ 24, 2023

ಸೆ.26 ರಂದು ಶಾಂತಿಯುತವಾಗಿ ಬೆಂಗಳೂರು ಬಂದ್

ಬೆಂಗಳೂರು : ಕಾವೇರಿ ನದಿ ವಿಚಾರವಾಗಿ ಸೆ.26ರಂದು ಬೆಳಗ್ಗೆ 6ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಾಂತಿಯುತವಾಗಿ ಬಂದ್‌ ನಡೆಸುತ್ತೇವೆ. ನಗರದ ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್​ವರೆಗೆ ಮೆರವಣಿಗೆ ಮೂಲಕ ಸಾಗಿ ಪ್ರತಿಭಟನೆ ನಡೆಸಲಿದ್ದೇವೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.   ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶವನ್ನು ಖಂಡಿಸಿ ಸೆ.26ರಂದು ಕರೆ ನೀಡಲಾಗಿರುವ ಬೆಂಗಳೂರು ಬಂದ್‌ ವಿಚಾರವಾಗಿ ಮುಖ್ಯಮಂತ್ರಿ ಚಂದ್ರು ಹಾಗೂ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ …

Read More »

ರಾಜಕಾರಣಿಗಳ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಬಾಲಿವುಡ್​ ನಟಿಯರು ಇವರೇ

ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಮಾತ್ರವಲ್ಲದೇ, ರಾಜಕಾರಣಿಗಳ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಬಾಲಿವುಡ್​ ನಟಿಯರು ಇವರೇ ನೋಡಿ.. ಪರಿಶುದ್ಧ ‘ಪ್ರೀತಿ’ಗೆ ಯಾವುದೇ ಮಿತಿಯಿಲ್ಲ. ಯಾವುದೇ ಷರತ್ತುಗಳಿಲ್ಲ. ಪ್ರೀತಿ ಯಾರಿಗೆ, ಯಾವಾಗ ಬೇಕಾದರೂ, ಯಾರೊಂದಿಗೂ ಆಗಬಹುದು. ಅದು ಎರಡು ಮನಸ್ಸುಗಳಿಗೆ ಸಂಬಂಧಪಟ್ಟಿರುವ ವಿಚಾರ. ಪ್ರೀತಿಗೆ ವೃತ್ತಿ, ಜಾತಿ, ಧರ್ಮ ಯಾವುದೂ ಮುಖ್ಯವಾಗಿರಲ್ಲ. ಇದೇ ರೀತಿ ಬಾಲಿವುಡ್​ಗೂ ರಾಜಕೀಯಕ್ಕೂ ವಿಶೇಷವಾಗಿ ಪ್ರೀತಿಯ ನಂಟು ಇದೆ. ಹೌದು.., ಹಿಂದಿ ಚಿತ್ರರಂಗದ ಬ್ಯೂಟಿಫುಲ್​ …

Read More »

ರಾಯರಮಠದ ಪರ ಹೈಕೋರ್ಟ್​ ತೀರ್ಪು

ಗಂಗಾವತಿ(ಕೊಪ್ಪಳ): ಆನೆಗೊಂದಿ ನವವೃಂದಾವನ ಗಡ್ಡೆಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮ ಕೈಗೊಳ್ಳದಂತೆ ಧಾರವಾಡದ ಹೈಕೋರ್ಟ್​ ಏಕಸದಸ್ಯ ಪೀಠ ನೀಡಿದ್ದ ಆದೇಶ ರದ್ದಾದ ಬೆನ್ನಲ್ಲೇ ಭಾನುವಾರ ರಾಯರಮಠದ ಅನುಯಾಯಿಗಳು ವಿವಿಧ ಧಾರ್ಮಿಕ ಕಾರ್ಯಕ್ರಮ ಏರ್ಪಡಿಸುವ ಮೂಲಕ ಸಂಭ್ರಮಿಸಿದರು. ರಾಘವೇಂದ್ರ ಸ್ವಾಮಿ ಮಂತ್ರಾಲಯದ ಪೀಠಾಧಿಪತಿ ಸುಭುಧೇಂದ್ರ ತೀರ್ಥರ ಸೂಚನೆ ಮೇರೆಗೆ ಭಾನುವಾರ ರಾಯರ ಮಠದ ಅನುಯಾಯಿಗಳು ನೂರಾರು ಸಂಖ್ಯೆಯಲ್ಲಿ ನೆರೆದು ಜಯತೀರ್ಥ ವೃಂದಾವನಕ್ಕೆ ಅಷ್ಟೋತ್ತರ ಕಾರ್ಯಕ್ರಮವನ್ನು ನೆರೆವೇರಿಸಿದರು. ಬೆಳಗ್ಗೆ ಬ್ರಾಹ್ಮಿ ಮೂಹೂರ್ತದಲ್ಲಿ ಸುಪ್ರಭಾತ, ಸಕಲ ಬೃಂದಾವನಗಳಿಗೆ …

Read More »

ನಾಳೆ ಭಾರತಕ್ಕೆ ಚಿನ್ನದ ಕನಸು.. ವನಿತೆಯರ ಕ್ರಿಕೆಟ್​ ತಂಡ ಲಂಕಾ ಮಣಿಸಿ ಗೆಲ್ಲುತ್ತಾ ಸ್ವರ್ಣ ಪದಕ?

ಹ್ಯಾಂಗ್‌ಝೌ (ಚೀನಾ): ಮೊದಲ ಬಾರಿಗೆ ಏಷ್ಯನ್​ ಗೇಮ್ಸ್​ನಲ್ಲಿ ಭಾರತ ತಂಡ ಆಡುತ್ತಿದೆ. ಈಗಾಗಲೇ ಭಾರತೀಯ ವನಿತೆಯರ ತಂಡ ಬಾಂಗ್ಲಾದೇಶವನ್ನು ಮಣಿಸಿ ಫೈನಲ್​ಗೆ ಪ್ರವೇಶಿಸಿದೆ. ಎರಡನೇ ಸೆಮಿ ಫೈನಲ್​ನಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ತಂಡ ಮುಖಾಮುಖಿ ಆಗಿದ್ದವು. ಇದರಲ್ಲಿ ಪಾಕಿಸ್ತಾವನ್ನು ಮಣಿಸಿದ ಸಿಂಹಳದ ವನಿತಿಯರು ಅಂತಿಮ ಹಣಾಹಣಿಗೆ ಸಿದ್ಧರಾಗಿದ್ದಾರೆ. ನಾಳೆ ಚಿನ್ನಕ್ಕಾಗಿ ಭಾರತ ಮತ್ತು ಲಂಕಾ ನಡುವೆ ಪೈಪೋಟಿ ನಡೆಯಲಿದೆ. ಇಂದು ನಡೆದ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾದೇಶವನ್ನು 51 ರನ್​ಗೆ …

Read More »

ಮೂರು ಡಿಸಿಎಂ ಹುದ್ದೆ ವಿಚಾರ ಹಿನ್ನೆಲೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಖಡಕ್ ಎಚ್ಚರಿಕೆ

ಬೆಂಗಳೂರು : ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​, ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಸರ್ಕಾರ ರಚನೆಯಾಗಿ ನೂರು ದಿನಗಳನ್ನು ಪೂರೈಸಿದ ಬೆನ್ನಲ್ಲೇ ಮೂರು ಡಿಸಿಎಂ ಹುದ್ದೆ ಎಂಬ ವಿಚಾರ ಮುನ್ನಲೆಗೆ ಬಂದು, ಪಕ್ಷದ ಹೈಕಮಾಂಡ್​ ಅಂಗಳಕ್ಕೂ ತಲುಪಿದೆ. ಈ ಹಿನ್ನೆಲೆಯಲ್ಲಿ ಸಚಿವರು, ಹಿರಿಯ ಕೈ ನಾಯಕರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಂಡಿರುವ ಎಐಸಿಸಿ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಖಡಕ್ ಎಚ್ಚರಿಕೆ ರವಾನಿಸಿದೆ. ಹೆಚ್ಚಿನ …

Read More »

ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿ ನಡೆದಿದೆ ಬರ್ಬರವಾಗಿ ಕೊಲೆ

ಬೆಳಗಾವಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್ ನಿವಾಸಿ ಸಂಜಯ ಸಾಗರ ಕಾಂಬಳೆ (30) ಕೊಲೆಗೀಡಾದ ವ್ಯಕ್ತಿ. ಹಲವು ದಿನಗಳಿಂದ ಬುದ್ಧಿ ಮಾಂಧ್ಯನಂತೆ ವರ್ತಿಸುತ್ತಿದ್ದ ಈತನನ್ನು ಘಟಪ್ರಭಾದ ಅನುರಾಧಾ ಬಾರ್ ಹತ್ತಿರ ಕೊಲೆ ಮಾಡಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

Read More »

ಚೆಸ್​ನಲ್ಲಿ ಗೆಲುವಿನ ಆರಂಭ ಪಡೆದ ಭಾರತ.. ಈಜಿನಲ್ಲಿ ಶ್ರೀಹರಿ ನಟರಾಜ್​ಗೆ ಕೈತಪ್ಪಿದ ಪದಕ

ಹ್ಯಾಂಗ್‌ಝೌ (ಚೀನಾ): ಇಲ್ಲಿನ ಹ್ಯಾಂಗ್‌ಝೌ ಕಿ-ಯುವಾನ್ ಕಾಂಪ್ಲೆಕ್ಸ್‌ನಲ್ಲಿ ಭಾನುವಾರ ನಡೆದ ಏಷ್ಯನ್ ಗೇಮ್ಸ್ ಚೆಸ್‌ನಲ್ಲಿ ಭಾರತದ ಪುರುಷ ಮತ್ತು ಮಹಿಳಾ ಆಟಗಾರರು ತಮ್ಮ ಮೊದಲ ಸುತ್ತಿನ ಪಂದ್ಯಗಳನ್ನು ಗೆಲುವು ದಾಖಲಿಸುವ ಮೂಲಕ ಶುಭಾರಂಭ ಮಾಡಿದ್ದಾರೆ. ಚೆಸ್ ಸ್ಪರ್ಧೆಗಳು ಕ್ಷಿಪ್ರ ಸ್ವರೂಪದಲ್ಲಿ ನಡೆಯುವುದರಿಂದ ಪುರುಷರ ವೈಯಕ್ತಿಕ ಸ್ಪರ್ಧೆಯಲ್ಲಿ ದಿನಕ್ಕೆ ಎರಡು ಸುತ್ತುಗಳನ್ನು ನಿಗದಿಪಡಿಸಲಾಗಿದೆ. ಭಾನುವಾರದಂದು ವಿದಿತ್ ಗುಜರಾತಿ, ಅರ್ಜುನ್ ಎರಿಗೈಸಿ, ಕೊನೇರು ಹಂಪಿ ಮತ್ತು ದ್ರೋಣವಲ್ಲಿ ಹರಿಕಾ ತಮ್ಮ ತಮ್ಮ ಪಂದ್ಯಗಳನ್ನು ಗೆದ್ದು …

Read More »

ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಇಬ್ಬರ ಸ್ಥಿತಿ ಹೇಳಲು ಹೆಸರಿಲ್ಲದಂತಾಗುತ್ತೆ.:ಈಶ್ವರ್ ಖಂಡ್ರೆ

ಚಿಕ್ಕಮಗಳೂರು : ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಇಬ್ಬರ ಸ್ಥಿತಿ ಹೇಳಲು ಹೆಸರಿಲ್ಲದಂತಾಗುತ್ತೆ. ಮುಂದಿನ ದಿನಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ – ಜೆಡಿಎಸ್ ಹೊಟ್ಟೆಕಿಚ್ಚಿನಿಂದ ಕೈ-ಕೈ ಹಿಸುಕಿಕೊಳ್ತಿವೆ. ಅವರಿಗೆ ತಮ್ಮ ಅಸ್ತಿತ್ವವೇ ಹೋಗುತ್ತೆ, ಕಾಂಗ್ರೆಸ್ ಮುಂದೆ ನಾವು ಏನು ಇರಲ್ಲ ಅನ್ನಿಸಿದೆ. ಯಾವುದೇ ಕೆಲಸ ಇಲ್ಲದ ಕಾರಣ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. …

Read More »

ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ ಇದೇ ಅಕ್ಟೋಬರ್ 8 ರಂದು ಉದ್ಘಾಟನೆಯಾಗಲಿದೆ

ರಾಬಿನ್ಸ್​ವಿಲ್ಲೆ (ನ್ಯೂಜೆರ್ಸಿ): ಆಧುನಿಕ ಯುಗದಲ್ಲಿ ಭಾರತದ ಹೊರಗೆ ನಿರ್ಮಿಸಲಾದ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯವು ಅಕ್ಟೋಬರ್ 8 ರಂದು ನ್ಯೂಜೆರ್ಸಿಯಲ್ಲಿ ಉದ್ಘಾಟನೆಯಾಗಲಿದೆ. ನ್ಯೂಯಾರ್ಕ್​ ಟೈಮ್ಸ್ ಸ್ಕ್ವೇರ್​ನ ದಕ್ಷಿಣಕ್ಕೆ ಸುಮಾರು 60 ಮೈಲಿ (90 ಕಿ.ಮೀ) ಅಥವಾ ವಾಷಿಂಗ್ಟನ್ ಡಿಸಿಯಿಂದ ಉತ್ತರಕ್ಕೆ ಸುಮಾರು 180 ಮೈಲಿ (289 ಕಿ.ಮೀ) ದೂರದಲ್ಲಿ, ನ್ಯೂಜೆರ್ಸಿಯ ಪುಟ್ಟ ರಾಬಿನ್ಸ್​ವಿಲ್ಲೆ ಟೌನ್​ಶಿಪ್​ನಲ್ಲಿ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯವಾಗಿರುವ ಬಿಎಪಿಎಸ್ ಸ್ವಾಮಿನಾರಾಯಣ ಅಕ್ಷರಧಾಮ ದೇವಾಲಯ ನಿರ್ಮಾಣವಾಗಿದೆ. 2011 ರಿಂದ 2023 …

Read More »

ಸದ್ಯದಲ್ಲೇ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುತ್ತೇನೆ : B.S.Y.

ಬೆಂಗಳೂರು : ಜೆಡಿಎಸ್ ಪಕ್ಷವು ಎನ್​​ಡಿಎ ಮೈತ್ರಿಕೂಟ ಸೇರುವ ಮೂಲಕ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು, ಉಭಯ ಪಕ್ಷಗಳು ಒಟ್ಟಾಗಿ ಹೋಗಬೇಕಿದೆ. ಹಾಗಾಗಿ ಸದ್ಯದಲ್ಲೇ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸುತ್ತೇನೆ ಎಂದು ರಾಜ್ಯ ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸ ಧವಳಗಿರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮಾಜಿ ಸಿಎಂ ಹೆಚ್ ಡಿ …

Read More »